ಕೊಪ್ಪಳ: ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಮೂವರಿಂದ ಅತ್ಯಾಚಾರ ನಡೆದಿದ್ದು ಇದೀಗ ಆಕೆ 6 ತಿಂಗಳ ಗರ್ಭಿಣಿಯಾಗಿರುವ ಆಶ್ಚರ್ಯಕಾರಿ ಘಟನೆ ಕೊಪ್ಪಳದಲ್ಲಿ ನಡೆದಿದೆ.
ವಿದ್ಯಾರ್ಥಿನಿ ಭಯದಿಂದ ತನ್ನ ಮೇಲಾದ ಅತ್ಯಾಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಇದೀಗ ಆರು ತಿಂಗಳ ನಂತರ ಆಕೆ ಗರ್ಭಿಣಿಯಾಗಿದ್ದರಿಂದ ಈ ವಿಷಯ ಪೋಷಕರಿಗೆ ಗೊತ್ತಾಗಿದೆ.
ಈ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಸದ್ಯ ಆರೋಪಿಯನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಬಾಲಕಿ ಅತ್ಯಾಚಾರದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾಳೆ ಎಂದು ತಿಳಿದು ಬಂದಿದೆ.
ಆಕೆಯ ದೈಹಿಕ ಬದಲಾವಣೆ ಕಂಡು ಪೋಷಕರು ವಿಚಾರಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಬಂಧಿತ ಆರೋಪಿ ಬಾಲಕಿ ವಾಸವಾಗಿರುವ ಗ್ರಾಮದ ನಿವಾಸಿಯಾಗಿದ್ದಾನೆ.