Connect with us

LATEST NEWS

ಪರಲೋಕದ ಆಸೆಗೆ ಇಹಲೋಕ ತ್ಯಜಿಸಿದ ವೈದ್ಯ ದಂಪತಿ…! ಬ್ಲ್ಯಾಕ್‌ ಮ್ಯಾಜಿಕ್‌ ಗೆ ಬ*ಲಿ

Published

on

ವೈದ್ಯ ದಂಪತಿ ಹಾಗೂ ಟೀಚರ್ ಒಬ್ಬರು ಬ್ಲ್ಯಾ*ಕ್ ಮ್ಯಾ*ಜಿಕ್‌ಗೆ ಬಲಿಯಾಗಿರುವ ಆಘಾತಕಾರಿ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಕೇರಳದ ಕೊಟ್ಟಾಯಂ ಜಿಲ್ಲೆಯ ವೈದ್ಯ ದಂಪತಿ ನವೀನ್ ಥಾಮಸ್ (35) ,ಪತ್ನಿ ದೇವಿ (35) ಹಾಗೂ ತಿರುವನಂತಪುರದ ನಿವಾಸಿಯಾಗಿ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ಆರ್ಯಾ ಬಿ.ನಾಯರ್ ( 29) ಈ ಮೂವರು ಬ್ಲ್ಯಾಕ್ ಮ್ಯಾಜಿಕ್‌ಗೆ ಬ*ಲಿಯಾಗಿದ್ದಾರೆ ಎನ್ನಲಾಗಿದೆ.

ನಾಪತ್ತೆ…ಶ*ವವಾಗಿ ಪತ್ತೆ!

ಕಳೆದ ನಾಲ್ಕು ದಿನಗಳಿಂದ ಆರ್ಯಾ ನಾಪತ್ತೆಯಾಗಿದ್ದಾಳೆ ಅಂತ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ತನಿಖೆ ಆರಂಭಿಸಿದ ಪೊಲೀಸರಿಗೆ ಆರ್ಯಾ ಕೊಟ್ಟಾಯಂನ ಸ್ನೇಹಿತರ ಜೊತೆ ಹೋಗಿದ್ದಾರೆ ಅನ್ನೋ ಮಾಹಿತಿ ಸಿಕ್ಕಿತ್ತು. ವಿಚಾರಿಸಿದಾಗ ಕೊಟ್ಟಾಯಂ ನ ವೈದ್ಯ ದಂಪತಿ ಜೊತೆ ಅರುಣಾಚಲು ಪ್ರದೇಶಕ್ಕೆ ತೆರಳಿದ್ದು ಗೊತ್ತಾಗಿದೆ. ಆದ್ರೆ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಅರುಣಾಚಲ ಪೊಲೀಸರು ಕರೆ ಮಾಡಿ ಮೂವರ ಸಾ*ವಿನ ಮಾಹಿತಿ ನೀಡಿದ್ದಾರೆ.

ವೈದ್ಯ ದಂಪತಿ ಹಾಗೂ ಶಿಕ್ಷಕಿ ಅರುಣಾಚಲ ಪ್ರದೇಶದಲ್ಲಿ ಸಾ*ವಿಗೀಡಾಗಿದ್ದಾರೆ ಎಂಬ ಮಾಹಿತಿ ಸಿಕ್ಕ ತಕ್ಷಣ ಕೇರಳದ ಮಾಧ್ಯಮಗಳು ಆರ್ಯಾ ಹಾಗೂ ನವೀನ್ ಮತ್ತು ದೇವಿಯ ಮನೆಯವರನ್ನು ಸಂಪರ್ಕಿಸಿದ್ದಾರೆ. ಆರ್ಯಾ ಮನೆಯವರು ಇದೊಂದು ಮಾ*ಟಮಂತ್ರದ ವಿಚಾರವಾಗಿ ನಡೆದ ಹ*ತ್ಯೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಈ ವಿಚಾರ ಸದ್ಯ ಕೇರಳ ರಾಜ್ಯದಲ್ಲೇ ಸಂಚಲನ ಮೂಡಿಸಿದೆ.  ಕೇರಳ ಪೊಲೀಸರು ಅರುಣಚಾಲ ಪ್ರದೇಶಕ್ಕೆ ತೆರಳಿದ್ದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಕೈ ನರ ಕತ್ತ*ರಿಸಿಕೊಂಡು ಆತ್ಮಹ*ತ್ಯೆ…!

 

ಮಾರ್ಚ್‌ 28 ರಂದು ಅರುಣಾಚಲ ಪ್ರದೇಶದ ಇಟಾ ನಗರದ ಜಿರೋ ಪ್ರದೇಶ ತಲುಪಿದ್ದ ವೈದ್ಯ ದಂಪತಿ ಹಾಗೂ ಟೀಚರ್ ಆರ್ಯ ಒಂದೇ ಮನೆಯವರು ಎಂದು ರೂಮ್ ಪಡೆದುಕೊಂಡಿದ್ದಾರೆ. ಮಾರ್ಚ್‌ 31 ರವರೆಗೆ ರೂಮ್ ಬುಕ್ ಮಾಡಿದ್ದು, ಎರಡು ದಿನ ಅರುಣಾಚಲ ಪ್ರದೇಶದಲ್ಲಿ ಸೈಟ್ ಸೀಯಿಂಗ್‌ಗೆ ಹೊರಗೆ ಹೋಗಿ ಬಂದಿದ್ದಾರೆ. ಆದ್ರೆ, ಮಾರ್ಚ್‌ 31 ರ ಬಳಿಕ ಅವರನ್ನು ಯಾರೂ ಕೂಡಾ ಕಂಡಿರಲಿಲ್ಲ. ಹೀಗಾಗಿ ಎಪ್ರಿಲ್ 2 ರಂದು ಹೊಟೇಲ್ ಸಿಬ್ಬಂದಿ ಮೂವರಿಗೆ ನೀಡಲಾಗಿದ್ದ ರೂಮ್ ಓಪನ್ ಮಾಡಲು ಮುಂದಾಗಿದ್ದಾರೆ. ಆದ್ರೆ ಒಳಗಡೆಯಿಂದ ರೂಮ್ ಲಾಕ್ ಮಾಡದೆ ಇದ್ದು ಬಾಗಿಲು ತೆರೆದುಕೊಂಡಿದೆ. ಬಾಗಿಲಿನ ಕೆಳಗೆ ಸೌಂಡ್ ಹೊರಬಾರದಂತೆ ಬಟ್ಟೆಯನ್ನು ಅಡ್ಡ ಇಡಲಾಗಿತ್ತು.

ರೂಮ್‌ನ ಬೆಡ್‌ ಮೇಲೆ ಆರ್ಯಾ ಹಾಗೂ ದೇವಿಯ ಮೃ*ತದೇಹ ಕಂಡು ಬಂದಿದ್ದು, ನವೀನ್ ದೇಹ ಪತ್ತೆಯಾಗಿರಲಿಲ್ಲ. ಹೀಗಾಗಿ ಹೊಟೇಲ್ ಸಿಬ್ಬಂದಿ ನವೀನ್ ಕೊ*ಲೆ ಮಾಡಿ ಪರಾರಿ ಆಗಿರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದರು. ಆದರೆ ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ನವೀನ್ ಥಾಮಸ್ ಮೃ*ತ ದೇಹ ಬಾತ್‌ರೂಮ್‌ನಲ್ಲಿ ಪತ್ತೆಯಾಗಿದೆ.

ಮೂವರೂ ಕೈ ಕತ್ತರಿಸಿಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಕ್ತ ಹೆಪ್ಪುಗಟ್ಟದೇ ಇರಲು ಮಾತ್ರೆಗಳನ್ನು ಸೇವಿಸಿದ್ದಕ್ಕೆ ಸಾಕ್ಷಿಯಾಗಿ ಕೆಲವೊಂದು ಮಾತ್ರೆಗಳು ಅಲ್ಲಿ ಪತ್ತೆಯಾಗಿದೆ. ದೇವಿ ಮತ್ತು ಆರ್ಯಾ ಅವರ ಎಡಗೈನಲ್ಲಿ ನರ ಕತ್ತ*ರಿಸಿದ ಗಾ*ಯಗಳಿದ್ದರೆ, ನವೀನ್ ಥಾಮಸ್ ಅವರ ಬಲಗೈನಲ್ಲಿ ಈ ಗಾ*ಯ ಕಂಡು ಬಂದಿದೆ.

ವಿದ್ಯಾವಂತ…ಆದ್ರೆ ವಿಚಿತ್ರ ವ್ಯಕ್ತಿ!

ವೈದ್ಯನಾಗಿರುವ ನವೀನ್ ಥಾಮಸ್‌ ವಿದ್ಯಾವಂತನಾಗಿದ್ದರೂ, ವಿಚಿತ್ರವಾಗಿ ವರ್ತಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಈ ಲೋಕವಲ್ಲದೆ ಬೇರೊಂದು ಲೋಕವಿದೆ. ಅಲ್ಲಿ ಜನರು ಸಾವಿಲ್ಲದೆ ಬದುಕುತ್ತಾರೆ ಅನ್ನೋ ಕಲ್ಪನೆಗೂ ನಿಲುಕದ ವಿಚಾರಗಳನ್ನು ಪ್ರತಿಪಾದಿಸುತ್ತಿದ್ದ ಎನ್ನಲಾಗಿದೆ.

ಈ ಲೋಕದಲ್ಲಿ ಸಾಮಾನ್ಯರಂತೆ ಸಾ*ವನ್ನಪ್ಪಿದ್ದರೆ ಆ ಲೋಕಕ್ಕೆ ಹೋಗಲು ಅಸಾಧ್ಯವಾಗಿದ್ದು, ಅದಕ್ಕೆ ಈ ರೀತಿಯಾಗಿ ಸಾ*ವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣ ಕೇರಳ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

DAKSHINA KANNADA

ಪ್ರವಾಸಿಗರಿಗೆ ಗುಡ್ ನ್ಯೂಸ್ : ಮತ್ತೆ ಆರಂಭವಾಯ್ತು ಲಕ್ಷದ್ವೀಪ – ಮಂಗಳೂರು ಸ್ಪೀಡ್ ಪ್ಯಾಸೆಂಜರ್ ಹಡಗು

Published

on

ಮಂಗಳೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪದ ಬೀಚ್‌ನಲ್ಲಿ ವಾಯುವಿಹಾರ ನಡೆಸುವ ಮೂಲಕ ಲಕ್ಷದ್ವೀಪ ಬಾರಿ ಸುದ್ದಿಯಾಗಿತ್ತು. ಈ ವೇಳೆ ಮಂಗಳೂರು ಲಕ್ಷದ್ವೀಪ ನಡುವೆ ಈ ಹಿಂದೆ ಇದ್ದ ಪ್ರಯಾಣಿಕರ ಹಡಗು ಆರಂಭಿಸಲು ಬೇಡಿಕೆ ಕೂಡಾ ಆರಂಭವಾಗಿತ್ತು.

ಇದೀಗ ಲಕ್ಷದ್ವೀಪದ ಆಡಳಿತ ಮಂಗಳೂರಿಗೆ ಸ್ಪೀಡ್ ಪ್ಯಾಸೆಂಜರ್ ಹಡಗನ್ನು ಆರಂಭಿಸಿದೆ. ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ ಸ್ಪೀಡ್ ಪ್ಯಾಸೆಂಜರ್ ಬೋಟ್‌ನಲ್ಲಿ 150 ಜನ ಲಕ್ಷದ್ವೀಪವಾಸಿಗಳು ಆಗಮಿಸಿದ್ದಾರೆ.

ಪ್ರಯಾಣ ದರ ಎಷ್ಟು?


ಮಂಗಳೂರು ಲಕ್ಷದ್ವೀಪದ ನಡುವೆ ಮತ್ತೆ ಸಂಪರ್ಕ ಸೇತುವೆ ನಿರ್ಮಿಸಲು ಲಕ್ಷದ್ವೀಪ ಆಡಳಿತ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭಿಸಿದೆ. ಕೋವಿಡ್ ಆರಂಭಕ್ಕೂ ಮೊದಲು ಮಂಗಳೂರು ಲಕ್ಷದ್ವೀಪದ ನಡುವೆ ಎರಡು ಪ್ರಯಾಣಿಕ ಹಡಗುಗಳು ಸಂಚಾರ ಮಾಡುತ್ತಿತ್ತು. ಸಾಕಷ್ಟು ಪ್ರಯಾಣಿಕರು ಮಂಗಳೂರು ಲಕ್ಷದ್ವೀಪ ನಡುವೆ ಪ್ರಯಾಣ ಮಾಡುವ ಮೂಲಕ ಅದರ ಅನುಕೂಲ ಪಡೆದುಕೊಂಡಿದ್ದರು.


ಲಕ್ಷದ್ವೀಪದವರಿಗೆ ತಮ್ಮ ದೈನಂದಿನ ಅವಶ್ಯಕತೆಗೆ ಮಂಗಳೂರು ಅವಲಂಬಿತರಾಗಿದ್ದರೆ, ಮಂಗಳೂರಿನ ಜನರಿಗೆ ಲಕ್ಷದ್ವೀಪ ವೀಕೆಂಡ್ ಪಾಯಿಂಟ್. ಆದ್ರೆ ಕೋವಿಡ್ ಕಾರಣದಿಂದ ಲಕ್ಷಾದ್ವೀಪಕ್ಕೆ ಇದ್ದ ಹಡಗಿನ ವ್ಯವಸ್ಥೆ ನಿಂತು ಹೋಗಿದ್ದು, ಈಗ ಮತ್ತೆ ಆರಂಭವಾಗಿದೆ. ಹಿಂದೆ 24 ಗಂಟೆ ಇದ್ದ ಪ್ರಯಾಣ ಕೇವಲ 5.30 ರಿಂದ 6 ಗಂಟೆಗಳಿಗೆ ಇಳಿದಿದೆ. ಹಡಗಿನಲ್ಲಿ ಎಲ್ಲಾ ವ್ಯವಸ್ಥೆ ಇರೋ ಕಾರಣದಿಂದ ಜನರು ಕೂಡಾ ಉತ್ಸಾಹದಿಂದ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ. ಅಂದಹಾಗೆ, ಈ ಹೈ-ಸ್ಪೀಡ್ ಪ್ರಯಾಣಿಕ ಹಡಗಿನ ದರ ಕೇವಲ 450 ರೂ. ಆಗಿದೆ.

ಹೆಚ್ಚಿನ ಹಡಗಿಗೆ ಬೇಡಿಕೆ :


ಲಕ್ಷದ್ವೀಪದ ನಡುವೆ ಪ್ರಯಾಣಿಕರ ಹಡಗು ಆರಂಭದಿಂದ ಮಂಗಳೂರಿನಲ್ಲಿ ವ್ಯಾಪಾರ ವಹಿವಾಟು ಇನ್ನಷ್ಟು ಹೆಚ್ಚಾಗಲಿದೆ. ಅಷ್ಟೇ ಅಲ್ಲದೆ, ಲಕ್ಷದ್ವೀಪಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮಂಗಳೂರಿನಿಂದ ತೆರಳುವ ಮೂಲಕ ಅಲ್ಲೂ ಕೂಡಾ ಆರ್ಥಿಕ ಅಭಿವೃದ್ದಿ ಆಗಲಿದೆ.


ಸ್ಪೀಡ್ ಪ್ಯಾಸೆಂಜರ್ ಹಡಗು ಕನಿಷ್ಟ ಎರಡು ದಿನಕ್ಕೊಮ್ಮೆ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೋಗುವ ವ್ಯವಸ್ಥೆ ಮಾಡಬೇಕು ಅನ್ನೋದು ಸ್ಥಳೀಯರ ಆಗ್ರಹ. ಈಗ ಆರಂಭವಾಗಿರೋ ಹಡಗಿನಲ್ಲಿ ಸುಖಕರ ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಯಾಣಿಕರಿಗೆ ಟಿವಿ, ಎಸಿ, ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಹಡಗಿನ ಬಳಕೆ ಮಾಡುವ ಸಾಧ್ಯತೆ ಇರುವ ಕಾರಣ ಹೆಚ್ಚಿನ ಹಡಗಿನ ವ್ಯವಸ್ಥೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇದೀಗ ಆರಂಭಗೊಂಡಿರೋ ಪ್ರಯಾಣಿಕರ ಹಡಗು ಸೇವೆ ಜೂನ್ ತಿಂಗಳ ಬಳಿಕ ಸ್ಥಗಿತವಾಗಲಿದೆ.

ಇದನ್ನೂ ಓದಿ :  ‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

ಮಳೆಗಾಲ ಕಳೆದ ಬಳಿಕ ಇದು ಮತ್ತೆ ಆರಂಭವಾಗುತ್ತದೆಯೋ ಇಲ್ಲವೋ ಅನ್ನೋದು ಇನ್ನೂ ನಿರ್ಧಾರವಾಗಿಲ್ಲ. ಆದ್ರೆ, ಮತ್ತೆ ಆರಂಭಿಸುವ ಬಗ್ಗೆ ಲಕ್ಷಾದ್ವೀಪ ಆಡಳಿತ ಭರವಸೆ ನೀಡಿದೆ. ಒಟ್ಟಾರೆ ಹೇಳೋದಾದ್ರೆ ಸದ್ಯಕ್ಕಂತೂ ಲಕ್ಷದ್ವೀಪಕ್ಕೆ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭದಿಂದ ಮಂಗಳೂರಿನ ಜನರಿಗಂತೂ ಸಾಕಷ್ಟು ಖುಷಿಯಾಗಿರೋದಂತು ನಿಜ.

Continue Reading

LATEST NEWS

ಈಜಲು ಹೋದ ಅಣ್ಣ ನೀರು*ಪಾಲು.! ತಂಗಿಯ ವೀಡಿಯೋದಲ್ಲಿ ಸೆರೆಯಾಯ್ತು ಅಣ್ಣನ ಸಾ*ವಿನ ಕೊನೆ ಕ್ಷಣ..!

Published

on

ಕೋಲಾರ: ಕೃಷಿ ಹೊಂಡದಲ್ಲಿ ಈಜುತ್ತಿರುವುದನ್ನು ತಂಗಿ ವೀಡಿಯೋ ಮಾಡುತ್ತಿದ್ದಾಗಲೇ ಸಹೋದರ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನಾಗವಾಳ ಗ್ರಾಮದಲ್ಲಿಈ ಘಟನೆ ನಡೆದಿದೆ.

swim death

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್(26 ವ) ಮೃತ ದುರ್ದೈವಿ. ಗೌತಮ್ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗಾವಾಳಕ್ಕೆ ಬಂದಿದ್ದರು. ಈ ವೇಳೆ ಕುಟುಂಬ ಸದಸ್ಯರು ಹಾಗೂ ತಂಗಿಯ ಜೊತೆ ಕೃಷಿ ಹೊಂಡದ ಬಳಿ ಹೋಗಿದ್ದಾರೆ.  ಅಲ್ಲಿ ತಂಗಿಯ ಬಳಿ ವೀಡಿಯೋ ಮಾಡಲು ಮೊಬೈಲ್ ಕೊಟ್ಟು ಹೊಂಡಕ್ಕೆ ಈಜಲು ಧುಮುಕಿದ್ದಾರೆ. ಸರಿಯಾಗಿ ಈಜಲು ಗೊತ್ತಿರದ ಗೌತಮ್ ನೀರಿಗೆ ಧುಮುಕಿದ್ದು, ಇತ್ತ ತಂಗಿ ಈಚೆ ಬಾ ಎಂದು ಕೂಗುವುದು ವೀಡಿಯೋದಲ್ಲಿ ರೆಕಾರ್ಡ್‌ ಆಗಿದೆ. ನೋಡು ನೋಡುತ್ತಿದ್ದಂತೆ ಗೌತಮ್ ನೀರಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾರೆ. ಇನ್ನು ಈ ವೀಡಿಯೋದಲ್ಲಿ ಗೌತಮ್ ನೀರಿನಲ್ಲಿ ಮುಳುಗುವ ದೃಶ್ಯ ಸೆರಯಾಗಿದೆ. ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

FILM

ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ‘ಗಬ್ಬರ್ ಸಿಂಗ್’ ತುಳು ಚಲನಚಿತ್ರ ಬಿಡುಗಡೆ

Published

on

ಉಡುಪಿ : ಬಹು ನಿರೀಕ್ಷಿತ ತುಳು ಚಿತ್ರ “ಗಬ್ಬರ್ ಸಿಂಗ್” ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ ಸಮಾರಂಭವೂ ನಡೆಯಿತು.

ತೊಟ್ಟಂ ಚರ್ಚ್ ನ ಧರ್ಮಗುರು ಫಾದರ್ ಡೆನಿಸ್ ಡೆಸಾ, ಶಂಕರಪುರದ ಸಾಯಿ ಈಶ್ವರ ಗುರೂಜಿ, ಮಿಯಾರ್ ಮಸೀದಿಯ ಮೌಲ್ವಿ  ಅಬುಲ್ ಹಸನ್, ರಾಜಕೀಯ ಮುಖಂಡರಾದ ಗೀತಾಂಜಲಿ ಸುವರ್ಣ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಸರಳಾ ಕಾಂಚನ್, ಶಿಲ್ಪಾ ಭಟ್, ಉಡುಪಿ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷ್ಣಮೂರ್ತಿ ಆಚಾರ್ಯ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಚಿತ್ರದ ಕಲಾವಿದರಾದ ವೀಣಾ ಎಸ್ ಶೆಟ್ಟಿ, ಸಂದೀಪ್ ಭಕ್ತ, ಆದ್ಯ, ಚಂದ್ರಹಾಸ್ ಕಪ್ಪೆಟ್ಟು, ಕಿಶೂ ಎಂಟರ್‌ಪ್ರೈಸಸ್ ವ್ಯವಸ್ಥಾಪಕ ನಿರ್ದೇಶಕರಾದ ಕಿಶೋರ್ ಗೊನ್ಸಾಲ್ವಿಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ಇದನ್ನೂ ಓದಿ : ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

‘ಗಬ್ಬರ್ ಸಿಂಗ್’ ಚಿತ್ರವು ಕೌಟುಂಬಿಕ ಅಂಶಗಳನ್ನು ಒಳಗೊಂಡಿರುವ ಆಕ್ಷನ್ ಥ್ರಿಲ್ಲರ್ ಆಗಿದೆ. ಕಥೆ ಮತ್ತು ಚಿತ್ರಕಥೆಯನ್ನು ಸತೀಶ್ ಪೂಜಾರಿ ಬಾರ್ಕೂರು ರಚಿಸಿದ್ದು, ಪ್ರದೀಪ್ ನಿರ್ದೇಶನವಿದೆ. ತುಳು ಚಿತ್ರರಂಗದ ಹೆಸರಾಂತ ನಟರುಗಳು ಈ ಚಿತ್ರದಲ್ಲಿ ಪಾತ್ರವಾಗಿದ್ದಾರೆ.

Continue Reading

LATEST NEWS

Trending