LATEST NEWS
750 ರೂ. ಸಾಲ ತೀರಿಸಲಾಗದೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ..!
9ನೇ ತರಗತಿ ವಿದ್ಯಾರ್ಥಿಯೊಬ್ಬ 750 ರೂ. ಸಾಲ ತೀರಿಸಲಾಗದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಚಿಕ್ಕಮಗಳೂರು: 9ನೇ ತರಗತಿ ವಿದ್ಯಾರ್ಥಿಯೊಬ್ಬ 750 ರೂ. ಸಾಲ ತೀರಿಸಲಾಗದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಶ್ರೀನಿವಾಸ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.
ಈತ ಕೊಪ್ಪ ತಾಲೂಕಿನ ಖಾಸಗಿ ಶಾಲೆಯ ಆ. 22 ರಂದು ಆತ್ಮಹತ್ಯೆಗೆ ಶರಣಾಗಿದ್ದ.
ತನ್ನ ಸಾವಿಗೆ ಕಾರಣವನ್ನು ಬರೆದಿಟ್ಟಿರುವ ವಿದ್ಯಾರ್ಥಿ 750 ರೂ. ಬದಲು ಆಂಟಿ 3000 ರೂಪಾಯಿ ಕೇಳಿದ್ದಾರೆ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ.
ಆ ಆಂಟಿ ವಾರ್ಡನ್ ಅಥವಾ ಹಾಸ್ಟೆಲ್‍ನ ಬೇರೆ ಸಿಬ್ಬಂದಿಯೋ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಇದೀಗ ಡೆತ್ ನೋಟ್ ಹೊರಬಂದಿದ್ದು, ಆತನ ಸಾವಿಗೆ ಕಾರಣಕರ್ತರಾದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಮೃತ ಬಾಲಕನ ತಂದೆ ಆಗ್ರಹಿಸಿದ್ದಾರೆ.
ಮೃತ ಬಾಲಕ ಶ್ರೀನಿವಾಸ್ ತಂದೆ ನಿವೃತ್ತ ಯೋಧರಾಗಿದ್ದು, ಸೇನೆಯಿಂದ ವಾಪಸ್ ಬಂದ ಬಳಿಕ ಕೊಪ್ಪದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಸರ್ಕಾರಿ ಸೇವೆ ಸಲ್ಲಿಸುತ್ತಿದ್ದರು.
ಕೊಪ್ಪದಿಂದ ಅಜ್ಜಂಪುರ ತಾಲೂಕಿಗೆ ವರ್ಗಾವಣೆಯಾದ ಬಳಿಕ ಮಗನನ್ನು ಖಾಸಗಿ ಶಾಲೆಯ ಹಾಸ್ಟೆಲಿಗೆ ಸೇರಿಸಿ ಬಂದಿದ್ದರು.
ಡೆತ್ ನೋಟ್ ಹೊರ ಬರುತ್ತಿದ್ದಂತೆ ಬಾಲಕನ ಪೋಷಕರು ಹಾಗೂ ಸಂಬಂಧಿಕರು ಕೂಡ ಅವನಿಗೆ ಹಣ ಕೊಟ್ಟವರು ಯಾರು…? ಕೊಟ್ಟದ್ದು ಯಾಕೆ.. ? 750 ರೂಪಾಯಿ ನೀಡಿ 3000 ರೂಪಾಯಿ ಕೇಳಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಹಾಸ್ಟೆಲಿನಲ್ಲಿ ಅವನಿಗೆ ಹಣ ಕೊಟ್ಟವರು ಹಾಸ್ಟೆಲ್ ವಾರ್ಡನ್ ಅಥವಾ ಇತರೆ ಮಹಿಳಾ ಸಿಬ್ಬಂದಿ ಎನ್ನುವುದು ತನಿಖೆಯಿಂದ ಹೊರಬರಬೇಕಿದೆ.
ಮಗನ ಸಾವಿಗೆ ನ್ಯಾಯ ಸಿಗದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪೋಷಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
bengaluru
ಕಾಂತಾರ ಚಿತ್ರಕ್ಕೆ 1 ವರ್ಷ-ನಾಳೆ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್
ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ. ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡುವ ಪ್ಲಾನ್ ನಡೆಯುತ್ತಿದೆ.
ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ.
ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡುವ ಪ್ಲಾನ್ ನಡೆಯುತ್ತಿದೆ.
ಸಣ್ಣ ಬಜೆಟ್ ನಲ್ಲಿ ಕಾಂತಾರ ಸಿನೆಮಾ ನಿರ್ಮಾಣವಾಗಿದ್ದು ಚಿತ್ರ ಗಳಿಸಿದ್ದು ಮಾತ್ರ ಬರೋಬ್ಬರಿ 400 ಕೋಟಿಗಿಂತಲೂ ಅಧಿಕ ಮೊತ್ತ.
ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿ ಅನೇಕ ಕಲಾವಿದರು ಕಾಂತಾರ ಚಿತ್ರದಲ್ಲಿ ನಟಿಸಿ ಪ್ರತಿಯೊಬ್ಬ ಸಿನಿ ರಸಿಕರ ಮನದಲ್ಲಿ ಹಚ್ಚೊತ್ತಿದ್ರು.
ನಿರೀಕ್ಷೆಗೂ ಮೀರಿ ನೇಮು-ಫೇಮು ಎಲ್ಲವೂ ಸಿಕ್ಕಿತು.
ಇದೀಗ ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಆಗಿದೆ. ಈ ಹಿನ್ನಲೆ ನಾಳೆ ಸೆ. 30 ರಂದು ಬೆಳಿಗ್ಗೆ ಕಾಂತಾರ ಚಿತ್ರದಲ್ಲಿ ಭರ್ಜರಿ ಯಶಸ್ಸು ಕಂಡ ‘ವರಾಹ ರೂಪಂ’ ಹಾಡಿನ ವಿಡಿಯೋ ವರ್ಷನ್ ರಿಲೀಸ್ ಆಗಲಿದೆ.
ಈ ಕುರಿತು ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ.
DAKSHINA KANNADA
ಕಡಲ ಮಧ್ಯೆ ಸಿಲುಕಿದ ಮೀನುಗಾರಿಕಾ ಬೋಟ್- ಮೀನುಗಾರರನ್ನು ರಕ್ಷಿಸಿದ ಕೋಸ್ಟ್‌ಗಾರ್ಡ್
ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು.
ಈ ಬಗ್ಗೆ ಬೋಟ್‌ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.
ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್‌ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್‌ಗಾರ್ಡ್‌ಗೆ ಮಾಹಿತಿ ನೀಡಿದ್ದರು.
ಅದರಂತೆ ಕೋಸ್ಟ್‌ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್‌ನ ಎರಡು ಇಂಟರ್‌ಸೆಪ್ಟರ್ ಬೋಟ್‌ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್‌ನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್‌ಗಾರ್ಡ್ ತಿಳಿಸಿದೆ.
LATEST NEWS
Lucknow: ಪುತ್ರಿ ಮದುವೆ ಮಾಡಲು ಎಂದು ಲಾಕರ್ ನಲ್ಲಿಟ್ಟ 18 ಲಕ್ಷ ರೂ. ಗೆದ್ದಲು ಪಾಲು..!
ಲಕ್ನೋ: ಮಗಳ ಮದುವೆಗೆಂದು ತಾಯಿಯೊಬ್ಬರು ರೂಪಾಯಿ-ರೂಪಾಯಿ ಹಣವನ್ನು ಜೋಪಾನವಾಗಿ ಬ್ಯಾಂಕ್‌ನ ಲಾಕರ್‌ನಲ್ಲಿ ಕೂಡಿ ಇಟ್ಟ ಸುಮಾರು 18 ಲಕ್ಷ ರೂ. ಹಣವು ಗೆದ್ದಲು ಹಿಡಿದು ನಾಶವಾಗಿರುವ ಘಟನೆ ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ವರದಿಯಾಗಿದೆ.
ಮೊರಾದಾಬಾದ್ ನಿವಾಸಿ ಅಲ್ಕಾ ಪಠಾಕ್ ಅವರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅಶಿಯಾನಾದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ 18 ಲಕ್ಷ ರೂ.ಗಳನ್ನು ಇಟ್ಟಿದ್ದರು.
ಇತ್ತೀಚಿಗೆ ಬ್ಯಾಂಕ್ ಸಿಬಂದಿ ಲಾಕರ್ ಅಗ್ರಿಮೆಂಟ್ ರಿನೀವಲ್‌ಗೆ ಎಂದು ಅಲ್ಕಾ ಅವರಿಗೆ ಕರೆ ಮಾಡಿ ಬರಲು ಹೇಳಿದ್ದಾರೆ.
ಈ ವೇಳೆ ಲಾಕರ್ ತೆರೆದರೆ ನೋಟುಗಳಿಗೆ ಗೆದ್ದಲು ಹಿಡಿದಿರುವುದು ಕಂಡು ಬಂದಿದೆ.
ಈ ಬಗ್ಗೆ ಬ್ಯಾಂಕ್‌ನ ಮುಖ್ಯ ಕಚೇರಿಗೆ ತಿಳಿಸಿರುವುದಾಗಿ ಸಿಬಂದಿ ಹೇಳಿದ್ದಾರೆ.
ತನಗಾದ ನಷ್ಟಕ್ಕೆ ಬ್ಯಾಂಕ್‌ನವರೇ ಪರಿಹಾರ ನೀಡಬೇಕೆಂದು ಮಹಿಳೆ ಪಟ್ಟು ಹಿಡಿದಿರುವುದು ವರದಿಯಾಗಿದೆ.