Home ಪ್ರಮುಖ ಸುದ್ದಿ ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ ಅಳಿಲು ಸೇವೆ ಮಾಡಿದ್ದಾನೆ.

ಈ ಮೂಲಕ ಕೋರೋನ ವಿರುದ್ದ ಸರ್ಕಾರ ಸಾರಿಸ ಸಮರಕ್ಕೆ ತಾನು ಕೂಡ ಸಾಥ್‌ ನೀಡಿದ್ದಾನೆ. ಈತನೇ ಅತಾವುರ್-ರೆಹ್ಮಾನ್.

ಈ ಬಾಲಕ ತನ್ನ ತಂದೆ ಹಾಗೂ ಮನೆಯವರು ನೀಡಿದ್ದ ಪಾಕೆಟ್ ಮನಿಯನ್ನು ಜೋಪಾನವಾಗಿ ಹುಂಡಿಯಲ್ಲಿ ಹಾಕಿಟ್ಟಿದ್ದ.

ಆದರೆ ಕಳೆದ ಮೂರು ದಿನಗಳಿಂದ ಕೊರೊನಾ ವಿರುದ್ಧದ ಹೋರಾಟಕ್ಕೆ ಸರಕಾರ ಎಲ್ಲರಿಂದ ದೇಣಿಗೆ ಕೇಳುತ್ತಿರುವುದನ್ನು ಅರಿತ ಬಾಲಕ ತಾನೂ ತನ್ನ ಪಾಕೆಟ್ ಮನಿಯನ್ನು ದೇಣಿಗೆ ನೀಡಿದ್ದಾನೆ.

ಇದನ್ನು ಪ್ರೋತ್ಸಾಹಿಸಿದ ಬಾಲಕನ ಪೋಷಕರು ಜಿಲ್ಲಾಧಿಕಾರಿ ಕಚೇರಿಗೆ ಬಂದು ಡಿಸಿ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ಈ ಹಣವನ್ನು ಸಲ್ಲಿಸಿದ್ದಾರೆ.

ಭಟ್ಕಳ ಮೂಲದವರಾದ ಅತಾ-ವುರ್-ರೆಹ್ಮಾನ್ ಕುಟುಂಬದವರು ಈಗ ಮಂಗಳೂರಿನ ಫಳ್ನೀರ್ ನಲ್ಲಿ ನೆಲೆಸಿದ್ದಾರೆ.

ಅತಾ-ವುರ್-ರೆಹ್ಮಾನ್ ಮಂಗಳೂರಿನ ಯನೆಪೊಯ ಮೊಂಟೆಸ್ಸರಿ ಶಾಲೆಯಲ್ಲಿ ಕಲಿಯುತ್ತಿದ್ದಾನೆ.

ಇದೀಗ ಈ ಪುಟ್ಟ ಬಾಲಕನ ಈ ಕಳಕಳಿಗೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗಿದೆ.

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...