Home ಉಡುಪಿ ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಉದ್ಯಮಿ..!!

ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಉದ್ಯಮಿ..!!

ಪುಣೆಯಲ್ಲಿ ತನ್ನದೇ ಹೊಟೇಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಉಡುಪಿ ಮೂಲದ ಉದ್ಯಮಿ…

ಪುಣೆ: ಪುಣೆಯಲ್ಲಿ ನಗರದ ಉಡುಪಿ ಮೂಲದ ಹೋಟೆಲ್ ಉದ್ಯಮಿಯೊಬ್ಬರು ತನ್ನದೇ ಹೊಟೇಲ್ ಒಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಗರದ ಸಿಂಹಘಡ್ ರಸ್ತೆಯ ಧಾಯರಿ ಪರಿಸರದ ರಾಜ್ ಹೋಟೆಲಿನಲ್ಲಿ ಉದ್ಯಮಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರೇಮನಾಥ್ ಕೃಷ್ಣ ಶೆಟ್ಟಿಯವರು ಆತ್ಮಹತ್ಯೆ ಮಾಡಿಕೊಂಡಿರುವ ಹೋಟೆಲ್ ಉದ್ಯಮಿಯಾಗಿದ್ದಾರೆ.

ಕಳೆದ 7 ವರ್ಷಗಳಿಂದ ರಾಜ್ ಹೋಟೆಲ್ ನಲ್ಲಿ ಪಾಲುದಾರರಾಗಿದ್ದರು. ಲಾಕ್ ಡೌನ್ ನಿಂದಾಗಿ ಕಳೆದ 4 ತಿಂಗಳಿನಿಂದ ಹೋಟೆಲ್ ಬಂದ್ ಆಗಿದ್ದು, ಡಿಪ್ರೆಶನ್ ನಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಿನ್ನೆ ಬೆಳಗ್ಗೆ ಹೋಟೆಲ್ ಕಾರ್ಮಿಕನೊಬ್ಬ, ಹೋಟೆಲ್ ತೆರೆದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ.

ಮೃತರು ಈ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದು, “ಲಾಕ್ ಡೌನ್ ನಿಂದಾಗಿ ಹೋಟೆಲ್ ಬಂದ್ ಆಗಿ ಪರಿಸ್ಥಿತಿ ಹದಗೆಟ್ಟಿದ್ದು, ತೀವ್ರ ಡಿಪ್ರೆಶನ್ ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ.

ನನ್ನ ಆತ್ಮಹತ್ಯೆಗೆ ಯಾರೂ ಕಾರಣರಲ್ಲ. ನಾನು ಸ್ವತಃ ಇಚ್ಚೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ “ಎಂದು ಬರೆಯಲಾಗಿದೆ.

ಪುಣೆಯ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಲಾಕ್ ಡೌನ್ ಬಳಿಕ ಸಂದರ್ಭದಲ್ಲಿ ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುವುದು ಆತಂಕದ ವಿಷಯವಾಗಿದೆ.

ಕಳೆದ ಒಂದು ವಾರದಲ್ಲೇ ನಗರದಲ್ಲಿ ಅಲ್ಲಲ್ಲಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇದೆ.

RECENT NEWS

ಅತ್ಯಾಚಾರ ಪ್ರಕರಣ: ಕೇರಳ ಬಿಷಪ್‌ ಮುಲಾಕ್ಕಲ್​​​ ವಿರುದ್ಧ ಜಾಮೀನು ರಹಿತ ವಾರೆಂಟ್​​ ಹೊರಡಿಸಿದ ಕೋರ್ಟ್​..!

ಅತ್ಯಾಚಾರ ಪ್ರಕರಣ: ಕೇರಳ ಬಿಷಪ್‌ ಮುಲಾಕ್ಕಲ್​​​ ವಿರುದ್ಧ ಜಾಮೀನು ರಹಿತ ವಾರೆಂಟ್​​ ಹೊರಡಿಸಿದ ಕೋರ್ಟ್​..! ತಿರುವಂತನಪುರ : ಸಾಲುಸಾಲು ಲೈಂಗಿಕ ದೌರ್ಜನ್ಯ ಆರೋಪಗಳನ್ನು ಎದುರಿಸುತ್ತಿರುವ ಜಲಂಧರ್​ನ ಮಾಜಿ ಬಿಷಪ್ ಫ್ರಾಂಕೊ ಮುಲಾಕ್ಕಲ್ ಜಾಮೀನು ಅರ್ಜಿಯನ್ನು...

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..!

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..! ನವದೆಹಲಿ : ಕೇರಳದ ತಿರುವನಂತಪುರದಲ್ಲಿರುವ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ಮತ್ತು ಪೂಜೆ ನಡೆಸುವ ಅಧಿಕಾರವನ್ನು ರಾಜಮನೆತನಕ್ಕೆ ವಹಿಸಿ...

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..!

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..! ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ...

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...
error: Content is protected !!