Friday, July 1, 2022

ಉಡುಪಿ: ಕಾಲು ತೊಳೆಯಲೆಂದು ಕೆರೆಗೆ ಇಳಿದಿದ್ದ ಬಾಲಕ ಮುಳುಗಿ ಸಾವು

ಉಡುಪಿ: ಕಾಲು ತೊಳೆಯಲೆಂದು ಕೆರೆಗೆ ಇಳಿದಿದ್ದ ಬಾಲಕ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿಯ ಕಡೆಕಾರಿನ ಭಜನಾ ಮಂದಿರದ ಬಳಿ ನಡೆದಿದೆ.

ಕಡೆಕಾರು ನಿವಾಸಿ ಗಿರೀಶ್ ಉಪಾಧ್ಯಾಯ ಎಂಬವರ ಮಗ ರಾಘವ (8) ಮೃತಪಟ್ಟ ದುರ್ದೈವಿ ಮಗು.

ನಿನ್ನೆ ಸಂಜೆಯ ವೇಳೆಗೆ ಬಾಲಕ ಜಾರುಬಂಡೆಯಲ್ಲಿ ಆಟವಾಡಲು ಹೋಗಿದ್ದ. ಆಟದ ನಂತರ ಕೈಕಾಲು ತೊಳೆಯಲು ಕೆರೆಗೆ ಇಳಿದ ಸಂದರ್ಭ ಕಾಲು ಜಾರಿ ಬಿದ್ದು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಶನಿವಾರ ರಾತ್ರಿ 12 ಗಂಟೆಯವರೆಗೆ ಹುಡುಕಾಟ ನಡೆಸಿದರೂ ಪತ್ತೆಯಾಗದ ಕಾರಣ ಇಂದು ಬೆಳಿಗ್ಗೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಬಾಲಕನ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಹಿಳೆಯರ ಸ್ವಾವಲಂಬಿ ಬದುಕಿಗೆ ಭಾಷ್ಯ ಬರೆದ ಉಡುಪಿಯ ಸವಿತಾ ಶೇಟ್

ಉಡುಪಿ: ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉಡುಪಿಯ ಮಹಿಳೆಯೊಬ್ಬರು ಪ್ರೇರಣೆಯಾಗಿದ್ದಾರೆ. ಉಡುಪಿಯ ಒಳಕಾಡು ನಿವಾಸಿ ಸವಿತಾ ಶೇಟ್ ಎಂಬವರೇ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ಪೂರ್ತಿದಾಯಕರಾಗಿದ್ದಾರೆ.ಇವರ ಗಂಡ ಉದ್ಯಮಿಯಾಗಿದ್ದು ಹಾಗೂ ಮಗ ಶಿಕ್ಷಕರಾಗಿ ಕೆಲಸ...

ಸುಳ್ಯ: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ-ಸ್ತಬ್ಧರಾದ ಜನ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಿನ್ನೆ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ.ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು...

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...