Connect with us

LATEST NEWS

ಮಳವಳ್ಳಿ ಲಿಂಗಪಟ್ಟಣದ ಮಾರಮ್ಮ ದೇವರ ಪ್ರಸಾದ ಸೇವಿಸಿ 75 ಮಂದಿ ಅಸ್ವಸ್ಥ..

Published

on

ಮಳವಳ್ಳಿ ಲಿಂಗಪಟ್ಟಣದ ಮಾರಮ್ಮ ದೇವರ ಪ್ರಸಾದ ಸೇವಿಸಿ 75 ಮಂದಿ ಅಸ್ವಸ್ಥ..

ಮಂಡ್ಯ : ಚಾಮರಾಜನಗರದ ಸುಳ್ವಾಡಿ ಕಿಚ್ಗುತ್ತಿ ಮಾರಮ್ಮನ ವಿಷ ಪ್ರಸಾದ ಪ್ರಕರಣ ಮಾಸುವ ಮುನ್ನವೇ ಸಕ್ಕರೆನಾಡಲ್ಲಿ ಅಂತಹದ್ದೇ ಪ್ರಕರಣ ನಡೆದಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದ ಗ್ರಾಮದ ಮಾರಮ್ಮ ದೇವರ ಪ್ರಸಾದ ಸೇವಿಸಿ 75ಕ್ಕೂ ಭಕ್ತರು ಅಸ್ವಸ್ಥರಾಗಿದ್ದಾರೆ.

ಪ್ರಸಾದ ತಿಂದವರಲ್ಲಿ ವಾಂತಿ, ಬೇಧಿ ಶುರುವಾಗಿದ್ದು, ನಿತ್ರಾಣಗೊಂಡಿದ್ದಾರೆ. ಅಸ್ವಸ್ಥಗೊಂಡವರನ್ನು ತಕ್ಷಣಕ್ಕೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಗ್ರಾಮಕ್ಕೆ ತಾಲೂಕು ಆರೋಗ್ಯಾಧಿಕಾರಿಗಳು, ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಪ್ರಸಾದ ಸೇವಿಸಿದವರ ಪರೀಕ್ಷೆ ನಡೆಸಿದ್ದು, ಚಿಕಿತ್ಸೆಗೆ ಮುಂದಾಗಿದ್ದಾರೆ.

ಊರಿನ ಪ್ರಮುಖ ಮುಖಂಡರೊಬ್ಬರ ಮನೆಯಲ್ಲಿ ಮದುವೆ ಪ್ರಯುಕ್ತ ರಾತ್ರಿ ಊರಿನ‌ ಮಾರಮ್ಮನ ದೇವಾಲಯದಲ್ಲಿ ಪೂಜೆ ಮಾಡಿಸಿ ಜನರಿ ಗಾಗಿ ಪ್ರಸಾದದ ರೂಪದಲ್ಲಿ ಪುಳಿಯೋಗರೆ ಮಾಡಿ ವಿತರಿಸಲಾಗಿತ್ತು.

ಗ್ರಾಮದ 100 ಕ್ಕೂ ಹೆಚ್ಚು ಮಂದಿ ಆ ಪ್ರಸಾದವನ್ನು‌ ಸೇವಿಸಿದ್ದರು. ಈ ಪ್ರಸಾದ ಸೇವಿಸಿದ ಕೆಲವರಿಗೆ ರಾತ್ರಿ ವಾಂತಿ ಬೇಧಿ ಕಾಣಿಸಿಕೊಂಡು ಹಲಗೂರಿನ ಆಸ್ಪ ತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು .ಬೆಳಿಗ್ಗೆ ಮತ್ತಷ್ಟು ಜನರಿಗೆ ವಾಂತಿ ಬೇಧಿ ಕಾಣಿಸಿಕೊಂಡು ಅವರೆಲ್ಲರೀ ಹಲಗೂರಿನ ಆಸ್ಪತ್ರೆ ಬಂದಿದ್ದಾರೆ. ಒಂದೇ ಊರಿನ‌ ಹೆಚ್ಚಿನ‌ ಜನರು ಆಸ್ಪತ್ರೆಗೆ ಬರುತ್ತಿದ್ದಂತೆ ವಿಚಾರಿಸಿದ ವೈದ್ಯರು ಗ್ರಾಮದ ಆಗಿರುವ ಸಮಸ್ಯೆ ಅರಿತು‌ ಕೂಡಲೇ ಲಿಂಗಪಟ್ಟಣಕ್ಕೆ ತಮ್ಮ ಸಿಬ್ಬಂದಿಗಳೊಂದಿಗೆ ಬಂದಿದ್ದಾರೆ‌. ಊರಿನಲ್ಲಿ ಪ್ರಸಾದ ತಿಂದ ಬಹುತೇಕರಿಗೆ ವಾಂತಿ, ಬೇಧಿ, ಹೊಟ್ಟೆ ನೋವು ಕಾಣಿಸಿಕೊಂಡವರಿಗೆ ಗ್ರಾಮದಲ್ಲಿ ಚಿಕಿತ್ಸೆ ನೀಡಿದ್ದು ಬಹುತೇಕರು ಚೇತರಿಸಿಕೊಂಡಿದ್ದಾರೆ‌.

ಗ್ರಾಮದಲ್ಲಿನ ಪರಿಸ್ಥಿತಿಯ ಬಗ್ಗೆ ಸ್ಥಳೀಯ ವೈದ್ಯರು ತಮ್ಮ ಮೇಲಧಿಕಾರಿಗಳಿಗೆ ಗ್ರಾಮದಲ್ಲಿ ಫುಡ್ ಪಾಯಿಸನ್ ಆಗಿರೋ ಬಗ್ಗೆ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಮಂಚೇಗೌಡ, ಮಳವಳ್ಳಿ ಡಿವೈಎಸ್​ಪಿ ಪೃಥ್ವಿ ಹಾಗೂ ಸಿಪಿಊ ಭೇಟಿ ನೀಡಿ ಪರಿಸ್ಥಿತಿಯ ಅವ ಲೋಕನ ನಡೆಸಿದರು. ಗ್ರಾಮದಲ್ಲಿ ದೇವರ ಪ್ರಸಾದ ತಯಾರಿಕೆ ಮಾಡುವಾಗ ಫುಡ್ ಪಾಯಿಸನ್ ಆಗಿರು ಶಂಕೆಯ ಮೇರೆಗೆ ತಯಾರಿಸಿದ್ದ ಪ್ರಸಾದ ಹಾಗೂ ನೀರಿನ ಸ್ಯಾಂಪಲ್ ನ್ನು ಪರೀಕ್ಷೆಗಾಗಿ ಪಡೆದುಕೊಂಡರು.

ಸದ್ಯ ಗ್ರಾಮದಲ್ಲಿ ಬಹುತೇಕರು ಚೇತರಿಸಿಕೊಂಡಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದ್ದು,ಯಾವುದೇ ಆತಂಕ ವಿಲ್ಲವೆಂದು ಡಿಎಚ್​ಒ ತಿಳಿಸಿದ್ದಾರೆ. ಒಂದಿಬ್ಬರು ಹೆಚ್ಚು‌ಅಸ್ವಸ್ಥ ಗೊಂಡಿರೋದರಿಂದ ಮಳವಳ್ಳಿ ಆಸ್ಪತ್ರೆಗೆ ಕಳಿಸಿದ್ದು ಪ್ರಯೋಗಾಲಯದ ವರದಿ ಬಂದ ಬಳಿಕ ಇದಕ್ಕೆ ಕಾರಣವೇನೆಂದು ತಿಳಿಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಗ್ರಾಮದಲ್ಲಿ ನಡೆದ ಈ ಘಟನೆ ಯಿಂದಾಗಿ ಇಡೀ ಗ್ರಾಮದ ಜನರು‌ ಆತಂಕಗೊಂಡಿ ದ್ದಾರೆ. . ಸದ್ಯ ಯಾವುದೇ ಅನಾಹುತ ಆಗಿಲ್ಲವಾದರೂ ಆರೋಗ್ಯ ಇಲಾಖೆ ಈ ಬಗ್ಗೆ ಕಟ್ಟೆಚ್ಚರ ವಹಿಸಿ ಗ್ರಾಮದಲ್ಲೇ ಬೀಡು ಬಿಟ್ಟು ಅಸ್ವಸ್ಥರಿಗೆ ಚಿಕಿತ್ಸೆ ನೀಡಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ.

Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

Published

on

ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.


ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.

ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

LATEST NEWS

Trending