BANTWAL
ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ
ಪೆರಾಜೆ -ಮಾಣಿ ಯ ಬಾಲಾವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಆ. 15ರ ಮಂಗಳವಾರದಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ವಿಟ್ಲ: ಪೆರಾಜೆ -ಮಾಣಿ ಯ ಬಾಲಾವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಆ. 15ರ ಮಂಗಳವಾರದಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ದ್ವಜಾರೋಹಣವನ್ನು ಮಾಣಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಕೂಸಪ್ಪ ಪೂಜಾರಿ ಯವರು ನೆರವೇರಿಸಿದರು.
ಸಭಾ ಕಾರ್ಯಕ್ರಮದಲ್ಲಿ ನಿವೃತ್ತವಾಯು ಸೇನೆಯ ಅಧಿಕಾರಿ ಪ್ರಕಾಶ್ ಕುಕ್ಕಿಲರವರು ಮುಖ್ಯ ಅತಿಥಿಯಾಗಿ ಆಗಮಿಸಿ “ಭಾರತ ದೇಶ ಹಿಂದೆ ಒಂದು ಸಮಯದಲ್ಲಿ ಆಹಾರಕ್ಕಾಗಿ, ಹಣ್ಣು ಹಂಪಲಿಗಾಗಿ ಬೇರೆ ದೇಶಗಳನ್ನು ಅವಲಂಬಿಸಬೇಕಾಗಿತ್ತು.
ನಂತರ ದೇಶದಲ್ಲಿ ಗಣನೀಯ ಬದಲಾವಣೆಗಳಾಯಿತು.
ಈಗ ನಮ್ಮ ದೇಶದ ಆಹಾರ ವಸ್ತುಗಳನ್ನು, ಔಷಧಿಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡುವಷ್ಟು ಬಲಿಷ್ಠತೆ ನಮ್ಮಲ್ಲಿದೆ.
ಕೊರನ ಸಂದರ್ಭದಲ್ಲಿ ಭಾರತ ದೇಶದ ಸಾಧನೆ ಅಮೋಘ. ಭಾರತ ದೇಶ ಸದೃಢವಾಗಲು ನಮ್ಮಲ್ಲಿರುವ ಛಲ, ಪ್ರಯತ್ನ ಹಾಗೂ ತ್ಯಾಗದ ಮನೋ ಭಾವನೆ ಅತ್ಯಮೂಲ್ಯ ಎಂದರು.
ನಾವು ಮಾಡುವ ಕೆಲಸದಲ್ಲಿ ಪರಿಪೂರ್ಣತೆ ಇದ್ದಾಗ ಗುರಿಯನ್ನು ತಲುಪಬಹುದು.
ಸೇನೆಯು ಒಂದು ಅಮೂಲ್ಯವಾದ ಸಂಪತ್ತು.
ಸೇನೆಯಲ್ಲಿ ಹಲವಾರು ಅವಕಾಶಗಳು ಇವೆ. ಅದನ್ನು ಸದುಪಯೋಗಿಸಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಾಲಾವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಜೆ ಶೆಟ್ಟಿ ಯವರು ನಾವು ಎಲ್ಲಿ ಎಡವಿದ್ದೇವೆ ಅಲ್ಲಿಂದ ಸುಧಾರಿಸಿಕೊಂಡು ಹೋದಾಗ ನಮ್ಮ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ.
ಸೈನಿಕರಿಗೆ ಸಿಗುವ ಗೌರವ, ಮನ್ನಣೆ ಇತರ ಯಾವ ಕ್ಷೇತ್ರದಲ್ಲೂ ಸಿಗುವುದು ಅಸಾಧ್ಯ.
ಮಕ್ಕಳು ಸೈನ್ಯಕ್ಕೆ ಸೇರಿ ಭವ್ಯ ಭಾರತದ ಭವಿಷ್ಯವನ್ನು ಸದೃಢಗೊಳಿಸಬೇಕೆಂದು ಆಶಿಸಿದರು.
ವೇದಿಕೆಯಲ್ಲಿ ಯತಿರಾಜ್ ಎನ್ ಶೆಟ್ಟಿ, ಕಸ್ತೂರಿ ಪಿ ಶೆಟ್ಟಿ, ವಿಜಯಲಕ್ಷ್ಮಿ ಶೆಟ್ಟಿಯವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ರವೀಂದ್ರ ಡಿ. ಸ್ವಾಗತಿಸಿ, ಯಜ್ನೇಶ್ವರಿ ಶೆಟ್ಟಿ ಮತ್ತು ಸುಧಾ ಎನ್ ರಾವ್ ರವರು ಕಾರ್ಯ ಕ್ರಮ ನಿರೂಪಿಸಿದರು.
ಲಯನ್ ಕೂಸಪ್ಪ ಪೂಜಾರಿಯವರು ವಂದಿಸಿದರು.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
BANTWAL
Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.
ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.
ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.
ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
BANTWAL
Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.
ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.
ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.
- DAKSHINA KANNADA7 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS7 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA7 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA7 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!