LATEST NEWS
ಕಿಡಿಗೇಡಿಗಳ ಕುಕೃತ್ಯಕ್ಕೆ ಸುಟ್ಟ ಬೂದಿಯಂತಾದ ಬಾಳೆ ಕೃಷಿಕನ ಬಾಳು..!
Published
4 years agoon
By
Adminಕೋಲಾರ : ಬೆಂಕಿ ಬಿದ್ದ ಪರಿಣಾಮ ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ, ಫಸಲಿಗೆ ಬಂದಿದ್ದ ಬಾಳೆ ತೋಟ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಕೋಲಾರದ ಕಾಕಿನತ್ತ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಕೃಷ್ಣಪ್ಪ ಅವರಿಗೆ ಸೇರಿದ 5 ಎಕರೆ ತೋಟದಲ್ಲಿ ಬೆಳೆದಿದ್ದ ಬಾಳೆ ಗಿಡಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕಳೆದ ರಾತ್ರಿ ಕಿಡಿಗೇಡಿಗಳು ಪಕ್ಕದ ಜಮೀನಿನಲ್ಲಿರುವ ಹುಲ್ಲಿಗೆ ಬೆಂಕಿ ಹೊತ್ತಿಸಿರುವ ಅನುಮಾನವಿದೆ.
ಇದರಿಂದ ಬಾಳೆ ತೋಟಕ್ಕೂ ಬೆಂಕಿ ಆವರಿಸಿದ ಪರಿಣಾಮ 5 ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟ ಬೆಂಕಿಗಾಹುತಿಯಾಗಿದೆ ಎಂದು ಶಂಕಿಸಲಾಗಿದೆ.
ಸಾಲ ಮಾಡಿ ಬೆಳಿದಿದ್ದ ಬಾಳೆಯನ್ನು ಇನ್ನೇನು ಕಿತ್ತು ಮಾರುಕಟ್ಟೆಗೆ ಮಾರಬೇಕಿತ್ತು, ಈ ಮಧ್ಯೆ ಫಸಲು ಬಂದು ತಮ್ಮ ಕಷ್ಟಗಳೆಲ್ಲಾ ನಿವಾರಣೆಯಾಗುತ್ತೆ ಎಂದು ರೈತ ಕನಸು ಕಂಡಿದ್ದ. ಆದರೆ ಬೆಂಕಿ ಹೊತ್ತಿಕೊಂಡಿದ್ದರಿಂದ ಇದೀಗ ಕಂಗಾಲಾಗಿದ್ದಾರೆ.
ತೋಟ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬಾಳೆ ತೋಟ ಮಾತ್ರವಲ್ಲದೆ ಬಾಳೆ ತೋಟದಲ್ಲಿ ಅಳವಡಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಿಪ್ ಹಾಗೂ ಸ್ಪಿಂಕ್ಲರ್ ಗಳು ಸಹ ಬೆಂಕಿಗಾಹುತಿಯಾಗಿವೆ.
ವಿಷಯ ತಿಳಿದ ಸ್ಥಳೀಯರು ಹಾಗೂ ಕೃಷ್ಣಪ್ಪ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಆದರೂ ನಿಯಂತ್ರಣಕ್ಕೆ ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಯಿಂದ ಸುಮಾರು 90 ಟನ್ ಇಳುವರಿ ನಷ್ಟವಾಗಿದೆ.
ಸ್ಥಳಕ್ಕೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
LATEST NEWS
ಕೇರಳದ ನರ್ಸ್ ಗೆ ಯೆಮೆನ್ ನಲ್ಲಿ ಮರಣದಂಡನೆ; ಏನಿದು ಪ್ರಕರಣ ?
Published
1 hour agoon
01/01/2025By
NEWS DESK3ಮಂಗಳೂರು/ಕೇರಳ : ಯೆಮನ್ ಪ್ರಜೆಯನ್ನು ಹತ್ಯೆ ಮಾಡಿದ ಆರೋಪಕ್ಕೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಗಲ್ಲು ಶಿಕ್ಷೆ ನೀಡಲು ಅಲ್ಲಿನ ಅಧ್ಯಕ್ಷ ರಷದ್-ಅಲ್-ಅಮಿನಿ ಅನುಮೋದನೆ ನೀಡಿದ್ದಾರೆ. ಮೂಲಗಳ ಪ್ರಕಾರ ಇನ್ನು ಒಂದು ತಿಂಗಳಲ್ಲಿ ಶಿಕ್ಷೆ ಜಾರಿಯಾಗಲಿದೆ.
ಯೆಮನ್ ಅಧ್ಯಕ್ಷರ ತೀರ್ಮಾನದ ಬಗ್ಗೆ ಪ್ರಿಯಾ ತಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜತೆಗೆ ಕೇಂದ್ರ ಸರ್ಕಾರ ಸೂಕ್ತ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: 179 ಮಂದಿ ಬಲಿ ಪಡೆದ ದ.ಕೊರಿಯಾ ವಿಮಾನ ದುರಂತ; ಇಬ್ಬರು ಬದುಕಿ ಉಳಿಯಲು ಆ ನಿಗೂಢ ಕಾರಣ ಏನು ?
ಕುಟುಂಬದ ನೆರವಿಗೆ ನಿಂತ ವಿದೇಶಾಂಗ ಸಚಿವಾಲಯ
ಈ ಬಗ್ಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಅಧಿಕೃತ ತಾಣದಲ್ಲಿ ವಕ್ತಾರ ರಣಧೀರ್ ಜೈಸ್ವಾಲ್ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, ನಿಮಿಷಾ ಪ್ರಿಯಾಗೆ ಯೆಮೆನ್ ಶಿಕ್ಷೆ ವಿಧಿಸುವ ಬಗ್ಗೆ ನಮಗೆ ತಿಳಿದಿದೆ. ನಿಮಿಷಾ ಪ್ರಿಯಾ ಅವರ ಕುಟುಂಬವು ಪರ್ಯಾಯ ಆಯ್ಕೆಗಳನ್ನು ಅನ್ವೇಷಿಸುತ್ತಿದೆ ಎಂಬುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಈ ವಿಷಯದಲ್ಲಿ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಿದೆ’ ಎಂದು ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
2017ರಲ್ಲಿ ಹತ್ಯೆ ಪ್ರಕರಣದಲ್ಲಿ ಪ್ರಿಯಾ ಬಂಧನ
ಕೇರಳದ ಪಾಲಕ್ಕಾಡ್ ಮೂಲದವರಾದ ನಿಮಿಷಾ ಪ್ರಿಯಾ ಅವರನ್ನು ಜುಲೈ 2017ರಲ್ಲಿ ಯೆಮೆನ್ ಪ್ರಜೆಯಾದ ತಲಾಲ್ ಅಬ್ದೋ ಮೆಹದಿ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಯೆಮೆನ್ ರಾಜಧಾನಿ ಸನಾದಲ್ಲಿರುವ ವಿಚಾರಣಾ ನ್ಯಾಯಾಲಯವು 2020ರಲ್ಲಿ ಆಕೆಗೆ ಮರಣದಂಡನೆ ವಿಧಿಸಿತ್ತು. ನವೆಂಬರ್ 2023ರಲ್ಲಿ ಆಕೆಯ ಮನವಿಯನ್ನು ಯೆಮೆನ್ ನ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ ವಜಾಗೊಳಿಸಿತ್ತು.
ಮಗಳ ಬಿಡುಗಡೆಗೆ ಪ್ರಯತ್ನಿಸುತ್ತಿರುವ ತಾಯಿ
ಮಗಳ ಬಿಡುಗಡೆಗಾಗಿ ತಾಯಿ ಪ್ರೇಮಾ ಕುಮಾರಿ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಪ್ರಿಯಾ ತಾಯಿ ಪ್ರೇಮಾ ಕುಮಾರಿ ಏಪ್ರೀಲ್ 2024 ರಲ್ಲಿ ಯೆಮೆನ್ ಗೆ ಹೋಗಿ 11 ವರ್ಷಗಳ ನಂತರ ಮೊದಲ ಬಾರಿಗೆ ತಮ್ಮ ಮಗಳನ್ನು ಅಲ್ಲಿನ ಜೈಲಿನಲ್ಲಿ ಭೇಟಿಯಾಗಿದ್ದರು. ಅಂದಿನಿಂದ, ಆಕೆಯ ತಾಯಿ ತನ್ನ ಮಗಳ ಬಿಡುಗಡೆಗಾಗಿ ಪ್ರಯತ್ನಿಸುತ್ತಲೇ ಇದ್ದಾರೆ. ಇತ್ತೀಚೆಗೆ ತಮ್ಮ ಮಗಳನ್ನು ಶಿಕ್ಷೆಯಿಂದ ಪಾರು ಮಾಡಲು ಅಗತ್ಯ ನೆರವನ್ನು ಸಂಬಂಧಪಟ್ಟವರು ನೀಡಬೇಕು ಎಂದು ಮಾಧ್ಯಮದ ಮೂಲಕ ಮೊರೆಯಿಟ್ಟಿದ್ದರು.
ಮರಣದಂಡನೆಯಿಂದ ಪಾರಾಗಲು ಇದೆ ಒಂದು ಅವಕಾಶ !
ನಿಮಿಷಾ ಪ್ರಿಯಾ ಅವರಿಗೆ ಮರಣದಂಡನೆ ಶಿಕ್ಷೆ ಜಾರಿಯಾಗಿದ್ದರೂ, ಅದರಿಂದ ವಿನಾಯಿತಿ ಪಡೆದುಕೊಳ್ಳಲು ಒಂದು ಅವಕಾಶ ಇದೆ. ಅದುವೇ, ಮೃತ ತಲಾಲ್ ಅಬ್ದೋ ಮೆಹದಿಯ ಕುಟುಂಬ ಮತ್ತು ಅವರ ಬುಡಕಟ್ಟು ನಾಯಕ ಕ್ಷಮೆ ನೀಡುವುದರ ಮೇಲೆ ಅವಲಂಬಿತವಾಗಿದೆ.
ಮೃತ ವ್ಯಕ್ತಿಯ ಕುಟುಂಬವು ಕೇರಳದ ನರ್ಸ್ ನಿಮಿಷಾ ಅವರನ್ನು ಕ್ಷಮಿಸಿ, ಪರಿಹಾರ ಹಣವನ್ನು ಸ್ವೀಕರಿಸಿದರೆ ಆಕೆಯ ಮರಣದಂಡನೆಯನ್ನು ಮನ್ನಾ ಮಾಡುವ ಅವಕಾಶ ಸಿಗಲಿದೆ. ಒಂದು ವೇಳೆ ಅವರು ಕ್ಷಮೆಯನ್ನು ಪಡೆಯಲು ವಿಫಲವಾದರೆ ಪ್ರಿಯಾಗೆ ಒಂದು ತಿಂಗಳೊಳಗೆ ಮರಣದಂಡನೆ ಶಿಕ್ಷೆಯಾಗಲಿದೆ.
ಮೃತ ತಲಾಲ್ ಅಬ್ದೋ ಮೆಹದಿಯ ಕುಟುಂಬ ಮತ್ತು ಅವರ ಬುಡಕಟ್ಟು ನಾಯಕನ ಜೊತೆ ಈ ಕುರಿತು ಮಾತುಕತೆ ನಡೆಯುತ್ತಿದ್ದು, ನಿಮಿಷಾ ಪ್ರಿಯಾ ಅವರಿಗೆ ನೇಮಕವಾದ ವಕೀಲರಿಗೆ ಹಣ ಪಾವತಿ ವಿಳಂಬವಾದ್ದರಿಂದ ಮಾತುಕತೆ ಸ್ಥಗಿತಗೊಂಡಿದೆ. ವಕೀಲರು ಮಾತುಕತೆ ಪೂರ್ವ ಶುಲ್ಕವಾಗಿ ಎರಡು ಕಂತುಗಳಲ್ಲಿ 40,000 ಡಾಲರ್ (32,45,500 ರೂ.) ಗೆ ಬೇಡಿಕೆ ಇಟ್ಟಿದ್ದಾರೆ. ಸಂಪೂರ್ಣ ಮೊತ್ತವನ್ನು ಅವರಿಗೆ ನೀಡದ ಹೊರತು ಅವರು ಮಾತುಕತೆ ಮುಂದುವರೆಸಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಏನಿದು ಪ್ರಕರಣ ?
ಕೇರಳದ ಪಾಲಕ್ಕಾಡ್ ಮೂಲದ ನಿಮಿಷಾ 2008 ರಲ್ಲಿ ಯೆಮೆನ್ ಗೆ ತೆರಳಿದ್ದರು. ಮೊದಲು ಅಲ್ಲಿನ ಕೆಲವು ಆಸ್ಪತ್ರೆಗಳಲ್ಲಿ ಕೆಲಸ ಮಾಡಿಕೊಂಡಿದ್ದರು. 2015ರಲ್ಲಿ ಯೆಮೆನ್ ನಲ್ಲಿ ತನ್ನದೇ ಆದ ಕ್ಲಿನಿಕ್ ಅನ್ನು ಪ್ರಾರಂಭಿಸಲು ಮುಂದಾಗಿದ್ದರು. ಅದಕ್ಕಾಗಿ ಅಲ್ಲಿನ ನಿಯಮದಂತೆ ಸ್ಥಳೀಯ ತಲಾಲ್ ಅಬೊ ಮೆಹದಿ ಜತೆಗೆ ಪಾಲುದಾರಿಕೆ ಮಾಡಿಕೊಂದ್ದರು. ಒಂದು ಹಂತದಲ್ಲಿ ಆತನ ಜತೆಗೆ ಭಿನ್ನಾಭಿಪ್ರಾಯ ಉಂಟಾಗಿತ್ತು.
ಈ ನಡುವೆ ನರ್ಸ್ ದೇಶ ತೊರೆಯದಂತೆ ಆತ ಪಾಸ್ ಪೋರ್ಟ್ ವಶಪಡಿಸಿಕೊಂಡಿದ್ದ. ಅದನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಆತನಿಗೆ ಮತ್ತು ಬರುವ ಇಂಜೆಕ್ಷನ್ ನೀಡಿದ್ದರು. ಆದರೆ, ಅದು ಓವರ್ ಡೋಸ್ ಆದ ಪರಿಣಾಮ ಆತ ಮೃತಪಟ್ಟಿದ್ದ.
LATEST NEWS
ಹೊಸ ವರ್ಷಕ್ಕೆ ಕೇಕ್ ತರಲು ಹೋದ ಯುವಕ ಅಪಘಾತದಲ್ಲಿ ಸಾ*ವು
Published
2 hours agoon
01/01/2025By
NEWS DESK2ತುಮಕೂರು: ಹೊಸ ವರ್ಷಕ್ಕೆ ಕೇಕ್ ತರಲು ಹೋದ ಯುವಕ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ವಡ್ಡರಕುಪ್ಪೆ ಬಳಿ ನಡೆದಿದೆ.
ಘಟನೆಯಲ್ಲಿ ಮಣಿಕುಪ್ಪೆ ಗ್ರಾಮದ 28 ವರ್ಷದ ಯುವಕ ಮಧು ಸಾವನಪ್ಪಿದ್ದಾನೆ. ಕೇಕ್ ಮತ್ತು ಬಿರಿಯಾನಿ ತೆಗೆದುಕೊಂಡು ಬೈಕಲ್ಲಿ ಬರುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಕೂಡಲೇ ಸ್ಥಳೀಯರು ಕುಣಿಗಲ್ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIG BOSS
ಬಿಗ್‌ಬಾಸ್ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ
Published
2 hours agoon
01/01/2025By
NEWS DESK2ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 11, 94ನೇ ದಿನಕ್ಕೆ ಕಾಲಿಟ್ಟಿದೆ. ಬಿಗ್‌ಬಾಸ್ ಮನೆಯ ಎಲ್ಲ ಸ್ಪರ್ಧಿಗಳು ಹೊಸ ವರ್ಷದ ಸಂಭ್ರಮದಲ್ಲಿದ್ದಾರೆ. ಅದರ ಜೊತೆಗೆ ಬಿಗ್‌ಬಾಸ್ ಮನೆ ಮಂದಿಗೆ ಮತ್ತೊಂದು ಸರ್ಪ್ರೈಸ್ ಕೊಟ್ಟಿದ್ದಾರೆ.
ಹೌದು, 94 ದಿನಗಳ ಕಾಲ ಬಿಗ್‌ಬಾಸ್ ಮನೆಯಲ್ಲಿ ಇರುವ ಸ್ಪರ್ಧಿಗಳ ತಮ್ಮ ಕುಟುಂಬಸ್ಥರನ್ನು ಮಿಸ್ ಮಾಡಿಕೊಳ್ಳುತ್ತಿದ್ದರು. ಇದೀಗ ಬಿಗ್‌ಬಾಸ್ ಮನೆ ಮಂದಿಗೆ ಸರ್ಪ್ರೈಸ್ ರೂಪದಲ್ಲಿ ಸ್ಪರ್ಧಿಗಳ ಫ್ಯಾಮಿಲಿಯನ್ನು ಮನೆಗೆ ವೆಲ್ಕಮ್ ಕೇಳಿದ್ದಾರೆ.
ನಿನ್ನೆಯ ಸಂಚಿಕೆಯಲ್ಲಿ ಬಿಗ್‌ಬಾಸ್ ಮನೆಗೆ ಭವ್ಯಾ ಗೌಡ, ತ್ರಿವಿಕ್ರಮ್ ಹಾಗೂ ರಜತ್ ಕಿಶನ್ ಫ್ಯಾಮಿಲಿಯವರು ಬಂದಿದ್ದರು. ಇಂದು ಬಿಗ್‌ಬಾಸ್ ಮನೆಗೆ ಮೋಕ್ಷಿತಾ ಪೈ ಹಾಗೂ ಉಗ್ರಂ ಮಂಜು ಕುಟುಂಬಸ್ಥರು ಬಂದಿದ್ದಾರೆ. ಇದೀಗ ರಿಲೀಸ್ ಆದ ಹೊಸ ಪ್ರೋಮೋದಲ್ಲಿ ಉಗ್ರಂ ಮಂಜು ಕುಟುಂಬಸ್ಥರ ಆಗಮನವಾಗಿದೆ.
ಬಿಗ್‌ಬಾಸ್ ಮನೆಗೆ ಉಗ್ರಂ ಮಂಜು ತಂದೆ ರಾಮೇಗೌಡ ಅವರು ಬಂದ ಮಗನ ಕಣ್ಣೀರನ್ನು ಒರೆಸಿದ್ದಾರೆ. ಹೊಸ ಮಂಜು ತರ ಕಾಣ್ತಾ ಇದ್ದೀಯಲ್ಲೋ ಅಂತ ತಮಾಷೆ ಮಾಡಿದ್ದಾರೆ. ಅಲ್ಲದೇ ಮನೆಯವರ ಜೊತೆಗೆ ಖುಷಿ ಖುಷಿಯಲ್ಲಿ ಮಾತಾಡಿದ್ದಾರೆ. ಇನ್ನೂ ಕೆಲವು ಹೊತ್ತುಗಳ ಬಳಿಕ ಮಂಜು ಅವರ ತಾಯಿಯ ಧ್ವನಿ ಕೇಳಿಸಿದೆ. ತಾಯಿಯ ಧ್ವನಿಯನ್ನು ಕೇಳಿಸಿಕೊಳ್ಳುತ್ತಿದ್ದಂತೆ ಉಗ್ರಂ ಮಂಜು ಕಣ್ಣೀರಿಟ್ಟಿದ್ದಾರೆ. ಅಲ್ಲದೇ ಚೈತ್ರಾ ಬಿಗ್‌ಬಾಸ್ ಮನೆಯ ಬಿರುಗಾಳಿ ಎಂದಿದ್ದಾರೆ.
LATEST NEWS
ಈ 4 ವಸ್ತುಗಳನ್ನು ಮನೆಯಲ್ಲಿಡಿ; ವರ್ಷಪೂರ್ತಿ ಸುಖ, ಶಾಂತಿ, ನೆಮ್ಮದಿ, ನೆಲೆಯಾಗಲಿದೆ
ಒಂದೇ ವರ್ಷದಲ್ಲಿ 5 ಲಕ್ಷ ಮೌಲ್ಯದ ಆಹಾರ ಆರ್ಡರ್ ಮಾಡಿದ ವ್ಯಕ್ತಿ
ಕ್ಯಾನ್ಸರ್ ಗೆದ್ದ ಶಿವಣ್ಣ.. ಅಮೆರಿಕದಿಂದಲೇ I will back ಎಂದ ಸೆಂಚುರಿ ಸ್ಟಾರ್
ಪ್ರಿಯತಮೆಗಾಗಿ ಸಿಂಹದ ಬೋನು ಹೊಕ್ಕು ಬ*ಲಿಯಾದ ಪಾಗಲ್ ಪ್ರೇಮಿ
ಮಂಗಳೂರು: ರಾತ್ರಿ ವೇಳೆ ಉರುಳಿದ ಬೃಹತ್ ಮರ, ವಾಹನಗಳು ಜಖಂ
179 ಮಂದಿ ಬಲಿ ಪಡೆದ ದ.ಕೊರಿಯಾ ವಿಮಾನ ದುರಂತ; ಇಬ್ಬರು ಬದುಕಿ ಉಳಿಯಲು ಆ ನಿಗೂಢ ಕಾರಣ ಏನು ?
Trending
- DAKSHINA KANNADA5 days ago
ದಿ।ಮನಮೋಹನ್ ಸಿಂಗ್ ಸಹಿ ಇರುವ ರೂ 1ರ ನೋಟು ರೂ.100 ಕ್ಕೆ ಮಾರಾಟ…!
- BIG BOSS4 days ago
ಎಂಟು ಮಂದಿ ನಾಮಿನೇಟ್; ಈ ವಾರ ಮನೆಯಿಂದ ಹೊರ ಬರೋದು ಇವರೇ ?
- DAKSHINA KANNADA4 days ago
‘ದಿ ಅಕ್ಸಿಡೆಂಟಲ್ PM’ ಸುಳ್ಳಿನ ಕಂತೆ..! ಕ್ಷಮಿಸಿ ಎಂದ ಚಿತ್ರ ನಿರ್ಮಾಪಕ..!
- BIG BOSS3 days ago
ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಸ್ಪರ್ಧಿ ಇವರೇ ನೋಡಿ..!