Connect with us

UDUPI

ಪುಷ್ಪಕಿರಣ್ ಚಿಕಿತ್ಸೆಗೆ ಸಹಾಯಹಸ್ತ ಚಾಚಿದ ಸೋಮೇಶ್ವರದ ರಕ್ತೇಶ್ವರಿ ಬಳಗ..

Published

on

ಪುಷ್ಪಕಿರಣ್ ಚಿಕಿತ್ಸೆಗೆ ಸಹಾಯಹಸ್ತ ಚಾಚಿದ ಸೋಮೇಶ್ವರದ ರಕ್ತೇಶ್ವರಿ ಬಳಗ..

ಮಂಗಳೂರು:ಸೋಮೇಶ್ವರ ನೆಹರುನಗರ ನಿವಾಸಿ ಪುಷ್ಪಕಿರಣ್ (51)ಅವರು ಎರಡು ತಿಂಗಳ ಹಿಂದಷ್ಟೆ ಗ್ಯಾಂಗ್ರಿನ್ ನಿಂದ ಬಲಗಾಲನ್ನು ಕಳಕೊಂಡಿದ್ದು, ಆ ಕಾಲಿನ ಗಾಯ ಮಾಸೋ ಮುನ್ನವೇ ಅವರ ಎಡಗಾಲಲ್ಲೂ ಗಾಯ ಕಾಣಿಸಿಕೊಂಡಿದ್ದು ಬಾಡಿಗೆ ಮನೆಯಲ್ಲಿರೋ ಬಡಕುಟುಂಬಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈಗಾಗಲೇ ಅನೇಕ ಸಂಘ ,ಸಂಘಟನೆಗಳು ಸಹೃದಯಿ ದಾನಿಗಳು ಅಸಹಾಯಕ ಕುಟುಂಬಕ್ಕೆ ನೆರವು ನೀಡಿದ್ದಾರೆ.

ಕಿರಣ್ ಅವರಿಗೆ ಇದೀಗ ತಾಲೂಕು ಪಂಚಾಯತ್ ಸದಸ್ಯರಾಗಿರುವ ರವಿಶಂಕರ್ ಸೋಮೇಶ್ವರ ಅವರ ಮುತುವರ್ಜಿಯಿಂದ ಸೋಮೇಶ್ವರದ ರಕ್ತೇಶ್ವರಿ ಬಳಗದವರೂ 10,000 ರೂಪಾಯಿ ಧನಸಹಾಯ ನೀಡಿದ್ದು ಅವರೆಲ್ಲರಿಗೂ ತಾಯಿ ರಕ್ತೇಶ್ವರಿಯು ಒಲಿತನ್ನು ಮಾಡಲಿ.ಬಡಕುಟುಂಬದ ಮೇಲೆ ಸಮಾಜದ ಸಹೃದಯಿಗಳ ದಯೆ ಇರಲಿ.

Account No.-50047654378
IFSC CODE-ALLA0211907
NAME -PUSHPAKIRAN
AllAHABAD BANK
BRANCH -PANDESHWAR
Mobile: 8317459874

DAKSHINA KANNADA

ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..

Published

on

ಉಡುಪಿ: ಬಡಗುತಿಟ್ಟು ಯಕ್ಷಗಾನ ಲೋಕದ ಶ್ರೇಷ್ಠ ಭಾಗವತ, ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67ವ) ಇಹಲೋಕ ತ್ಯಜಿಸಿದ್ದಾರೆ. ಅಲ್ಪಕಾಲದಿಂದ ಅಸೌಖ್ಯದಿಂದಿದ್ದ ಇವರು ಬೆಂಗಳೂರಿನಲ್ಲಿರುವ ಪುತ್ರನ  ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಮನೆಯಲ್ಲಿ ಇಂದು(ಎ.25) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಳಿಂಗ ನಾವುಡರ ಬಳಿಕ ಮಧುರ ಕಂಠದಿಂದ ಹೆಚ್ಚು ಜನಪ್ರಿಯತೆಗಳಿಸಿದ್ದ ಕೀರ್ತಿ ಅವರದ್ದಾಗಿತ್ತು.

bharadeshwara

ಭಾಗವತಿಕೆಯಲ್ಲಿ ಗಾನ ಕೋಗಿಲೆ ಎನಿಸಿಕೊಂಡ ಧಾರೇಶ್ವರ:

ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳದಲ್ಲಿ ನಿವೃತ್ತಿ ಹೊಂದಿದ್ದರು. ಆರಂಭದಲ್ಲಿ ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಭಾಗವತರಾಗಿ ಪ್ರಖ್ಯಾತಿಗೊಂಡಿದ್ದರು. ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ  ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು.

ಮುಂದೆ ಓದಿ..; ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು. ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗ, ಯಕ್ಷ ಅಭಿಮಾನಿಗಳನ್ನು ಅಗಲಿದ್ದಾರೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Continue Reading

LATEST NEWS

ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!

Published

on

ಕೋಟ : ಈತ ಅಂತಿಂಥ ಕಳ್ಳನಲ್ಲ..ಖತರ್ನಾಕ್ ಕಳ್ಳ! ಇತ್ತೀಚೆಗೆ ಕೇರಳದಿಂದ ಭಾರೀ ಮೊತ್ತದ ಚಿನ್ನಾಭರಣವನ್ನು ಕಳ್ಳತನ ಮಾಡಿ ಬಿಹಾರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಉಡುಪಿ ಜಿಲ್ಲೆಯ ಕೋಟ ಪೊಲೀಸರ ಅತಿಥಿಯಾಗಿದ್ದಾನೆ. ಬಿಹಾರ ಮೂಲದ ಮಹಮ್ಮದ್ ಇರ್ಫಾನ್‌ ಬಂಧಿತ ಆರೋಪಿ. ಬ್ರಹ್ಮಾವರ ತಾಲೂಕು ಕೋಟ ಮೂರ್ಕೈನಲ್ಲಿ ಶನಿವಾರ ರಾತ್ರಿ ಕೋಟ ಪೊಲೀಸರು ನಡೆಸಿದ ಕಾರ್ಯಾಚರಣೆ ಸಂದರ್ಭ ಈತ ಬಲೆಗೆ ಬಿದ್ದಿದ್ದಾನೆ. ವಿಚಾರಣೆ ವೇಳೆ ಈತನ ಕರಾಮತ್ತು ಕೇಳಿ ಪೊಲೀಸರೇ ಶಾಕ್ ಗೊಳಗಾಗಿದ್ದಾರೆ.


‘ಕೋಟಿ’ ಮೇಲೆ ಕಣ್ಣು:

ಇರ್ಫಾನ್ ಸಾಮಾನ್ಯ ಕಳ್ಳನಲ್ಲ. ಈತನ ವಿರುದ್ಧ 13 ರಾಜ್ಯಗಳಲ್ಲಿ ಹಲವಾರು ಕಳ್ಳತನ ಆರೋಪಗಳಿವೆ. ಇದರ ಜತೆಗೆ ಹಲವಾರು ಕುತೂಹಲಕಾರಿ ವಿಷಯಗಳು ಹೊರಬಿದ್ದಿವೆ. ಈತ ಈಗಾಗಲೇ ಹಲವು ಬಾರಿ ಪೊಲೀಸರ ಅತಿಥಿಯಾಗಿದ್ದು, ಸಿನಿಮಾ ನಟರು, ರಾಜಕಾರಣಿಗಳು, ಗುತ್ತಿಗೆದಾರರು ಸೇರಿದಂತೆ ಅತ್ಯಂತ ಶ್ರೀಮಂತರ ಮನೆಗಳನ್ನೇ ಹೊಂಚುಹಾಕಿ ಕಳ್ಳತನ ಮಾಡುತ್ತಿದ್ದ.

ಒಮ್ಮೆ ಕಣ್ಣಿಟ್ಟರೆ ಸಾಕು! ಎಷ್ಟೇ ದಿನಗಳಾದರೂ ಕಾದು ತನ್ನ ಕೈಚಳಕ ತೋರುತ್ತಿದ್ದ. ಹೆಚ್ಚಿನ ಬಾರಿ ಓರ್ವನೇ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದ ಹಾಗೂ ಪ್ರತಿ ಬಾರಿಯೂ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣಗಳನ್ನೇ ಲಪಟಾಯಿಸುತ್ತಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

‘ನನ್ನ ಬಗ್ಗೆ ಯೂಟ್ಯೂಬ್ ನೋಡಿ’ ಎಂದ ಖದೀಮ :

ಕೋಟ್ಯಂತರ ರೂಪಾಯಿ ಕಳವುಗೈದು ಬಂಧಿಸಲ್ಪಟ್ಟ ಇರ್ಫಾನ್ ವಿಚಾರಣೆಗಿಳಿದ ಪೊಲೀಸರಿಗೆ ಆತನ ಹೇಳಿಕೆ ಅಚ್ಚರಿ ಹುಟ್ಟಿಸಿತ್ತು. ‘ ನನ್ನ ಬಗ್ಗೆ ಮಾಹಿತಿ ಬೇಕಾದರೆ ಯೂಟ್ಯೂಬ್‌ನಲ್ಲಿ ಮಹಮ್ಮದ್ ಇರ್ಫಾನ್ ರೋಬಿನ್‌ಹುಡ್ ಎಂದು ಸರ್ಚ್ ಮಾಡಿ’ ಎಂದಿದ್ದನಂತೆ ಈ ಖದೀಮ. ಯೂಟ್ಯೂಬ್‌ನಲ್ಲಿ ಸರ್ಚ್ ಮಾಡಿದಾಗ ಈತನ ಬಗ್ಗೆ ಇರುವ ಹತ್ತಾರು ವೀಡಿಯೋಗಳು ಸಿಕ್ಕಿವೆ. ಅದರಲ್ಲಿ ಕಳ್ಳತನ ಹಾಗೂ ಕೋಟ್ಯಂತರ ರೂ. ಮೊತ್ತವನ್ನು ಜನರಿಗೆ ಹಂಚುವ ಕುರಿತು ವಿಚಾರಗಳಿವೆ. ಇವೆಲ್ಲವನ್ನು ನೋಡಿದ ಪೊಲೀಸರಿಗೆ ಶಾಕ್ ಆಗಿದ್ದು ಸುಳ್ಳಲ್ಲ.

Continue Reading

LATEST NEWS

ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

Published

on

ಕುಂದಾಪುರ : ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿ*ಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ನಡೆದಿದೆ. ಕೋಟ ಮಣೂರು ನಿವಾಸಿ ವಿಕಾಸ್ ಆಚಾರ್ಯ(22) ಮೃ*ತಪಟ್ಟ ಯುವಕ.

ಸೋಮವಾರ ರಾತ್ರಿ 1.30ರ ಸುಮಾರಿಗೆ ವಿಕಾಸ್ ಸಾಸ್ತಾನದಿಂದ ಕೋಟ ಮಣೂರು ಕಡೆ ಬರುತ್ತಿದ್ದ

ವೇಳೆ ಈ ದುರಂ*ತ ಸಂಭವಿಸಿದೆ. ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ಹೆದ್ದಾರಿಯ ಡಿವೈಡರ್ ಗೆ ಡಿ*ಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಗಂಭೀ*ರವಾಗಿ ಗಾಯಗೊಂಡ ವಿಕಾಸ್ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ

Continue Reading

LATEST NEWS

Trending