ಲಾಕ್ ಡೌನ್ ಆದೇಶ ಗಾಳಿಗೆ ತೂರಿ ತಮಿಳುನಾಡಿನಿಂದ ಕಡಬಕ್ಕೆ ಬೈಕ್ ನಲ್ಲಿ ಬಂದ ಕುಟುಂಬ.!
ಲಾಕ್ ಡೌನ್ ಆದೇಶ ಗಾಳಿಗೆ ತೂರಿ ತಮಿಳುನಾಡಿನಿಂದ ಕಡಬಕ್ಕೆ ಬೈಕ್ ನಲ್ಲಿ ಬಂದ ಕುಟುಂಬ.!
ಕಡಬ: ಕೊರೊನಾ ವೈರಸ್ ಹಿನ್ನಲೆ ಎಲ್ಲೆಡೆ ಲಾಕ್ ಡೌನ್ ಹೇರಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಯಾರೂ ಕೂಡ ಎಲ್ಲೆಂದರಲ್ಲಿ ಸಂಚರಿಸುವಂತಿಲ್ಲ.
ಸುಖಾಸುಮ್ಮನೆ ಮನೆಬಿಟ್ಟು ಆಚೆ ಬರುವಂತಿಲ್ಲ. ಇಂತಹ ಪರಿಸ್ಥಿತಿಯ ನಡುವೆ ತಮಿಳುನಾಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಅದೂ ಬೈಕ್ ನಲ್ಲಿ ಆಗಮಿಸಿರುವ ಘಟನೆ ನಡೆದಿದೆ.
ಈಗಾಗಲೇ ತಮಿಳುನಾಡಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆಯಲ್ಲಿರುವಾಗಲೇ ಕಡಬ ತಾಲೂಕಿನ ಐತೂರು ಗ್ರಾಮಕ್ಕೆ ತಮಿಳುನಾಡಿನಿಂದ ಒಂದು ಕುಟುಂಬ ಬೈಕ್ ಮೂಲಕ ಆಗಮಿಸಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಒಂದು ಕುಟುಂಬ ತಂದೆ ತಾಯಿ ಸೇರಿದಂತೆ ಇಬ್ಬರು ಮಕ್ಕಳು ತಮಿಳುನಾಡಿನಿಂದ ಕಡಬಕ್ಕೆ ಬೈಕ್ ನಲ್ಲಿ ಮೆಡಿಕಲ್ ಎಮರ್ಜೆನ್ಸಿ ಸ್ಟಿಕ್ಕರ್ ಹಾಕಿಕೊಂಡು ಬಂದಿರುವುದು ವಿಶೇಷ.
ಇದೀಗ ಈ ಘಟನೆ ರಾಜ್ಯದ ಗಡಿ ಭಾಗದಲ್ಲಿ ಸರಿಯಾದ ರೀತಿ ತಪಾಸಣೆ ನಡೆಸಲಾಗುತ್ತಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ.
ಜನರಿಗೆ ಲಾಕ್ ಡೌನ್ ಹೇರಿ ಮನೆಯಲ್ಲಿ ಕುರಿಸಿರುವ ಜಿಲ್ಲಾಡಳಿತ, ಗಡಿ ಪ್ರದೇಶದಲ್ಲಿ ಬೇಕಾಬಿಟ್ಟಿ ತಪಾಸಣೆ ನಡೆಸುತ್ತಿದೆ ಎನ್ನುವುದಕ್ಕೆ ಈ ಘಟನೆ ಒಂದೊಳ್ಳೆ ಉದಾಹರಣೆಯಾಗಿದೆ.
ತಂದೆ, ತಾಯಿ ಮತ್ತು 2 ಮಕ್ಕಳು ಇಂದು ಬೈಕಿನಲ್ಲಿ ತಮಿಳುನಾಡಿನ ಕೋಯಂಮುತ್ತೂರಿನಿಂದ ಕರ್ನಾಟಕಕ್ಕೆ ಬಂದಿದ್ದಾರೆ.
ಇವರು ಈ ರೀತಿ ಆಗಮಿಸುವಾಗ ಪೋಲೀಸರು ಎಲ್ಲೂ ತಪಾಸಣೆಗೆ ಒಳಪಡಿಸಿಲ್ಲವೇ ಎಂಬುದು ಆಶ್ಚರ್ಯಕರವಾದ ವಿಚಾರ ಆಗಿದೆ.
ನೂರಾರು ಕಿಮೀ ಮಕ್ಕಳ ಸಮೇತ ಇವರು ಮೆಡಿಕಲ್ ಎಮರ್ಜೆನ್ಸಿ ಸ್ಟಿಕ್ಕರ್ ಹಾಕಿಕೊಂಡು ಬಂದಿರುವ ಬಗ್ಗೆ ತನಿಖೆಯಾಗಬೇಕು ಎಂಬುದಾಗಿ ಇದೀಗ ಸ್ಥಳೀಯ ಕಾಲೋನಿ ನಿವಾಸಿಗಳು ಆಗ್ರಹಿಸಿದ್ದಾರೆ.
ಸದ್ಯ ಈ ಓಟೆಕಜೆ ಕಾಲೋನಿಯಲ್ಲಿ ಸುಮಾರು 40 ಕುಟುಂಬಗಳು ವಾಸಿಸುತ್ತಿದ್ದು, ಕಾಲನಿಯಲ್ಲೂ ಈಗ ಭಯದ ವಾತಾವರಣ ಸೃಷ್ಟಿಯಾಗಿದೆ.
FILM
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು, ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.
ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
LATEST NEWS
ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?
ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.
ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.
ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.
ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್ಟೈಮ್ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.
ಈ ಸೀರಿಯಲ್ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್ ತಂಡ ಸಂತಸ ಹಂಚಿಕೊಂಡಿದೆ.