Connect with us

LATEST NEWS

ಓವರ್‌ಟೇಕ್ ಮಾಡಲು ಹೋಗಿ ಬೈಕ್‌ಗೆ ಕಾರು ಡಿ*ಕ್ಕಿ; ಇಬ್ಬರ ದುರ್ಮ*ರಣ

Published

on

ಮಂಗಳೂರು/ಯಾದಗಿರಿ : ಕಾರು ಡಿ*ಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾ*ವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ.

ಹಳ್ಳೆಪ್ಪ(45) ಹಾಗೂ ಮಲ್ಲಯ್ಯ(35) ಮೃ*ತ ಬೈಕ್ ಸವಾರರು. ಜೇವರ್ಗಿ ತಾಲೂಕಿನ ಚಿಕ್ಕಮುದವಾಳ ಗ್ರಾಮದ ಬಳಿಯಿರುವ ಜಮೀನು ನೋಡಿಕೊಂಡು ಬರಲು ಬೈಕ್‌ನಲ್ಲಿ ತೆರಳಿದ್ದರು. ವಾಪಾಸ್ ಊರಿಗೆ ಬರುವಾಗ, ಕಾರು ಚಾಲಕ ಬೈಕ್‌ನ್ನು ಓವರ್‌ಟೇಕ್ ಮಾಡಲು ಹೋಗಿ ಡಿ*ಕ್ಕಿ ಹೊಡೆದಿದ್ದಾನೆ, ಡಿ*ಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಇದನ್ನೂ ಓದಿ : Watch Video: ರಸ್ತೆಯಲ್ಲಿ ಸೂಪರ್ ಮ್ಯಾನ್‌ನಂತೆ ಬೈಕ್ ಹಾರಿಸಿದ ವ್ಯಕ್ತಿ

ಮ*ರಣೋತ್ತರ ಪರೀಕ್ಷೆಗಾಗಿ ಮೃ*ತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಭೀಮರಾಯನ ಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

FILM

ಪುತ್ರಿಯೊಂದಿಗೆ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ; ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ

Published

on

ಉಡುಪಿ : ಖ್ಯಾತ ನಟಿ  ಮಾಲಾಶ್ರೀ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಮಾಲಾಶ್ರೀ ಜೊತೆ ಪುತ್ರಿ ಕಾಟೇರಾ ನಟಿ ಆರಾಧನಾ ಕೂಡ ಉಪಸ್ಥಿತರಿದ್ದರು.

ಪರ್ಯಾಯದಲ್ಲಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞದೀಕ್ಷೆಯನ್ನು ಇಬ್ಬರೂ ಸ್ವೀಕರಿಸಿದರು.

Continue Reading

LATEST NEWS

ಬೈಕ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಡ್ರೈವರ್ ಎಡವಟ್ಟು: 12 ಮಂದಿಯ ದುರಂತ ಅಂತ್ಯ

Published

on

ಮಂಗಳೂರು/ಮಹಾರಾಷ್ಟ್ರ: ಮಹಾರಾಷ್ಟ್ರ ರಾಜ್ಯದ ಗೊಂಡಿಯಾ ಜಿಲ್ಲೆಯ ಕೊಹ್ಮಾರಾ ರಾಜ್ಯ ಹೆದ್ದಾರಿಯ ಖಾಜ್ರಿ ಎಂಬ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು 9 ಜನರು ಪ್ರಾಣ ಕಳೆದುಕೊಂಡಿದ್ದಾರೆ.


ಅಷ್ಟಕ್ಕೂ, ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಏಕಾಏಕಿ ಎದುರಿಗೆ ಬಂದಿದ್ದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಬಿದ್ದಿದೆ. ಇದರ ಪರಿಣಾಮ 9 ಜನರು ಸ್ಥಳದಲ್ಲಿಯೇ ಮೃತಪಟ್ಟು ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ!
ಬಸ್ಸ್ ನ ಎದುರಿಗೆ ಸಡನ್ ಆಗಿ ಬಂದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೇರೆ ಕಡೆ ತಿರುಗಿಸಿದ ಪರಿಣಾಮ ಬಸ್ಸ್ ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯರ ಸಹಾಯದೊಂದಿಗೆ ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಇನ್ನೂ ಅಪಘಾತ ನಡೆದ ತಕ್ಷಣವೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಪ್ರಕರಣವನ್ನು ದಾಖಿಲಿಸಿಕೊಂಡಿದ್ದು ತನಿಖೆಯನ್ನು ಶುರು ಮಾಡಿದ್ದಾರೆ.

Continue Reading

LATEST NEWS

ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ!

Published

on

ಮಂಗಳೂರು/ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಂಪುಟ ಸಭೆ ನಿನ್ನೆ(ನ.28) ನಡೆದಿದ್ದು, ಈ ವೇಳೆ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ.  ರಾಜ್ಯಪಾಲರ ಅಧಿಕಾರ ಹಿಂಪಡೆದ ಕ್ಯಾಬಿನೆಟ್ ಸಿಎಂಗೆ ನೀಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಇಷ್ಟು ದಿನ ರಾಜ್ಯಪಾಲರು ಕುಲಪತಿ ಆಗಿದ್ದರು. ಆದರೆ, ಇನ್ನು ಮುಂದೆ ಮುಖ್ಯಮಂತ್ರಿ ಕುಲಪತಿಯಾಗಲಿದ್ದಾರೆ. ಆ ಮೂಲಕ ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಹಿಂಪಡೆದು ಸಿಎಂಗೆ ನೀಡಲಾಗಿದೆ.

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್‌.ಕೆ.ಪಾಟೀಲ್​, ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೊಳವೆಬಾವಿ ನಿಷ್ಕ್ರಿಯ ಆಗಿದ್ದರೆ ಮುಚ್ಚುವುದು ಕಡ್ಡಾಯ. ಶಿಕ್ಷೆ ಹಾಗೂ ದಂಡ ವಿಧಿಸಲು ವಿಧೇಯಕದಲ್ಲಿ ಅವಕಾಶವಿದೆ. ಅದೇ ರೀತಿಯಾಗಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದಿಸಿದ್ದು, ಸರ್ಕಾರಿ ಅಧಿಕಾರಿ ಉಸ್ತುವಾರಿ ನೇಮಕಕ್ಕೆ ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ವಯನಾಡ್ ನೂತನ ಸಂಸದೆ ಪ್ರಿಯಾಂಕ ಗಾಂಧಿಯನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ CM ಸಿದ್ದರಾಮಯ್ಯ.!

ಇನ್ನು ಸಚಿವ ಸಂಪುಟ ಸಭೆಯಲ್ಲಿ ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ, ಪ್ರವಾಸೋದ್ಯಮ ರೋಪ್‌ವೇಸ್ ವಿಧೇಯಕ ಮತ್ತು ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ.

Continue Reading

LATEST NEWS

Trending

Exit mobile version