Connect with us

    ಹೆತ್ತಬ್ಬೆಯ ಪಾಲಿಗೆ ಕಿರಾತಕಿಯಾದ ಮಗಳು..!!

    Published

    on

    ಹೆತ್ತಬ್ಬೆಯ ಪಾಲಿಗೆ ಕಿರಾತಕಿಯಾದ ಮಗಳು

    ಬೆಂಗಳೂರು:ಹೆತ್ತ ತಾಯಿಯನ್ನೇ ಕೊಂದು ಪ್ರಿಯಕರನೊಂದಿಗೆ ಪರಾರಿಯಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. ಪರಾಯಿಯಾದ ಜೋಡಿಯನ್ನು ಪತ್ತೆ ಹಚ್ಚಿ ಪೊಲೀಸರು ಬಂಧಿಸಿದ್ದಾರೆ.

    ನಗರದ ಕೆ.ಆರ್. ಪುರದ ಅಕ್ಷಯನಗರದಲ್ಲಿ ಈ ಘಟನೆ ಸಂಭವಿಸಿದೆ. ತಾಯಿಯನ್ನು ಕೊಂದು ಪರಾರಿಯಾಗಿದ್ದ ಮಗಳು ಅಮೃತಾ ಮತ್ತು ಆಕೆಯ ಪ್ರಿಯಕರ ಶ್ರೀಧರ್‌ ರಾವ್‌ ಅವರನ್ನು ಅಂಡಮಾನ್‌ ನಿಕೋಬಾರ್‌ನ ಪೋರ್ಟ್‌ಬ್ಲೇರ್‌ನಲ್ಲಿ ಬಂಧಿಸಿದ್ದ ಪೊಲೀಸರು ಬೆಂಗಳೂರಿಗೆ ನಗರಕ್ಕೆ ಕರೆದುಕೊಂಡು ಬಂದಿದ್ದಾರೆ.

    ಆರೋಪಿ ಅಮೃತಾ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಆತನಿಂದ ದೂರವಾದ ಬಳಿಕ ಅದೇ ಕಂಪನಿಯಲ್ಲಿ ತಂಡವೊಂದರ ಮುಖ್ಯಸ್ಥನಾಗಿದ್ದ ಶ್ರೀಧರ್‌ನನ್ನು ಪ್ರೀತಿಸಲು ಆರಂಭಿಸಿದ್ದು, ಇಬ್ಬರೂ ಸಹಜೀವನ ನಡೆಸುತ್ತಿದ್ದರು ಎನ್ನಲಾಗಿದೆ.

    ಕಂಪನಿ ತ್ಯಜಿಸಿದ್ದ ಅಮೃತಾ ಎರಡು ವರ್ಷಗಳಿಂದ ಮನೆಯಲ್ಲೇ ಇದ್ದು, ಬ್ಯಾಂಕ್ ಮತ್ತು ಕ್ರೆಡಿಟ್ ಕಾರ್ಡ್ ಮೂಲಕ 10 ಲಕ್ಷದಿಂದ 15 ಲಕ್ಷವರೆಗೆ ಸಾಲ ಮಾಡಿದ್ದಳು. ಆ ಹಣದಲ್ಲಿ ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಿದ್ದಳು.ಈ ಬಗ್ಗೆ ದಾಖಲೆಗಳು ಸಿಕ್ಕಿವೆ’ ಎಂದು ಪೊಲೀಸರು ಹೇಳಿದರು.

    ಸಾಲದ ಒತ್ತಡ ಹೆಚ್ಚಾಗುತ್ತಿದ್ದಂತೆ ತಲೆಮರೆಸಿಕೊಳ್ಳಲು ಅಮೃತಾ ಸಿದ್ಧತೆ ನಡೆಸಿದ್ದಳು ಎಂಬ ವಿಚಾರವೂ ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ಆದರೆ, ಬ್ಯಾಂಕ್ ಅಧಿಕಾರಿಗಳು ಮನೆಗೆ ಬಂದಾಗ ತಾಯಿ, ಸಹೋದರನಿಗೆ ಮುಜುಗರ ಉಂಟಾಗುತ್ತದೆ.

    ಹೀಗಾಗಿ ಇಬ್ಬರನ್ನೂ ಕೊಲೆ ಮಾಡಿ ಪರಾರಿಯಾಗಲು ನಾಲ್ಕು ತಿಂಗಳ ಹಿಂದೆಯೇ ನಿರ್ಧರಿಸಿದ್ದಳು. ಅದಕ್ಕಾಗಿ ಎರಡು ಚಾಕುಗಳನ್ನು ಖರೀದಿಸಿ, ಬ್ಯಾಗ್‍ನಲ್ಲಿ ಇಟ್ಟುಕೊಂಡಿದ್ದಳು ಎನ್ನಲಾಗಿದೆ.

    ಫೆ. 2ರಂದು ನಸುಕಿನಲ್ಲಿ ಪಕ್ಕದಲ್ಲಿ ಮಲಗಿದ್ದ ತಾಯಿ ನಿರ್ಮಲಾ ಅವರನ್ನು ದಿಬ್ಬಿನಿಂದ ಉಸಿರುಗಟ್ಟಿಸಿ, ಬಳಿಕ ಚಾಕುವಿನಿಂದ ಎದೆಗೆ ಅಮೃತಾ ಇರಿದು ಪರಾರಿಯಾಗಿದ್ದಳು.

    ಫೆ. 5ರಂದು ಅಂಡಮಾನ್‍ನ ಕೋಟೆಯೊಂದು ವೀಕ್ಷಿಸಿ ಇಬ್ಬರು ಹೊರಬರುವಾಗ ವಶಕ್ಕೆ ಪಡೆಯಲಾಯಿತು.

    ವಿಡಿಯೋಗಾಗಿ..

    Click to comment

    Leave a Reply

    Your email address will not be published. Required fields are marked *

    LATEST NEWS

    ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ

    Published

    on

    ಮುಂಬೈ: ಮಹಾರಾಷ್ಟ್ರದಲ್ಲಿ ರೈಲು ದುರಂತ ಸಂಭವಿಸಿ 13 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡಿದ್ದಾರೆ. ಈ ರೈಲು ದುರಂತಕ್ಕೆ ಟೀ ಮಾರುವವನ ಯಡವಟ್ಟೇ ಕಾರಣ ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಜಲಗಾಂವ್ ರೈಲು ಅಪಘಾತಕ್ಕೆ ಟೀ ಮಾರುವವನೇ ಕಾರಣ, ಆತನಿಂದಲೇ 13 ಮಂದಿ ಬಲಿಯಾಗಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

    ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೀ ಮಾರುವವನಿಂದಲೇ ಜಲಗಾಂವ್ ರೈಲು ದುರಂತ ಸಂಭವಿಸಿದೆ. ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌  ರೈಲಿನಲ್ಲಿ ಪ್ಯಾಂಟ್ರಿಯಿಂದ ಬಂದ ಟೀ ಮಾರುವವನೊಬ್ಬ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ಕೂಗಿದ್ದಾನೆ. ಇದನ್ನು ಕೇಳಿಸಿಕೊಂಡ ಉತ್ತರ ಪ್ರದೇಶದ ಶ್ರಾವಸ್ತಿಯ ಮೂಲದ ಇಬ್ಬರು ಅಲ್ಲಿದ್ದ ಇತರರಿಗೂ ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಪ್ರಯಾಣಿಕರು ತಮ್ಮ ರಕ್ಷಣೆಗಾಗಿ ರೈಲಿನ ಅಲಾರಾಂ ಚೈನ್‌ನ್ನು ಎಳೆದು ರೈಲನ್ನು ನಿಲ್ಲಿಸಿದ್ದಾರೆ.

    ರೈಲಿನಿಂದ ಇಳಿದ ಪ್ರಯಾಣಿಕರು ಪಕ್ಕದ ರೈಲು ಹಳಿಯ ಮೇಲೆ ನಿಂತಿದ್ದಾರೆ. ಇದೇ ವೇಳೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಕರು ನಿಂತಿದ್ದ ಹಳಿಯ ಮೇಲೆ ಬಂದಿದೆ. ಪರಿಣಾಮ ಹಳಿಯ ಮೇಲಿಂದ ಇಳಿಯದೇ ಅಲ್ಲೇ ನಿಂತಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಬೆಂಕಿಯಿಂದಾಗಿ ಅಪಘಾತ ಸಂಭವಿಸಿದೆ ಎನ್ನುವುದು ಸುಳ್ಳು, ಸದ್ಯ ಮೃತರ ಪೈಕಿ 10 ಜನರನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

    ರೈಲ್ವೆ ಇಲಾಖೆ ಮೃತರ ಕುಟಂಬಸ್ಥರಿಗೆ 1.5 ಲಕ್ಷ ರೂ. ಪರಿಹಾರ ಘೋಷಿಸಿದೆ. ಸಂಭವಿಸಿದ ಅಪಘಾತದಲ್ಲಿ ರೈಲ್ವೆಯಿಂದ ಯಾವುದೇ ಸಮಸ್ಯೆಯಾಗಿರಲಿಲ್ಲ. 4.45ಕ್ಕೆ ಪುಷ್ಪಕ್ ಎಕ್ಸ್ಪ್ರೆಸ್ ನಿಂತ 20 ನಿಮಿಷಗಳ ಬಳಿಕ 5.05ಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್‌ ಬಂದಿದೆ. ಆದರೆ ಜನರು ಹಳಿ ಬಿಟ್ಟು ಕದಡದ ಕಾರಣ ದುರಂತ ಆಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ.

    Continue Reading

    DAKSHINA KANNADA

    ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

    Published

    on

    ಮಂಗಳೂರು : ಹಿರಿಯ ಪತ್ರಕರ್ತ  ಗುರುವಪ್ಪ ಬಾಳೆಪುಣಿ  (62)  ಅಲ್ಪಕಾಲದ ಅಸೌಖ್ಯದಿಂದ ಇಂದು(ಜ.24) ಬಾಳೆಪುಣಿಯ ಸ್ವಗೃಹದಲ್ಲಿ ನಿ*ಧನರಾಗಿದ್ದಾರೆ. ಅವರು ಪತ್ನಿ ಹಾಗೂ ಪುತ್ರನನ್ನು ಅ*ಗಲಿದ್ದಾರೆ.

    ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ  26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ   ಕರ್ತವ್ಯ ನಿರ್ವಹಿಸಿದ್ದಾರೆ. ಸರಳ, ಸಜ್ಜನಿಕೆಯ ಬಾಳೆಪುಣಿ ಅವರು ಜನಾನುರಾಗಿಯಾಗಿದ್ದರು.

    ಇದನ್ನೂ ಓದಿ: ಮಾಜಿ ಕ್ರಿಕೆಟಿಗ ಸೆಹ್ವಾಗ್-ಆರತಿ ದಾಂಪತ್ಯದಲ್ಲಿ ಬಿರುಕು ?

    ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ  ಪರಿಚಯಿಸಿದ ಕೀರ್ತಿ  ಗುರುವಪ್ಪ ಬಾಳೆಪುಣಿ ಅವರದು. ಪತ್ರಿಕೋದ್ಯಮದ ಅವರ ಮೇರು ಸಾಧನೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಅವರ ಮುಡಿಗೇರಿದೆ.

    Continue Reading

    LATEST NEWS

    ಮಾಜಿ ಕ್ರಿಕೆಟಿಗ ಸೆಹ್ವಾಗ್-ಆರತಿ ದಾಂಪತ್ಯದಲ್ಲಿ ಬಿರುಕು ?

    Published

    on

    ಮಂಗಳೂರು/ಮುಂಬೈ : ಇತ್ತೀಚೆಗೆ ಕ್ರಿಕೆಟರ್ ಚಹಾಲ್-ಧನಶ್ರೀ ವಿಚ್ಛೇದನ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.

    ಆದರೆ ಇದೀಗ, ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹಾಗೂ ಅವರ ಪತ್ನಿ ಆರತಿ ಆಹ್ಲಾವತ್ ವಿಚ್ಛೇದನ ಪಡೆಯಲಿದ್ದು, ಇವರಿಬ್ಬರ 20 ವರ್ಷಗಳ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂದು ವರದಿಯಾಗಿದೆ.

    ಸೆಹ್ವಾಗ್ ಮತ್ತು ಆರತಿ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರರನ್ನು ಅನ್‌ಫಾಲೋ ಮಾಡಿರುವುದು ವಿಚ್ಛೇದನ ವರದಿಗೆ ಹೆಚ್ಚಿನ ಬಲ ತುಂಬಿದೆ. ಜತೆಗೆ ಇವರಿಬ್ಬರು ಹಲವು ತಿಂಗಳುಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಮುಂದಿನ ದಿನಗಳಲ್ಲಿ ವಿಚ್ಛೇದನದ ಬಗ್ಗೆ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಇದನ್ನೂ ಓದಿ: ನಾನು ಮತ್ತು ನನ್ನ ಕುಟುಂಬ ಸದಸ್ಯರು…ವಿಚ್ಛೇದನ ವದಂತಿ ಕುರಿತು ಕೊನೆಗೂ ಮೌನ ಮುರಿದ ಧನಶ್ರೀ ವರ್ಮಾ !

    ಅಲ್ಲದೆ, ಇತ್ತೀಚೆಗೆ ಸೆಹ್ವಾಗ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವ ಪೋಸ್ಟ್‌ಗಳಲ್ಲಿ ಪತ್ನಿ ಆರತಿ ಎಲ್ಲಿಯೂ ಕಂಡುಬಂದಿಲ್ಲ. ಜತೆಗೆ ಕಳೆದ ವರ್ಷ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಸೆಹ್ವಾಗ್, ಇಬ್ಬರು ಪುತ್ರರು ಮತ್ತು ತಾಯಿಯೊಂದಿಗಿನ ಫೋಟೋಗಳನ್ನು ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು ವಿಚ್ಛೇದನ ವರದಿಗೆ ಮತ್ತಷ್ಟು ಪುಷ್ಟಿ ನೀಡಿತ್ತು.

    ಸೆಹ್ವಾಗ್ ಮತ್ತು ಆರತಿ 2004ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರಿಗೆ ಆರ್ಯುವೀರ್, ವೇದಾಂತ್ ಎಂಬ ಇಬ್ಬರು ಗಂಡು ಮಕ್ಕಳು ಇದ್ದಾರೆ.

    Continue Reading

    LATEST NEWS

    Trending