Monday, May 23, 2022

ಎಂಆರ್​ಪಿಎಲ್‌ಗೆ ಈ ಬಾರಿ ಮತ್ತೆ 86 ಕೋಟಿ ರೂ. ನಷ್ಟ..!

ಮಂಗಳೂರು: ಮಂಗಳೂರಿನ ಎಂಆರ್​ಪಿಎಲ್ ಸಂಸ್ಥೆಗೆ 2021-22ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ 86 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.


ಮೊದಲ ತ್ರೈಮಾಸಿಕ ಅವಧಿ ಜೂನ್ 30ಕ್ಕೆ ಕೊನೆಗೊಂಡಿದ್ದು, ಈ ವೇಳೆ ಎಂಆರ್​ಪಿಎಲ್​ಗೆ 86 ಕೋಟಿ ರೂ. ನಷ್ಟ ಉಂಟಾಗಿದೆ. ಕಳೆದ ಆರ್ಥಿಕ ವರ್ಷದ ಈ ಅವಧಿಗೆ ಸಂಸ್ಥೆಗೆ 524 ಕೋಟಿ ರೂ. ನಷ್ಟ ಸಂಭವಿಸಿತ್ತು. ಈ ತ್ರೈಮಾಸಿಕ ಅವಧಿಯಲ್ಲಿ 15,143 ಕೋಟಿ ರೂ. ವ್ಯವಹಾರ ನಡೆದಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 6,408 ಕೋಟಿ ವ್ಯವಹಾರ ನಡೆದಿತ್ತು.
ಕೊರೊನಾ ಕಾರಣದಿಂದ ಇಂಧನಕ್ಕೆ ಬೇಡಿಕೆ ಕಡಿಮೆಯಾಗಿದ್ದರಿಂದ ಎಂಆರ್​ಪಿಎಲ್ ಸಂಸ್ಥೆಯ ವ್ಯವಹಾರಕ್ಕೆ ಹೊಡೆತ ಬಿದ್ದಿದೆ. ಕೊರೊನಾ ಸೋಂಕಿನ ತಡೆಗೆ ಲಾಕ್​ಡೌನ್ ವಿಧಿಸಲಾಗಿತ್ತು. ಈ ವೇಳೆ, ಎಂಆರ್​ಪಿಎಲ್​​​ನ ಕೆಲ ಘಟಕಗಳು ಬಂದ್ ಆಗಿದ್ದು, ತೈಲ ಸರಬರಾಜಿಗೆ ಹೊಡೆತ ಬಿದ್ದಿದೆ.ಇನ್ನು ಕಂಪನಿಯ ಷೇರು ಮುಖಬೆಲೆಯನ್ನು 10 ರೂ. ಗಳಿಂದ 10 ಸಾವಿರ ರೂ.ಗಳಿಗೆ ಏರಿಸಲು ಅನುಮತಿ ದೊರಕಿದ್ದು, ಈ ಮೂಲಕ ಸಂಪನ್ಮೂಲ ಕ್ರೋಢೀಕರಣಕ್ಕೆ ಕಂಪನಿ ಮುಂದಾಗಿದೆ.

LEAVE A REPLY

Please enter your comment!
Please enter your name here

Hot Topics

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...