Connect with us

    LATEST NEWS

    ಮನೆ ಎದುರಿನ ಗೇಟ್ ಬಿದ್ದು 2 ವರ್ಷದ ಬಾಲಕ ದುರ್ಮ*ರ*ಣ

    Published

    on

    ಕಾಸರಗೋಡು: ಮನೆ ಎದುರಿನ ಐದು ಅಡಿ ಎತ್ತರದ ಸ್ಲೈಡಿಂಗ್ ಗೇಟ್ ಬಿದ್ದು ಎರಡು ವರ್ಷದ ಬಾಲಕ ಮೃ*ತ ಪಟ್ಟಿರುವ ಘಟನೆ ಕಾಸರಗೋಡಿನ ಉದುಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ.

    ಉದುಮ ಪಂಚಾಯತ್‌ನ ಪಲ್ಲಂ ತೆಕ್ಕೆಕ್ಕರ ವಾರ್ಡ್‌ನ ನಿವಾಸಿ ರೈಮಾ ಮತ್ತು ಮಾಹಿನ್ ರಫಿ ದಂಪತಿಯ ಪುತ್ರ ಅಬು ತಾಹಿರ್ ಮೃ*ತ ಬಾಲಕನಾಗಿದ್ದಾನೆ. ದಂಪತಿಯ ಏಕೈಕ ಮಗು ಆಗಿದ್ದ ಈ ಬಾಲಕನಿಗೆ ಮೇ ತಿಂಗಳಲ್ಲಿ ಎರಡು ವರ್ಷ ಪ್ರಾಯ ತುಂಬಿತ್ತು.

    ರಫಿ ಅವರು ನಾಳೆ ಅಂದರೆ ಸಪ್ಟೆಂಬರ್ 20 ರಂದು ದುಬಾಯಿಗೆ ತಮ್ಮ ಕೆಲಸದ ಸ್ಥಳಕ್ಕೆ ಮರಳಬೇಕಿತ್ತು. ಹಾಗಾಗಿ ಅವರು ಮತ್ತು ಅವರ ಕುಟುಂಬದವರು ವಿದಾಯ ಹೇಳಲು ಮಾವನ ಮನೆಗೆ ತೆರಳಿದ್ದರು. ಅಲ್ಲಿ ಇತರ ಮೂವರು ಮಕ್ಕಳ ಜತೆ ಗೇಟ್ ಬಳಿ ಆಟವಾಡುತ್ತಿದ್ದಾಗ ಅಬು ತಾಹಿರ್ ಮೇಲೆ ಗೇಟ್‌ ಬಿದ್ದಿದೆ.

    ಐದು ಅಡಿ ಎತ್ತರದ ಗೇಟ್ ಹಳಿಯಿಂದ ಹೊರ ಬಂದು ಅಸ್ಥಿರವಾಗಿದ್ದು, ಮಕ್ಕಳು ಆಟವಾಡುವಾಗ ಗೇಟ್ ತಳ್ಳಿದ್ದಾರೆ. ಆಗ ಅದು ಬಾಲಕ ಅಬು ತಾಹಿರ್ ಮೇಲೆ ಬಿದ್ದಿದೆ ಎಂದು ಸ್ಥಳೀಯ ಪಂಚಾಯತ್‌ ಸದಸ್ಯರು ಮಾಹಿತಿ ನೀಡಿದ್ದಾರೆ.

    ಬಾಲಕನ ದೇಹಕ್ಕೆ ಯಾವುದೇ ಬಾಹ್ಯ ಗಾಯಗಳಾಗಿಲ್ಲ, ಆದರೆ ಹುಡುಗ ವಾಂತಿ ಮಾಡಲು ಪ್ರಾರಂಭಿಸಿದ್ದಾನೆ. ಕೂಡಲೇ ಆತನನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾನೆ ಎಂದವರು ತಿಳಿಸಿದ್ದಾರೆ.

    Baindooru

    ವಾಟ್ಸಾಪ್ ಗ್ರೂಪ್ ನೋಡಿ ಮನೆಯಲ್ಲೇ ಹೆರಿಗೆ ಮಾಡಿಸಿದ ದಂಪತಿ

    Published

    on

    ಚೆನ್ನೈ: ವಾಟ್ಸಪ್ ಗ್ರೂಪ್‌ನ ಸಹಾಯದಿಂದ ದಂಪತಿಗಳು ಮನೆಯಲ್ಲಿಯೇ ಹೆರಿಗೆ ನಡೆಸಿರುವಂತಹ ಘಟನೆ ತಮಿಳುನಾಡಿನ ಕುಂದ್ರತ್ತೂರಿನಲ್ಲಿ ನಡೆದಿದೆ.

    ನವೆಂಬರ್ 17 ರಂದು ಸುಕನ್ಯಾಗೆ ಮನೆಯಲ್ಲಿ ಅನಿರೀಕ್ಷಿತವಾಗಿ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣದ ವೈದ್ಯಕೀಯ ಸಹಾಯವನ್ನು ಪಡೆಯುವ ಬದಲು ಮನೋಹರನ್ ತಾನೇ ಹೆರಿಗೆ ನಡೆಸಲು ಮುಂದಾಗಿದ್ದಾರೆ. ಅವರು ವಾಟ್ಸಪ್ ಗ್ರೂಪ್‌ನಲ್ಲಿ ಬಂದ ಹಂತ-ಹಂತದ ಮಾರ್ಗದರ್ಶನವನ್ನು ಅನುಸರಿಸಿದ್ದಾರೆ. ಹೆರಿಗೆ ಪ್ರಕ್ರಿಯೆಯಲ್ಲಿ ಅವರ ಪತ್ನಿಗೆ ಸಹಾಯ ಮಾಡಲು ಗುಂಪಿನ ಸದಸ್ಯರು ಒದಗಿಸಿದ ಸೂಚನೆಗಳು ಮತ್ತು ವಿವರಣೆಗಳನ್ನು ಬಳಸಿದ್ದಾರೆ ಎಂದು ವರದಿಯಾಗಿದೆ.

    ದಂಪತಿ ವಾಟ್ಸಪ್‌ನ “ಹೋಮ್ ಬರ್ತ್ ಎಕ್ಸ್‌ ಪೀರಿಯನ್ಸ್” ಎಂಬ ಗುಂಪಿನಲ್ಲಿ ಹಂಚಿಕೊಂಡ ಸಲಹೆಯನ್ನು ಅವಲಂಬಿಸಿ ಹೆರಿಗೆಯನ್ನು ನಡೆಸಿದ್ದಾರೆ. ಯಾವುದೇ ವೈದ್ಯಕೀಯ ಪರಿಶೀಲನೆ ಇಲ್ಲದೇ ಅಪಾಯಕಾರಿಯಾಗಿ ಹೆರಿಗೆ ನಡೆಸಿರುವ ಬಗ್ಗೆ ಅಧಿಕಾರಿಗಳು ಈಗ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಹೆರಿಗೆ

    ಯ ನಂತರ, ಸುರಕ್ಷತೆಯ ಉಲ್ಲಂಘನೆಯನ್ನು ಉಲ್ಲೇಖಿಸಿ ಸ್ಥಳೀಯ ಸಾರ್ವಜನಿಕ ಆರೋಗ್ಯ ಅಧಿಕಾರಿಯಿಂದ ದೂರು ದಾಖಲಿಸಲಾಗಿದೆ.

    ಮಗುವಿನ ಜನನದ ಬಳಿಕ ದಂಪತಿಗಳು ನವಜಾತ ಶಿಶುವಿನೊಂದಿಗೆ ತಮ್ಮ ಚಿತ್ರವನ್ನು ಹಂಚಿಕೊಂಡಿದ್ದಾರೆ. ಬಳಿಕ ಈ ವಿಚಾರ ಬೆಳಕಿಗೆ ಬಂದಿದ್ದು, ಇದು ಸ್ಥಳೀಯ ಆರೋಗ್ಯ ಅಧಿಕಾರಿಗಳ ಗಮನ ಸೆಳೆಯಿತು. ಇದೀಗ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

    Continue Reading

    LATEST NEWS

    ಎಚ್ಚರ!! ಪ್ರೀತಿ ಪಾತ್ರರ ಸಾವೇ ಟಾರ್ಗೆಟ್; ಸೈಬರ್ ಕ್ರೈಂನಲ್ಲಿ ಅಂತ್ಯಸಂಸ್ಕಾರ

    Published

    on

    ಮಂಗಳೂರು/ನವದೆಹಲಿ:  ಭಾವನೆ, ನೋವು, ದುಃಖಗಳನ್ನೇ ಟಾರ್ಗೆಟ್ ಮಾಡಿ ವಂಚಕರು ನಡೆಸುವ ಹೊಸ ಸೈಬರ್ ಕ್ರೈಂ ಈ ಅಂತ್ಯಸಂಸ್ಕಾರ ಸೈಬರ್ ಕ್ರೈಂ ಹೆಚ್ಚಾಗಿ ಪಟ್ಟಣ ಪ್ರದೇಶಗಳಲ್ಲೇ ಈ ಸೈಬರ್ ಕ್ರೈಂ ನಡೆಯುತ್ತದೆ. ನಗರ ಪ್ರದೇಶಗಳಲ್ಲಿನ ಬದುಕಿಗೆ ಸಮಯವಿಲ್ಲ. ಎಲ್ಲವನ್ನೂ ನಿಭಾಯಿಸಲು, ನಿರ್ವಹಿಸಲು ಆಪ್ತರು, ನೆರಮನೆಯವರ ಸಹಾಯವಿರುವುದಿಲ್ಲ. ಹೀಗಾಗಿ ಅನಿವಾರ್ಯವಾಗಿ ಕೆಲ ಹೊಣೆಗಾರಿಕೆಯನ್ನು ಎಜೆನ್ಸಿಗಳ ಕೈಗೆ ವಹಿಸಲಾಗತ್ತವೆ. ಈ ಪೈಕಿ ಅಂತ್ಯಸಂಸ್ಕಾರ ನಡೆಸಲು ನಗರ ಪ್ರದೇಶದಲ್ಲಿ  ಖಾಸಗಿ ಎಜೆನ್ಸಿಗಳಿವೆ. ಈ ಎಜೆನ್ಸಿಗಳು ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನಡೆಸುತ್ತದೆ. ಅಂತಿಮ ವಿಧಿ ವಿಧಾನಗಳು, ಪೂಜಾ ಕೈಂಕರ್ಯ, ಎಲ್ಲವನ್ನೂ ಅಚ್ಚುಕಟ್ಟಾಗಿ ಮಾಡುತ್ತಾರೆ.

    ಈ ಸೈಬರ್ ಕ್ರೈಂ ಹೇಗೆ ನಡೆಯುತ್ತವೆ ?

    ಸೈಬರ್ ಕ್ರೈಂ ಭೂತ  ಯಾವ ರೂಪದಲ್ಲಿ ವಕ್ಕರಿಸಲಿದೆ ಅನ್ನೋದೇ ತಿಳಿಯಲ್ಲ. ಮೋಸ ಹೋದ ಬಳಿಕವಷ್ಟೇ ಇದೊಂದು ಸೈಬರ್ ಕ್ರೈಂ ಆಗಿತ್ತು ಅನ್ನೋದು ಅಂದಾಜಾಗುವುದು. ಪ್ರತಿ ಗಂಟೆಯಲ್ಲಿ ಲಕ್ಷಾಂತರ ಸೈಬರ್ ಕ್ರೈಂ ಪ್ರಕರಣಗಳು ಪತ್ತೆಯಾಗಿ, ದೂರು ದಾಖಲಾಗುತ್ತಿದೆ. ಹೊಸ ಹೊಸ ವಿಧಾನದಲ್ಲಿ ವಂಚಕರು ಮೋಸ ಮಾಡುತ್ತಿದ್ದಾರೆ. ಅಮಾಯಕರು, ಎಚ್ಚರವಹಿಸಿ ಹೆಜ್ಜೆ ಇಟ್ಟರೂ ಹೇಗೋ ಬಲಿಯಾಗುತ್ತಿದ್ದಾರೆ.

    ಅಂತ್ಯಸಂಸ್ಕಾರ ಸೈಬರ್ ಕ್ರೈಂ ಎಂದರೇನು?

    ಅಂತ್ಯಸಂಸ್ಕಾರ ನಡೆಸುವ ಹಲವು ಎಜೆನ್ಸಿಗಳ ಜಾಹೀರಾತು, ನಂಬರ್ ಸುಲಭವಾಗಿ ಸಿಗುತ್ತದೆ. ನಾವು ಆಪ್ತರನ್ನು ಕಳೆದುಕೊಂಡ ನೋವಿನಲ್ಲಿ ಎಜೆನ್ಸಿಗೆ ಕರೆ ಮಾಡಿ ಅಂತ್ಯಸಂಸ್ಕಾರ ನಡೆಸಬೇಕು ಎಂದು ಕೇಳಿಕೊಂಡ ತಕ್ಷಣವೇ ಮಾಹಿತಿ ಪಡೆದು ಲಿಂಕ್ ಕಳುಹಿಸಿದ್ದಾರೆ. ಅದರಲ್ಲಿ ನಾವು ಹೆಸರು, ವಿಳಾಸ, ಮೃತಪಟ್ಟವರ ಹೆಸರು, ಧರ್ಮ, ಗೋತ್ರ, ಅಂತ್ಯಸಂಸ್ಕಾರ ಸಂಪ್ರದಾಯದ ಬಗ್ಗೆ ಮಾಹಿತಿ ನೀಡಿರುತ್ತೇವೆ. ನಂತರ  5,000 ರೂಪಾಯಿ ಅಥವಾ ಅಡ್ವಾನ್ಸ್ ಮೊತ್ತವನ್ನು ಪಾವತಿಸಿದಾಗ ಒಂದು ಮೆಸೇಜ್ ಬರಲಿದೆ. ಅಂತ್ಯಸಂಸ್ಕಾರ ನಡೆಸುವ ಪೂಜಾರಿ ಹೆಸರು, ಘಳಿಗೆ ಸೇರಿದಂತೆ ಎಲ್ಲದರ ಮೆಸೇಜ್ ಬರುತ್ತವೆ. ಇದೇ ವೇಳೆ ಬಂದ ಒಟಿಪಿ ಒಟಿಪಿಯನ್ನು ಎಜೆನ್ಸಿ ಮಂದಿ ಕೇಳುತ್ತಾರೆ. ಇದಕ್ಕೆ ಹಲವು ಕಾರಣಗಳನ್ನು ನೀಡುತ್ತಾರೆ.

    ಅಂತ್ಯಸಂಸ್ಕಾರವನ್ನೇ ಟಾರ್ಗೆಟ್ ಮಾಡಿ ಹಲವು ಸೈಬರ್ ಕ್ರೈಂ ದಾಖಲಾಗಿದೆ. ಈ ಕುರಿತು ಎಚ್ಚರಿಕೆ ಸಂದೇಶ ನೀಡುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪ್ರತಿ ವ್ಯವಹಾರಕ್ಕೂ ಮುನ್ನ ಯೋಚಿಸಿ, ತಾಳ್ಮೆ ವಹಿಸಿ ಮುನ್ನಡೆಯಬೇಕು ಯಾವುದೇ ಕಾರಣಕ್ಕೂ ಅನಾಮಿಕರು ಕಳುಹಿಸುವ ಯಾವುದೇ ಲಿಂಕ್ ಕ್ಲಿಕ್ ಮಾಡಬೇಡಿ. ಒಟಿಪಿ ಎಂದಿಗೂ ಯಾರೊಂದಿಗೂ ಹಂಚಿಕೊಳ್ಳಬಾರದು.

    Continue Reading

    Baindooru

    ಮಾರ್ಚ್​ 14 ರಿಂದ ಐಪಿಎಲ್ ಆರಂಭ

    Published

    on

    ಮುಂಬಯಿ: 18ನೇ ಆವೃತ್ತಿಯ ಐಪಿಎಲ್‌ನ ವೇಳಾಪಟ್ಟಿ ಬಹಿರಂಗವಾಗಿದೆ. ಕ್ರೀಡಾ ವೆಬ್‌ಸೈಟ್ ಒಂದರಲ್ಲಿ ಮುಂದಿನ ಮೂರು ವರ್ಷಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಐಪಿಎಲ್ ಸಹಿತ ಪ್ರಮುಖ ಕ್ರೀಡಾಕೂಟಗಳ ನೇರ ಪ್ರಸಾರ ಮಾಡುವ ಇಎಸ್‌ಪಿಎನ್‌ ಟಿವಿ ವಾಹಿನಿಗೆ ಸೇರಿದ ಇಎಸ್‌ಪಿಎನ್ ಕ್ರಿಕ್‌ಇನ್ಫೋ ಎಂಬ ವೆಬ್‌ಸೈಟ್ ಐಪಿಎಲ್ ವೇಳಾಪಟ್ಟಿಯನ್ನು ಬಹಿರಂಗಗೊಳಿಸಿದೆ. ಆದರೆ ಬಿಸಿಸಿಐ ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

    ಇಎಸ್‌ಪಿಎನ್‌ ಕ್ರಿಕ್‌ಇನ್ಫೋ ಪ್ರಕಾರ ಮುಂದಿನ ಆವೃತ್ತಿಯ ಐಪಿಎಲ್ ಮಾರ್ಚ್ 14ರಿಂದ ಆರಂಭವಾಗಲಿದ್ದು, ಮೇ 25ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಟೂರ್ನಿಗೆ ತೆರೆಬೀಳಲಿದೆ. ಇದರ ಜೊತೆಗೆ ಮುಂದಿನ ಎರಡು ಆವೃತ್ತಿಗಳ ವೇಳಾಪಟ್ಟಿಯ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು, 2026ರಲ್ಲಿ ಐಪಿಎಲ್ ಟೂರ್ನಿ ಮಾರ್ಚ್ 15 ರಿಂದ ಮೇ 31ರವರೆಗೆ ನಡೆದರೆ, 2027ರ ಐಪಿಎಲ್ ಮಾರ್ಚ್ 14ರಿಂದ ಮೇ 30ರವರೆಗೆ ನಡೆಯಲ್ಲಿದೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ಎಲ್ಲ ಫ್ರಾಂಚೈಸಿಗಳಿಗೆ ಬಿಸಿಸಿಐ, ಇ-ಮೇಲ್ ಮುಖಾಂತರ ವೇಳಾಪಟ್ಟಿ ರವಾವಿಸಿದೆ. ಮುಂದಿನ ಮೂರು ಆವೃತ್ತಿಗಳ ಆರಂಭ ಮತ್ತು ಅಂತ್ಯದ ಬಗ್ಗೆ ಮಾತ್ರ ಮಾಹಿತಿ ಹೊರಬಿದ್ದಿದ್ದು, ಸಂಪೂರ್ಣ ವೇಳಾಪಟ್ಟಿ ಇನ್ನಷ್ಟೇ ಹೊರಬೀಳಬೇಕಿದೆ. ಕಳೆದ ಮೂರು ಆವೃತ್ತಿಗಳಂತೆ ಮುಂದಿನ ಆವೃತ್ತಿಯಲ್ಲೂ 74 ಪಂದ್ಯಗಳು ನಡೆಯಲಿವೆ ಎಂದು ಇಎಸ್‌ಪಿಎನ್ ಕ್ರಿಕ್‌ಇನ್ಫೋ ಹೇಳಿಕೊಂಡಿದೆ.

    ಇದಕ್ಕೂ ಮೊದಲು 2025ರ ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಜ್ಜಾಗಿದೆ. ನವೆಂಬರ್ 24 ಮತ್ತು 25ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ 574 ಆಟಗಾರರ ಬಿಡ್ಡಿಂಗ್ ನಡೆಯಲಿದೆ.

    Continue Reading

    LATEST NEWS

    Trending