Connect with us

    FILM

    70ನೇ ರಾಷ್ಟ್ರೀಯ ಸಿನೆಮಾ ಪ್ರಶಸ್ತಿ ಘೋಷಣೆ.. ರಿಶಬ್ ಶೆಟ್ಟಿಗೆ ಅತ್ಯುತ್ತಮ ನಾಯಕ ಪ್ರಶಸ್ತಿ

    Published

    on

    ನವದೆಹಲಿ/ಮಂಗಳೂರು: ಕೇಂದ್ರ ಸರ್ಕಾರದ ವಾರ್ತಾ, ಪ್ರಸಾರ ಇಲಾಖೆಯಿಂದ 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು ಈ ಬಾರಿ ಕನ್ನಡ ಚಿತ್ರರಂಗಕ್ಕೆ ಹಲವು ಪ್ರಶಸ್ತಿಗಳು ಅರಸಿ ಬಂದಿದೆ. ಕಾಂತಾರ ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದೆ. ಅತ್ಯುತ್ತಮ ಕನ್ನಡ ಚಿತ್ರದ ರಾಷ್ಟ್ರೀಯ ಪ್ರಶಸ್ತಿ ಕೆಜಿಎಫ್​-2ಗೆ ಲಭಿಸಿದೆ.

    2022ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಬಿಡುಗಡೆಯಾದ ಸಿನಿಮಾಗಳಿಗೆ ಇಂದು ಪ್ರಶಸ್ತಿ ಘೋಷಣೆ ಮಾಡಲಾಗಿದೆ.

    ಕನ್ನಡದ ಕೆಜಿಎಫ್-2​ ಚಿತ್ರಕ್ಕೆ ಎರಡು ಪ್ರಶಸ್ತಿ ಒಲಿದು ಬಂದಿದೆ. ಕೆಜಿಎಫ್​-2 ಸಿನಿಮಾಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ ಹಾಗೂ ಸಾಹಸ ವಿಭಾಗದಲ್ಲೂ ಕೆಜಿಎಫ್-2​ ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ಸಿಕ್ಕಿದೆ. ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿಗೆ ಅತ್ತುತ್ತಮ ನಟ ಪ್ರಶಸ್ತಿ ಘೋಷಣೆಯಾಗಿದೆ.

    ಜನಮೆಚ್ಚುಗೆ ಗಳಿಸಿದ್ದ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಜೊತೆಗೆ ಅತ್ಯುತ್ತಮ ಮನೋರಂಜನಾ ಪ್ರಶಸ್ತಿಗೆ ಕಾಂತಾರ ಸಿನಿಮಾ ಆಯ್ಕೆಯಾಗಿದೆ. ಇನ್ನು, ಮಲಯಾಳಂನ ‘ಆಟಂ’ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದೆ. ತಮಿಳಿನ ತಿರುಚಿತ್ರಾಂಬಲಂ ಚಿತ್ರದಲ್ಲಿ ಅಭಿನಯಿಸಿರುವ ನಿತ್ಯಾ ಮೆನನ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    FILM

    ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ: 2 ಕೋಟಿ ರೂ.ಗೆ ಬೇಡಿಕೆ

    Published

    on

    ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ ಮತ್ತೆ ಜೀವ ಬೆದರಿಕೆ ಬಂದಿದೆ. ಜೊತೆಗೆ ಆ ವ್ಯಕ್ತಿಯು 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದಾರೆ.

    ಮೇಲಿಂದ ಮೇಲೆ ನಟ ಸಲ್ಮಾನ್ ಖಾನ್ ಜೀವ ಬೆದರಿಕೆಗಳು ಬರುತ್ತಲೇ ಇವೆ. ಇದೀಗ ಜೀವ ಬೆದರಿಕೆ ಸಂದೇಶದ ಜೊತೆಗೆ 2 ಕೋಟಿ ರೂ. ಬೇಡಿಕೆಯಿಟ್ಟಿದ್ದಾರೆ. ಜೊತೆಗೆ ತಾವು ಕೇಳಿದಷ್ಟು ಹಣ ನೀಡದೆ ಇದ್ದರೆ ಹತ್ಯೆ ಮಾಡುವುದಾಗಿ ಸಂದೇಶ ರವಾನಿಸಿದ್ದಾರೆ.

    ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಎನ್‌ಸಿಪಿ ಶಾಸಕ ದಿವಂಗತ ಬಾಬಾ ಸಿದ್ದಿಕಿ ಅವರ ಪುತ್ರ ಜೀಶನ್ ಸಿದ್ದಿಕಿ ಹಾಗೂ ನಟ ಸಲ್ಮಾನ್ ಖಾನ್ ಇಬ್ಬರಿಗೂ ಜೀವ ಬೆದರಿಕೆ ಬಂದಿತ್ತು. ಇದರ ಬೆನ್ನಲ್ಲೇ ಬೆದರಿಕೆಯೊಡ್ಡಿದ ಆರೋಪಿಯನ್ನು ಮಂಗಳವಾರ ಮುಂಬೈ ಪೊಲೀಸರು ಬಂಧಿಸಿದ್ದರು.

    Continue Reading

    FILM

    ಯಶ್ ವಿರುದ್ಧ ಎಫ್‌ಐಆರ್‌ಗೆ ಅರಣ್ಯ ಸಚಿವ ಸೂಚನೆ-ಅರೆಸ್ಟ್ ಆಗ್ತಾರಾ ಕೆಜಿಎಫ್‌ ಸ್ಟಾರ್?

    Published

    on

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಕೆಜಿಎಫ್, ಕೆಜಿಎಫ್ 2 ಭಾರೀ ಸಕ್ಸಸ್ ನಂತರ ಟಾಕ್ಸಿಕ್ ಎಂಬ ಪ್ಯಾನ್ ಇಂಡಿಯಾ ಮೂವಿ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯೋಕೆ ಯಶ್ ಕೂಡ ಸಜ್ಜಾಗಿದ್ದಾರೆ. ಈ ಹೊತ್ತಲ್ಲೇ ನಟ ಯಶ್ ಅಭಿನಯಿಸುತ್ತಿರುವ ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ.

    ಟಾಕ್ಸಿಕ್ ಚಿತ್ರದ ಸೆಟ್‌ಗಾಗಿ ನೂರಾರು ಮರಗಳನ್ನು ಕಡಿದಿರುವ ಆರೋಪ ಕೇಳಿ ಬಂದಿದೆ.ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಶೂಟಿಂಗ್‌ಗಾಗಿ ಎಚ್‌ಎಂಟಿ ಪ್ರದೇಶದಲ್ಲಿ ಬೃಹತ್ ಸೆಟ್ ಅನ್ನು ಹಾಕಿ ಚಿತ್ರೀಕರಣ ಮಾಡಲಾಗಿತ್ತು.ಈ ವೇಳೆ ಅಲ್ಲಿನ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಸೆಟ್ ನಿರ್ಮಾಣ ಮಾಡಿರುವ ಆರೋಪ ಕೇಳಿ ಬಂದಿದೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಟ್‌ಲೈಟ್ ಇಮೇಜ್ ಪಡೆದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಪರಿಶೀಲನೆ ನಡೆಸಿದ್ದಾರೆ. ಸ್ಯಾಟಲೈಟ್ ಇಮೇಜ್ ಪಡೆಯುವ ವೇಳೆ ನೂರಾರು ಮರಗಳು ನೆಲಸಮವಾಗಿದ್ದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಅರಣ್ಯ ಕಾಯ್ದೆ ಅಡಿ ಕೇಸ್ ದಾಖಲಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಸೆಟ್ ಹಾಕಿರೋ ಸ್ಥಳಕ್ಕೂ ಅರಣ್ಯ ಸಚಿವ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಕೇಸ್ ದಾಖಲಾದ ಹಿನ್ನಲೆ ನಟ ಯಶ್ ಮತ್ತು ಟಾಕ್ಸಿಕ್ ಟೀಂ ಅರೆಸ್ಟ್ ಭೀತಿಗೆ ಸಿಲುಕಿದೆ.

    Continue Reading

    FILM

    ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ಕರಾವಳಿ ಬೆಡಗಿ ಆ್ಯಂಕರ್ ಅನುಶ್ರೀ

    Published

    on

    ಬೆಂಗಳೂರು: ಕರಾವಳಿ ಬೆಡಗಿ ಆ್ಯಂಕರ್ ಅನುಶ್ರೀ ಅವರ ಮದುವೆ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಮುಂದಿನ ವರ್ಷ ಒಳ್ಳೆ ಹುಡುಗ ಸಿಕ್ಕರೆ ಮದುವೆ ಗ್ಯಾರಂಟಿ ಎಂದಿದ್ದಾರೆ.

    ಜೀ ಕನ್ನಡ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಆ್ಯಂಕರ್ ಅಕುಲ್ ಅವರು ಅನುಶ್ರೀ ಅವರ ಮದುವೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ವೇಳೆ ಮಾತನಾಡಿದ ಅನುಶ್ರೀ ಎಲ್ಲ ಹುಡಿಗಿಯರಂತೆ ನನಗೂ ಮದುವೆ ಆಗಬೇಕು ಎಂದಿದೆ. ನನಗೂ ಬಾಳ ಸಂಗಾತಿ ಬೇಕು ಎಂದಿದೆ. ಎಲ್ಲದಕ್ಕೂ ಸಮಯ ಬರಬೇಕು. ಸರಿಯಾದ ಟೈಮ್ ಅಲ್ಲಿ ಸರಿಯಾದ ವ್ಯಕ್ತಿ ಬರಬೇಕು. ನಾನು ಮದುವೆ ಆಗಬೇಕು ಎಂದು ಮನಸ್ಸು ಮಾಡಬೇಕಿತ್ತು. ಈವರೆಗೆ ಮಾಡಿರಲಿಲ್ಲ. ಈಗ ಮಾಡಿದ್ದೇನೆ. ಮುಂದಿನ ವರ್ಷ ಒಳ್ಳೆಯ ಹುಡುಗ ಸಿಕ್ಕರೆ ಮದುವೆ ಆಗುತ್ತೇನೆ. ಆ ವ್ಯಕ್ತಿ ಬರಲಿ ಎಂದು ಕಾಯುತ್ತೇನೆ. ಬಂದರೆ ನಾನು ಅವರನ್ನು ನಿಮ್ಮ ಮುಂದೆ ತಂದು ನಿಲ್ಲಿಸುತ್ತೇನೆ’ ಎಂದರು ಅವರು.

    ಅನುಶ್ರೀ ಅವರು ಲವ್ ಮ್ಯಾರೇಜ್ ಆಗ್ತಾರಾ ಅಥವಾ ಅವರದ್ದು ಅರೇಂಜ್ ಮ್ಯಾರೇಜ್ ಎಂಬ ಪ್ರಶ್ನೆ ಮೂಡಿದೆ. ಈ ವಿಚಾರ ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಅವರು ಆ್ಯಂಕರಿಂಗ್ ಜೊತೆ ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿದ್ದು ಅಲ್ಲಿ ಅನೇಕ ಸೆಲೆಬ್ರಿಟಿಗಳ ಸಂದರ್ಶನ ಮಾಡುತ್ತಾರೆ.

    Continue Reading

    LATEST NEWS

    Trending