ವಿಟ್ಲ: ಬಾಡಿಗೆಗೆಂದು ಹೋದ ಆಟೋ ಚಾಲಕ ನಾಪತ್ತೆಯಾದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಧನರಾಜ್ ನಾಪತ್ತೆಯಾದವರು. ಆತನ ಆಟೋ ರಿಕ್ಷಾ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿದೆ. ನವೆಂಬರ್ 28 ರಂದು ಅವರು ಬಾಯಿಲದ ತನ್ನ ಮನೆಯಿಂದ ಅಟೋ ರಿಕ್ಷಾವನ್ನು ತೆಗೆದುಕೊಂಡು ಬೆಳಗ್ಗೆ ಹೊರಟಿದ್ದು, ವಾರ ಕಳೆದರೂ ಮನೆಗೆ ವಾಪಸ್ ಬಂದಿಲ್ಲ.
ಈ ಬಗ್ಗೆ ಸಂಬಂದಿಕರಲ್ಲಿ ,ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಹುಡುಕಾಡಿದಾಗ ಧನರಾಜ್‌ನ ರಿಕ್ಷಾ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದು ಆತನ ಮೊಬೈಲ್ ಸ್ವೀಚ್ ಆಫ್ ಬರುತ್ತಿದೆ. ಹಾಗಾಗಿ ಆತನನ್ನು ಪತ್ತೆ ಹಚ್ಚಿ ಕೊಡುವಂತೆ ಮನೆಯವರು ಠಾಣೆಗೆ ನೀಡಿದ ದೂರಿನಲ್ಲಿ ಕೋರಿದ್ದಾರೆ.
ಬಂಟ್ವಾಳ: ತುಳುನಾಡಿನ ವಧುವನ್ನು ಪಂಜಾಬಿಯ ವರನಿಗೆ ಕನ್ಯಾದಾನ ಮಾಡಿದ ಅಪರೂಪದ ಪ್ರಸಂಗವೊಂದು ಇತ್ತೀಚೆಗೆ ನಡೆಯಿತು. ತುಳುನಾಡಿನಲ್ಲಿ ನಡೆಯುವ ಅಳಿಯ ಕಟ್ಟಿನ ಮದುವೆಯನ್ನು ಪಂಜಾಬ್ ರಾಜ್ಯದ ಕುಟುಂಬವೊಂದು ಅಪ್ಪಿಕೊಂಡು ಒಪ್ಪಿಕೊಂಡಿರುವುದು ನಿಜಕ್ಕೂ ತುಳುನಾಡಿಗೆ ಹೆಮ್ಮೆ. ಬಡಗಬೆಳ್ಳೂರು ಗ್ರಾಮದ ಪರಿಮೊಗರು ನಿವಾಸಿ ಪ್ರಕಾಶ್ ಶೆಟ್ಟಿ ಅವರ ಪ್ರಥಮ ಪುತ್ರಿ ಪುಣ್ಯ ಅವರ ವಿವಾಹವು ಪಂಜಾಬ್ ರಾಜ್ಯದ ಸಂಜೀವ ಶರ್ಮ ಎಂಬವರ ಮಗ ಉತ್ಕರ್ಷ ಅವರ ಜೊತೆ ನ.27 ರಂದು ಪಂಜಾಬ್ ಲುದಿನಾದ ಅಂಬ್ರೋಸಿಯಾ ಗ್ರ್ಯಾಂಡ್ ರೆಸಾರ್ಟ್ ನಲ್ಲಿ ಸಂಭ್ರಮದಿಂದ ನಡೆಯಿತು.
ಉನ್ನತ ವಿದ್ಯಾಭ್ಯಾಸ ಉದ್ದೇಶದಿಂದ ಅಮೇರಿಕಾದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವೇಳೆ ಪರಿಚಯವಾದ ಇವರಿಬ್ಬರ ಸ್ನೇಹ ಮುಂದೆ ಸಾಗಿ ಮದುವೆ ಎಂಬ ಮೂರಕ್ಷರದ ಗಂಟು ಕಟ್ಟುವರೆಗೂ ತಲುಪಿತು. ಅಮೇರಿಕಾದ ವರನಿಗೆ ಅಥವಾ ವಧುವಿಗೆ ತುಳುನಾಡಿನ ವರ ಅಥವಾ ವಧು ಎಂಬ ಸಂಬಂಧಗಳು ಅನೇಕ ನಡೆದಿವೆ. ಅದು ದೊಡ್ಡ ಸಂಗತಿಯಾಗದೆ ಇರಬಹುದು. ಆದರೆ ಹೊರರಾಜ್ಯವಾದ ಪಂಜಾಬ್ ನ ವರ ಬಂಟ್ವಾಳದ ಬಂಟ ಸಮುದಾಯದ ವಧುವನ್ನು ತುಳುನಾಡಿನ ಅಳಿಯ ಕಟ್ಟು ಪ್ರಕಾರದ ಮದುವೆ ಮೂಲಕ ವರಿಸಿದ್ದಾನೆ ಎಂಬುದು ಉಲ್ಲೇಖನೀಯ ಅಂಶವಾಗಿದೆ.
ಅತ್ಯಂತ ಪುರಾತನವಾದ ತುಳುನಾಡಿನ ಅಳಿಯ ಕಟ್ಟಿನ ಸಂಪ್ರದಾಯ ಬದ್ದವಾದ ಮದುವೆಗೆ ಸಾಕ್ಷಿಯಾಗಿ, ಭೂಮಿ ಸಾಕ್ಷಿಯಾದ ಮದುವೆಯನ್ನು ಪಿ.ಕಿಶೋರ್ ಭಂಡಾರಿ ಬಡಗಬೆಳ್ಳೂರು ಇವರ ಮಾರ್ಗದರ್ಶನದಲ್ಲಿ ಮಂಗಳೂರಿನ ರಾಕೇಶ್ ಸಾಲಿಯಾನ್ ಪಚ್ಚನಾಡಿ ಅವರು ನೆರವೇರಸಿಕೊಟ್ಟರು.
ಬಂಟ್ವಾಳ: ನಾಲ್ಕು ಮದುವೆಯಾಗಿ, ಐದನೇ ಮದುವೆಗೆ ತಯಾರಾಗುತ್ತಿದ್ದ ಭೂಪನೊಬ್ಬನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ನಾಲ್ಕನೇ ಮದುವೆಯಾದ ಪತ್ನಿಗೆ ತ್ರಿವಳಿ ತಲಾಖ್ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹ*ಲ್ಲೆ ನಡೆಸಿ ಮನೆಯಿಂದ ಹೊರದಹಾಕಿದ್ದ ರಾ*ಕ್ಷಸೀಯ ಕೃ*ತ್ಯವೊಂದು ಬಂಟ್ವಾಳ ತಾಲೂಕಿನ ಗೂಡಿನಬಳಿಯಲ್ಲಿ ಬುಧವಾರ (ನ.27) ರಾತ್ರಿ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಪತ್ನಿ ನೀಡಿರುವ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದುವೆಯಾಗುವುದನ್ನೇ ಕಸುಬಾಗಿಸಿಕೊಂಡ ನಟೋರಿಯಸ್ ಬಹುಪತ್ನಿ ವಲ್ಲಭನನ್ನು ಮಾಣಿ ರಫೀಕ್ ಯಾನೆ ಮಹಮ್ಮದ್ ರಫೀಕ್(42)ನನ್ನು ಬಂಟ್ವಾಳ ಪೊಲೀಸರು ಬಲೆಗೆ ಕೆಡವಿದ್ದಾರೆ. ಆರೋಪಿ ಮಾಣಿ ರಫೀಕ್ ಈಗಾಗಲೇ ನಾಲ್ಕು ಮದುವೆಯಾಗಿದ್ದು, ಒಂದೆರಡು ವರ್ಷ ಜೊತೆಯಾಗಿ ಜೀವನ ಮಾಡಿ ಮಕ್ಕಳನ್ನು ಕರುಣಿಸಿದ ಬಳಿಕ ವಿಚ್ಚೇದನ ನೀಡಿ ಪರಾರಿಯಾಗುತ್ತಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ.
ನಾಲ್ಕನೇ ಪತ್ನಿಯಿಂದ ದೂರು ದಾಖಲು :
‘ನಿನ್ನೆ ( ನ.26) ಸಂಜೆ ಐದು ಗಂಟೆ ಸುಮಾರಿಗೆ ರಫೀಕ್ ನ ಮನೆಗೆ ನಾನು ಹೋಗಿದ್ದೇನೆ. ಹೋದಂತ ಸಂದರ್ಭದಲ್ಲಿ ಆರೋಪಿಯಾದ ರಫೀಕ್ ಅ*ವಾಚ್ಯ ಶಬ್ದಗಳಿಂದ ಬೈದು, ಹ*ಲ್ಲೆ ನಡೆಸಿದ್ದಲ್ಲದೇ ಮಗುವನ್ನು ಕೊಂ*ದು ಹಾಕುತ್ತೇನೆಂದು ಬೆದರಿಕೆ ಹಾಕಿದ್ದಲ್ಲದೇ, ತಾಯಿಯ ಮಡಿಲಲ್ಲಿದ್ದ ಮಗುವನ್ನು ಎಳೆದು ಎಸೆಯಲು ಮುಂದಿಗಿದ್ದಾನೆ’ ಎಂದು ಸಂತ್ರಸ್ತ ಪತ್ನಿ ಆರೋಪಿಸಿದ್ದಾಳೆ. ಅಲ್ಲದೇ ತ್ರಿವಳಿ ತಲಾಖ್ ಎಂದು ಹೇಳಿ ಕುತ್ತಿಗೆಗೆ ಕೈಹಾಕಿ ಮನೆಯಿಂದ ಹೊರಗೆ ದಬ್ಬಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾಳೆ. ಆಕೆಯ ಮೈಮೇಲಿದ್ದ ಚಿನ್ನಾಭರಣಗಳನ್ನೂ ಕಿತ್ತುಕೊಂಡಿರುವ ಬಗ್ಗೆ ದೂರಿನಲ್ಲಿ ವಿವರಿಸಿದ್ದಾರೆ.
ಮಾಣಿ ರಫೀಕ್ ಯಾರು ? ಹಿನ್ನಲೆ ಏನು ?
ಮಾಣಿ ರಫೀಕ್ ಯಾನೆ ನಟೋರಿಯಸ್ ಕಿರಾತಕ. ಮಾಣಿಯಿಂದ ವಲಸೆ ಬಂದ ರಫೀಕ್ ವಿಟ್ಲ ಸಮೀಪದ ಮಂಗಲಪದವು ಎಂಬಲ್ಲಿ ಮನೆ ಕಟ್ಟಿಕೊಂಡಿದ್ದ. ಅಲ್ಲಿಯೂ ನೆರೆಹೊರೆಯವರ ಜೊತೆ ಗಲಾಟೆ, ಗದ್ದಲ ಎಬ್ಬಿಸಿ ಕೊನೆಗೆ ಮನೆ ಮಾರಾಟ ಮಾಡಿ ಪಾಣೆಮಂಗಳೂರು ಸಮೀಪದ ಗೂಡಿನಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಅಲ್ಲೂ ಕೂಡಾ ಪರಿಸರದ ಶಾಂತಿಪ್ರಿಯ ನಿವಾಸಿಗಳ ಜೊತೆ ತಕರಾರು ಎಬ್ಬಿಸಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಜನ್ಮ ನೀಡಿದ ತಾಯಿಯ ಮೇಲೆಯೇ ಮನಬಂದಂತೆ ಹ*ಲ್ಲೆ ನಡೆಸಿ ಆಕೆಯ ಚಿನ್ನಾಭರಣ ಕಿತ್ತು ಕಾಲಿನಿಂದ ತುಳಿದು ಮನೆಯಿಂದ ಹೊರದಬ್ಬಿ ರಾ*ಕ್ಷಸೀಯ ಕೃ*ತ್ಯ ನಡೆಸಿದ್ದ. ಈತನ ಹ*ಲ್ಲೆ, ಕಿರುಕುಳದಿಂದ ಮನನೊಂದ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಲ್ಲದೇ ಠಾಣೆಯಲ್ಲೂ ಹೆತ್ತ ತಾಯಿಯ ಮೇಲೆ ಮನಬಂದಂತೆ ಅ*ವಾಚ್ಯ ಶಬ್ದಗಳಿಂದ ನಿಂದಿಸಿ ರಾ*ಕ್ಷಸೀ ಕೃ*ತ್ಯ ನಡೆಸಿರುವುದು ಪ್ರತಿಯೊಬ್ಬನಿಗೂ ತಿಳಿದ ವಿಚಾರವಾಗಿದೆ. ಅದಾದ ಬಳಿಕ ಅನಾರೋಗ್ಯದಿಂದ ಮೃ*ತಪಟ್ಟ ಮೊದಲ ಪತ್ನಿಯ ಹಿರಿಮಗಳ ಮೇಲೆ ಹ*ಲ್ಲೆ ನಡೆಸಿ ಮನೆಯಿಂದ ಹೊರದಬ್ಬಿದ್ದಾನೆ. ಇದೀಗ ಆಕೆಯೂ ತನ್ನ ಅಜ್ಜಿ ಜೊತೆ ಮಂಗಲಪದವು ಬಳಿ ಬಾಡಿಗೆ ಮನೆಯಲ್ಲಿದ್ದಾರೆ।
ಇದೀಗ ನಾಲ್ಕನೇ ಪತ್ನಿಯ ಚಿನ್ನಾಭರಣವನ್ನೆಲ್ಲಾ ಕಿತ್ತುಕೊಂಡು ಬಳಿಕ ಆಕೆಯ ಮಗುವಿನ ಮೇಲೆ ಹ*ಲ್ಲೆ ನಡೆಸಿ ಹೊರದಬ್ಬಿದ್ದ ಕಿರಾತಕನ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಸೆಕ್ಷನ್ BNS/-85,86,352,351(1),115(2) ರಲ್ಲಿ ಪ್ರಕರಣ ದಾಖಲಾಗಿದೆ.