Connect with us

LATEST NEWS

ಶಾಲಾ ಪ್ರವಾಸಕ್ಕೆಂದು ಹೋಗಿದ್ದ ವಿದ್ಯಾರ್ಥಿನಿಗೆ ಮತ್ತು ಬರುವ ಔಷಧ ನೀಡಿ ಪ್ರಾಶುಪಾಲರಿಂದ ಅತ್ಯಾಚಾರ..!

Published

on

ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಹೊಸದೊಂದು ಹೀನಾಯ ಘಟನೆ ಸೇರಿಕೊಂಡಿದೆ.ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ಈ ಹೀನ ಕೃತ್ಯ ನಡೆದಿದೆ.

ಉತ್ತರ ಪ್ರದೇಶ : ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಹೊಸದೊಂದು ಹೀನಾಯ ಘಟನೆ ಸೇರಿಕೊಂಡಿದೆ.ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ಈ ಹೀನ ಕೃತ್ಯ ನಡೆದಿದೆ.

ಪ್ರವಾಸಕ್ಕೆಂದು ಹೋದ ವಿದ್ಯಾರ್ಥಿನಿ ಮೇಲೆ ಶಾಲಾ ಪ್ರಿನ್ಸಿಪಾಲ್ ಅಮಲು ಪದಾರ್ಥ ನೀಡಿ ಅತ್ಯಾಚಾರ ಮಾಡಿದ್ದಾನೆ.

ಪ್ರಾಂಶುಪಾಲರ ವಿರುದ್ಧ ಅದೇ ಶಾಲೆಯಲ್ಲಿ ಓದುತ್ತಿರುವ 11ನೇ ತರಗತಿಯ ವಿದ್ಯಾರ್ಥಿನಿ ದೂರು ದಾಖಲು ಮಾಡಿದ್ದಾಳೆ.

ನವೆಂಬರ್ 23ರಂದು ಈ ಘಟನೆ ನಡೆದಿದೆ. ಈ ಶಾಲೆಯ ಪ್ರಾಂಶುಪಾಲರು ಶಾಲೆಯ ಒಂಬತ್ತು ವಿದ್ಯಾರ್ಥಿಗಳನ್ನು ವೃಂದಾವನಕ್ಕೆ ಪ್ರವಾಸಕ್ಕೆಂದು ಕರೆದುಕೊಂಡು ಹೋಗಿದ್ದರು.

ಈ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ವಸತಿಗಾಗಿ ಹೋಟೆಲ್‌ನಲ್ಲಿ ಎರಡು ಕೊಠಡಿಗಳನ್ನು ತೆಗೆದುಕೊಂಡಿದ್ದರು.

ಒಂದು ಕೊಠಡಿಯಲ್ಲಿ ಎಂಟು ವಿದ್ಯಾರ್ಥಿಗಳು ಉಳಿದುಕೊಂಡಿದ್ದರೆ, ಇನ್ನೊಂದು ಕೊಠಡಿಯಲ್ಲಿ ಪ್ರಾಂಶುಪಾಲರು 11ನೇ ತರಗತಿ ವಿದ್ಯಾರ್ಥಿನಿ 17 ವರ್ಷದ ಬಾಲಕಿ ಉಳಿದುಕೊಂಡಿದ್ದರು ಎನ್ನಲಾಗಿದೆ.

ಈ ವೇಳೆ ಪ್ರಾಂಶುಪಾಲರು ವಿದ್ಯಾರ್ಥಿನಿಯ ಆಹಾರದಲ್ಲಿ ಮಾದಕ ವಸ್ತುವನ್ನು ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿದಾಗ, ಪರೀಕ್ಷೆಯಲ್ಲಿ ಅನುತ್ತೀರ್ಣ ಮಾಡುವ ಬೆದರಿಕೆ ಹಾಕಿದ್ದು ಅಲ್ಲದೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

LATEST NEWS

ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

Published

on

ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.


ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.

ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

LATEST NEWS

Trending