Connect with us

    DAKSHINA KANNADA

    ಅಪ್ರಾಪ್ತ ಯುವತಿ ಜೊತೆ ಪ್ರೀತಿಯ ನಾಟಕ, ದೈ*ಹಿಕ ಸಂಪರ್ಕ ; ಆರೋಪಿ ಅರೆಸ್ಟ್

    Published

    on

    ಕಡಬ : ಕಾಲೇಜಿನಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಗೆ ಪ್ರೀತಿಯ ಹೆಸರು ಹೇಳಿ ಅ*ತ್ಯಾಚಾ*ರವೆಸಗಿ ಬ್ಲ್ಯಾಕ್‌ಮೇಲ್ ಮಾಡಿರುವ ಘಟನೆ ಪುತ್ತೂರಿನ ಕಡಬ ತಾಲೂಕಿನಲ್ಲಿ ನಡೆದಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್‌ ನಿವಾಸಿ ಪ್ರವೀಣ್‌ ಪೂಜಾರಿ ಆರೋಪಿ ಎಂದು ಗುರುತಿಸಲಾಗಿದೆ. “ಅನೇಕ ಬಾರಿ ಪುತ್ತೂರು ಬಳಿಯ ಬಾಡಿಗೆ ರೂಂ ಗೆ ಕರೆದೊಯ್ಡು ದೈ*ಹಿಕವಾಗಿ ಬಳಸಿಕೊಂಡಿದ್ದ. ಅಲ್ಲದೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದು ಕೊಟ್ಟಿದ್ದ. ಇದರ ಜೊತೆಗೆ ಖಾ*ಸಗಿ ಕ್ಷಣದ ನ*ಗ್ನ ವೀಡಿಯೋಗಳನ್ನು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ” ಎಂದು ದೂರಿನಲ್ಲಿ ಅಪ್ರಾಪ್ತೆ ಉಲ್ಲೇಖಿದ್ದಾರೆ.

    ಸೋಮವಾರ (ಡಿ.30) ಕುಂಬ್ರದಲ್ಲಿರುವ ಬಾಡಿಗೆ ರೂಂಗೆ ಕರೆದೊಯ್ದು ಅಲ್ಲೇ ಉಳಿದುಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದ. ಮರುದಿನ ರೂಂನಲ್ಲಿ ಇರುವಾಗಲೇ ಬಾಲಕಿ ಜತೆ ಕ್ಷುಲ್ಲಕ ಕಾರಣಕ್ಕೆ ದೈ*ಹಿಕ ಹಿಂ*ಸೆ ನೀಡಿ ಜಗಳವಾಡಿದ್ದ. ಬಳಿಕ ಬೈಕಿನಲ್ಲಿ ಕರೆದೊಯ್ದು ಫರಂಗಿಪೇಟೆ ಬಳಿ ರಸ್ತೆ ಬದಿ ಬಿಟ್ಟು ಹೋಗಿದ್ದ. ಮನೆಯವರಿಗೆ ವಿಷಯ ತಿಳಿಸಿದ್ದ ಬಾಲಕಿಗೆ ಮನೆಮಂದಿ ಧೈರ್ಯ ತುಂಬಿ ಮನೆಗೆ ಕರೆದುಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಕಡಬ ಪೊಲೀಸರು ಸುಳ್ಯದಲ್ಲಿದ್ದ ಯುವಕನನ್ನು ಬಂಧಿಸಿ ಆತನ ವಿರುದ್ಧ ಪೋ*ಕ್ಸೋ, ಅ*ಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    DAKSHINA KANNADA

    ಸುಳ್ಯ: ಸ್ಕೂಟಿ ಸವಾರನ ಮೇಲೆ ಕಾಡಾನೆ ದಾಳಿ; ಸಣ್ಣಪುಟ್ಟ ಗಾಯಗಳೊಂದಿಗೆ ವ್ಯಕ್ತಿ ಪಾರು

    Published

    on

    ಸುಳ್ಯ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾದ ಘಟನೆ ದೇವರ ಕೊಲ್ಲಿಯಲ್ಲಿಯ 10ನೇ ಮೈಲಿನಲ್ಲಿ ಜ.4 ರಂದು ನಡೆದಿದೆ.

    ದೇವರಕೊಲ್ಲಿಯ ಸ್ಥಳೀಯ ನಿವಾಸಿ ಮುತ್ತು ಕಾಡಾನೆ ದಾಳಿಗೊಳಗಾದ ವ್ಯಕ್ತಿ.

    ಮುತ್ತು ಅವರು ಎಸ್ಟೇಟ್ ನಲ್ಲಿ ರಾತ್ರಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಸ್ಕೂಟಿಯಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಕಾಡಾನೆಯೊಂದು ದಿಡೀರ್ ದಾಳಿ ಮಾಡಿದೆ.

    ಈ ಸಂದರ್ಭ ಮುತ್ತು ಓಡಿ ತಪ್ಪಿಸಿಕೊಂಡಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆಯು ಸ್ಕೂಟಿಯನ್ನು ಜಖಂಗೊಳಿಸಿದ್ದು, ಗಾಯಳುವನ್ನು ಮಡಿಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

    Continue Reading

    DAKSHINA KANNADA

    ಮಂಗಳೂರಿನಲ್ಲಿ ಮತ್ತೊಂದು ಕಾರು ಬೆಂ*ಕಿಗಾಹುತಿ

    Published

    on

    ಮಂಗಳೂರು : ರಸ್ತೆಯ ಮಧ್ಯದಲ್ಲೇ ಕಾರುಗಳು ಬೆಂ*ಕಿಗೆ ಆಹುತಿಯಾಗುತ್ತಿರುವ ಘಟನೆ ನಗರದಲ್ಲಿ ಪದೇ ಪದೇ ನಡೆಯುತ್ತಿವೆ. ಇದೀಗ ಶನಿವಾರ(ಜ.4) ರಾತ್ರಿ ಮತ್ತೊಂದು ಕಾರು ಹೊ*ತ್ತಿ ಉರಿದಿದೆ. ಶನಿವಾರ ವಾಹನ ದಟ್ಟಣೆ ಹೆಚ್ಚಾಗಿದ್ದ ಸಮಯದಲ್ಲಿ ಮಂಗಳಾ ಸ್ಟೇಡಿಯಂ ಸಮೀಪ ಲೇಡಿ ಹಿಲ್ ಬಳಿ ಸ್ವಿಫ್ಟ್ ಕಾರೊಂದು ಹೊತ್ತಿ ಉರಿದಿದೆ. ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ರಸ್ತೆಯ ಬದಿಗೆ ತಂದು ನಿಲ್ಲಿಸುವಷ್ಟರಲ್ಲಿ ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದು ಚಾಲಕ ಬಚಾವ್ ಆಗಿದ್ದಾರೆ.

     

    ಇದರಿಂದ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಟ್ರಾಫಿಕ್ ಪೊಲೀಸರು ಕೆಲ ಕಾಲ ವಾಹನಗಳು ಈ ರಸ್ತೆಯಲ್ಲಿ ಸಂಚರಿಸದಂತೆ ನಿರ್ಬಂಧಿಸಿದ್ದಾರೆ. ಬಳಿಕ ಅ*ಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿಕ ಕಾರಿನ ಬೆಂ*ಕಿ ನಂದಿಸಿದ್ದಾರೆ. ಆದರೆ, ಅದಾಗಲೇ ಕಾರು ಸಂಪೂರ್ಣ ಸು*ಟ್ಟು ಭಸ್ಮವಾಗಿದೆ.

    ಇದನ್ನೂ ಓದಿ : ಪ್ರೇಯಸಿಯನ್ನು ಅರಸಿ ಹೋಗಿ ಜೈಲು ಪಾಲಾದ ಪಾಗಲ್ ಪ್ರೇಮಿ..!

    ಕಾರುಗಳಲ್ಲಿ ಏಕಾಏಕಿ ಸಂಭವಿಸುತ್ತಿರುವ ಈ ಅ*ಗ್ನಿ ಅವ*ಘಡಕ್ಕೆ ನಿಖರ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲವಾದ್ರೂ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ನಡೆಯುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇತ್ತೀಚೆಗೆ ಇಲ್ಲೇ ಸಮೀಪದ ಪೆಟ್ರೋಲ್ ಪಂಪ್ ಬಳಿಯಲ್ಲಿ ಮಾರುತಿ ಕಾರೊಂದು ಹೊ*ತ್ತಿ ಉರಿದಿತ್ತು.

    Continue Reading

    DAKSHINA KANNADA

    ಬಡವರ ಧ್ವನಿಯಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕೆಲಸ ಮಾಡುತ್ತಿದೆ : ಐಕಳ ಹರೀಶ್ ಶೆಟ್ಟಿ

    Published

    on

    ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ.  ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.

    ಬಂಟ್ಸ್ ಹಾಸ್ಟೆಲ್‌ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣ ಸಹಾಯಹಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಂಟ ಸಮಾಜ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯಪ್ರವೃತ್ತವಾಗುತ್ತದೆ. ಅದೇ ರೀತಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇತರೆ ಸಮಾಜದವರಿಗೂ ನೆರವಿನ ಹಸ್ತ ನೀಡುತ್ತಿದೆ ಎಂದರು.

    ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಸ್ತಾವಿಕವಾಗಿ ಮಾತನಾಡಿ, 37 ವರ್ಷಗಳ ಇತಿಹಾಸ ಇರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹಲವು ಕಾರ್ಯಗಳು ನಿರಂತರವಾಗಿ ನಡೆದಿದೆ. ದಾನಿಗಳ ನೆರವಿನಿಂದ ಮತ್ತು ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳ ಶ್ರಮದಿಂದ ಸಹಾಯಹಸ್ತ ನೀಡಲು ಸಾಧ್ಯವಾಯಿತು. ಈ ಬಾರಿ 16 ಲಕ್ಷ ರೂಪಾಯಿ ಹಣವನ್ನು ವಿತರಿಸಲಾಯಿತು ಎಂದರು. ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ, ಒಕ್ಕೂಟಕ್ಕೆ ಯಾರೇ ಅರ್ಜಿ ಸಲ್ಲಿಸಿದರೂ ಅರ್ಜಿಯನ್ನು ತಿರಸ್ಕರಿಸದೆ ಪರಿಶೀಲಿಸಿ ನೆರವನ್ನು ನೀಡಿದೆ ಎಂದರು.

    ಇದನ್ನೂ ಓದಿ : ಆಕಾಶದಿಂದ ಬಿತ್ತು 500 ಕೆಜಿ ತೂಕದ ಹೊಳೆಯುವ ರಿಂಗ್..! ಏನಿದು ವಿಚಿತ್ರ..?

    ಮುಖ್ಯ ಅತಿಥಿಯಾಗಿ ಆಗಮಿಸಿದ ಆಸ್ಟ್ರೇಲಿಯಾದ  ಉದ್ಯಮಿ ದಯಾನಂದ ಶೆಟ್ಟಿ ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಚಂದ್ರಹಾಸ ಶೆಟ್ಟಿ,  ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು,  ಜಪ್ಪಿನಮೊಗರು ಬಂಟರ ಸಂಘದ ಅಧ್ಯಕ್ಷ ಸತ್ಯಪ್ರಸಾದ್ ಶೆಟ್ಟಿ, ಸುಧಾಕರ  ಪೂಂಜ ಸುರತ್ಕಲ್,  ಹರ್ಷಕುಮಾರ್ ರೈ, ಗೀತಾ ರೈ, ಕೊಲ್ಲಾಡಿ ಬಾಲಕೃಷ್ಣ ರೈ ಉಪಸ್ಥಿತರಿದ್ದರು.

    ಉದಯ ಕುಮಾರ್ ಪ್ರಾರ್ಥನೆಗೈದರು. ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ನಿರ್ವಹಿಸಿದರು. ಜತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ ವಂದಿಸಿದರು.

    Continue Reading

    LATEST NEWS

    Trending