Connect with us

DAKSHINA KANNADA

ಭಾರತೀಯ ಲೆಕ್ಕ ಪರಿಶೋಧಕರ ಸಂಘದ ಮಂಗಳೂರು ಶಾಖೆಯಲ್ಲಿ ಗಣರಾಜ್ಯೋತ್ಸವ

Published

on

ಮಂಗಳೂರು: ನಗರದ ಐಸಿಎಐ ಭವನ್ ಪಡೀಲಿನಲ್ಲಿ ಇರುವ ಭಾರತೀಯ ಲೆಕ್ಕ ಪರಿಶೋಧಕರ ಸಂಘದ ಮಂಗಳೂರು ಶಾಖೆಯಲ್ಲಿ ಬುಧವಾರದಂದು 73 ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿದ್ದ ಕರ್ನಲ್ ಎ. ಕೆ. ಜಯಚಂದ್ರನ್ ಹಾಗೂ ದಿನೇಶ್ ಕುಂದರ್, ಮೇಲ್ವಿಚಾರಕರು, ಕಸ್ಟಮ್ಸ್ ಹಾಗೂ ಜಿ. ಎಸ್. ಟಿ. ಮಂಗಳೂರು ಇವರನ್ನು ಐಸಿಎಐ ವತಿಯಿಂದ ಸನ್ಮಾನಿಸಲಾಯಿತು.

ಕರ್ನಲ್ ಎ. ಕೆ. ಜಯಚಂದ್ರನ್ ಅವರು ಧ್ವಜಾರೋಹಣ ಮಾಡಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ, ಮಂಗಳೂರು ಐಸಿಎಐನ ಅಧ್ಯಕ್ಷ ಸಿಎ ಕೆ ಸುಬ್ರಹ್ಮಣ್ಯ ಕಾಮತ್ ನೆರೆದಿರುವ ಸಿಎ ಪರಿವಾರನ್ನು ಸ್ವಾಗತಿಸಿದರು.

ಸಭಾ ಕಾರ್ಯಕ್ರಮದಲ್ಲಿ ಕರ್ನಲ್ ಎ. ಕೆ. ಜಯಚಂದ್ರನ್ ನೆರೆದಿರುವ ಸಿಎ ಹಾಗೂ ಸಿಎ ವಿದ್ಯಾರ್ಥಿಗಳೊಂದಿಗೆ ಅನುಭವದ ಮಾತುಗಳನ್ನು ಹಂಚಿಕೊಂಡರು.

ಸನ್ಮಾನ ಸ್ವೀಕರಿಸಿದ ದಿನೇಶ್ ಕುಂದರ್ ತಮ್ಮ ಕ್ರೀಡಾ ಕ್ಷೇತ್ರದ ಅನುಭವ ಹಾಗೂ ಸಾಧನೆಯನ್ನು ತಿಳಿಸಿದರು.

ನಿಕಟ ಪೂರ್ವ ಅಧ್ಯಕ್ಷ, ಸಿಎ ಎಸ್. ಎಸ್. ನಾಯಕ್, ಗಣರಾಜ್ಯೋತ್ಸವದ ಸಂದೇಶ ತಿಳಿಸಿ ವಂದಿಸಿದರು.

ಮಾಜಿ ಅಧ್ಯಕ್ಷ ಸಿಎ ಕೆ ಅನಂತಪದ್ಮನಾಭ, ಕಾರ್ಯದರ್ಶಿ ಸಿಎ ಪ್ರಸನ್ನ ಶೆಣೈ, ಖಜಾಂಚಿ ಸಿಎ ಗೌತಮ್ ನಾಯಕ್ , ಮಂಗಳೂರು ಸಿಕಾಸ ಅಧ್ಯಕ್ಷ ಸಿಎ ಗೌತಮ್ ಪೈ, ಇತರ ಸಿಎ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವು ದೇಶ ಭಕ್ತಿ ಗೀತೆ ಹಾಗೂ ಅನೇಕ ನೃತ್ಯ ರೂಪಕಗಳಿಂದ ಸಂಪನ್ನಗೊಂಡಿತು.

DAKSHINA KANNADA

ಖಾಸಗಿ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ಮೊಬೈಲ್ ಪತ್ತೆ; ಆರೋಪಿ ಬಂಧನ

Published

on

ಮಂಗಳೂರು : ಖಾಸಗಿ  ಕಾಲೇಜಿನ 1ನೇ ಮಹಡಿಯಲ್ಲಿರುವ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಪೋನ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಲು ಪ್ರಯತ್ನಿಸಿದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.

ನಗರದ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದ್ದು, ಸಿಸಿ ಕ್ಯಾಮರಾ ಆಧರಿಸಿ ಪರಿಶೀಲನೆ ನಡೆಸಿದಾಗ ಬಾಲಕನೊಬ್ಬ ಮೊಬೈಲ್ ಇಟ್ಟಿರುವುದು ಕಂಡು ಬಂದಿದೆ. ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ  ಎಂದು ತಿಳಿದು ಬಂದಿದೆ.

ಮೇ 6 ರಂದು ಮಧ್ಯಾಹ್ನ 3.30 ಗಂಟೆಗೆ ಖಾಸಗಿ ಕಾಲೇಜಿನ 1 ನೇ ಮಹಡಿಯಲ್ಲಿರುವ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ರಿಂಗ್ ಆಗಿದೆ. ಈ ವೇಳೆ ಭದ್ರತಾ ಸಿಬಂದಿ ಹೋಗಿ ಪರಿಶೀಲನೆ ನಡೆಸಿದಾಗ ಟಾಯ್ಲೆಟ್ ನಲ್ಲಿ ಯಾರೂ ಇರಲ್ಲಿಲ್ಲ. ಅಲ್ಲದೆ ಮೊಬೈಲ್ ನ್ನು ಎಕ್ಸಾಸ್ಟ್ ಫ್ಯಾನ್ ಬಳಿ ಇಡಲಾಗಿದ್ದು ಕಂಡು ಬಂದಿದೆ.

ಇದನ್ನೂ ಓದಿ : ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

ಟಾಯ್ಲೆಟ್ ಗೆ ಬರುವ ಮಹಿಳೆಯರ ದೃಶ್ಯ ಸೆರೆ ಮಾಡಲು ಇರಿಸಿದ ಸ್ಥಿತಿಯಲ್ಲಿ ಮೊಬೈಲ್ ಕಂಡು ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

LATEST NEWS

Trending