DAKSHINA KANNADA
ಗ್ರಾಹಕರೇ ಎಚ್ಚರ ಎಚ್ಚರ.!! ಆಹಾರ ಖಾದ್ಯದಲ್ಲಿ ಜೀವಂತ ಹುಳು..!ಆತಂಕಕ್ಕೀಡಾದ ಗ್ರಾಹಕರಿಂದ ಉರ್ವ ಠಾಣೆಯಲ್ಲಿ ದೂರು..!
ಗ್ರಾಹಕರೇ ಎಚ್ಚರ ಎಚ್ಚರ.!! ಆಹಾರ ಖಾದ್ಯದಲ್ಲಿ ಜೀವಂತ ಹುಳು..!ಆತಂಕಕ್ಕೀಡಾದ ಗ್ರಾಹಕರಿಂದ ಉರ್ವ ಠಾಣೆಯಲ್ಲಿ ದೂರು..!
ಮಂಗಳೂರು: ನಗರದ ಪ್ರತಿಷ್ಠಿತ ಮಾಲ್‌ವೊಂದರಲ್ಲಿ ಕಾರ್ಯಾಚರಿಸುವ ‘ಚಿಕ್‌ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಯಿಂದ ಆಹಾರ ಖಾದ್ಯ ಪಾರ್ಸೆಲ್ ಪಡೆದ ಮಹಿಳೆಯೊಬ್ಬರು ಆಘಾತಕ್ಕೊಳಗಾಗಿದ್ದಾರೆ.
ಪಾರ್ಸೆಲ್ ತರಿಸಿದ ಆಹಾರದಲ್ಲಿ ಜೀವಂತ ಹುಳು ಹರಿದಾಡಿದೆ ಎಂದು ಆರೋಪಿಸಿ ಸಂತ್ರಸ್ತೆಯು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಲೇಡಿಹಿಲ್‌ನ ಸಲ್ಮಾ ಸಿಮ್ರನ್ ಕೆ. ಎಂಬವರು ಶನಿವಾರ ಸಂಜೆ 7:30ರ ಸುಮಾರಿಗೆ ‘ಚಿಕ್‌ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್‌ಗೆ ಆರ್ಡರ್ ಮಾಡಿದ್ದರು.
ಬಳಿಕ ರಾತ್ರಿ 8 ಗಂಟೆ ಸುಮಾರಿಗೆ ಪಾರ್ಸೆಲ್ ಮನೆ ಬಾಗಿಲಿಗೆ ಬಂದಿದೆ. ನಂತರ ಸಂತ್ರಸ್ತೆ ಸಹಿತ ತಾಯಿ, ಮೊಮ್ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ.
ಈ ನಡುವೆ ಚಿಕನ್ ಖಾದ್ಯದಲ್ಲಿ ದಿಢೀರ್ ಹುಳು ಕಾಣಿಸಿಕೊಂಡಿದ್ದು, ಕುಟುಂಬವೇ ಆತಂಕ್ಕೀಡಾಗಿದೆ. ಈ ಬಗ್ಗೆ ಸಂತ್ರಸ್ತೆಯು ಊರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಂತ್ರಸ್ತೆಯು, ‘ಸಂಜೆ ವೇಳೆ ‘ಚಿಕ್‌ಕಿಂಗ್’ ಆಹಾರೋತ್ಪನ್ನ ಸಂಸ್ಥೆಗೆ ಚಿಕನ್ ಸಹಿತ ಬರ್ಗರ್ ಆರ್ಡರ್ ಮಾಡಿದೆವು.
ತಾಯಿ, ಮಕ್ಕಳೊಂದಿಗೆ ಖಾದ್ಯ ಸೇವಿಸುತ್ತಿದೆವು. ಅದೇ ವೇಳೆ ಆಹಾರದಲ್ಲಿ ಜೀವಂತ ಹುಳು ಓಡಾಡುತ್ತಿತ್ತು. ಇದರಿಂದ ತುಂಬ ಗಾಬರಿಯಾದೆವು.
ಶುದ್ಧ ಆಹಾರ ಸಿಗುತ್ತದೆ ಎಂದು ಆಹಾರ ಖರೀದಿಸಲು ಮುಂದಾದರೆ, ಸಂಸ್ಥೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿದೆ.
ಸಂಸ್ಥೆಯವರನ್ನು ಸಂಪರ್ಕಿಸಲು ಹಲವು ಬಾರಿ ಯತ್ನಿಸಿಯೂ ವಿಫಲರಾದೆವು. ಆಹಾರ ಪೂರೈಕೆ ಸಂಸ್ಥೆಯವರು ಆಹಾರ ಪೊಟ್ಟಣ ಕಟ್ಟುವಾಗಲೇ ಸರಿಯಾಗಿ ನೋಡಬೇಕಿತ್ತು. ಏನಾದರೂ ಅವಘಡ ಸಂಭವಿಸಿದ್ದೆ ಯಾರೂ ಜವಾಬ್ದಾರಿ’ ಎಂದು ಅವರು ಪ್ರಶ್ನಿಸಿದ್ದಾರೆ.
‘ಒಟ್ಟು ಆರು ಬರ್ಗರ್‌ಗಳನ್ನು ಪಾರ್ಸೆಲ್ ತರಿಸಿದ್ದೆವು. ಅದರಲ್ಲಿ ತಾಯಿ ಹಾಗೂ ಮಕ್ಕಳು ನಾಲ್ಕನ್ನು ಸೇವಿಸಿದ್ದರು. ಸಹೋದರಿ ಹಾಗೂ ತನಗೆಂದು ಎರಡು ಬರ್ಗರ್ ಉಳಿಸಿದ್ದೆವು.
ತನ್ನ ಪಾಲಿನ ಬರ್ಗರ್‌ನ ಪಾರ್ಸೆಲ್ ತೆರೆಯುತ್ತಿದ್ದಂತೆ ಜೀವಂತ ಹುಳು ಕಾಣಿಸಿತು. ಇದು ಆರೋಗ್ಯದ ವಿಚಾರವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸಂತ್ರಸ್ತೆಯು ಆಗ್ರಹಿಸಿದ್ದಾರೆ.
DAKSHINA KANNADA
Surathkal: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ- ವಿದ್ಯಾರ್ಥಿನಿಯರು ಗಂಭೀರ..!
ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ರಾಂಗ್ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಗಾಯಗೊಂಡವರು ಎಂದು ತಿಳಿದು ಬಂದಿದೆ. ಇನ್ನೋರ್ವಳ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್