hasana
ಪ್ರಿಯತಮೆಯ ಕುತ್ತಿಗೆ ಸೀಳಿ ಕೊಲೆ ಮಾಡಿದ ಪ್ರಿಯಕರ..!
ಹಾಸನ: ಪ್ರೀತಿಯನ್ನು ತಿರಸ್ಕರಿಸಿದ್ದರಿಂದ ಪ್ರಿಯಕರ ತನ್ನ ಪ್ರೇಯಸಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ.
ಸುಚಿತ್ರಾ( 20) ಕೊಲೆಯಾದ ಯುವತಿ. ತೇಜಸ್ (23) ಕೊಲೆ ಗೈದ ಪ್ರಿಯಕರ. ಸುಚಿತ್ರಾ ಅಲೂರು ತಾಲುಕಿನ ಕಳವಳಗೆರೆ ಗ್ರಾಮದವಳಾಗಿದ್ದು, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಓದುತ್ತಿದ್ದಳು. ಮೂಲತಃ ಹಾಸನ ತಾಲೂಕಿನ ಶಂಕರನಹಳ್ಳಿ ಗ್ರಾಮದವನಾದ ತೇಜಸ್ ಸುಚಿತ್ರಾಳ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದಿದ್ದಾನೆ.
ಇಂದು ಮುಂಜಾನೆ ತೇಜಸ್ ತನ್ನೊಂದಿಗೆ ಸುಚಿತ್ರಾಳನ್ನು ಕಂತಿಬೆಟ್ಟಕ್ಕೆ ಕರೆದೊಯ್ದಿದ್ದಾನೆ. ಪ್ರೀತಿಸಲು ನಿರಾಕರಿಸಿದಕ್ಕೆ ತೇಜಸ್ ಸುಚಿತ್ರಾಳ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ತೇಜಸ್ ಎಸ್ಕೇಪ್ ಆಗಿದ್ದ. ತೇಜಸ್ ಕೂಡ ಮೊಸಳೆಹಳ್ಳಿ ಸರಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಶಿರಾಡಿ ಘಾಟಿಯಲ್ಲಿ ರಸ್ತೆ ಅವಘಡ: ಒಡಿಶಾ ಮೂಲದ ಇಬ್ಬರು ದುರ್ಮರಣ
ಹಾಸನ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಗಡಿ ದೇವಸ್ಥಾನದ ಬಳಿ ಮಿನಿ ಲಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಒಡಿಶಾ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಒಡಿಶಾದ ಅಮೂಲ್ಯ ಪೆರಿಡಾ (23) ಮತ್ತು ಸಾಂತಿರ್ನಿಶ್ ಜೂಟಿ (27) ಮೃತಪಟ್ಟವರು. ಹಾಸನದಿಂದ ಮಂಗಳೂರಿಗೆ ಸರಕು ಸಾಗಿಸುತ್ತಿದ್ದ ಮಿನಿ ಲಾರಿಗೆ ಗಡಿ ದೇವಸ್ಥಾನದ ಮೇಲ್ಭಾಗದಲ್ಲಿನ ಕೆಂಪುಹೊಳೆ ಬಳಿ ಯಾವುದೋ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ. ಮಿನಿ ಲಾರಿ ಸಂಪೂರ್ಣ ಜಖಂಗೊಂಡಿದೆ. ಅದರೆಡೆಯಲ್ಲಿ ಸಿಲುಕಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಎಸಗಿದ ವಾಹನವನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದು, ಆ ವಾಹನದ ಸುಳಿವು ಸಿಕ್ಕಿಲ್ಲ. ಸಕಲೇಶಪುರ ಗ್ರಾಮಾಂತರ ಠಾಣೆಯ ಪೋಲಿಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- bangalore6 days ago
ಆಸ್ಟ್ರೇಲಿಯಾ ಬೀಚ್ ನಲ್ಲಿ ಮಂಗ್ಳೂರು ಬೆಡಗಿ ಅನುಶ್ರೀ…
- bangalore6 days ago
“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್
- LATEST NEWS7 days ago
ಪ್ರಿಯತಮೆಯ ಕೊಂದು ಆಕೆಯ ಮೃತದೇಹವನ್ನು ಸ್ಟೇಟಸ್ ಹಾಕಿದ ಕ್ರೂರಿ..!
- DAKSHINA KANNADA7 days ago
Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!