Connect with us

    LATEST NEWS

    ದೇಶಾದ್ಯಂತ 74 ನೇ ಸ್ವಾತಂತ್ರ್ರೋತ್ಸವ : ಕೆಂಪುಕೋಟೆಯ ಸರಳ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಧಾನಿ.!

    Published

    on

    ದೇಶಾದ್ಯಂತ 74 ನೇ ಸ್ವಾತಂತ್ರ್ರೋತ್ಸವ : ಕೆಂಪುಕೋಟೆಯ ಸರಳ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಧಾನಿ.!

    ಮಂಗಳೂರು : ಕೊರೋನಾದಿಂದಾಗಿ ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು ಅತಿ ಸರಳವಾಗಿ ಮತ್ತು ಬೇರೆ ವರ್ಷಗಳಿಗಿಂತ ಭಿನ್ನವಾಗಿ  ಆಚರಿಸಲಾಗಿದೆ.

    ಮಾಸ್ಕ್​, 6 ಅಡಿಗಳ ಸಾಮಾಜಿಕ ಅಂತರ ಕಡ್ಡಾಯ ಮುಂತಾದ ನಿಯಮಗಳೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗಿದೆ.

    ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಕೂಡ ಇಂದು ಸರಳವಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.

    ಇದಕ್ಕೂ ಮುನ್ನ ರಾಜ್‌ ಘಾಟ್‌ ಗೆ ತೆರಳಿದ ಪ್ರಧಾನಿ ಅವರು ರಾಷ್ಟ್ರಪಿತ ಮಹತ್ಮಾ ಗಾಂಧಿಜೀ ಅವರ ಸಮಾದಿಗೆ ನಮನಗಳನ್ನು ಸಲ್ಲಿಸಿದರು.

    ಆ ಬಳಿಕ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರ ಧ್ವಜಕ್ಕೆ ಗೌರೆವ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇಶವನ್ನುಉದ್ದೇಶಿಸಿ ಮಾತನಾಡಿದ ಪ್ರಧಾನಿ ಇಂದು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನವನ್ನು ನೆನೆಯುವ ದಿನ.

    ನಮ್ಮ ರಕ್ಷಣೆಗಾಗಿ ಗಡಿಯಲ್ಲಿ ನಿಂತಿರುವ ಸೈನಿಕರು ಹಾಗೂ ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿರುವ ಪೊಲೀಸರು ಸೇರಿಂದತೆ ಭದ್ರತಾ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುವ ದಿನ ಇದಾಗಿದೆ.

    ಈ ದಿನವನ್ನು ಅವರಿಗೆ ಸಮರ್ಪಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು.ಮಾರಕ ಕೊರೋನಾದಿಂದಾಗಿ ಕೆಂಪುಕೋಟೆಯಲ್ಲಿ ಇಂದು ಮಕ್ಕಳ ಕಲರವ ಇಲ್ಲ.

    ಅವರು ಕೊರೋನಾದಿಂದಾಗಿ ಸ್ವಾತಂತ್ರ್ಯ ಸಂಭ್ರಮದಿಂದ ದೂರ ಉಳಿಯಬೇಕಾಯಿತು. ಪ್ರಸ್ತುತ ನಾವು ಕೊರೋನಾ ಜೊತೆಗೆ, ಪ್ರವಾಹ ಮತ್ತು ಭೂಕುಸಿತದಂತಹ ಸವಾಲುಗಳನ್ನು ಎದುರಿಸುತ್ತಿದ್ದೇವೆ.

    ಈ ನೈಸರ್ಗಿಕ ವಿಕೋಪಗಳು ಅನೇಕ ಜನರನ್ನು ಬಲಿಪಡೆದುಕೊಂಡಿದೆ. ಈ ವಿಪತ್ತುಗಳನ್ನು ಎದುರಿಸುತ್ತಿರುವ ದೇಶದ ಅನೇಕ ರಾಜ್ಯಗಳಿಗೆ ನಾವು ಸದಾ ಬೆಂಬಲ ನೀಡುತ್ತೇವೆ ಎಂದು ಮೋದಿ ಭರವಸೆ ನೀಡಿದರು.

    ಮುಂದಿನ ವರ್ಷ 75ನೇ ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ ಹೊಸ ಗುರಿಗಳನ್ನು ಇಟ್ಟುಕೊಳ್ಳಬೇಕು ಎಂದರು. ಕೊರೋನಾ ಕಾಲಿಟ್ಟ ಬಳಿಕ ಅನೇಕ ಕುಟುಂಬಗಳು ಬೀದಿಗೆ ಬಿದ್ದಿವೆ. ಕೊರೋನಾದಿಂದಾಗಿ ಅದೆಷ್ಟೋ ಮಂದಿ ಸಾವನ್ನಪ್ಪಿದ್ದಾರೆ.

    ಹೀಗೆ ಸಾವನ್ನಪ್ಪಿದವರಿಗೆ ನಾನು ಸಂತಾಪವನ್ನು ಸೂಚಿಸುತ್ತೇನೆ ಎಂದರು.

    ಈ ವೇಳೆ ಮಾರಕ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ದೇಶದಲ್ಲಿ ಸದ್ಯ 3 ಕೊರೊನಾ ಲಸಿಕೆಗಳು ಅಭಿವೃದ್ಧಿ ಹಂತದಲ್ಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.

    ಮಾರಕ ಕೊರೊನಾ ವೈರಸ್‌ಗೆ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ಸದ್ಯಕ್ಕೆ ಮೂರು ಕೊರೊನಾ ಲಸಿಕೆಗಳು ಅಭಿವೃದ್ಧಿ ಹಂತದಲ್ಲಿದ್ದು, ತಜ್ಞರ ಅಂಕಿತ ದೊರೆಯುತ್ತಿದ್ದಂತೇ ಅವುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಮೋದಿ ಹೇಳಿದರು.

    ಅಭಿವೃದ್ಧಿ ಹಂತದಲ್ಲಿರುವ ಮೂರು ಕೊರೊನಾ ಲಸಿಕೆಗಳನ್ನು ವೈದ್ಯ ವಿಜ್ಞಾನಿಗಳು ಪರಿಶೀಲನೆ ನಡೆಸುತ್ತಿದ್ದು, ಅವುಗಳಿಗೆ ಅನುಮೋದನೆ ದೊರೆತ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಪ್ರಧಾನಿ ಮೋದಿ ನುಡಿದರು.

    ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಸಾವಿರಾರು ಜನರ ಕರತಾಡನ ಯಾವುದೂ ಇಲ್ಲದೆ ಕೆಂಪುಕೋಟೆಯಲ್ಲಿ ನೀರಸವಾಗಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ನಡೆದಿದೆ.

    ಬಿಗಿ ಪೊಲೀಸ್ ಭದ್ರತೆ, ಸಾಮಾಜಿಕ ಅಂತರ, ಮಾಸ್ಕ್​ಗಳೊಂದಿಗೆ ಇಂದು ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending