ಅಹ್ಮದಾಬಾದ್ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿಅವಘಡ; 8 ರೋಗಿಗಳು ಸಜಿವ ದಹನ..!
ಅಹ್ಮದಾಬಾದ್ : ಗುಜರಾತ್ ಅಹ್ಮದಾಬಾದ್ನ ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ನಿನ್ನೆ ತಡ ರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ.
ಅಹ್ಮದಾಬಾದ್ನ ನವರಂಗ್ಪುರ ಪ್ರದೇಶದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದೆ.
ತಡರಾತ್ರಿ ಸುಮಾರು 2:30 ಕ್ಕೆ ಇ ದುರ್ಘಟನೆ ಸಂಭವಿಸಿದೆ. ದುರ್ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಅರಣ ಎಂದು ಶಂಕಿಸಲಾಗಿದೆ.
ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ, ಈ ದುರಂತ ಸಂಭವಿಸಿದಾಗ ಈ ಆಸ್ಪತ್ರೆಯಲ್ಲಿ 35 ರೋಗಿಗಳಿದ್ದರೆನ್ನಲಾಗಿದೆ.
ಉಳಿದ ರೋಗಿಗಳು, ವೈದ್ಯರು ಮತ್ತು ಸಿಬ್ಬಂದಿಗೆ ಹಾನಿಯಾಗಿಲ್ಲ. ಉಳಿದ ರೋಗಿಗಳನ್ನು ನಗರದ ಬೇರೊಂದು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಇದೇ ವೇಳೆ, ಆಸ್ಪತ್ರೆಯಲ್ಲಿ ವ್ಯಾಪಿಸಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಗಾಯಾಳುಗಳು ಆದಷ್ಟೂ ಬೇಗ ಚೇತರಿಕೆ ಕಾಣಲಿ ಎಂದು ಹಾರೈಸಿರುವ ಅವರು ಅಹ್ಮದಾಬಾದ್ ಜಿಲ್ಲಾಡಳಿತವು ಎಲ್ಲಾ ನೆರವು ಒದಗಿಸುತ್ತಿದೆ ಎಂದಿದ್ದಾರೆ.