Thursday, April 22, 2021

ಉಡುಪಿಯಲ್ಲಿ ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ತಪ್ಪಿತ್ತು ಭಾರಿ ದೊಡ್ಡ ದುರಂತ ..!

ಉಡುಪಿ : ಉಡುಪಿಯ ಕಿನ್ನಿಮುಲ್ಕಿ ಪರಿಸರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಗುಡ್ಡೆ ಗೆ ಬೆಂಕಿ ಬಿದ್ದಿತ್ತು.

ಇಲ್ಲಿನ ಹತ್ತಾರು ಎಕರೆ ಪ್ರದೇಶಗಳಿಗೆ ಬೆಂಕಿ ಹಬ್ಬಿತ್ತು. ಪಕ್ಕದಲ್ಲೇ ಜನವಸತಿ ಪ್ರದೇಶ ಇದ್ದುದ್ದರಿಂದ ಆತಂಕ ಇನ್ನೂ ಹೆಚ್ಚಿತ್ತು..

ಮಧ್ಯಾಹ್ನದ ವೇಳೆ ವಿಪರೀತ ಬಿಸಿಲು ಮತ್ತು ಗಾಳಿ ಇದ್ದ ಕಾರಣ ಬೆಂಕಿ ಹಬ್ಬುವ ತೀವ್ರತೆ ಮತ್ತಷ್ಟು ಹೆಚ್ಚಿತ್ತು.

ಒಣಗಿದ್ದ ಹುಲ್ಲಿಗೆ ಬೆಂಕಿ ಹಬ್ಬಿದ ಪರಿಣಾಮ ಆಸುಪಾಸಿನ ಮನೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೆಲವೇ ನಿಮಿಷಗಳಲ್ಲಿ ಹತ್ತಾರು ಎಕರೆ ಭೂಪ್ರದೇಶಕ್ಕೆ ಬೆಂಕಿ ವ್ಯಾಪಿಸಿತ್ತು.

ಸಮೀಪದಲ್ಲಿರುವ ಅಗ್ನಿಶಾಮಕ ದಳದ ವಾಹನವನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು. ಎರಡು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...