Connect with us

    DAKSHINA KANNADA

    ಹೊಯ್ಸಳ ಕಾಲದ 800 ವರ್ಷದ ಪುರಾತನ 9 ಮೂರ್ತಿಗಳ ಪತ್ತೆ..!

    Published

    on

    ಪುತ್ತೂರು:  ತಾಲೂಕಿನ ಕುದ್ಮಾರ್ ಗ್ರಾಮದ ಬರೆಪ್ಪಾಡಿಯಲ್ಲಿ ಶ್ರೀ ಪಂಚಲಿಂಗೇಶ್ವರ ಕೇಪುಲೇಶ್ವರ ದೇವಸ್ಥಾನ ಜೀರ್ಣೋದ್ದಾರದ ಸಂದರ್ಭದಲ್ಲಿ ಮತ್ತು ದೇವರ ಪುಣ್ಯ ತೀರ್ಥ ಬಾವಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಹೊಯ್ಸಳ ಕಾಲದ 800 ವರ್ಷ ಪುರಾತನದ 9 ಮೂರ್ತಿಗಳು ಕಂಡು ಬಂದಿವೆ. ಇದರ ಜೊತೆಗೆ ದೇವಸ್ಥಾನದ ಒಳಭಾಗದಲ್ಲಿ 584 ವರ್ಷ ಹಿಂದಿನ ವಿಜಯನಗರ ಕಾಲದ 2 ಕನ್ನಡ ಶಿಲಾ ಶಾಸನ ಸ್ಥಾಪನೆ ಮಾಡಿರುವ ಕುರೂಹೂ ಪತ್ತೆಯಾಗಿದೆ.

    ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಮುಂದಾಳತ್ವದಲ್ಲಿ ಶಾಸನ ಶೋಧನ ಅಧ್ಯಯನ ಸಂರಕ್ಷಣಾ ಯೋಜನೆಯಡಿಯಲ್ಲಿ ಮುಖ್ಯ ಅಧ್ಯಯನಕಾರ, ಇತಿಹಾಸ ತಜ್ಞ ಡಾ ಉಮಾನಾಥ ಶೆಣೈ ಇವರ ಮುಂದಾಳತ್ವದಲ್ಲಿ ಮೂರ್ತಿ ಮತ್ತು ಶಾಸನದ ಅಧ್ಯಯನ ನಡೆಸಿದ್ದಾರೆ.

    ಮುಂದೆ ಓದಿ..; ಚಂದನ್​ ಶೆಟ್ಟಿ-ನಿವೇದಿತಾ ಗೌಡ ಸಂಸಾರಕ್ಕೆ ಬ್ರೇಕ್ ನೀಡಲು​ ಇದೇನಾ ಕಾರಣ?

    ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಉಪಸ್ಥಿತಿಯಲ್ಲಿ, ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ಗೌಡ, ಭಜಕರಾದ ಲೋಕೇಶ್ ಗೌಡ ಮನವಿ ಮಾಡಿದಂತೆ ದೇವಸ್ಥಾನದ ಬಾಲಾಲಯದ ಮುಂಭಾಗದಲ್ಲಿ ಶಾಸನ ಮತ್ತು ಮೂರ್ತಿಗಳ ಅಧ್ಯಯನ ನಡೆಸಲಾಗಿದೆ. ಭೂಮಿ ಅಡಿಭಾಗದಲ್ಲಿದ್ದ ಶಾಸನ 37.6 ಇಂಚು ಉದ್ದ ಮತ್ತು 8.6 ಇಂಚು ಅಗಲ, 6.6 ಇಂಚು ದಪ್ಪ ಇದೆ. ಶಾಸನದ ಮೇಲ್ಭಾಗದಲ್ಲಿ ಅರ್ಧ ಚಂದ್ರಾಕೃತಿಯಲ್ಲಿದ್ದು, ಮೇಲೆ ಬಲ ಭಾಗದಲ್ಲಿ ಅರ್ಧ ಚಂದ್ರ ಮತ್ತು ಒಂದು ದೀಪವಿದೆ. ಎಡಭಾಗದಲ್ಲಿ ಸೂರ್ಯ ಮತ್ತು ದೀಪ, ಮೇಲ್ಭಾಗದಲ್ಲಿ ಒಂದು ಗೊಂಡೆ ಮತ್ತು ನಡುಭಾಗದಲ್ಲಿ ಪಾಣಿಪೀಠ ಸಹಿತ ಶಿವಲಿಂಗದ ರೂಪ ಕೆತ್ತಲಾಗಿದೆ. ಶಾಸನದಲ್ಲಿ 30 ಸಾಲು ಮತ್ತು ಹಿಂಭಾಗದಲ್ಲಿ 34 ಸಾಲು ಹಳೆಗನ್ನಡ ಲಿಪಿಯಲ್ಲಿ ಬರೆದಿದೆ. 2 ನೇ ಶಾಸನದಲ್ಲಿ ಮುಂಭಾಗದಲ್ಲಿ 30 ಸಾಲು ಸರಿಯಾಗಿ ಕಾಣುವುದಿಲ್ಲ. ಹಿಂಭಾಗದ 34 ಸಾಲಿನಲ್ಲಿ 3 ಸಾಲು ಸಂಪೂರ್ಣ ಅಳಿಸಿ ಹೋಗಿದೆ.

    ಹಳೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಈಶಾನ್ಯ ಭಾಗದ ದೇವರ ಬಾವಿಯಲ್ಲಿ ಲೋಹ ಮತ್ತು  ಪಂಚ ಲೋಹದ 9 ಮೂರ್ತಿಗಳು ಸಿಕ್ಕಿವೆ. ವರಾಹ ಲಕ್ಷ್ಮೀನಾರಾಯಣ, 4 ಕೈಗಳ ಲಕ್ಷ್ಮೀ ನಾರಾಯಣ, ವಿಷ್ಣು, ವೆಂಕಟರಮಣ, ದುರ್ಗೆ, ಹೆಣ್ಣು ಮತ್ತು ಗಂಡು ಜೋಡಿ ದೈವ, ರುಂಡವಿಲ್ಲದ ಮೂರ್ತಿ, 2 ಕೈಗಳ ನವನೀತ ಕೃಷ್ಣ, ಗೋಪಾಲಕೃಷ್ಣ ಮತ್ತು ಜಿಂಕೆಯನ್ನು ಕೈಯಲ್ಲಿ ಹಿಡಿದಿರುವ ದೇವರ ಉತ್ಸವ ಮೂರ್ತಿ ಕಂಡು ಬಂದಿದೆ. ಇದರಲ್ಲಿ ತುಂಡಾಗಿರುವ ಮೂರ್ತಿಗಳು ಹೆಚ್ಚಿವೆ. ಶಾಸನ ಸ್ಥಾಪನೆ ಮಾಡಿರುವ 200 ವರ್ಸ ಹಳೆಯ ಹೊಯ್ಸಳರ ಕಾಲದಲ್ಲಿ ಪ್ರತಿಷ್ಠಾಪನೆ ಆಗಿರುವ ಸಾಧ್ಯತೆಗಳಿವೆ. ಶಾಸನಗಳಲ್ಲಿ ಇರುವ ಮೂರ್ತಿಗಳ ಬಗ್ಗೆ ಇನ್ನಷ್ಟು ಅಧ್ಯಯನ  ಮಾಡಿದರೆ ಹೆಚ್ಚಿನ ಅಂಶಗಳು ತಿಳಿದು ಬರಬಹುದು ಎಂದು ಡಾ ಉಮಾನಾಥ ಶೆಣೈ ಅಭಿಪ್ರಾಯ ಪಟ್ಟಿದ್ದಾರೆ.  ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಪಾಂಡವರ ಪ್ರತಿಷ್ಠೆ ಎನ್ನುವುದು ಕೂಡಾ ಕ್ಷೇತ್ರ ಪುರಾಣದಲ್ಲಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending