Connect with us

LATEST NEWS

ನಾಳೆ ಮೂಡಬಿದಿರೆಯಲ್ಲಿ ಅ.ಭಾ.ಅಂ.ವಿವಿ ‘ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌’

Published

on

ಮೂಡುಬಿದಿರೆ: ನಾಳೆಯಿಂದ(ಜ.4) ರಿಂದ 7ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ 81ನೇ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ಗೆ ಬಹಳ ಅದ್ಧೂರಿಯಾದ ಸಿದ್ಧತೆಗಳು ನಡೆಯುತ್ತಿವೆ.


ಒಟ್ಟಾರೆಯಾಗಿ 23 ಸ್ಪರ್ಧೆಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಅಂತರ್ ರಾಜ್ಯಗಳಿಂದ ಕ್ರೀಡಾಕೂಟಕ್ಕೆ 2,500ಕ್ಕೂ ಅಧಿಕ ಕ್ರೀಡಾರ್ಥಿಗಳು ಆಗಮಿಸಿದ್ದು, ಕ್ರೀಡಾಭ್ಯಾಸದಲ್ಲಿ ನಿರತರಾಗಿದ್ದಾರೆ. 1044 ವಿಶ್ವವಿದ್ಯಾಲಯಗಳಿಂದ 11ಕೋಟಿ 60ಲಕ್ಷ ವಿದ್ಯಾರ್ಥಿಗಳನ್ನು ಕ್ರೀಡಾರ್ಥಿಗಳು ಪ್ರತಿನಿಧಿಸಲಿದ್ದಾರೆ.

ಎಲ್ಲಾ ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾಧಿಕಾರಿಗಳಿಗೆ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸಿಂಥೆಟಿಕ್ ಟ್ರ್ಯಾಕ್‌ನಲ್ಲಿ ಸುಸಜ್ಜಿತ ಮಾರ್ಕಿಂಗ್ ವ್ಯವಸ್ಥೆಯನ್ನು ಈಗಾಗಲೇ ಸಿದ್ಧಗೊಳಿಸಲಾಗಿದೆ. ಇದು ವಿವಿ ಇತಿಹಾಸದಲ್ಲೇ ಅಧಿಕ ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ.

ಅಂತರ್ ರಾಜ್ಯಗಳಿಂದ ಆಗಮಿಸುವ ಕ್ರೀಡಾಳುಗಳಿಗೆ ಉಚಿತ ವಾಹನ ಸೌಲಭ್ಯವನ್ನು ಒದಗಿಸಲಾಗಿದೆ. ಮಾಧ್ಯಮ ವರ್ಗದವರನ್ನು ವಿಶೇಷವಾಗಿ ಅಹ್ವಾನಿಸಿ, ಸತ್ಕರಿಸಲು ಸಕಲ ಸಿದ್ಧತೆಗಳನ್ನು ನಡೆಸಿವೆ.


ಆಕರ್ಷಕ ಸಾಂಸ್ಕೃತಿಕ ಮೆರವಣಿಗೆ
5 ನೇ ಬಾರಿಗೆ ಆಳ್ವಾಸ್ ಅತಿಥ್ಯದಲ್ಲಿ ಜರಗುತ್ತಿರುವ ಕ್ರೀಡಾಕೂಟದ ಉದ್ಘಾಟನೆಯ ಪ್ರಯುಕ್ತ, ಸಂಜೆ 5:30ಕ್ಕೆ ಸ್ವರಾಜ್ ಮೈದಾನದ ಸಿಂಥೆಟಿಕ್ ಟ್ರಾಕ್‌ನಲ್ಲಿ ದೇಶದ ವಿವಿಧ ವಿಶ್ವವಿದ್ಯಾನಿಲಯಗಳ ಕ್ರೀಡಾಳುಗಳ ಪಥಸಂಚಲನ ನೆರವೇರಲಿದೆ.

ಪಥಸಂಚಲನದ ಬಳಿಕ ಅದ್ಧೂರಿಯಾದ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ರಾಷ್ಟ್ರದ ವಿವಿಧ ಕಲೆ-ಸಂಸ್ಕೃತಿಗಳನ್ನು ಬಿಂಬಿಸುವ 150ಕ್ಕೂ ಹೆಚ್ಚು ಕಲಾತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಮೆರವಣಿಗೆಯ ಮೆರುಗು ಹೆಚ್ಚಿಸಲು ಆಕರ್ಷಕ ಸುಡುಮದ್ದು ಪ್ರದರ್ಶನ ಇರಲಿದೆ.

ಉದ್ಘಾಟನಾ ಸಮಾರಂಭ
ಮೂಡುಬಿದಿರೆ ಸ್ವರಾಜ್ ಮೈದಾನದಲ್ಲಿ ಮುಂಜಾನೆ 8 ಗಂಟೆಗೆ ಆರಂಭಗೊಳ್ಳಲಿದ್ದು, ಸಂಜೆ 5.30ಕ್ಕೆ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ನಡೆಯಲಿದೆ.

ಕರ್ನಾಟಕ ರಾಜ್ಯದ ಕ್ರೀಡಾ ಸಚಿವ ನಾರಾಯಣ ಗೌಡ ಅವರು ಪುರುಷರ ಅಂತರ್‌ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಕ್ರೀಡಾ ಕೂಟವನ್ನು ಉದ್ಘಾಟಿಸಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಕನ್ನಡ ಹಾಗೂ ಸಂಸ್ಕೃತಿ ಮತ್ತು ಇಂಧನ ಸಚಿವ ವಿ. ಸುನಿಲ್ ಕುಮಾರ್, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್,

ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಜಂಟಿ ಕಾರ‍್ಯದರ್ಶಿ ಡಾ. ಬಲ್ಜೀತ್ ಸಿಂಗ್ ಸೋಖನ್, ಮಂಗಳೂರು ವಿವಿ ಉಪಕುಲಪತಿ ಡಾ. ಸುಬ್ರಹ್ಮಣ್ಯ ಯಡಪಡಿತ್ತಾಯ ವಿಶೇಷ ಅಹ್ವಾನಿತರಾಗಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಕ್ಷೇತ್ರದ ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಹಾಗೂ ಪರಿಷತ್ ಸದಸ್ಯರು ಇರಲಿದ್ದಾರೆ.

5ನೇ ಬಾರಿ ಆತಿಥ್ಯ ವಹಿಸಲಿದೆ ಆಳ್ವಾಸ್
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 5ನೇ ಬಾರಿಗೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಅನ್ನು ಆಯೋಜಿಸುತ್ತಿದೆ.

ಈ ಹಿಂದೆ 72ನೇ, 75ನೇ ಹಾಗೂ 80ನೇ ಕ್ರೀಡಾಕೂಟವನ್ನು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಹಾಗೂ 79ನೇ ಕ್ರೀಡಾಕೂಟವನ್ನು ಮಂಗಳೂರು ವಿವಿ ಆಶ್ರಯದಲ್ಲಿ ಆಯೋಜಿಸಲಾಗಿತ್ತು.

ಇದೀಗ 81ನೇ ಕ್ರೀಡಾಕೂಟವೂ ಮಂಗಳೂರು ವಿವಿ ಆಶ್ರಯದಲ್ಲಿ ನಡೆಯಲಿದೆ. 5ನೇ ಬಾರಿಯ ಕ್ರೀಡಾಕೂಟದಲ್ಲಿ 3 ಬಾರಿ ಆಳ್ವಾಸ್ ಶಿಕ್ಷಣ ಸಂಸ್ಥೆ ಚಾಂಪಿಯನ್ ಪಟ್ಟಕ್ಕೇರಿದೆ.

ವಿಜೇತರಿಗೆ ನಗದು ಪುರಸ್ಕಾರ
ಕ್ರೀಡಾಕೂಟದಲ್ಲಿ 300ಕ್ಕೂ ಅಧಿಕ ವಿವಿ ಸುಮಾರು 3500 ಅಥ್ಲೀಟ್‌ಗಳು ಹಾಗೂ 1000 ಕ್ರೀಡಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿಜೇತರಾದ ಕ್ರೀಡಾಪಟುಗಳಿಗೆ ನಗದು ನೀಡಲಾಗುತ್ತಿದ್ದು,

ಅದರಲ್ಲಿ ಪ್ರಥಮ 25,000, ದ್ವಿತೀಯ 15,000 ಹಾಗೂ ತೃತೀಯ ಸ್ಥಾನಗಳಿಸಿದ ಕ್ರೀಡಾಳುವಿಗೆ 10,000ನೀಡಿ ಗೌರವಿಸಲಾಗುತ್ತದೆ.

ಈ ಕೂಟದಲ್ಲಿ ದಾಖಲೆ ಮಾಡಿದವರಿಗೆ 25,000 ಮತ್ತು ಸಮಗ್ರ ವಿಜೇತ ತಂಡಕ್ಕೆ 50,000, ರನ್ನರ್ ಅಪ್ 30,000ಮತ್ತು ತೃತೀಯ ಸ್ಥಾನ 20,000ರೂ ನಗದು ಪುರಸ್ಕಾರ ನೀಡಲಾಗುತ್ತದೆ.

FILM

ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ

Published

on

ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್‌’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.


ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ :

‘ಪುಷ್ಪ 2 : ದಿ ರೂಲ್‌’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.

ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.

ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ.  ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ತೆರೆಗೆ ಯಾವಾಗ?

ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.

‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್‌ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.

Continue Reading

LATEST NEWS

ಹೊಸ ಅಪ್​ಡೇಟ್ ನೊಂದಿಗೆ ಬರುತ್ತಿದೆ ವಾಟ್ಸ್ಆ್ಯಪ್; ಏನದು ಗೊತ್ತಾ!?

Published

on

ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ಮತ್ತೊಂದು ಹೊಸ ಫೀಚರ್ ಪರಿಚಯಿಸುತ್ತಿದೆ.


ಏನಿದು ಫೀಚರ್ ?

ವಾಟ್ಸ್ ಆ್ಯಪ್ ಗೆ ಅತ್ಯಂತ ಹೆಚ್ಚಿನ ಬಳಕೆದಾರರಿದ್ದಾರೆ. ಈಗಾಗಲೇ ನೂತನ ಫೀಚರ್ ಗಳನ್ನು ವಾಟ್ಸ್ ಆ್ಯಪ್ ಪರಿಚಯಿಸುತ್ತಿರುತ್ತದೆ. ಇದೀಗ ಹೊಸ ಫೀಚರ್​ವೊಂದನ್ನು ಪರಿಶೀಲಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವೀಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದಾಗಿದೆ. ಬೀಟಾ ಆವೃತ್ತಿಯಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ನಿಯರ್ ​ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಜನಪ್ರಿಯ. ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ.

Continue Reading

LATEST NEWS

123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

Published

on

ದೆಹಲಿ: ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ಹವಾಮಾನ ಮುನ್ಸೂಚನೆ ಬಿಡುಗಡೆ ಮಾಡಿದ್ದು ಇದೀಗ ಅಚ್ಚರಿ ಮೂಡಿಸಿದೆ. 1901ರ ನಂತರ ಏಪ್ರಿಲ್‌ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

havamana

ಎಲ್ಲಾ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಎಪ್ರಿಲ್‌ ತಿಂಗಳಿನಲ್ಲಿ ಹೆಚ್ಚು ತಾಪಮಾನ ದಾಖಲಾಗಿದೆ. ದೇಶದಲ್ಲಿ 1901ರ ನಂತರ ಇದೇ ಮೊದಲ ಬಾರಿಗೆ ಹೆಚ್ಚು ತಾಪಮಾನ ಏರಿಕೆಯಾಗಿರುವುದು. ಎಪ್ರಿಲ್ ತಿಂಗಳಿನಲ್ಲಿ ಕೆಲವು ಕಡೆ ಆಲಿಕಲ್ಲು ಸಹಿತೆ ಮಳೆ ಬಂದಿದ್ದು, ಮೇ ತಿಂಗಳಿನಲ್ಲಿ ಹೆಚ್ಚಿನ ಉರಿಬಿಸಿಲು, ಶಾಖ ಮತ್ತು ಆಲಿಕಲ್ಲು ಮುಂದವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಇನ್ನು ಮೇ ತಿಂಗಳಿನಲ್ಲಿ ಬಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದ್ದು, ಇನ್ನು 11 ದಿನಗಳ ಕಾಲ ಬಿಸಿಗಾಳಿ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮುಂದೆ ಓದಿ..; ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಏಪ್ರಿಲ್ 5 ರಿಂದ 7 ರವರೆಗೆ, ನಂತರ 15 ರಿಂದ 30 ರವರೆಗೆ ಹೆಚ್ಚಿನ ತಾಪಮಾನ ಮತ್ತು ಆಲಿಕಲ್ಲು ಮಳೆಯಾಗಿದೆ. ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಏಪ್ರಿಲ್ ತಿಂಗಳಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ಕನಿಷ್ಠ ತಾಪಮಾನ 28.12 ಡಿಗ್ರಿ ಸೆಲ್ಸಿಯಸ್ ಎಂದು ಮೊಹಾಪಾತ್ರ ಹೇಳಿದ್ದಾರೆ. ದಕ್ಷಿಣ ಪರ್ಯಾಯ ದ್ವೀಪದ ಭಾರತದಲ್ಲಿ 1980 ರ ದಶಕದಿಂದಲೂ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ ಎಂದು ಅವರು ವರದಿ ಮಾಡಿದ್ದಾರೆ.

ಮುಂದಿನ 11 ದಿನದ ಶಾಖದ ಅಲೆ, ಆಲಿಕಲ್ಲು ಮಳೆ:

ದಕ್ಷಿಣ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ ಮತ್ತು ಗುಜರಾತ್‌ನಲ್ಲಿ ಮೇ ತಿಂಗಳಲ್ಲಿ 8-11 ದಿನಗಳವರೆಗೆ ಶಾಖದ ಅಲೆಗಳು ಇರಬಹುದೆಂದು ಮಹಾಪಾತ್ರ ಹೇಳಿದ್ದಾರೆ. ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಛತ್ತೀಸ್‌ಗಢ, ಆಂತರಿಕ ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಒಳಭಾಗ ಕರ್ನಾಟಕ, ತೆಲಂಗಾಣದಲ್ಲಿ 5-5 ವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಉತ್ತರ ಭಾರತ, ಮಧ್ಯ ಭಾರತ ಮತ್ತು ಪೆನಿನ್ಸುಲಾರ್ ಭಾರತದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ಮೂರು ದಿನಗಳ ಕಾಲ ಆಲಿಕಲ್ಲು ಮಳೆಯಾಗುತ್ತದೆ ಎಂದು ಹೇಳಿದ್ದಾರೆ.

Continue Reading

LATEST NEWS

Trending