Connect with us

    DAKSHINA KANNADA

    ಮಂಗಳೂರು: “ಕಾರುಣ್ಯ”ಕ್ಕೆ ‘ನವಚೈತನ್ಯ’ ತುಂಬಿದ ಎಂ. ಫ್ರೆಂಡ್ಸ್

    Published

    on

    ಮಂಗಳೂರು: ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ 9 ವರ್ಷದ ಹರ್ಷ “ನವ ಚೈತನ್ಯ” ಹಾಗೂ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಜೊತೆಗಾರರಿಗೆ ವಿತರಿಸುವ ರಾತ್ರಿಯ ಭೋಜನದ “ಕಾರುಣ್ಯ” ಯೋಜನೆಯ 1,500ನೇ ದಿನದ ಕಾರ್ಯಕ್ರಮವನ್ನು ನಗರದ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ಆಯೋಜಿಸಿದ್ದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ “ಸಮಾಜದ ಹಿತದೃಷ್ಠಿಯಿಂದ ಕೆಲಸ ಮಾಡಿದರೆ ನಾಡು ಅಭಿವೃದ್ಧಿ ಹೊಂದುತ್ತದೆ. ಅಶಕ್ತರ ಬಗ್ಗೆ ಕಾಳಜಿ ವಹಿಸಿ ಮುನ್ನಡೆದಾಗ ದೇಶದ ಶ್ರೇಯಸ್ಸಿನ ಜೊತೆಗೆ ಹೃದಯ ವೈಶಾಲ್ಯತೆಯ ದರ್ಶನವಾಗುತ್ತದೆ.

    ಈ ನಿಟ್ಟಿನಲ್ಲಿ ಎಂ.ಫ್ರೆಂಡ್ಸ್ ತಂಡ ಸರಕಾರ ಮಾಡಬೇಕಾದ ಸತ್ಕಾರ್ಯವನ್ನು ಕೈಗೆತ್ತಿಕೊಂಡು ಮುಂದಡಿ ಇಟ್ಟದ್ದು ಶ್ಲಾಘನೀಯ ಎಂದು  ಹೇಳಿದರು.

    ಸಭಾ ಕಾರ್ಯಕ್ರಮದ ಮೊದಲು ಗಣರಾಜ್ಯೋತ್ಸವದ ಪ್ರಯುಕ್ತ ಶಕ್ತಿನಗರದ ಸಾನಿಧ್ಯ ಮಾನಸಿಕ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿಯುತ ಶಾಲೆ ಹಾಗೂ ತರಬೇತಿ ಸಂಸ್ಥೆಯ ಮಕ್ಕಳಿಂದ “ಅಮರ್ ಜವಾನ್” ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    ಸಾನಿಧ್ಯ ಸಂಸ್ಥೆಗೆ ಸಹಾಯಧನ ವಿತರಿಸಲಾಯಿತು. ಸಂಸ್ಥೆ ಆಡಳಿತಾಧಿಕಾರಿ ವಸಂತ ಶೆಟ್ಟಿ ಅವರನ್ನು ಗೌರವಿಸಲಾಯಿತು.

    ಬಳಿಕ ಕಾರುಣ್ಯ 1500ನೇ ದಿನದ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಿ ಪ್ರದರ್ಶಿಸಲಾಯಿತು.

    ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಸೌದಿ ಅರೇಬಿಯಾ ಜುಬೈಲ್ ಅಲ್ ಮುಝೈನ್ ಹಂಸ್ಥೆಯ ಸಿಇಓ ಝಕರಿಯಾ ಜೋಕಟ್ಟೆ,

    ಮಂಗಳೂರು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು.

    ಎಂ.ಫ್ರೆಂಡ್ಸ್ ಅಧ್ಯಕ್ಷ ಮಹಮ್ಮದ್ ಹನೀಫ್ ಗೋಳ್ತಮಜಲು ಅಧ್ಯಕ್ಷತೆ ವಹಿಸಿದರು.

    ಕೋಶಾಧಿಕಾರಿ ಎಡ್ವಕೇಟ್ ಅಬೂಬಕರ್ ನೋಟರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಎಂ.ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ ಸ್ವಾಗತಿಸಿದರು. ಸದಸ್ಯ ಬಿ.ಎ. ಮಹಮ್ಮದಲಿ ಕಮ್ಮರಡಿ ಕಾರ್ಯಕ್ರಮ ನಿರೂಪಿಸಿದರು.

    ಕಾರ್ಯದರ್ಶಿ ಆರಿಫ್ ಪಡುಬಿದ್ರಿ ಪ್ರಾರಂಭದಲ್ಲಿ ಕಿರಾಅತ್ ಪಾರಾಯಣ ಮಾಡಿದರು.

    ಉಪಾಧ್ಯಕ್ಷ ಸುಜಾಹ್ ಮಹಮ್ಮದ್ ವಂದಿಸಿದರು.

    ಸಭಾ ಕಾರ್ಯಕ್ರಮದ ಮೊದಲು ಗಣರಾಜ್ಯೋತ್ಸವದ ಪ್ರಯುಕ್ತ ಶಕ್ತಿನಗರದ ಸಾನಿಧ್ಯ ಮಾನಸಿಕ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿಯುತ ಶಾಲೆ ಹಾಗೂ ತರಬೇತಿ ಸಂಸ್ಥೆಯ ಮಕ್ಕಳಿಂದ “ಅಮರ್ ಜವಾನ್” ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    ಸಾನಿಧ್ಯ ಸಂಸ್ಥೆಗೆ ಸಹಾಯಧನ ವಿತರಿಸಲಾಯಿತು. ಸಂಸ್ಥೆ ಆಡಳಿತಾಧಿಕಾರಿ ವಸಂತ ಶೆಟ್ಟಿ ಅವರನ್ನು ಗೌರವಿಸಲಾಯಿತು.

    ಬಳಿಕ ಕಾರುಣ್ಯ 1500ನೇ ದಿನದ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಿ ಪ್ರದರ್ಶಿಸಲಾಯಿತು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending