Saturday, May 15, 2021

ಉಡುಪಿ ಜಿಲ್ಲೆಯಾದ್ಯಂತ ಸುರಿದ ಭಾರೀ ವರ್ಷ ಧಾರೆ.ಸಂತೆಕಟ್ಟೆ ಬಳಿ ನೆಲಕ್ಕುರುಳಿದ ಬೃಹತ್ ಮರ..!

ಉಡುಪಿ : ಜಿಲ್ಲೆಯ ಹಲವೆಡೆ ಇಂದು  ಭಾರೀ ಮಳೆಯಾಗಿದೆ. ಇದರಿಂದಾಗಿ ಬಿರುಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೂ ಇಳೆಗೂ ತಂಪೆರೆದಂತಾಗಿದೆ. ಕಾರ್ಕಳ ಮತ್ತು ಹೆಬ್ರಿಯಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿತ್ತು.ಗಾಳಿ ಮತ್ತು ಸಿಡಿಲಿನಿಂದ ಕೂಡಿದ ಮಳೆಯ ಆರ್ಭಟ ಕೆಲಕಾಲ ಜನಜೀವನವನ್ನು ಅಸ್ತವ್ಯಸ್ತಗೊಳಿಸಿತು.ಇನ್ನು ಗಾಳಿ ಮಳೆಗೆ ಬ್ರಹ್ಮಾವರ ಹೆಬ್ರಿ ಸಂಪರ್ಕ ರಸ್ತೆಯ ಸಂತೆಕಟ್ಟೆ ಬಳಿ  ಬೃಹತ್ ಮರವೊಂದು ಉರುಳಿಬಿದ್ದು ಕೆಲಕಾಲ ಸಂಚಾರಕ್ಕೆ ಆಡಚಣೆಯುಂಟಾಯಿತು.

ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಮುಂದುವರಿದಿದ್ದು, ರಾತ್ರಿಯೂ ಮಳೆಯಾಗುವ ಲಕ್ಷಣ ಗೋಚರಿಸುತ್ತಿದೆ. ಉಡುಪಿ, ಕಾರ್ಕಳ, ಬ್ರಹ್ಮಾವರ, ಕುಂದಾಪುರ ತಾಲೂಕಿನಾದ್ಯಂತ  ಗುಡುಗು ಸಹಿತ ಮಳೆಯಾಗುತ್ತಿದೆ.

ಬ್ರಹ್ಮಾವರ ತಾಲೂಕಿನ ಸಂತೆಕಟ್ಟೆ ಬಳಿ ಭಾರೀ ಗಾತ್ರದ ಮರ ಉರುಳಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...