ಕೊರೊನಾ ಬಗ್ಗೆ ವಿಕೃತ ಬರಹ ಬರೆದು ವೈದ್ಯಕೀಯ ಲೋಕಕ್ಕೆ ಅಪಚಾರವೆಸಗಿದ ಪುತ್ತೂರಿನ ವೈದ್ಯ.!
ಪುತ್ತೂರು: ಎಲ್ಲೆಲ್ಲೂ ಕೊರೊನಾ ವೈರಸ್ ಬಗ್ಗೆಯೇ ಮಾತುಕತೆ ನಡೆಯುತ್ತಿದೆ. ಹಲವಾರು ಮೀಮ್ಸ್ ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಇದೀಗ ಜನಸೇವೆ ಮಾಡಬೇಕಾಗಿದ್ದ ಹಾಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿ, ಧೈರ್ಯ ತುಂಬಬೇಕಾಗಿದ್ದ ವೈದ್ಯರೇ, ಸಾಮಾಜಿಕ ಜಾಲತಾಣದಲ್ಲಿ ವಿಕೃತ ಬರಹ ಬರೆಯುವ ಮೂಲಕ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಹೌದು.. ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಾದ ಸುರೇಶ್ ಪುತ್ತೂರಾಯ ಅವರು “ಮೋದಿ ವಿರೋಧಿಗಳಿಗೆ ಕೊರೊನಾ ವೈರಸ್ ತಗುಲಲಿ” ಎಂಬ ಸಂದೇಶವನ್ನು ಸಾಮಾಜಿಕ ಜಾಲಾತಣದಲ್ಲಿ ಹರಿಯಬಿಟ್ಟು ವಿಕೃತಿ ಮೆರೆದಿದ್ದಾರೆ.
ಇದೀಗ ಈ ಬರಹದಿಂದ ಹಲವರು ಕೆಂಡಾಮಂಡಲವಾಗಿದ್ದಾರೆ. ಅಲ್ಲದೇ ಇದನ್ನು ಎಸ್.ಡಿ.ಪಿ.ಐ ಕೂಡ ಖಂಡಿಸಿದೆ.
‘ಪ್ರಸ್ತುತ ಇಡೀ ಜಗತ್ತೇ ಕೊರೊನಾ ವೈರಸ್ ನಿಂದ ಬಳಲಿ ಬೆಂಡಾಗಿದೆ.
ಈ ವೈರಸ್ ಅನ್ನು ತೊಲಗಿಸಲು ಜಾತಿ ಮತ ಬೇದವಿಲ್ಲದೆ ಇಡೀ ಜನ ಸಮೂಹವೇ ಅದರ ವಿರುದ್ಧ ಸಮರ ಸಾರಿರುವ ಸಮಯದಲ್ಲಿ ಒಬ್ಬ ವೈಧ್ಯಾದಿಕಾರಿಯಾದವರು,
ಕೊರೊನಾ ವೈರಸ್ ತನ್ನ ರಾಜಕೀಯ ವಿರೋಧಿಗಳಿಗೆ ಬರಲಿ ಎಂದು ಆಶಿಸುವುದು ಆತಂಕಕಾರಿ ಬೆಳವಣಿಗೆಯಾಗಿದೆ’.
ಆಡಳಿತ ನಡೆಸುವವರಲ್ಲಿ ಒಳ್ಳೆಯವರು ಕೆಟ್ಟವರು ಇರ್ತಾರೆ. ಉತ್ತಮ ಆಡಳಿತ ನಡೆಸುವವರನ್ನ ಜನರು ಸ್ವೀಕರಿಸ್ತಾರೆ.
ಹಾಗೆಯೇ ಜನ ವಿರೋಧಿ ಕೆಲಸ ಮಾಡುವವರನ್ನು ಜನಸಾಮಾನ್ಯರು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿರುವ ಹಕ್ಕುಗಳನ್ನು ಬಳಸಿ ಸಂವಿಧಾನ ಬದ್ದವಾಗಿ ಮತ್ತು ಕಾನೂನು ಬದ್ಧ ರೀತಿಯಲ್ಲಿ ವಿರೋಧಿಸುತ್ತಾರೆ ಇದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರಿಗಿರುವ ಹಕ್ಕುಗಳಾಗಿವೆ.
ಆದರೆ ಯಾರೊಂದಿಗೆ ಎಷ್ಟೇ ರಾಜಕೀಯ ಪರ-ವಿರೋಧ ಅಭಿಪ್ರಾಯಗಳಿದ್ದರು, ಆ ರಾಷ್ಟ್ರಕ್ಕೆ ಯಾವುದಾದರೂ ಗಂಡಾಂತರ ಬಂದಾಗ ರಾಜಕೀಯ ಬಿನ್ನಾಬಿಪ್ರಾಯಗಳನ್ನು ಮರೆತು ಒಂದಾಗಿ ಅದರ ವಿರುದ್ಧವಾಗಿ ಸಮರ ಸಾರಿ ಹೋರಾಟ ನಡೆಸುವುದು ಪ್ರತಿಯೊಂದು ರಾಷ್ಟ್ರದ ಕರ್ತವ್ಯವಾಗಿದೆ.
ಪ್ರಸ್ತುತ ಇಡೀ ಜಗತ್ತಿನಲ್ಲಿ ನಡೆಯುತ್ತಿರುವುದು ಕೂಡ ಇದೇ ಆಗಿದೆ.
ಆದರೆ ಇಲ್ಲೊಬ್ಬರು ಜನರ ಪ್ರಾಣ ಉಳಿಸಬೇಕಾದ ವೈದ್ಯದಿಕಾರಿ, ಈ ರೀತಿಯಾಗಿ ತನ್ನ ನೇತಾರನ ರಾಜಕೀಯ ವಿರೋಧಿಗಳಿಗೆ ಅಪಾಯಕಾರಿ ವೈರಸ್ ತಗುಲಲಿ ಎಂದು ಆಶಿಸುವುದು ಆತಂಕಕಾರಿ ಬೆಳವಣಿಗೆ ಮತ್ತು ವೈದ್ಯ ವೃತ್ತಿಗೆ ಎಸಗಿದ ಅಪಚಾರವಾಗಿದೆ.
ಇದೀಗ ಇದರಿಂದ ರೋಗಿಗಳು ಈ ವೈದ್ಯರ ಬಳಿಗೆ ಚಿಕಿತ್ಸೆಗೆ ತೆರಳಲು ಭಯ ಪಡುವಂತಾಗಿದೆ. ಹಾಗೂ ಈತನ ಚಿಕಿತ್ಸಾ ಕ್ರಮವನ್ನು ಸಂಶಯದ ದೃಷ್ಟಿಯಿಂದ ನೋಡುವಂತಾಗಿದೆ.
ಆದ್ದರಿಂದ ಈ ವೈದ್ಯನನ್ನು ವೈದ್ಯಕೀಯ ಸೇವೆಯಿಂದ ವಜಾಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಸ್.ಡಿ.ಪಿ.ಐ ಪುತ್ತೂರು ಅದ್ಯಕ್ಷರಾದ ಸಿದ್ದೀಕ್ ಕೆ.ಎ ಆಗ್ರಹಿಸಿದ್ದಾರೆ.
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.
ಮಂಗಳೂರು/ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಯ ಕಾರು ಚಾಲಕ ನೇ*ಣಿಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ(25) ಆತ್ಮಹ*ತ್ಯೆ ಮಾಡಿಕೊಂಡವರು. ಸುನಿಲ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಾಸಕ ಚಂದ್ರು ಲಮಾಣಿ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಸುನೀಲ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಆತ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ . ಮನೆ ಕಟ್ಟುವ ವಿಚಾರದಲ್ಲಿ ಸಹೋದರರ ನಡುವೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಸುನಿಲ್ ಆತ್ಮಹ*ತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ನೀವು ಚಿಕ್ಕವರಾಗಿರಲಿ ಅಥವಾ ವಯಸ್ಸಾದವರಾಗಿರಲಿ ಸಿಹಿತಿಂಡಿ ಸೇವಿಸಿದ ನಂತರ ಹಲ್ಲುಗಳನ್ನ ಸ್ವಚ್ಛಗೊಳಿಸುವಲ್ಲಿನ ಅಜಾಗರೂಕತೆಯು ಹಲ್ಲುಗಳಿಗೆ ಸೋಂಕು ತಗುಲಿಸಬಹುದು. ಇದು ಇಡೀ ಹಲ್ಲನ್ನು ಹಾನಿಗೊಳಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ದಂತವೈದ್ಯರ ಬಳಿಗೆ ಹೋಗುತ್ತಾರೆ ಮತ್ತು ಆಗಾಗ್ಗೆ ಹಲ್ಲುಗಳನ್ನ ಕೀಳಬೇಕಾಗುತ್ತದೆ. ಯಾಕಂದ್ರೆ, ಇದು ಇತರ ಹಲ್ಲುಗಳಿಗೆ ಹಾನಿ ಮಾಡುವ ಅಪಾಯವನ್ನ ಹೆಚ್ಚಿಸುತ್ತದೆ.
ಇಂದಿಗೂ ಸಹ ನಾವು ನಮ್ಮ ಹಿರಿಯರ ಹಳೆಯ ಪರಿಹಾರಗಳನ್ನ ಅನುಸರಿಸುವ ಮೂಲಕ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು. ಇಂದು ನಾನು ನಿಮಗೆ ಅಂತಹ ಮನೆಮದ್ದನ್ನ ಹೇಳಲಿದ್ದೇನೆ, ಅದನ್ನು ಬಳಸಿಕೊಂಡು ನೀವು ದಂತವೈದ್ಯರ ಬಳಿಗೆ ಹೋಗದೆ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು.
ಚಾಕೊಲೇಟ್ ತಿನ್ನುವುದರಿಂದ ಮಕ್ಕಳ ಹಲ್ಲುಗಳು ಹಾನಿಗೊಳಗಾಗುತ್ತವೆ. ಆಹಾರ ಅಥವಾ ಸಿಹಿತಿಂಡಿಗಳನ್ನು ಸೇವಿಸಿದ ನಂತರ ನಾವು ತೊಳೆಯುವುದಿಲ್ಲ. 10 ರಿಂದ 12 ವರ್ಷ ವಯಸ್ಸಿನಲ್ಲಿ, ಕುಳಿಗಳಿಂದಾಗಿ ಮಕ್ಕಳ ಹಲ್ಲುಗಳು ಕ್ಷೀಣಿಸಲು ಪ್ರಾರಂಭಿಸುತ್ತವೆ.
ಇದನ್ನು ತಡೆಗಟ್ಟಲು ಸುಲಭ ಮಾರ್ಗವಿದೆ. ಯಾರಿಗಾದರೂ ಹಲ್ಲಿನಲ್ಲಿ ಕುಳಿ ಇದ್ದರೆ, ನೀವು ಅದನ್ನು ಮನೆಯಲ್ಲಿಯೇ ತೆಗೆದುಹಾಕಬಹುದು. ಮೊದಲಿಗೆ, ಈರುಳ್ಳಿ ಬೀಜಗಳನ್ನ ಮಾರುಕಟ್ಟೆಯಿಂದ ತರಬೇಕು. ನಂತರ ಬೆಂಕಿಯನ್ನ ಹೊತ್ತಿಸಿ ಕೆಂಡದ ಮೇಲೆ ಈರುಳ್ಳಿ ಬೀಜಗಳನ್ನ ಹಾಕಿ ಬಂದ ಹೊಗೆಯನ್ನ ಬಾಯಿಯಲ್ಲಿ ಶೇಖರಿಸಿ ನಂತ್ರ ಮುಚ್ಚಿ. ಈ ಪ್ರಕ್ರಿಯೆಯನ್ನ ಎರಡರಿಂದ ಮೂರು ಬಾರಿ ಮಾಡಿ. ಈಗ ನಿಮ್ಮ ಬಾಯಿಯಲ್ಲಿ ನೀರು ಹಾಕಿಕೊಂಡು ಮುಕ್ಕಳಿಸಿ ಆ ಬಟ್ಟಲಿನಲ್ಲಿ ಉಗುಳಿ. ಈಗ ಆ ಬಟ್ಟಲಿನಲ್ಲಿರುವ ನೀರಿನಲ್ಲಿ ಎಲ್ಲಾ ಹುಳುಗಳು ಗೋಚರಿಸುತ್ತವೆ.