Home ಉಡುಪಿ ಉಡುಪಿ ಪೂರ್ಣಪ್ರಜ್ಞ ಕಾಲೇಜು ಸಮೀಪ ಬೆಂಕಿ ಅವಘಡ: ಜೆರಾಕ್ಸ್ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲು

ಉಡುಪಿ ಪೂರ್ಣಪ್ರಜ್ಞ ಕಾಲೇಜು ಸಮೀಪ ಬೆಂಕಿ ಅವಘಡ: ಜೆರಾಕ್ಸ್ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲು

ಉಡುಪಿ ಪೂರ್ಣಪ್ರಜ್ಞ ಕಾಲೇಜು ಸಮೀಪ ಬೆಂಕಿ ಅವಘಡ: ಜೆರಾಕ್ಸ್ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲು

ಉಡುಪಿ: ಉಡುಪಿ ನಗರದ ಪೂರ್ಣಪ್ರಜ್ಞ ಕಾಲೇಜು ಸಮೀಪ ಬೆಂಕಿ ಅವಘಡ ಸಂಭವಿಸಿದೆ. ಕಾಲೇಜಿನ ಮುಂಭಾಗದಲ್ಲಿರುವ ಸಂಪರ್ಕ ಜೆರಾಕ್ಸ್ ಅಂಗಡಿಯಲ್ಲಿ ಸಂಜೆ ಇದ್ದಕ್ಕಿದ್ದಂತೆ ಬೆಂಕಿ ತನ್ನ ಕೆನ್ನಾಲಗೆಯನ್ನು ಚಾಚಿತ್ತು.

ಸಂಜೆ ಏಳು ಗಂಟೆ ಸುಮಾರಿಗೆ ಜೆರಾಕ್ಸ್ ಅಂಗಡಿಯನ್ನು ಬಂದ್ ಮಾಡಿ ಮಾಲೀಕರು ಮನೆಗೆ ಹೋಗಿದ್ದರು.

ಈ ಸಂದರ್ಭ ಶಾರ್ಟ್ ಸರ್ಕ್ಯೂಟ್ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದಲ್ಲಿದ್ದವರು ಕೂಡಲೇ ಪೊಲೀಸ್ ಠಾಣೆಗೆ ಮತ್ತು ಅಗ್ನಿಶಾಮಕ ಠಾಣೆಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕದಳ ಬಂದು ಬೆಂಕಿ ನಂದಿಸುವ ಕಾರ್ಯವನ್ನು ನಡೆಸಿದೆ ಮೇಲ್ನೋಟಕ್ಕೆ ಇದು ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದು ಎನ್ನಲಾಗಿದೆ.

ಜೆರಾಕ್ಸ್ ಅಂಗಡಿಯಲ್ಲಿರುವ ಮಶೀನ್ ಗಳು ಹಾಗೂ ಅಗಾಧ ಪ್ರಮಾಣದ ಖಾಲಿ ಪೇಪರ್ ಗಳು, ಕೆಲವು ಪ್ರಮುಖ ದಾಖಲೆಗಳು ಸುಟ್ಟು ಕರಕಲಾಗಿದೆ.

ಅಗ್ನಿಶಾಮಕ ದಳದ ಕಾರ್ಯಾಚರಣೆಗೆ ಸ್ಥಳೀಯ ಯುವಕರು ಕೂಡ ಕೈಜೋಡಿಸಿದ್ದಾರೆ. ಸದ್ಯ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisment -

RECENT NEWS

ದೇವರಗುಡ್ಡದಲ್ಲಿ ಯುವಕನ ಹತ್ಯೆ ಪ್ರಕರಣ ಹದಿಹರೆಯದ ಐವರು ಆರೋಪಿಗಳ ಬಂಧನ

ದೇವರಗುಡ್ಡದಲ್ಲಿ ಯುವಕನ ಹತ್ಯೆ ಪ್ರಕರಣ ಹದಿಹರೆಯದ ಐವರು ಆರೋಪಿಗಳ ಬಂಧನ ಮಂಗಳೂರು :  ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಕಾರು ದೇವರ ಗುಡ್ಡೆ ಬಳಿ ನಡೆದ ಎಕ್ಕಾರು ನಿವಾಸಿ ಕೀರ್ತನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 25ರಿಂದ ಎಸ್‌ ಎಸ್ ಎಲ್‌ ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಜೂನ್ 25ರಿಂದ ಎಸ್‌ ಎಸ್ ಎಲ್‌ ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ :ಜೂನ್ 25ರಂದು ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತಾ ಪೂರ್ವಬಾವಿ ಸಭೆಯು ಈ ದಿನ...

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು 

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು  ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರದ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಹಾಗೂ ಕೋಟ ಸಮುದಾಯ ಆಸ್ಪತ್ರೆಯನ್ನು ತಾಲೂಕು...

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ ಉಳ್ಳಾಲ: ಕಳೆದೆರಡು ದಿನಗಳಿಂದ ಮುಂಗಾರು ಮಳೆ ತೀವ್ರವಾಗಿ ಕರಾವಳಿ ತೀರದಲ್ಲಿ ಸುರಿಯತೊಡಗಿದ್ದು, ಕಡಲ ತೀರದಲ್ಲೂ ಕಡಲ ಅಬ್ಬರ ಜೋರಾಗಿದೆ. ಪ್ರತೀ ವರ್ಷ ಕಡಲಕೊರೆತ ತೀವ್ರವಾಗಿರುವ ಮಂಗಳೂರು ಕ್ಷೇತ್ರದ ಉಳ್ಳಾಲ...