DAKSHINA KANNADA
ಸೊಳ್ಳೆ ಉತ್ಪತ್ತಿ ತಾಣವಾಗಿರುವ ಹೃದಯಭಾಗದ ಕಟ್ಟಡ; ಕಟ್ಟಡ ಮಾಲಕರಿಗೆ ನೊಟೀಸ್.!!
Published
4 months agoon
By
NEWS DESK3ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಡೆಂಗ್ಯೂ ನಿರ್ಮೂಲನೆಗೆ ಇನ್ನಿಲ್ಲದ ಪ್ರಯತ್ನ ಮಾಡ್ತಾ ಇದೆ. ಹಲವು ಜಾಗೃತಿ ಕಾರ್ಯಕ್ರಮದ ಮೂಲಕ ಲಾರ್ವಾ ಉತ್ಪತ್ತಿ ಸ್ಥಳಗಳನ್ನು ನಾಶ ಮಾಡುವ ಪ್ರಯತ್ನ ಕೂಡಾ ನಡೆಯುತ್ತಿದೆ. ಆದರೆ ನಗರದ ಹೃದಯಭಾಗದಲ್ಲೇ ಇರುವ ಬೃಹತ್ ವಾಣಿಜ್ಯ ಕಟ್ಟಡವೊಂದು ಸೊಳ್ಳೆ ಉತ್ಪತ್ತಿ ತಾಣವಾಗಿದೆ. ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಇರುವ ಸಹಕಾರಿ ಭವನ ಹೆಸರಿನ ಕಟ್ಟಡ ಇಡೀ ನಗರಕ್ಕೇ ಡೆಂಗ್ಯೂ ಮಲೇರಿಯ ಹರಡಿಸ್ತಾ ಇದೆ. ಬಾವಾ ಬಿಲ್ಡರ್ಸ್ ಗೆ ಸೇರಿರುವ ಈ ಕಟ್ಟಡ ಸದ್ಯ ಕಮಿಟಿಯೊಂದರ ಪಾಲಾಗಿದೆ ಎಂಬ ಮಾಹಿತಿ ಇದೆ.
ಈ ಕಟ್ಟಡದ ಬೇಸ್ಮೆಂಟ್ ನಲ್ಲಿ ಏಳಡಿಯಷ್ಟು ಸೊಳ್ಳೆಗಳು ಸಂಗ್ರಹವಾಗಿ ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದೆ. ಗಲೀಜು ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲಿ ಇರದ ಕಾರಣ ಡ್ರೈನೇಜ್ ನಲ್ಲಿ ಹರಿಯಬೇಕಾದ ನೀರು ಇಲ್ಲಿ ಸಂಗ್ರಹವಾಗಿದೆ. ಕಟ್ಟಡದ ಅಕ್ಕ ಪಕ್ಕದಲ್ಲಿ ಹೊಟೇಲ್ ಹಾಗೂ ಫಾಸ್ಟ್ ಫುಡ್ ಅಂಗಡಿಗಳ ಜೊತೆಗೆ ಸಾಕಷ್ಟು ಜನನಿಬಿಡ ಪ್ರದೇಶ ಇದಾಗಿದೆ. ಹೀಗಾಗಿ ಈ ಡ್ರೈನೇಜ್ ನೀರಿನ ಸಂಗ್ರಹದಿಂದ ಜನರಿಗೆ ರೋಗ ಹರಡುವ ಆತಂಕ ಎದುರಾಗಿದೆ. ವಾರಗಳ ಹಿಂದೆ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇಲ್ಲಿಗೆ ಭೇಟಿ ನೀಡಿ ಎಚ್ಚರಿಕೆ ನೋಟಿಸ್ ನೀಡಿದ್ದರು.
ಮಂಗಳೂರಿನಲ್ಲಿ ಮತ್ತೆ ಭೀತಿ ಹುಟ್ಟಿಸುತ್ತಿರುವ ಕಳ್ಳರ ಕಾಟ..!!
ಡ್ರೈನೇಜ್ ನೀರು ನಿಲ್ಲದಂತೆ ಕ್ರಮಕ್ಕೆ ಸೂಚಿಸಿದ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ ವಿಚಾರಕ್ಕೆ ಫೈನ್ ಕೂಡಾ ವಿಧಿಸಿದ್ದರು. ಆದರೆ ಎಚ್ಚರಿಕೆ ನೋಟಿಸಿಗೂ ಕ್ಯಾರೇ ಅನ್ನದ ಕಟ್ಟಡದ ಕಮಿಟಿ ಫೈನ್ ಕೂಡಾ ಕಟ್ಟಿಲ್ಲ. ಇನ್ನು ಇಲ್ಲಿ ಸಂಗ್ರಹವಾಗಿರೋ ಡ್ರೈನೇಜ್ ನೀರು ಖಾಲಿ ಮಾಡೋ ಕೆಲಸಕ್ಕೂ ಕೈ ಹಾಕಿಲ್ಲ. ಹೀಗಾಗಿ ಇಂದು ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಟ್ಟಡ ಮಾಲೀಕರಾದ ಬಾವ ಬಿಲ್ಡರ್ಸ್ ಹಾಗೂ ಕಟ್ಟಡದ ಸಮಿತಿಗೆ ನೋಟೀಸ್ ಜಾರಿ ಮಾಡಿ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳವಾದಾಗ ಜಿಲ್ಲೆಯಿಂದಲೇ ಲಾರ್ವಾ ನಿರ್ಮೂಲನಾ ಕೇಂದ್ರಕ್ಕೆ ಆರೋಗ್ಯ ಸಚಿವರು ಚಾಲನೆ ನೀಡಿದ್ದರು. ಇದಾದ ಬಳಿಕ ಸಾಕಷ್ಟು ಕಡೆಯಲ್ಲಿ ಲಾರ್ವ ನಿರ್ಮೂಲನೆ ಮಾಡುವ ಕೆಲಸ ಕೂಡಾ ಆಗಿತ್ತು. ಆದ್ರೆ ಈ ಸಹಕಾರಿ ಭವನದ ಬೇಸ್ಮೆಂಟ್ ನಲ್ಲಿ ನಿಂತಿರೋ ಡ್ರೈನೇಜ್ ನೀರಿನಿಂದ ಇಡೀ ನಗರಕ್ಕೇ ಹಲವು ಕಾಯಿಲೆ ಹರಡುವ ಅಪಾಯ ಇದೆ. ಹೀಗಾಗಿ ಕಟ್ಟಡ ಮಾಲೀಕರ ವಿರುದ್ಧ ಸೂಕ್ತ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
DAKSHINA KANNADA
ಅತ್ಯಂತ ಉದ್ದದ ಮಾನವ ಸರಪಳಿ: ದ.ಕ.ಜಿಲ್ಲೆಗೆ ದ್ವಿತೀಯ ಸ್ಥಾನ
Published
18 hours agoon
24/11/2024By
NEWS DESK2ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಬೀದರ್‌ನಿಂದ ಚಾಮರಾಜ ನಗರದವರೆಗೆ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಜಿಲ್ಲೆಗಳಿಗೆ ಒಟ್ಟು ಐದು ವಿಭಾಗಗಳಲ್ಲಿ ತಲಾ 3 ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿತ್ತು. ಈ ವಿಭಾಗಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯಂತ ಉದ್ದದ ಮಾನವ ಸರಪಳಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.
ನ.26ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಂದ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
BIG BOSS
ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
Published
2 days agoon
23/11/2024ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.
‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು
DAKSHINA KANNADA
ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !
Published
2 days agoon
23/11/2024By
NEWS DESK3ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.
ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.
LATEST NEWS
ಪತ್ನಿಗೆ ಬೆಂ*ಕಿ ಹಚ್ಚಿ ತಲೆಮರೆಸಿಕೊಂಡಿದ್ದ ವ್ಯಕ್ತಿ 12 ವರ್ಷಗಳ ಬಳಿಕ ಅರೆಸ್ಟ್
ಯಶ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ ಖ್ಯಾತ ಕ್ರಿಕೆಟಿಗನ ಪತ್ನಿ
ಬಿಗ್ಬಾಸ್ ಮನೆಯಲ್ಲಿನ ಸ್ಪರ್ಧಿಗಳ ವಯಸ್ಸೆಷ್ಟು ಗೊತ್ತಾ..?
ಮಂಗಳೂರಲ್ಲಿ ಸಮುದ್ರಕ್ಕೆ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಯತ್ನ
ಚಲಿಸುತ್ತಿರುವ ಬಸ್ಸಿನಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟ ಯುವಕ
ನಿದ್ದೆಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ: ನಿಮಗೆ ಗೊತ್ತಾ!
Trending
- LATEST NEWS5 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru3 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION4 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- LATEST NEWS6 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!