DAKSHINA KANNADA
ವರ್ಲ್ಡ್ ಯುನಿವರ್ಸಿಟಿ ಗೇಮ್ಸ್‌ಗೆ ‘ಆಳ್ವಾಸ್’ ನ 8 ಕ್ರೀಡಾಪಟುಗಳು ಆಯ್ಕೆ:ಡಾ. ಮೋಹನ್ ಆಳ್ವ
Published
1 year agoon
By
Adminಚೀನಾದಲ್ಲಿ ನಡೆಯುವ ವರ್ಲ್ಡ್ ಯುನಿವರ್ಸಿಟಿ ಗೇಮ್ ಗೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ 8 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ: ಚೀನಾದಲ್ಲಿ ನಡೆಯುವ ವರ್ಲ್ಡ್ ಯುನಿವರ್ಸಿಟಿ ಗೇಮ್ ಗೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ 8 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಜುಲೈ. 28ರಿಂದ ಆಗಸ್ಟ್ 8ರವರೆಗೆ ಚೀನಾದ ಚಾಂಗುನಲ್ಲಿ ನಡೆಯಲಿರುವ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ 2021 (ವಿಶ್ವ ವಿಶ್ವವಿದ್ಯಾಲಯ ವರೆಗೆ ಕ್ರೀಡಾಕೂಟ-2021)ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ 8 ಕ್ರೀಡಾಪಟುಗಳು ಆಯ್ಕೆಯಾಗಿದ್ದು ಇದರೊಂದಿಗೆ ಈ ವರೆಗೆ ಆಳ್ವಾಸ್ ನ ಒಟ್ಟು 21 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪುರುಷರ ವಿಭಾಗದಲ್ಲಿ ತೀರ್ಥೇಶ್ ಶೆಟ್ಟಿ (400 ಮೀಟರ್ಸ್ ಓಟ ಮತ್ತು 4 x 400 ಮೀಟರ್ಸ್ ರಿಲೇ), ಹರ್‌ದೀಪ್ (20 ಕಿ.ಮೀ ನಡಿಗೆ), ಸ್ಟಾಲಿನ್ ಜೋಸ್ ಎಸ್. (ಡ್‌ರಾಫ್ಲಾನ್), ಮಹಿಳಾ ವಿಭಾಗದಲ್ಲಿ ಪೂನಮ್ ಡಿಂಕೆ ಸೋಮನೆ (5 ಸಾವಿರ ಮೀಟರ್ಸ್ ಮತ್ತು 10 ಸಾವಿರ ಮೀಟರ್ಸ್ ಓಟ) ಬಸಂತಿ ಕುಮಾರಿ (10 ಸಾವಿರ ನಿರ್ಮಾ (ಹಾಫ್ ಮ್ಯಾರಥಾನ್), ಸಿಂಚನಾ ಎಂ.ಎಸ್. (ಹೈಜಂಪ್), ಭವಾನಿ ಯಾದವ್ ಭಾಗಬತಿ (ಲಾಂಗ್ ಜಂಪ್ ಮತ್ತು 4×400 ಮೀಟರ್ಸ್ ರಿಲೇ) ಪಾಲ್ಗೊಳ್ಳಲಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದ ಕ್ರೀಡಾಪಟುಗಳು ಭುವನೇಶ್ವರದ ಕಳಿಂಗ ಇನ್‌ಸ್ಟಿಟ್ಯೂಟ್ ಆಪ್ ಇಂಡಸ್ಟ್ರಿಯಲ್ ಟೆಕ್ನಾಲಜಿ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ನಡೆದಿದ್ದ ಆಯ್ಕೆ ಪ್ರಕ್ರಿಯೆಯಲ್ಲಿ (ಸಿಲೆಕ್ಷನ್ ಟ್ರಯಲ್ಸ್ ಗೇಮ್) ಪ್ರವೇಶ ಪಡೆದಿದ್ದಾರೆ.
ಈ ಹಿಂದೆ ನಡೆದ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್‌ಗಳಲ್ಲೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾಪಟುಗಳು ಪ್ರತಿನಿಧಿಸಿದ್ದು, ಈ ವರ್ಷ ಸೇರಿದಂತೆ ಈ ವರೆಗೆ 21 ಮಂದಿ ಆಯ್ಕೆಯಾಗಿದ್ದಾರೆ.
2016ರಲ್ಲಿ ಕೊವೇಶಿಯಾ ನಡೆದ ಗೇಮ್ಸ್‌ನಲ್ಲಿ ಒಬ್ಬರು, 2017ರಲ್ಲಿ ತೈವಾನ್ ನಡೆದ ಗೇಮ್ಸ್‌ನಲ್ಲಿ ಇಬ್ಬರು, 2019ರಲ್ಲಿ ಇಟಲಿಯಲ್ಲಿ ನಡೆದ ಗೇಮ್ಸ್‌ನಲ್ಲಿ 10 ಜನ ಪಾಲ್ಗೊಂಡಿದ್ದರು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
2 days agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?