Connect with us

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘದ 85ನೇ ವಾರ್ಷಿಕ ಮಹಾಸಭೆ

    Published

    on

    ಮಂಗಳೂರು: ಮಡಿವಾಳ ಸಮಾಜ ಇಂದು ಎಲ್ಲಾ ಸಮುದಾಯದ ಜೊತೆಗೂ ಪೈಪೋಟಿ ನೀಡುವಷ್ಟು ಸಾಮರ್ಥ್ಯ ಇರುವ ಸಮಾಜ. ಆದರೆ ಇಂದು ಮಡಿವಾಳರು ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗದೇ ಕೇವಲ ದಿನನಿತ್ಯದ ಕುಲಕಸುಬುಗಳಲ್ಲೇ ನಿರತರಾಗಿದ್ದಾರೆ.

    ಇನ್ನು ಮುಂದಾದರೂ ಸಮಾಜದ ಒಗ್ಗಟ್ಟು, ಐಕ್ಯತೆ, ಬಲ ಪ್ರದರ್ಶನಕ್ಕೆ ಮಡಿವಾಳ ಸಮಾಜ ಮುಂದಾಗಬೇಕಾಗಿದೆ ಎಂದು ಗಣೇಶಪುರ ಶ್ರೀ ಕ್ಷೇತ್ರ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ ಮಂಗಳೂರು , ರಜಕ ಯೂತ್ಸ್‌ ಮಂಗಳೂರು ಮತ್ತು ಮಹಿಳಾ ಘಟಕದ ವತಿಯಿಂದ ಭಾನುವಾರದಂದು ಕೂಳೂರಿನ ಅಮೃತ ಸಭಾಂಗಣದಲ್ಲಿ ಜರುಗಿದ 85ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು. ಮೂಡುಬಿದಿರೆ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಾದದಲ್ಲಿ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


    ಸಮಾಜದಲ್ಲಿ ಸಾಧನೆ ಮಾಡಿದವರನ್ನು ಎಲ್ಲರೂ ಗೌರವಿಸುತ್ತಾರೆ, ಸನ್ಮಾನಿಸುತ್ತಾರೆ. ಆದರೆ ಸಮುದಾಯದ ಸಂಘಟನೆಗಳಿಂದಲೇ ಸಿಗುವ ಗೌರವ ಎಲ್ಲದಕ್ಕಿಂತಲೂ ದೊಡ್ಡ ಸಂಮ್ಮಾನ. ಕುಲಕಸುಬುದಾರರನ್ನು ಅವರ ಸಾಧನೆಗಳನ್ನು ಗುರುತಿಸಿ ಗೌರವಿಸುವ ಸಂಘದ ನಡೆ ಅಭಿನಂದನೀಯವಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಜೊತೆಗೆ ಅವರು ತಮ್ಮ ಜೊತೆಗೆ ಇದ್ದು ವೃದ್ಧಾಪ್ಯದಲ್ಲಿ ಆರೈಕೆ ಮಾಡುವಂತಾಗಬೇಕು ಎಂದು ಕಿವಿಮಾತು ನುಡಿದರು.


    ಸಕಲೇಶಪುರದ ಪಿಡಬ್ಲ್ಯೂಡಿ ಕ್ಲಾಸ್-1 ಕಂಟ್ರಾಕ್ಟರ್‌ ಕೆ ವಿಶ್ವನಾಥ್‌ ಅವರು ಮಾತನಾಡಿ, ಇನ್ನೂ ಕೂಡಾ ನಮ್ಮ ಸಮಾಜ ಪ್ರಬಲವಾಗಿ ಗುರುತಿಸಿಕೊಂಡಿಲ್ಲ. ರಾಜಕೀಯವಾಗಿ ಒಗ್ಗಟ್ಟಾಗಬೇಕಾಗಿದೆ. ನಮ್ಮ ಸಮುದಾಯದಲ್ಲಿ ಸಂಸದ, ಶಾಸಕರಾದಲ್ಲಿ ನಮಗೆ ಬೇಕಾದ ಸರಕಾರಿ ಸವಲತ್ತು ಪಡೆದುಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸಮುದಾಯ ಕೆಲಸ ಮಾಡಬೇಕು ಎಂದರು.


    ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಬಿ ಎನ್‌ ಪ್ರಕಾಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಕರ್ಣಾಟಕ ಬ್ಯಾಂಕ್‌ ಪ್ರಾದೇಶಿಕ ವಿಭಾಗದ ಹಿರಿಯ ಪ್ರಬಂಧಕ ರಾಜೇಶ್ ಕೊಡಿಯಾಲ್‌ ಬೈಲ್‌, ರಜಕ ಯೂತ್‌ ಅಧ್ಯಕ್ಷ ಸಂಪತ್‌ ಕೊಂಡಾಣ, ದ.ಕ.ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವೀಣಾಂಜಲಿ ನಾರಾಯಣ ಬಿಜೈ, ಸಂಘದ ಪ್ರಧಾನ ಕಾರ್ಯದರ್ಶಿ ರಾಮ ಬಂಗೇರ ಮಂಕುಡೆ ಉಪಸ್ಥಿತರಿದ್ದರು.


    ಸಮಾಜದ ಹಿರಿಯ ಕುಲಕಸುಬುದಾರೆ ಗುಲಾಬಿ ಮಡಿವಾಳ್ತಿ ಭಟ್ರಕುಮೇರ್‌ ಪದವಿನಂಗಡಿ, ದೈವಾರಾಧಕರಾದ ಪಳ್ಳಿ ಕಾರ್ಕಳದ ಸತೀಶ್ ಮಡಿವಾಳ, ಕಟೀಲು ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಉಮೇಶ್‌ ಕುಪ್ಪೆಪದವು ಇವರನ್ನು ಗೌರವಿಸಲಾಯಿತು. ಸಮಾಜ ಬಾಂಧವರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಕ್ರೀಡಾ ಪುರಸ್ಕಾರ, ವಿದ್ಯಾರ್ಥಿ ವೇತನ, ಆಕಸ್ಮಿಕ ಪರಿಹಾರ, ವಿದ್ಯಾನಿಧಿ ವಿತರಣೆ ನಡೆಯಿತು. ರಾಮ ಬಂಗೇರ ಮಂಕುಡೆ ವರದಿ ಮಂಡಿಸಿದರೆ, ಕೋಶಾಧಿಕಾರಿ ಶಶಿಧರ ಕೊಂಡಾಣ ಲೆಕ್ಕಪತ್ರ ಮಂಡಿಸಿದರು. ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ವಿದೂಷಿ ಶ್ರಾವ್ಯ ಕಿಶೋರ್ ಮುಚ್ಚೂರು ಇವರ ನಾಟ್ಯ ಕಲಾಂಜಲಿ ನೃತ್ಯ ಅಕಾಡೆಮಿ ಮುಚ್ಚೂರು ತಂಡದಿಂದ ಮತ್ತು ಸಂಘದ ಸದಸ್ಯರಿಂದ ಸಾಂಸ್ಕೃತಿಕ ನೃತ್ಯ ವೈಭವ ನಡೆಯಿತು. ಕಿಶೋರ್‌ ಮುಚ್ಚೂರು, ರಾಕೇಶ್ ಪದವಿನಂಗಡಿ, ಅಶೋಕ್‌ ಪೊಳಲಿ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಗುರುಮಾಚಿದೇವರಿಗೆ ಪ್ರಾರ್ಥನೆ, ಪೂಜೆ ನಡೆದು, ಮಹಿಳಾ ಘಟಕ ಸದಸ್ಯೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending