Saturday, November 27, 2021

ಸೀರೆಯಲ್ಲಿ ನೇಣು ಬಿಗಿದು 7 ನೇ ತರಗತಿ ವಿಧ್ಯಾರ್ಥಿ ಆತ್ಮಹತ್ಯೆ

ಉಡುಪಿ : ಓದು ಎಂದು ಬುದ್ದಿ ಹೇಳಿದ್ದಕ್ಕೆ ಬೇಸರಗೊಂಡು 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಕಾಜ್ರಳ್ಳಿ ಜನತಾ ಕಾಲೊನಿ ನಿವಾಸಿಗಳಾದ ಕವಿತಾ ಹಾಗೂ ಉಮೇಶ ಅವರ ಪುತ್ರ 7 ನೇ ತರಗತಿ ವಿದ್ಯಾರ್ಥಿ ತನುಷ್(12) ಎಂದು ಗುರುತಿಸಲಾಗಿದೆ.


ತನುಷ್‌ ಕಲಿಯುವಿಕೆಯಲ್ಲಿ ಹಿಂದಿದ್ದು, ಪೋಷಕರು ಹೇಳಿದ ಮಾತನ್ನು ಕೇಳದೇ ಹಠಮಾರಿತನದಿಂದ ವರ್ತಿಸುತ್ತಿದ್ದ ಎನ್ನಲಾಗಿದೆ. ನಿವ್ವೆ ಬೆಳಿಗ್ಗೆ ಸುಮಾರು 9 ಗಂಟೆಗೆ ಕವಿತಾ ಅವರು ಎಂದಿನಂತೆ ತಮ್ಮ ಕೆಲಸಕ್ಕೆ ಹೊರಟಿದ್ದರು. ಆನ್‌‌ಲೈನ್‌ ಕ್ಲಾಸ್‌ಗೆ ಹಾಜರಾಗಬೇಕಿದ್ದರಿಂದ ಮಗನನ್ನು ಮನೆಯಲ್ಲಿಯೇ ಬಿಟ್ಟು ಹೋಗಿದ್ದರು. ಹೊರಡುವ ಮುನ್ನ ಒಳ್ಳೆಯ ರೀತಿಯಲ್ಲಿ ಓದು ಎಂದು ಬುದ್ದಿ ಮಾತನ್ನು ಹೇಳಿದ್ದರು. ತನುಷ್‌‌ ಹಠಮಾರಿತನದಿಂದ ಹಾಗೂ ವಿದ್ಯೆ ಸರಿಯಾಗಿ ತಲೆಗೆ ಹೋಗದ ಕಾರಣ ಬೇಸರಗೊಂಡು ಹಳೆಯ ಮನೆಯ ಕೊಠಡಿಯಲ್ಲಿದ್ದ ಜೋಕಾಲಿ ಸೀರೆಯನ್ನು ಪಕ್ಕಾಸಿಗೆ ಕಟ್ಟಿದ್ದು, ಅದೇ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಿಗ್ಗೆ ಸುಮಾರು 10 ಗಂಟೆಯಿಂದ 1 ಗಂಟೆಯ ನಡುವೆ ತನುಷ್‌‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...