Home ದೇಶ-ವಿದೇಶ ಅಂಫಾನ್ ಗೆ ಪಶ್ಚಿಮ ಬಂಗಾಲ ಜರ್ಜರಿತ: ಸಾವಿನ ಸಂಖ್ಯೆ 72ಕ್ಕೆ ಏರಿಕೆ.!

ಅಂಫಾನ್ ಗೆ ಪಶ್ಚಿಮ ಬಂಗಾಲ ಜರ್ಜರಿತ: ಸಾವಿನ ಸಂಖ್ಯೆ 72ಕ್ಕೆ ಏರಿಕೆ.!

ಅಂಫಾನ್ ಗೆ ಪಶ್ಚಿಮ ಬಂಗಾಲ ಜರ್ಜರಿತ: ಸಾವಿನ ಸಂಖ್ಯೆ 72ಕ್ಕೆ ಏರಿಕೆ.!

ಕೋಲ್ಕತ್ತಾ: ಒಡಿಶಾ ಹಾಗೂ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿರುವ ಅಂಫಾನ್‌ ಚಂಡಮಾರುತವು ಅಲ್ಲಿ ಈವರೆಗೆ 72 ಮಂದಿಯನ್ನು ಬಲಿ ಪಡೆದಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ‌

ಮರ ಉರುಳಿ ಬಿದ್ದು, ವಿದ್ಯುತ್‌ ಅವಘಡದಿಂದಲೇ ಬಹುತೇಕ ಸಾವುಗಳು ಸಂಭವಿಸಿವೆ. ಮೃತರ ಕುಟುಂಬಗಳಿಗೆ ತಲಾ 2.5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಇದೇ ಅಂಫಾನ್ ಚಂಡಮಾರುತ ಬಾಂಗ್ಲಾದೇಶದಲ್ಲೂ ರುದ್ರ ನರ್ತನ ತೋರಿದ್ದು, ಅಲ್ಲಿ ಈವರೆಗೆ 10 ಮಂದಿ ಮೃತಪಟ್ಟಿದ್ದಾರೆ.

ಸ್ವಾತಂತ್ರ್ಯಾ ನಂತರದ ಅತೀ ಭೀಕರ ಚಂಡಮಾರುತಗಳಲ್ಲಿ ಒಂದೆನಿಸಿರುವ ಅಂಫಾನ್ ಹೊಡೆತಕ್ಕೆ ಪಶ್ಚಿಮ ಬಂಗಾಲ ಜರ್ಜರಿತಗೊಂಡಿದೆ.

ಗಂಟೆಗೆ 190 ಕಿ.ಮೀ ವೇಗದಲ್ಲಿ ಮೇ 20ರ ಬುಧವಾರ ಮಧ್ಯಾಹ್ನ 2.30ಕ್ಕೆ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿರುವ ಅಂಫಾನ್ ಈವರೆಗೆ ಅಲ್ಲಿ ಭಾರಿ ಪ್ರಮಾಣದ ದಾಂಧಲೆ ಸೃಷ್ಟಿಸಿದೆ. ಇದರ ಪರಿಣಾಮವಾಗಿ 72 ಮಂದಿ ಮೃತಪಟ್ಟಿದ್ದಾರೆ.

ಈ ಮಧ್ಯೆ ಪಶ್ಚಿಮ ಬಂಗಾಳದಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಕೇಂದ್ರವು ನಾಲ್ಕು ಹೆಚ್ಚುವರಿ ತಂಡಗಳನ್ನು ಏರ್‌ ಲಿಫ್ಟ್‌ ಮೂಲಕ ಸಾಗಿಸಿದೆ.

ಪಶ್ಚಿಮ ಬಂಗಾಳದ ದಿಘಾ ಮತ್ತು ಬಾಂಗ್ಲಾದೇಶದ ಹಾತಿಯಾ ದ್ವೀಪದ ನಡುವಣ ಭಾಗದಲ್ಲಿ ‘ಅಂಪನ್‌’ ಭೂ ಪ್ರದೇಶವನ್ನು ಪ‍್ರವೇಶಿಸಿದೆ. ಕರಾವಳಿ ಪ್ರದೇಶದಲ್ಲಿ ಹಲವು ಕಟ್ಟಡಗಳು, ಮರಗಳು ಮತ್ತು ವಿದ್ಯುತ್‌ ಕಂಬಗಳನ್ನು ನೆಲಕ್ಕೆ ಉರುಳಿಸಿದೆ.

ಚಂಡಮಾರುತ ಪ್ರವೇಶಿಸುವುದಕ್ಕೂ ಮೊದಲೇ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ತೀರದ 6.58 ಲಕ್ಷ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿತ್ತು.

ಚಂಡಮಾರುತದ ಎಫೆಕ್ಟ್ ಗೆ ಕೆಲವೆಡೆ ಮನೆಗಳು ಕುಸಿದು ಬಿದ್ದಿದ್ದರೆ, ಇನ್ನು ಕೆಲವೆಡೆ ಮರಗಳು ಬುಡ ಮೇಲಾಗಿವೆ. ಸಾವಿರಾರು ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ.

ಅತ್ತ ಬಾಂಗ್ಲಾದೇಶದ ಕರಾವಳಿಯಲ್ಲೂ ಚಂಡಮಾರುತದ ಅಬ್ಬರದಿಂದಾಗಿ ಭಾರೀ ಹಾನಿಯುಂಟಾಗಿದೆ. ಚಂಡಮಾರುತದ ಪರಿಣಾಮ ಅಸ್ಸಾಂ ಮತ್ತು ಮೇಘಾಲಯಗಳಿಗೂ ವ್ಯಾಪಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದರು.

- Advertisment -

RECENT NEWS

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ..

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ.. ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ...

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ.. ಉಡುಪಿ: ಕೋವಿಡ್- 19 ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು...

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ ಬೆಳ್ತಂಗಡಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟುವಿನಲ್ಲಿ ನಿರ್ಮಿಸಲಾದ ಮನೆಯ ಕೀಲಿ ಕೈ ಹಸ್ತಾಂತರ...

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ ಬೆಂಗಳೂರು: ಹಲವಾರು ದಿಟ್ಟ ಕ್ರಮಗಳಿಂದ ಸರಕಾರವನ್ನು ಹಲವು ಬಾರಿ ಎದುರು ಹಾಕಿಕೊಂಡಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಅವರು...