Connect with us

    ಉಚಿತ ಅಕ್ಕಿ ವಿತರಣೆಯಲ್ಲಿ ಜನಜಂಗುಳಿ: ‘ಸಾಮಾಜಿಕ ಅಂತರ’ ನಿಯಮ ಗಾಳಿಗೆ ತೂರಿದ್ರಾ ಜನನಾಯಕರು

    Published

    on

    ಉಚಿತ ಅಕ್ಕಿ ವಿತರಣೆಯಲ್ಲಿ ಜನಜಂಗುಳಿ: ‘ಸಾಮಾಜಿಕ ಅಂತರ’ ನಿಯಮ ಗಾಳಿಗೆ ತೂರಿದ್ರಾ ಜನನಾಯಕರು

    ಮಂಗಳೂರು: ಉಚಿತ ಅಕ್ಕಿ ವಿತರಣಾ ಕಾರ್ಯಕ್ರಮದಲ್ಲಿ, ಅಕ್ಕಿ ಕೊಳ್ಳುವ ಧಾವಂತದಲ್ಲಿ ಅತೀ ಅಗತ್ಯವಾಗಿ ಮಾಡಬೇಕಾದ ಸಾಮಾಜಿಕ ಅಂತರ ಕಾಯ್ದುಕೊಳ್ಳದ ವಿದ್ಯಮಾನ ಮಂಗಳೂರು ನಗರದಲ್ಲಿಂದು (ಎಪ್ರಿಲ್ 4) ನಡೆದಿದೆ.

    ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನೇತೃತ್ವದಲ್ಲಿ ಇಂದು ನಗರದ ಕಂಕನಾಡಿಯ ಅಟೋ ಪಾರ್ಕ್ ಬಳಿ ಉಚಿತ ಅಕ್ಕಿ ವಿರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

    ಉಚಿತ ಅಕ್ಕಿ ವಿತರಣೆ ಹಿನ್ನಲೆಯಲ್ಲಿ ಭಾರಿ ಜನ ಜಂಗುಳಿ ಅಲ್ಲಿ ಜಮಾಯಿಸಿತ್ತು.

    ವಿಪರ್ಯಾಸ ಅಂದ್ರೆ ಕೊರೊನಾ ಹರಡುವುದನ್ನು ತಡೆಗಟ್ಟಲು ಅಗತ್ಯವಾಗಿ ಬೇಕಾದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯ ಯಾವುದೇ ಲಕ್ಷಣಗಳು ಅಲ್ಲಿ ಕಂಡು ಬರಲಿಲ್ಲ. ಬದ್ಲಾಗಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

    ಜನಸಂದಣಿ ನಿಯಂತ್ರಿಸಬೇಕಾದ ಜನಪ್ರತಿನಿಧಿಗಳೇ ಕಟ್ಟುನಿಟ್ಟಿನ ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಜನ ಜಮಾವಣೆ ಮಾಡುತ್ತಿರುವುದು ಆಡಳಿತ ವರ್ಗ ಹಾಗೂ ಪೊಲೀಸ್ ಇಲಾಖೆಗೆ ಇರಿಸು ಮುರುಸು ತಂದೊಡ್ಡಿದೆ.

    ಇದೇ ಸಂದರ್ಭದಲ್ಲಿ ಶಾಸಕ ಯುಟಿ ಖಾದರ್, ಮಾಜಿ ಸಚಿವ ಜೆ.ಆರ್ ಲೋಬೋ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸೇರಿದಂತೆ ಹಲವು ಜನನಾಯಕರು ಹಾಜರಿದ್ದರು. ಜನರ ನಡುವೆ ಅವರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದಿದ್ದು ಖೇದಕರ ಸಂಗತಿಯಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ

    Published

    on

    ಬೆಂಗಳೂರು: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ ಹೊರಡಿಸಿತ್ತು. ಇದೀಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.

    ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 34,000 ಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ, 205 ದೇಗುಲಗಳ ವಾರ್ಷಿಕ ಆದಾಯ 25 ಲಕ್ಷ ರೂ.ಗಿಂತ ಹೆಚ್ಚಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿವೆ. 193 ದೇಗುಲಗಳನ್ನು 5 ಲಕ್ಷದಿಂದ ರೂ. 25 ಆದಾಯದೊಂದಿಗೆ ವರ್ಗ-ಬಿ ಎಂದು ಗುರುತಿಸಲಾಗಿದೆ. ಉಳಿದವುಗಳನ್ನು 5 ಲಕ್ಷ ರೂ. ಆದಾಯದೊಂದಿಗೆ ವರ್ಗ-ಸಿ ಎಂದು ವರ್ಗೀಕರಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ದೇವಾಲಯಗಳು ಭಕ್ತರಿಗೆ ಪ್ರಸಾದವನ್ನು ನೀಡುತ್ತವೆ.

    Continue Reading

    bengaluru

    ಜೈಲಿನಲ್ಲೇ ಮೊಬೈಲ್‌ ಬಳಕೆ !

    Published

    on

    ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


    ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
    ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
    ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
    ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ

    Continue Reading

    LATEST NEWS

    ಬಾಲಕನ ಮರ್ಮಾಂಗದೊಂದಿಗೆ ಸಹಪಾಠಿಗಳ ಆಟ; ಆಸ್ಪತ್ರೆಗೆ ದಾಖಲಾದ ಬಾಲಕ

    Published

    on

    ಸುಳ್ಯ: ಹಾಸ್ಟೇಲ್ನಲ್ಲಿ ಉಳಿದು ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವೆಳೆದು ಗೆಳೆಯರು ಆಟವಾಡಿದ ಪರಿಣಾಮವಾಗಿ ಮರ್ಮಾಂಗಕ್ಕೆ ಹಾನಿಯಾಗಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.


    ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷದ ಬಾಲಕ ಕೆಲ ಸಮಯದಿಂದ ಕೊಡಗು ಸಂಪಾಜೆಯ ಹಾಸ್ಟೇಲ್ನಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದ. ಸೆ.14 ರಂದು ಇಬ್ಬರು ಸಹಪಾಠಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು. ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವು ಬಂತೆಂದು ಮನೆಗೆ ಮರಳಿದ್ದಾನೆ.
    ತಾಯಿಯೊಡನೆ ವಿಷಯ ಹೇಳಿಕೊಂಡಾಗ ತಕ್ಷಣವೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬಾಲಕ ಚೇತರಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ

    Continue Reading

    LATEST NEWS

    Trending