Connect with us

LATEST NEWS

4ನೇ ಟೆಸ್ಟ್ ನಲ್ಲಿ ಭಾರತಕ್ಕೆ ಹೀನಾಯ ಸೋಲು; WTC ಫೈನಲ್ ಕನಸು ಭಗ್ನ !

Published

on

ಮಂಗಳೂರು/ಮೆಲ್ಬೋರ್ನ್: ಬಾರ್ಡರ್ ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್ ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪ್ರವೇಶವನ್ನು ಕಂಡಿದ್ದ ಟೀಂ ಇಂಡಿಯಾಗೆ ಮುಖಭಂಗ ಆಗಿದೆ. ಬಾಕ್ಸಿಂಗ್ ಡೇ ಟೆಸ್ಟ್ ಮುಕ್ತಾಯಗೊಂಡಿದ್ದು, ಆಸ್ಟ್ರೇಲಿಯಾ 184 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಗೆಲ್ಲಲು ಕಠಿಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯದಿಂದಾಗಿ ಪಂದ್ಯವನ್ನು ಕೈಚೆಲ್ಲಿತ್ತು. ಯಶಸ್ವಿ ಜೈಸ್ವಾಲ್ ಹಾಗೂ ರಿಷಭ್ ಪಂತ್ ಹೊರತುಪಡಿಸಿ ಟೀಂ ಇಂಡಿಯಾದ ಯಾವೊಬ್ಬ ಬ್ಯಾಟರ್ ಕೂಡಾ ಎರಡಂಕಿ ಮೊತ್ತ ದಾಖಲಿಸಲು ಯಶಸ್ವಿಯಾಗಲಿಲ್ಲ.

ಭಾರತವನ್ನು ಸೋಲಿನಿಂದ ಪಾರು ಮಾಡಲು ಯಶಸ್ವಿ ಜೈಸ್ವಾಲ್ 208 ಎಸೆತಗಳನ್ನು ಎದುರಿಸಿ 8 ಬೌಂಡರಿ ಸಹಿತ 84 ರನ್ ಗಳಿಸಿ ವಿವಾದಾತ್ಮಕ ತೀರ್ಪಿಗೆ ಬಲಿಯಾದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 104 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 30 ರನ್ ಗಳಿಸಿ ಟ್ರ್ಯಾವಿಸ್ ಹೆಡ್ ಗೆ ವಿಕೆಟ್ ಒಪ್ಪಿಸಿದರು.

ಜೈಸ್ವಾಲ್ ಹಾಗೂ ಪಂತ್ ಹೊರತುಪಡಿಸಿ ಟೀಂ ಇಂಡಿಯಾದ ಯಾವೊಬ್ಬ ಬ್ಯಾಟರ್ ಕೂಡಾ ನೆಲಕಚ್ಚಿ ಆಡುವ ಪ್ರಯತ್ನ ಮಾಡಲಿಲ್ಲ. ರೋಹಿತ್ ಶರ್ಮಾ(9), ಕೆ ಎಲ್ ರಾಹುಲ್ (0), ವಿರಾಟ್ ಕೊಹ್ಲಿ (5), ರವೀಂದ್ರ ಜಡೇಜಾ (2), ನಿತೀಶ್ ರೆಡ್ಡಿ (1) ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ಇನ್ನು ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ 45 ಎಸೆತಳನ್ನು ಎದುರಿಸಿ ಅಜೇಯರಾಗುಳಿದರೂ, ಮತ್ತೊಂದು ತುದಿಯಲ್ಲಿ ಸೂಕ್ತ ಸಾಥ್ ಸಿಗಲಿಲ್ಲ.

ಐದನೇ ದಿನವಾದ ಇಂದು ಭಾರತಕ್ಕೆ ಗೆಲ್ಲುವ ಅವಕಾಶ ಇತ್ತು. ಅದನ್ನು ಕೈಯಾರೆ ಚೆಲ್ಲಿದೆ. ಕೊನೆ ಕ್ಷಣದಲ್ಲಿ ಮನಸ್ಸು ಮಾಡಿದ್ದರೂ ಪಂದ್ಯ ಡ್ರಾ ಮಾಡಿಕೊಳ್ಳಬಹುದಿತ್ತು. ಆದರೆ ಟೀಂ ಇಂಡಿಯಾ ಬ್ಯಾಟ್ಸ್​​ಮನ್​​ಗಳ ಮನಸೋ ಇಚ್ಛೆ ಬ್ಯಾಟಿಂಗ್​ನಿಂದಾಗಿ ತಂಡ ಸೋಲಿಗೆ ಶರಣಾಗಿದೆ. ಆ ಮೂಲಕ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

 

Click to comment

Leave a Reply

Your email address will not be published. Required fields are marked *

LATEST NEWS

ಆರ್ಡರ್ ಮಾಡಿದ ಪಿಜ್ಜಾದಲ್ಲಿ ಚಾಕುವಿನ ತುಂಡು ಪತ್ತೆ.!

Published

on

ಪುಣೆ: ಪುಣೆಯ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ವ್ಯಕ್ತಿಯೊಬ್ಬ ತಾನು ಆರ್ಡರ್ ಮಾಡಿದ ಪಿಜ್ಜಾದಲ್ಲಿ ಚಾಕು ತುಂಡು ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ಸ್ಥಳೀಯರಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಗಮನ ಸೆಳೆದಿದ್ದು, ದೂರುದಾರ ಅರುಣ್ ಕಾಪ್ಸೆ ಅವರು ಶುಕ್ರವಾರದಂದು ಹೆಸರಾಂತ ಕಂಪನಿಯಿಂದ ಪಿಜ್ಜಾ ಆರ್ಡರ್ ಮಾಡಿದ್ದು, ಅದಕ್ಕಾಗಿ ಆನ್‌ಲೈನ್‌ನಲ್ಲಿ 596 ರೂ. ಪಾವತಿಸಿದ್ದಾರೆ. ಅರುಣ್ ಪಿಜ್ಜಾ ತಿನ್ನುತ್ತಿದ್ದಾಗ ಇದ್ದಕ್ಕಿದ್ದಂತೆ ಬಾಯಲ್ಲಿ ಏನೋ ಗಟ್ಟಿಯಾದ ಅನುಭವವಾಯಿತು. ಇದಾದ ಬಳಿಕ ಅರುಣ್ ಅದನ್ನು ಹೊರತೆಗೆದು ನೋಡಿದಾಗ ಅದು ಚಾಕುವಿನ ತುಂಡಾಗಿದ್ದು, ಅದು ಕಟ್ಟರ್ ರೀತಿಯಲ್ಲಿತ್ತು.

ಈ ಘಟನೆಯಿಂದ ಅರುಣ್‌ಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಪಿಜ್ಜಾ ಕಂಪನಿಯ ವ್ಯವಸ್ಥಾಪಕರಿಗೆ ಮಾಹಿತಿ ನೀಡಿದ್ದಾರೆ. ಮ್ಯಾನೇಜರ್ ಮೊದಲು ಘಟನೆಯನ್ನು ನಿರಾಕರಿಸಲು ಪ್ರಯತ್ನಿಸಿದರು, ಆದರೆ ಅರುಣ್ ಚಿತ್ರವನ್ನು ಕಳುಹಿಸಿದಾಗ, ಮ್ಯಾನೇಜರ್ ತಕ್ಷಣ ಅವರ ಮನೆಗೆ ತಲುಪಿದರು. ಈ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ವ್ಯವಸ್ಥಾಪಕರು ಅರುಣ್‌ಗೆ ವಿನಂತಿಸಿದ್ದಾರೆ. ಪ್ರತಿಯಾಗಿ, ಮ್ಯಾನೇಜರ್ ಪಿಜ್ಜಾಕ್ಕಾಗಿ ಹಣವನ್ನು ಹಿಂದಿರುಗಿಸಲು ಮುಂದಾದರು ಮತ್ತು ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಲು ಪ್ರಯತ್ನಿಸಿದ್ದಾರೆ.

Continue Reading

DAKSHINA KANNADA

ಸುಳ್ಯ: ಸ್ಕೂಟಿ ಸವಾರನ ಮೇಲೆ ಕಾಡಾನೆ ದಾಳಿ; ಸಣ್ಣಪುಟ್ಟ ಗಾಯಗಳೊಂದಿಗೆ ವ್ಯಕ್ತಿ ಪಾರು

Published

on

ಸುಳ್ಯ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾದ ಘಟನೆ ದೇವರ ಕೊಲ್ಲಿಯಲ್ಲಿಯ 10ನೇ ಮೈಲಿನಲ್ಲಿ ಜ.4 ರಂದು ನಡೆದಿದೆ.

ದೇವರಕೊಲ್ಲಿಯ ಸ್ಥಳೀಯ ನಿವಾಸಿ ಮುತ್ತು ಕಾಡಾನೆ ದಾಳಿಗೊಳಗಾದ ವ್ಯಕ್ತಿ.

ಮುತ್ತು ಅವರು ಎಸ್ಟೇಟ್ ನಲ್ಲಿ ರಾತ್ರಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಸ್ಕೂಟಿಯಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಕಾಡಾನೆಯೊಂದು ದಿಡೀರ್ ದಾಳಿ ಮಾಡಿದೆ.

ಈ ಸಂದರ್ಭ ಮುತ್ತು ಓಡಿ ತಪ್ಪಿಸಿಕೊಂಡಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆಯು ಸ್ಕೂಟಿಯನ್ನು ಜಖಂಗೊಳಿಸಿದ್ದು, ಗಾಯಳುವನ್ನು ಮಡಿಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

Continue Reading

DAKSHINA KANNADA

ಮಂಗಳೂರಿನಲ್ಲಿ ಮತ್ತೊಂದು ಕಾರು ಬೆಂ*ಕಿಗಾಹುತಿ

Published

on

ಮಂಗಳೂರು : ರಸ್ತೆಯ ಮಧ್ಯದಲ್ಲೇ ಕಾರುಗಳು ಬೆಂ*ಕಿಗೆ ಆಹುತಿಯಾಗುತ್ತಿರುವ ಘಟನೆ ನಗರದಲ್ಲಿ ಪದೇ ಪದೇ ನಡೆಯುತ್ತಿವೆ. ಇದೀಗ ಶನಿವಾರ(ಜ.4) ರಾತ್ರಿ ಮತ್ತೊಂದು ಕಾರು ಹೊ*ತ್ತಿ ಉರಿದಿದೆ. ಶನಿವಾರ ವಾಹನ ದಟ್ಟಣೆ ಹೆಚ್ಚಾಗಿದ್ದ ಸಮಯದಲ್ಲಿ ಮಂಗಳಾ ಸ್ಟೇಡಿಯಂ ಸಮೀಪ ಲೇಡಿ ಹಿಲ್ ಬಳಿ ಸ್ವಿಫ್ಟ್ ಕಾರೊಂದು ಹೊತ್ತಿ ಉರಿದಿದೆ. ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ರಸ್ತೆಯ ಬದಿಗೆ ತಂದು ನಿಲ್ಲಿಸುವಷ್ಟರಲ್ಲಿ ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದು ಚಾಲಕ ಬಚಾವ್ ಆಗಿದ್ದಾರೆ.

 

ಇದರಿಂದ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಟ್ರಾಫಿಕ್ ಪೊಲೀಸರು ಕೆಲ ಕಾಲ ವಾಹನಗಳು ಈ ರಸ್ತೆಯಲ್ಲಿ ಸಂಚರಿಸದಂತೆ ನಿರ್ಬಂಧಿಸಿದ್ದಾರೆ. ಬಳಿಕ ಅ*ಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿಕ ಕಾರಿನ ಬೆಂ*ಕಿ ನಂದಿಸಿದ್ದಾರೆ. ಆದರೆ, ಅದಾಗಲೇ ಕಾರು ಸಂಪೂರ್ಣ ಸು*ಟ್ಟು ಭಸ್ಮವಾಗಿದೆ.

ಇದನ್ನೂ ಓದಿ : ಪ್ರೇಯಸಿಯನ್ನು ಅರಸಿ ಹೋಗಿ ಜೈಲು ಪಾಲಾದ ಪಾಗಲ್ ಪ್ರೇಮಿ..!

ಕಾರುಗಳಲ್ಲಿ ಏಕಾಏಕಿ ಸಂಭವಿಸುತ್ತಿರುವ ಈ ಅ*ಗ್ನಿ ಅವ*ಘಡಕ್ಕೆ ನಿಖರ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲವಾದ್ರೂ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ನಡೆಯುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇತ್ತೀಚೆಗೆ ಇಲ್ಲೇ ಸಮೀಪದ ಪೆಟ್ರೋಲ್ ಪಂಪ್ ಬಳಿಯಲ್ಲಿ ಮಾರುತಿ ಕಾರೊಂದು ಹೊ*ತ್ತಿ ಉರಿದಿತ್ತು.

Continue Reading

LATEST NEWS

Trending

Exit mobile version