Monday, October 18, 2021

ಏರ್‌ಲಿಫ್ಟ್‌ ವೇಳೆ ವಿಮಾನದಲ್ಲೇ ಹೆಣ್ಣುಮಗುವಿಗೆ ಜನ್ಮ ನೀಡಿದ ಅಫ್ಘಾನಿಸ್ತಾನದ ಮಹಿಳೆ

ವಾಷಿಂಗ್ಟನ್ ಡಿಸಿ: ಕಾಬೂಲ್‌ನಿಂದ ಜರ್ಮನಿಯ ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಏರ್‌ಲಿಫ್ಟ್‌ ಮಾಡಿದ ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಅಮೆರಿಕ ಮಿಲಿಟರಿ ತಿಳಿಸಿದೆ.


ಈ ಕುರಿತು ಟ್ವೀಟ್‌ ‌ಮಾಡಿರುವ ಅಮೆರಿಕ ಮಿಲಿಟರಿಯ ಏರ್ ಮೊಬಿಲಿಟಿ ಕಮಾಂಡ್, ಶನಿವಾರ ವಿಮಾನ ಹಾರಾಟದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.

ವಿಮಾನದಲ್ಲಿ ವಾಯು ಒತ್ತಡವನ್ನು ಹೆಚ್ಚಿಸುವ ಉದ್ದೇಶದಿಂದ ವಿಮಾನ ಹಾರಾಟದ ಎತ್ತರವನ್ನು ಹೆಚ್ಚಿಸಲು ವಿಮಾನದ ಕಮಾಂಡರ್ ನಿರ್ಧರಿಸಿದ್ದರು.

ವಾಯುನೆಲೆಗೆ ಬಂದ ನಂತರ ಅಮೆರಿಕದ ವೈದ್ಯಕೀಯ ಸಿಬ್ಬಂದಿ ವಿಮಾನದಲ್ಲೇ ಚಿಕಿತ್ಸೆ ಆರಂಭಿಸಿ ಹೆರಿಗೆ ಮಾಡಿಸಿದರು.

ಮಹಿಳೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಇಬ್ಬರ ಆರೋಗ್ಯ ಉತ್ತಮವಾಗಿದೆ. ತಾಯಿ-ಮಗುವನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.


ಇನ್ನು ವಿಮಾನದಿಂದ ತಾಯಿ-ಮಗು ನಿರ್ಗಮಿಸಲು ಸಹಾಯ ಮಾಡಿದ ಯುಎಸ್ ಸಿಬ್ಬಂದಿಯ ಫೋಟೋಗಳನ್ನು ರಕ್ಷಣಾ ಇಲಾಖೆ ಹಂಚಿಕೊಂಡಿದೆ.

ತಾಲಿಬಾನ್‌ಗಳು ಕಾಬೂಲ್‌ ವಶಪಡಿಸಿಕೊಂಡ ನಂತರ ಅಲ್ಲಿನ ಜನರ ಸ್ಥಿತಿ ಶೋಚನೀಯವಾಗಿದ್ದು, ಅಫ್ಘಾನಿಸ್ತಾನ್​ ನರಕದಿಂದ ಅಮಾಯಕ ಜನರು ಬೇರೆ ದೇಶಕ್ಕೆ ತೆರಳಲು ಹರಸಾಹಸಪಡುತ್ತಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...