DAKSHINA KANNADA
ಮಾರಕಾಸ್ತ್ರ ಸಹಿತ 8 ಹೆದ್ದಾರಿ ದರೋಡೆ ಕುಖ್ಯಾತಿಗಳು ಸಿಸಿಬಿ ಬಲೆಗೆ..!
ಮಂಗಳೂರು:ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರ ದರೋಡೆಗೆ ಸಂಚು ರೂಪಿಸುತ್ತಿದ್ದ ಟಿ ಬಿ ಗ್ಯಾಂಗ್ನ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ.
ಮಂಗಳೂರು ಹೊರವಲಯದ ಉಲಾಯಿಬೆಟ್ಟು ಪರಾರಿ ಎಂಬಲ್ಲಿ ಬೆಳಿಗ್ಗೆ 8.30ರ ಸುಮಾರಿಗೆ ಇನ್ನೋವಾ ಕಾರಿನಲ್ಲಿದ್ದ ಬರುತ್ತಿದ್ದಾಗ ಕುಖ್ಯಾತಿಗಳ ಬಂಧನವಾಗಿದೆ.
.ಬಂಧಿತರನ್ನು ತೌಸಿರ್, ಮೊಹಮ್ಮದ್ ಅರಾಫತ್, ತಸ್ಲಿಂ, ನಾಸೀರ್ ಹುಸೈನ್, ಮೊಹಮ್ಮದ್ ರಫೀಕ್, ಮೊಹಮ್ಮದ್ ಸಫ್ವಾನ್, ಮೊಹಮ್ಮದ್ ಜೈನುದ್ದೀನ್, ಉನೈಝ್ ಎಂದು ಗುರುತಿಸಲಾಗಿದೆ.
ಇವರಿಂದ 2 ತಲ್ವಾರ್, 2 ಚೂರಿ, 1 ಡ್ರಾಗನ್ ಚೂರಿ, 8 ಮೊಬೈಲ್ ಫೋನ್, 5 ಮಂಕಿ ಕ್ಯಾಪ್, ಮೆಣಸಿನ ಹುಡಿಯ ಪ್ಯಾಕೆಟ್, ಇನ್ನೋವಾ ಕಾರು ವಶ ಪಡಿಸಲಾಗಿದೆ. ಟಿ ಬಿ ಎಂಬ ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಿಕೊಂಡಿದ್ದ ತೌಸೀರ್ ಯಾನೆ ತೌಸಿ ಯಾನೆ ಪತ್ತೊಂಜಿ ಮತ್ತು ವಿದೇಶದಲ್ಲಿರುವ ರೌಡಿ ಬಾತೀಶ್ ಯಾನೆ ಬಾಸಿತ್ ಎಂಬವರು ಸಂಚು ರೂಪಿಸಿ ತಮ್ಮ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದರು.
ತೌಸೀರ್ ಮತ್ತು ಬಾತೀಶ್ ಎನ್ನುವ ಹೆಸರಿನಲ್ಲಿ ಟಿ ಬಿ ಗ್ಯಾಂಗ್ ಎನ್ನುವ ವ್ಯಾಟ್ಸಾಪ್ ಗ್ರೂಪ್ ರಚಿಸಿದ್ದರು. ಈ ಗ್ರೂಪಿಗೆ ಉಳಿದವರನ್ನು ಸೇರಿಸಿ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸುತ್ತಿದ್ದರು ಎಂದರು.
ಎಲ್ಲಾ ಆರೋಪಿಗಳು ಕ್ರಿಮಿನಲ್ ಹಿನ್ನೆಲೆಯುಳ್ಳವರಾಗಿದ್ದಾರೆ ಎಂದು ವಿವರಿಸಿದರು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.