ಬೆಂಗಳೂರು: ಕೊರೊನಾ ಸಂಕಷ್ಟದ ಜೊತೆಗೆ ಪೋಷಕರ ಆತಂಕದ ನಡುವೆ ಇಂದು (ಜೂನ್ 25) ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುತ್ತಿದೆ.
ಇಂದಿನಿಂದ ಜುಲೈ 4ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದ್ದು, ರಾಜ್ಯದಾದ್ಯಂತ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ರಾಜ್ಯದಲ್ಲಿ 2,879 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಿದ್ದು, ಕೋವಿಡ್ 19 ಹಿನ್ನಲೆ ಹೆಚ್ಚುವರಿ 330 ಬ್ಲಾಕ್ ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಜ್ವರ, ಕೆಮ್ಮು, ನೆಗಡಿ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ನಿಗದಿ ಮಾಡಲಾಗಿದೆ. ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗಿದೆ.
ಇನ್ನು ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:30ರ ವರೆಗೆ ಪರೀಕ್ಷೆ ಜರಗಲಿದೆ.
ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಂಡು, ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸ್ ಮಾಡಲಾಗಿದ್ದು, ಥರ್ಮಲ್ ಸ್ಕ್ರೀನಿಂಗ್, ಸಾಮಾಜಿಕ ಅಂತರದ ಮಾರ್ಕ್ ಕೂಡ ಮಾಡಲಾಗಿದೆ.
ಪ್ರತಿ ಕೊಠಡಿಯಲ್ಲಿ 15 ರಿಂದ 20 ವಿದ್ಯಾರ್ಥಿಗಳು ಮಾತ್ರ ಅವಕಾಶವಿದ್ದು, ಒಂದು ಟೇಬಲ್ ನಿಂದ ಮತ್ತೊಂದು ಟೇಬಲ್ ಮಧ್ಯ ನಾಲ್ಕು ಅಡಿ ಅಂತರದ ವ್ಯವಸ್ಥೆ ಮಾಡಲಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ದ.ಕ ಜಿಲ್ಲೆಯಲ್ಲಿ ಒಟ್ಟು 95 ಪರೀಕ್ಷಾ ಕೇಂದ್ರಗಳಿದ್ದು, 30,368 ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯುತ್ತಿದ್ದಾರೆ.
ಖಾಸಗಿ ಹಾಗೂ ಸರಕಾರಿ ಬಸ್ ಗಳನ್ನು ವಿದ್ಯಾರ್ಥಿಗಳನ್ನು ಕರೆತರಲು ಜಿಲ್ಲಾಡಳಿತ ಎರವಲು ಪಡೆದಿದೆ.
ಇನ್ನು ಗಡಿಜಿಲ್ಲೆ ಕಾಸರಗೋಡಿನಿಂದಲೂ ಪರೀಕ್ಷೆ ಬರೆಯಲು 300 ಕ್ಕೂ ಅಧಿಕ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದಾರೆ.
ಗಡಿಜಿಲ್ಲೆಯ ವಿದ್ಯಾರ್ಥಿಗಳನ್ನು ಕರೆತರಲು ವಿಶೇಷ ವ್ಯವಸ್ಥೆಯನ್ನು ಮಾಡಲಾಗಿದೆ. ವಿದ್ಯಾರ್ಥಿಗಳ ಥರ್ಮಲ್ ಸ್ಕ್ರೀನಿಂಗ್ ಮಾಡಲು ಬಾಕ್ಸ್ ರಚನೆ ಮಾಡಲಾಗಿದ್ದು, ಮಾಸ್ಕ್, ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ವಿತರಣೆಗೆ ಸಿದ್ಧತೆ ಮಾಡಲಾಗಿತ್ತು..
ಪ್ರತಿ ಶಾಲೆಗೆ ಇಬ್ಬರು ಪೊಲೀಸರನ್ನು ಹಾಗೂ ಇಬ್ಬರು ಸ್ಕೌಟ್ & ಗೈಡ್ಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
ಮಂಗಳೂರು/ಟೆಹ್ರಾನ್ : ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳನ್ನು ಗುಂಡಿಕ್ಕಿ ಹ*ತ್ಯೆ ಮಾಡಿರುವ ಘಟನೆ ಟೆಹ್ರಾನ್‌ನಲ್ಲಿ ಇಂದು (ಶನಿವಾರ) ನಡೆದಿದೆ.
ಈ ಘಟನೆಯಲ್ಲಿ ಮತ್ತೋರ್ವ ನ್ಯಾಯಮೂರ್ತಿ ಗಾಯಗೊಂಡಿದ್ದಾರೆ ಎಂದು ನ್ಯಾಯಾಂಗದ ‘ಮಿಜಾನ್’ ಸುದ್ದಿ ವೆಬ್‌ಸೈಟ್ ವರದಿ ಮಾಡಿದೆ. ಆಯತುಲ್ಲಾ ಮೊಹಮ್ಮದ್ ಮೊಘಿಶೆ ಹಾಗೂ ಅಲಿ ರಝನಿ ಹ*ತ್ಯೆಗೀಡಾದ ನ್ಯಾಯಮೂರ್ತಿಗಳು.
ಸುಪ್ರೀಂ ಕೋರ್ಟ್‌ನ ಹೊರಗೆ ನ್ಯಾಯಮೂರ್ತಿಗಳ ಮೇಲೆ ಗುಂಡಿನ ದಾಳಿ ನಡೆಸಿದ ದಾಳಿಕೋರ ಬಳಿಕ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಘಟನೆಯಲ್ಲಿ ನ್ಯಾಯಮೂರ್ತಿಯೊಬ್ಬರ ಅಂಗರಕ್ಷಕ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಂಗಳೂರು/ಕೊಲ್ಕತ್ತಾ : ಆರ್.ಜಿ.ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾ*ಚಾರ ಹಾಗೂ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸಿಯಾಲ್ದಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಅನಿರ್ಬನ್ ದಾಸ್ ಶನಿವಾರ(ಜ.18)ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೋಮವಾರ(ಜ.20) ಪ್ರಕಟಿಸಲಿದ್ದಾರೆ.
2024ರ ಆಗಸ್ಟ್ 9 ರಂದು ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ನಡೆಸಿ, ಹ*ತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಇಡೀ ದೇಶದಾದ್ಯಂತ ಭಾರಿ ಆಕ್ರೋಶ ಕೇಳಿ ಬಂದಿತ್ತು. ದೇಶದ ಬಹುತೇಕ ಭಾಗಗಳಲ್ಲಿ ವೈದ್ಯರು ಮುಷ್ಕರ ನಡೆಸಿದ್ದರು. ಆಗಸ್ಟ್ 10 ರಂದು ಸಂಜಯ್ ರಾಯ್‌ನನ್ನು ಬಂಧಿಸಲಾಯಿತು.
ಕೊಲ್ಕತ್ತಾ ಹೈಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತ್ತು. ಆರೋಪಿಗೆ ಗ*ಲ್ಲು ಶಿಕ್ಷೆ ಆಗಬೇಕು ಎಂದು ಸಿಬಿಐ ವಾದಿಸಿದೆ. ಪ್ರಕರಣದ ವಿಚಾರಣೆ ನವೆಂಬರ್ 12 ರಂದು ಆರಂಭವಾಗಿತ್ತು. ಒಟ್ಟು 50 ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲಾಗಿದೆ. ಆರೋಪಿಯ ವಿಚಾರಣೆ ಜ.9ರಂದು ಕೊನೆಗೊಂಡಿತ್ತು.
ಮಂಗಳೂರು/ಮುಂಬೈ : ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿರುವ ಭಾರತದ 15 ಸದಸ್ಯರ ಕ್ರಿಕೆಟ್ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ.
ಚಾಂಪಿಯನ್ಸ್ ಟ್ರೋಫಿ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ, 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕರಾಗಿ ಶುಭ್‌ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ದದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಫಿಟ್‌ನೆಸ್ ಸಮಸ್ಯಗೆ ಒಳಗಾಗಿದ್ದ ಜಸ್‌ಪ್ರೀತ್ ಬುಮ್ರಾ ಅವರನ್ನು ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿದೆ.