Wednesday, December 1, 2021

ಕೊರೋನಾ ಲಸಿಕೆ ಪಡೆದಿದ್ದರೂ ಕೇರಳದಿಂದ ಕರ್ನಾಟಕ ಪ್ರವೇಶಕ್ಕೆ RTPCR ನೆಗೆಟಿವ್ ರಿಪೋರ್ಟ್ ಕಡ್ಡಾಯ

ಬೆಂಗಳೂರು: ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ RTPCR ನೆಗೆಟಿವ್ ರಿಪೋರ್ಟ್ ತರುವುದು ಕಡ್ಡಾಯವಾಗಿದೆ‌. ಈ ಹಿಂದೆ ಮೊದಲ ಕೋವಿಡ್ ಡೋಸ್ ಪಡೆದವರಿಗೆ ನೆಗೆಟಿವ್ ರಿಪೋರ್ಟ್ ತರುವುದಕ್ಕೆ ವಿನಾಯಿತಿ ನೀಡಲಾಗಿತ್ತು. ಆದರೆ, ಇದೀಗ ಲಸಿಕೆ ಪಡೆದಿದ್ದರೂ ರಾಜ್ಯಕ್ಕೆ ಬರಬೇಕು ಅಂದರೆ 72 ಗಂಟೆಗಳ ಕಡ್ಡಾಯ ರಿಪೋರ್ಟ್ ತರಲೇಬೇಕು ಎಂದು ಕರ್ನಾಟಕ ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕ ಚಂದ್ರ ಅವರು ತಿಳಿಸಿದ್ದಾರೆ.

ಕೋವಿಡ್ ಮೂರನೇ ಅಲೆ ಕಾರಣಕ್ಕೆ ಆರೋಗ್ಯ ಇಲಾಖೆ ಹಲವು ಟಫ್ ರೂಲ್ಸ್ ಜಾರಿ ಮಾಡಲು ಯೋಚನೆ ನಡೆಸಿದೆ. ಕೆಲ ನಿರ್ಬಂಧಕ್ಕೆ ಕೊಟ್ಟಿದ್ದ ವಿನಾಯಿತಿಯನ್ನೂ ಹಿಂಪಡೆದಿದೆ. ಅದರಲ್ಲಿ ಮುಖ್ಯವಾಗಿ, ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರವೇಶಿಸುವ ಜನರಿಗೆ RTPCR ನೆಗೆಟಿವ್ ರಿಪೋರ್ಟ್ ತರುವುದು ಕಡ್ಡಾಯವಾಗಿದೆ‌. ಈ ಹಿಂದೆ ಮೊದಲ ಕೋವಿಡ್ ಡೋಸ್ ಪಡೆದವರಿಗೆ ನೆಗೆಟಿವ್ ರಿಪೋರ್ಟ್ ತರುವುದಕ್ಕೆ ವಿನಾಯಿತಿ ನೀಡಲಾಗಿತ್ತು.

ಆದರೆ, ಇದೀಗ ಲಸಿಕೆ ಪಡೆದಿದ್ದರೂ ರಾಜ್ಯಕ್ಕೆ ಬರಬೇಕು ಅಂದರೆ 72 ಗಂಟೆಗಳ ಕಡ್ಡಾಯ ರಿಪೋರ್ಟ್ ತರಲೇಬೇಕು. ಈ ವಿನಾಯಿಯನ್ನು ವಾಪಸ್​​ ಪಡೆದಿದ್ದೇವೆ. ಕಳೆದೊಂದು ವಾರದಲ್ಲಿ ಎವರೇಜ್ ಕೇಸ್​ಗಳು ವರದಿಯಾಗಿವೆ. ಕೇರಳದ ಬಳಿ ಇರುವ ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನದ ಕಡೆ ಪ್ರಕರಣಗಳು ಹೆಚ್ಚಾಗ್ತಿದೆ‌.

ಹೀಗಾಗಿ ಆ ಭಾಗದಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚು ಮಾಡಿದ್ದೇವೆ. ಹಾಗೇ ಕಾಂಟಾಕ್ಟ್ ಟ್ರೆಸಿಂಗ್ ಮಾಡಲಾಗುತ್ತಿದೆ. ಗಡಿ ಭಾಗದ ಚೆಕ್ ಪೋಸ್ಟ್​ಗಳನ್ನ ಈಗಾಗಲೇ ನಿರ್ಮಾಣ ಮಾಡಿದ್ದು, ಆಯಾ ಜಿಲ್ಲಾಡಳಿತಕ್ಕೆ ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ ಅಂತ ತಿಳಿಸಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...