Connect with us

    LATEST NEWS

    8 ವರ್ಷದ ಬಾಲಕಿಯನ್ನು ಅತ್ಯಾ*ಚಾರಗೈದು ವಿಕೃತ ಮೆರೆದ ಬಾಲಕರು..! ಕೊ*ಲೆಗೈದು ರಾಜಕಾಲುವೆಗೆ ಎಸೆದ ಪಾಪಿಗಳು..!!

    Published

    on

    ಮಧ್ಯಪ್ರದೇಶ/ಮಂಗಳೂರು: ಎಂಟು ವರ್ಷದ ಬಾಲಕಿಯನ್ನು 12 ವರ್ಷದ ಬಾಲಕರು ಆಟವಾಡಲೆಂದು ಕರೆಸಿಕೊಂಡು ಅತ್ಯಾ*ಚಾರಗೈದು ಕೊಲೆ ಮಾಡಿದ ವಿಕೃತ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

    ಎಂಟು ವರ್ಷದ ಬಾಲಕಿಯನ್ನು ಬಾಲಕರು ಆಟವಾಡಲೆಂದು ಕರೆಸಿಕೊಂಡಿದ್ದಾರೆ. ಬಾಲಕಿ ಸಂಜೆಯಾದರೂ ಮನೆಗೆ ವಾಪಾಸ್ಸಾಗದೇ ಇದ್ದಾಗ ಪೋಷಕರು ಗಾಬರಿಗೊಂಡಿದ್ದಾರೆ. ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಶ್ವಾನ ದಳದ ಸಹಾಯದಿಂದ ತನಿಖೆ ಕಗೆತ್ತಿಕೊಂಡಿದ್ದಾರೆ. ಈ ವೇಳೆ ಶ್ವಾನ ಕೃತ್ಯ ಎಸಗಿದ ಬಾಲಕರ ಮನೆಯತ್ತ ತೆರಳಿದೆ. ಮೂವರು ಬಾಲಕರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಬಾಲಕರು ಮಾಡಿದ ಕಾಮುಕ ಕೃತ್ಯವನ್ನು ಬಾಯಿಬಿಟ್ಟಿದ್ದಾರೆ.

    ಕಾಪು : ಮೋರಿಯ ದಂಡೆಗೆ ಡಿ*ಕ್ಕಿಯಾಗಿ ಕಾರು ಪಲ್ಟಿ

    ಬಾಲಕಿಯನ್ನು ಆಟವಾಡಲೆಂದು ಕರೆದುಕೊಂಡು ಹೋಗಿ, ಬಳಿಕ ಆಕೆಯ ಬಾಯಿ ಮುಚ್ಚಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಘಟನೆಯ ಬಗ್ಗೆ ಬಾಲಕಿಯ ಪೋಷಕರಿಗೆ ಹೆದರಿ ಆಕೆಯನ್ನು ಕೊಲೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ರಾಜಕಾಲುವೆಗೆ ಎಸೆದು ರಾಕ್ಷಸತನ ಮೆರೆದಿದ್ದಾರೆ.

    ಬಾಲಕಿಯ ಮೃತದೇಹಕ್ಕಾಗಿ ರಾಜಕಾಲುವೆಯಲ್ಲಿ ಹುಡುಕಾಟ ಆರಂಭವಾಗಿದೆ. ಭಾರೀ ಮಳೆಯಿಂದಾಗಿ ರಾಜಕಾಲುವೆಯಲ್ಲಿ ನೀರು ರಭಸದಿಂದ ಹರಿಯತ್ತಿರುವ ಕಾರಣ ಮೃತದೇಹ ಕೊಚ್ಚಿ ಹೋಗಿರುವ ಸಾಧ್ಯತೆ ಕೂಡಾ ಇದೆ ಎಂದು ಹೇಳಲಾಗಿದೆ.

    Click to comment

    Leave a Reply

    Your email address will not be published. Required fields are marked *

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’

    Published

    on

    ಮೂಡುಬಿದಿರೆ: 2024 ರ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಗೆ ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಆಯ್ಕೆಯಾಗಿದ್ದಾರೆ.

    ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು, ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

    ಅಶೋಕ್ ನಾಯ್ಕರವರು ನಮ್ಮ ಕುಡ್ಲ ವಾಹಿನಿಯ ನೃತ್ಯ ಭಜನೆ ಸೀಸನ್ 1 ಹಾಗು ಸೀಸನ್ 2 ರಲ್ಲಿ ಹಲವು ತಂಡಗಳೊಂದಿಗೆ ಭಾಗವಹಿಸಿದ್ದಾರೆ. ಇವರಿಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಲಭಿಸಿದ ಈ ಸಂಧರ್ಭದಲ್ಲಿ ನಮ್ಮ ಕುಡ್ಲ ವಾಹಿನಿಯು ಶುಭಾಶಯ ಕೋರುತ್ತಿದೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    LATEST NEWS

    Trending