Home ಪ್ರಮುಖ ಸುದ್ದಿ ಕೇರಳದಿಂದ ಬಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಯುವಕ ಕ್ವಾರಂಟೈನ್ ಗೆ

ಕೇರಳದಿಂದ ಬಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಯುವಕ ಕ್ವಾರಂಟೈನ್ ಗೆ

ಕೇರಳದಿಂದ ಬಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಯುವಕ ಕ್ವಾರಂಟೈನ್ ಗೆ

ಬಂಟ್ವಾಳ: ಕೇರಳದಿಂದ ಬಂದು‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಯುವಕನನ್ನು ಪತ್ತೆ ಹಚ್ಚಿ ಹಾಸ್ಪಿಟಲ್ ಕ್ವಾರೈಂಟೈನ್ ಗೆ ಒಳಪಡಿಸಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ತಾಲೂಕಿನ ಪುದು ಗ್ರಾಮದ ನಿವಾಸಿ ಮೊಹಮ್ಮದ್ ಅಶ್ರಪ್ ಎಂಬವನು ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಲಾಕ್ ಡೌನ್ ಘೋಷಣೆಯಾದ ನಂತರ

ಎಪ್ರಿಲ್ 11 ರಂದು ಲಾರಿ ಮೂಲಕ ಮಂಗಳೂರು ತಲುಪಿ, ಆತನ ಸಂಬಂಧಿಕರ ಮನೆಯಾದ ಬಂಟ್ವಾಳ ಸಜಿಪಮೂಡ ಗ್ರಾಮದ ಬೊಳ್ಳಾಯಿ ಎಂಬಲ್ಲಿ ತಂಗಿದ್ದರು.

ಈ ಬಗ್ಗೆ ಸ್ಥಳಿಯರು ಇಂದು (ಎಪ್ರಿಲ್ 15) ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣಾ ಪೊಲೀಸರು ಪತ್ತೆಹಚ್ಚಿ ಆತನನ್ನು ಹಾಸ್ಪಿಟಲ್ ಕ್ವಾರೆಂಟೈನ್ ಗೆ ದಾಖಲಿಸಿದ್ದಾರೆ.

ಅಷ್ಟೇ ಅಲ್ಲದೇ ಸರಕಾರದ ಆದೇಶವನ್ನು ಉಲ್ಲಂಘಿಸಿ, ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಯಾವುದೇ ವೈದ್ಯಕೀಯ ಪರೀಕ್ಷೆಗೆ ಒಳಪಡದೆ ನಿರ್ಲಕ್ಷ್ಯ ವಹಿಸಿ,

ಅಂತರ್ ರಾಜ್ಯ ಪ್ರಯಾಣಿಸಿರುವುದಕ್ಕೆ ಇದೀಗ ಆತನ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisment -

RECENT NEWS

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು 

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು  ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರದ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಹಾಗೂ ಕೋಟ ಸಮುದಾಯ ಆಸ್ಪತ್ರೆಯನ್ನು ತಾಲೂಕು...

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ ಉಳ್ಳಾಲ: ಕಳೆದೆರಡು ದಿನಗಳಿಂದ ಮುಂಗಾರು ಮಳೆ ತೀವ್ರವಾಗಿ ಕರಾವಳಿ ತೀರದಲ್ಲಿ ಸುರಿಯತೊಡಗಿದ್ದು, ಕಡಲ ತೀರದಲ್ಲೂ ಕಡಲ ಅಬ್ಬರ ಜೋರಾಗಿದೆ. ಪ್ರತೀ ವರ್ಷ ಕಡಲಕೊರೆತ ತೀವ್ರವಾಗಿರುವ ಮಂಗಳೂರು ಕ್ಷೇತ್ರದ ಉಳ್ಳಾಲ...

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ..

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ.. ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ...

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ.. ಉಡುಪಿ: ಕೋವಿಡ್- 19 ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು...