Connect with us

    LATEST NEWS

    ಮಾಂತ್ರಿಕನ ಮಾತು ನಂಬಿ ಮಕ್ಕಳಾಗಬೇಕೆಂದು ಜೀವಂತ ಕೋಳಿ ನುಂಗಿ ವ್ಯಕ್ತಿ ಸಾ*ವು !!

    Published

    on

    ಮಂಗಳೂರು/ರಾಯ್‌ಪುರ: ಮಕ್ಕಳಿಲ್ಲದ ವ್ಯಕ್ತಿಯೊಬ್ಬ ಮಕ್ಕಳು ಪಡೆಯಬೇಕೆಂಬ ಆಸೆಯಿಂದ ಮಂತ್ರವಾದಿಯೊಬ್ಬರ ಬಳಿ ಹೋಗಿದ್ದು, ಒಂದು ಕೋಳಿಯಿಂದಾಗಿ ಆತ ಸಾ*ವನ್ನಪ್ಪಿದ ಆ*ಘಾತಕಾರಿ ಘಟನೆ ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ನಡೆದಿದೆ.

    ಮಕ್ಕಳಿಲ್ಲವೆಂದು ಪರಿಹಾರಕ್ಕಾಗಿ ವ್ಯಕ್ತಿಯು ಮಾಟ ಮಂತ್ರ ಮಾಡುವವನ ಬಳಿ ಹೋಗಿದ್ದಾನೆ. ಈ ವೇಳೆ ಮಂತ್ರವಾದಿಯ ಸಲಹೆಯಂತೆ ಜೀವಂತ ಕೋಳಿ ಮರಿಯನ್ನು ನುಂಗಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡು ಸಾ*ವನ್ನಪ್ಪಿದ್ದಾನೆ. ಉಸಿರಾಡಲು ಕಷ್ಟಪಡುತ್ತಿದ್ದ ಸಮಯ ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಆತ ಸಾ*ವನ್ನಪ್ಪಿದ್ದ. ಇನ್ನು ವಿಚಿತ್ರ ಎಂದರೆ ಆತನನ್ನು ಆಸ್ಪತ್ರೆಗೆ ಕರೆದೊಯ್ದ ಕುಟುಂಬದವರು ‘ಆತ ಬಿದ್ದು ಅ*ಸ್ವಸ್ಥಗೊಂಡಿದ್ದಾನೆ’ ಎಂದಿದ್ದರು. ಆದರೆ ತಪಾಸಣೆ ಮಾಡಿದ ವೈದ್ಯರು ‘ಆತ ಕೋಳಿ ಮರಿಯನ್ನು ಜೀವಂತವಾಗಿ ನುಂಗಲು ಯತ್ನಿಸಿದ್ದರಿಂದ ಸಾ*ವನ್ನಪ್ಪಿದ್ದಾನೆ’ ಎಂಬ ಮಾಹಿತಿ ನೀಡಿದ್ದಾರೆ. ಅಲ್ಲದೇ ವೈದ್ಯರು ಆತನ ಗಂಟಲಿನಲ್ಲಿ ಸಿಲುಕಿದ್ದ ಕೋಳಿ ಮರಿಯನ್ನು ಹೊರತೆಗೆದಿದ್ದಾರೆ.

    ವಿಚಾರಣೆ ವೇಳೆ ವ್ಯಕ್ತಿಗೆ’ ಮಕ್ಕಳಿಲ್ಲದ ಕಾರಣ ಆತ ಚಿಂತಿತನಾಗಿದ್ದ’ ಎಂದು ಕುಟುಂಬದವರು ಹೇಳಿದ್ದಾರೆ, ಹೀಗೆ ಆತ ಮಂತ್ರವಾದಿಯ ಬಳಿ ಹೋಗಿದ್ದು, ಇದೀಗ ಶಾಶ್ವತವಾಗಿ ಬಾ*ರದ ಲೋಕಕ್ಕೆ ತೆರಳಿದ್ದಾನೆ. ಅವರ ಮನೆ ಸಮೀಪ ಬಾವಿಯೊಂದಿದ್ದು, ಅಲ್ಲಿ ಸ್ನಾನ ಮಾಡಲು ಹೋಗಿದ್ದ ಆತ ವಾಪಸ್ ಬರುವಾಗ ಇದಕ್ಕಿದ್ದಂತೆ ಬಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃ*ತ ವ್ಯಕ್ತಿಯ ಸಂಬಂಧಿಕರು ಮ*ರಣೋತ್ತರ ಪರೀಕ್ಷೆಗೂ ಒಪ್ಪಿರಲಿಲ್ಲ, ಆದರೆ ಅಂಬಿಕಾಪುರ ಜಿಲ್ಲಾ ಆಸ್ಪತ್ರೆಯ ವೈದ್ಯರು ಈತನ ಸಾವಿನ ಬಗ್ಗೆ ಅನುಮಾನಪಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದಾದ ನಂತರ ಕುಟುಂಬದವರು ಮ*ರಣೋತ್ತರ ಪರೀಕ್ಷೆಗೆ ಒಪ್ಪಿದ್ದಾರೆ. ಈ ವೇಳೆ ವೈದ್ಯರಿಗೆ ವ್ಯಕ್ತಿಯ ಗಂಟಲಿನಲ್ಲಿ ಜೀವಂತ ಕೋಳಿಮರಿ ಇರುವುದು ಕಂಡು ಬಂದಿದ್ದು, ವೈದ್ಯರೇ ಬೆಚ್ಚಿ ಬಿದ್ದಿದ್ದರು. ಘಟನೆ ಬಗ್ಗೆ ದರಿಮಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತಿದ್ದಾರೆ.

    Click to comment

    Leave a Reply

    Your email address will not be published. Required fields are marked *

    International news

    ಅಧ್ಯಕ್ಷರಾಗುವ ಮನ್ನವೇ ಯೂರೋಪಿಯನ್ ಒಕ್ಕೂಟಕ್ಕೆ ಎಚ್ಚರಿಕೆ ನೀಡಿದ ಟ್ರಂಪ್

    Published

    on

    ಮಂಗಳೂರು/ವಾಷಿಂಗ್ಟನ್ ಡಿಸಿ: ಮುಂದಿನ ತಿಂಗಳು ಅಮೆರಿಕದ ನೂತನ ಅಧ್ಯಕ್ಷರಾಗಿ ಡೋನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಲಿದ್ದಾರೆ. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಯೂರೋಪಿಯನ್ ಒಕ್ಕೂಟಕ್ಕೆ ಟ್ರಂಪ್ ಬೆದರಿಕೆ ಹಾಕಿದ್ದಾರೆ.

    ಅಮೆರಿಕದ ಜತೆಗಿನ ಭಾರಿ ವ್ಯಾಪಾರ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ದೇಶಗಳಿಗೆ ಅಗತ್ಯವಾದ ಬಹುತೇಕ ತೈಲ ಮತ್ತು ಅನಿಲವನ್ನು ಅಮೆರಿಕದಿಂದ ಖರೀದಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಯೂರೋಪಿಯನ್ ಒಕ್ಕೂಟದ ದೇಶಗಳು ಹೀಗೆ ಮಾಡದಿದ್ದರೆ, ಉದ್ದಕ್ಕೂ ಸುಂಕ ವಿಧಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ತಮ್ಮ ಟ್ರುಥ್ ಸೋಶಿಯಲ್ ಪ್ಲಾಟ್ಫಾರಂನಲ್ಲಿ ಈ ಎಚ್ಚರಿಕೆ ನೀಡಿರುವ ಟ್ರಂಪ್, “ಅಮೆರಿಕದ ಜತೆ ಇರುವ ವ್ಯಾಪಾರ ಅಂತರವನ್ನು ಕಿರಿದು ಮಾಡುವ ನಿಟ್ಟಿನಲ್ಲಿ ದೊಡ್ಡ ಪ್ರಮಾಣದಲ್ಲಿ ನಮ್ಮಿಂದ ತೈಲ ಮತ್ತು ಅನಿಲವನ್ನು ಖರೀದಿಸುವಂತೆ ನಾನು ಯೂರೋಪಿಯನ್ ಒಕ್ಕೂಟಕ್ಕೆ ಸೂಚನೆ ನೀಡಿದ್ದೇನೆ. ಇಲ್ಲದಿದ್ದರೆ ಉದ್ದಕ್ಕೂ ಸುಂಕ ವಿಧಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

    ಇದನ್ನೂ ಓದಿ: ಅಮೆಜಾನ್ ಸಂಸ್ಥಾಪಕನ ಮದುವೆ ಅಂಬಾನಿ ಮದುವೆಗಿಂತನೂ ಗ್ರ್ಯಾಂಡ್…

    ಹಿಂದಿನ ಅವಧಿಯಲ್ಲಿ ಕೂಡಾ ಟ್ರಂಪ್, “ಅನಾದಿ ಕಾಲದಿಂದಲೂ ಅಮೆರಿಕದ ಬೆನ್ನ ಮೇಲೆ ಯೂರೋಪ್ ಸವಾರಿ ಮಾಡುತ್ತಿದೆ. ನಾವು ಅದಕ್ಕೆ ಅವಕಾಶ ಮಾಡಿಕೊಟ್ಟಿದ್ದೇವೆ” ಎಂದು ಹೇಳಿಕೆ ನೀಡಿದ್ದರು. ಜೊತೆಗೆ ನ್ಯಾಟೊಗೆ ನೀಡುತ್ತಿರುವ ಅಮೆರಿಕದ ನೆರವನ್ನು ಸ್ಥಗಿತಗೊಳಿಸುವುದಾಗಿ ಮತ್ತು ಯೂರೋಪ್ ಕೂಡಾ ಇದಕ್ಕೆ ಕೊಡುಗೆ ನೀಡಬೇಕು ಎಚ್ಚರಿಸಿದ್ದರು.

    2022ರಿಂದ ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ, ಯೂರೋಪಿಯನ್ ಒಕ್ಕೂಟದ ಜತೆಗೆ ಅಮೆರಿಕದ ವ್ಯಾಪಾರ ಕೊರತೆ 202.5 ಶತಕೋಟಿ ಡಾಲರ್ಗಳಾಗಿವೆ. ಯೂರೋಪಿಯನ್ ಒಕ್ಕೂಟದಿಂದ ಅಮೆರಿಕ 553.3 ಶತಕೋಟಿ ಡಾಲರ್ ಮೌಲ್ಯದ ವಸ್ತುಗಳನ್ನು ಆಮದು ಮಾಡಿಕೊಂಡಿದ್ದರೆ, 350.8 ಶತಕೋಟಿ ಡಾಲರ್ ಮೌಲ್ಯದ ಸರಕು ರಫ್ತು ಮಾಡಿದೆ.

    ಈ ಅಸಮತೋಲನವನ್ನು ನಿವಾರಿಸಬೇಕು ಎನ್ನುವುದು ಟ್ರಂಪ್ ಬಯಕೆ. ಬೆದರಿಕೆ ಹಾಕುವ ಕಾರ್ಯತಂತ್ರದ ಬದಲು ಅಮೆರಿಕ ಮತ್ತೆ ಸರ್ವಶ್ರೇಷ್ಠ ದೇಶವಾಗಲು ನೆರವಾಗಿ ಎಂದು ಮನವೊಲಿಸುವುದು ಅಗತ್ಯ ಎಂದು ವಿಶ್ಲೇಷಿಸಲಾಗುತ್ತಿದೆ. ಸುಂಕ ಎನ್ನುವುದು ಶಬ್ದಕೋಶದಲ್ಲಿ ತಮಗೆ ಅತ್ಯಂತ ಪ್ರಿಯ ಶಬ್ದ ಎಂದು ಟ್ರಂಪ್ ಹೇಳಿದ್ದಾರೆ.

     

    Continue Reading

    LATEST NEWS

    87ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಕ್ತಾಯ; 5 ನಿರ್ಣಾಯಗಳು ಮಂಡನೆ

    Published

    on

    ಮಂಗಳೂರು/ಮಂಡ್ಯ: ಸಕ್ಕರೆ ನಾಡಿನಲ್ಲಿ ಕಳೆದ 3 ದಿನಗಳಿಂದ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭಾಷಾ ಅಭಿಚವೃದ್ದಿ ಅಧಿನಿಯಮ, ರಾಷ್ಟ್ರಕವಿ ಕುವೆಂಪು ಪ್ರಶಸ್ತಿ ಘೋಷಣೆ ಸೇರಿದಂತೆ 5 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

    ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಡು,ನುಡಿಯ ಡಿಂಡಿಮ ಮೊಳಗಿದೆ. ಮೊದಲ ದಿನ ಬರೋಬ್ಬರಿ 2 ಲಕ್ಷ ಜನ ಸೇರಿ ದಾಖಲೆ ಬರೆದಿದ್ದರೆ, ಎರಡು ಮತ್ತು ಮೂರನೇ ದಿನ ಕೂಡ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದರು.

    87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಂತಿಮ ದಿನದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಪಟೇಲ್ ಪಾಂಡು ಅವರು ಈ 5 ನಿರ್ಣಯಗಳನ್ನು ಮಂಡನೆ ಮಾಡಿದರು.

    ಇದನ್ನೂ ಓದಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಾವ ಜಿಲ್ಲೆಯಲ್ಲಿ ನಡೆಯುತ್ತೆ ಗೊತ್ತಾ ?

    ಬಹಿರಂಗ ಅಧಿವೇಶನದಲ್ಲಿ ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ತೆಗೆದುಕೊಂಡ ನಿರ್ಣಾಯಗಳು ಹೀಗಿವೆ.
    1. ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಅಧಿನಿಯಮ 2022ರ ಎಲ್ಲ ಉಪಬಂಧಗಳು ಮತ್ತು ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ಅಧಿನಿಯಮ ಜಾರಿಗೆ ಬರಬೇಕು. ಇದು ಕೂಡಲೇ ಅನುಷ್ಠಾನ ಆಗಬೇಕು. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರನ್ನು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ರಾಜ್ಯ ಮಟ್ಟದ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ತಿದ್ದುಪಡಿ ತರಬೇಕು.

    2.ಸರ್ಕಾರಿ ಕನ್ನಡ ಶಾಲೆಗೆ ಕಟ್ಟಡ, ವಾಚನಾಲಯ, ಆಟದ ಮೈದಾನ ಸೇರಿ ಇತರೆ ಮೂಲಸೌಕರ್ಯಗಳನ್ನು ಕಲ್ಪಿಸಬೇಕು‌. ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿಯ ಕ್ರಮಕ್ಕೆ ಸರ್ಕಾರ ಶೀಘ್ರವೇ ಕ್ರಮ ತೆಗೆದುಕೊಳ್ಳಬೇಕು. ಕನ್ನಡೇತರ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ಕಡ್ಡಾಯವಾಗಿ ನೇಮಕ ಮಾಡಬೇಕು.

    3.ಸರೋಜಿನಿ ಮಹಿಷಿ ವರದಿಯನ್ನು ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು

    4.ದಾವಣಗೆರೆಯಲ್ಲಿ ನಡೆಯಬೇಕಿರುವ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಅತೀ ಶೀಘ್ರದಲ್ಲೇ ನಡೆಸಬೇಕು.

    5.ಕರ್ನಾಟಕ ಸರ್ಕಾರ ರಾಷ್ಟ್ರಕವಿ ಪ್ರಶಸ್ತಿಯನ್ನ ಶೀಘ್ರದಲ್ಲೇ ಘೋಷಿಸಬೇಕು

    Continue Reading

    LATEST NEWS

    ಅಮೆಜಾನ್ ಸಂಸ್ಥಾಪಕನ ಮದುವೆ ಅಂಬಾನಿ ಮದುವೆಗಿಂತನೂ ಗ್ರ್ಯಾಂಡ್…

    Published

    on

    ಮಂಗಳೂರು/ವಾಷಿಂಗ್ಟನ್‌: ಅಮೆಜಾನ್‌ನ ಸಂಸ್ಥಾಪಕ ಜೆಫ್‌ ಬೆಜೋಜ್‌, ಶೀಘ್ರವೇ ತಮ್ಮ ಗೆಳತಿ, ಪತ್ರಕರ್ತೆ ಲಾರೆನ್‌ ಸ್ಯಾಂಚೆಜ್‌ ಅವರೊಂದಿಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕಾಗಿ ಭಾರೀ ತಯಾರಿ ನಡೆಸಿದ್ದು, ವಿವಾಹ ಕಾರ್ಯಕ್ರಮದ ಒಟ್ಟಾರೆ ವೆಚ್ಚ 5096 ಕೋಟಿ ರೂ. ದಾಟಲಿದೆ ಎನ್ನಲಾಗಿದೆ.

    ಲಾರೆನ್ ಸ್ಯಾಂಚೆಝ್ ಸಂದರ್ಶನಗಳ ಸಮಯದಲ್ಲಿ ತನ್ನ ಮದುವೆಯ ಯೋಜನೆಗಳ ಬಗ್ಗೆ ಸುಳಿವು ನೀಡಿದ್ದಾರೆ ಆದರೆ ದಿನಾಂಕವನ್ನು ದೃಢಪಡಿಸಿಲ್ಲ. ದಿ ಟುಡೇ ಶೋ ಜೊತೆಗಿನ ಚಾಟ್‌ನಲ್ಲಿ, ಬಿಡುವಿಲ್ಲದ ವೇಳಾಪಟ್ಟಿಯೊಂದಿಗೆ ಮದುವೆಯ ಯೋಜನೆಯನ್ನು ಕುಶಲತೆಯಿಂದ ಮಾಡುವ ಬಗ್ಗೆ ತಮಾಷೆ ಮಾಡಿದರು, “ನನ್ನ ಬಳಿ Pinterest ಇದೆ. ನಾನು ಎಲ್ಲ ವಧುವಿನಂತೆಯೇ ಇದ್ದೇನೆ.

    ಇದನ್ನೂ ಓದಿ : ಭಾರತವಿಲ್ಲದೆ ಜಗತ್ತೇ ಶೂನ್ಯ ; ಮಾಜಿ ಜರ್ಮನ್ ರಾಯಭಾರಿ ಲಿಂಡ್ನರ್

    ಅಮೆರಿಕದ ಕೊಲರಾಡೋದ ಆ್ಯಸ್ಪೆನ್ಸ್‌ನಲ್ಲಿ  ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ವರದಿಗಳು ತಿಳಿಸಿವೆ. ಮೊದಲ ಪತ್ನಿ ಮೆಕೆನ್ಜಿಗೆ 2019ರಲ್ಲಿ ಡೈವೋರ್ಸ್‌ ನೀಡಿದ್ದ ಬೆಜೋಸ್‌, ಮಾಜಿ ಪತ್ನಿಗೆ 3 ಲಕ್ಷ ಕೋಟಿ ರು.ಪರಿಹಾರ ನೀಡಿದ್ದರು. ಬಳಿಕ ಸ್ಯಾಂಜೆಜ್‌ ಜೊತೆ ನಂಟು ಹೊಂದಿದ್ದರು. ಸದ್ಯ, ಬೆಜೋಸ್‌ ಅವರ ಆಸ್ತಿ 20 ಲಕ್ಷ ಕೋಟಿ ರು.ನಷ್ಟಿದೆ. ಕೆಲ ತಿಂಗಳ ಹಿಂದೆ ಮುಕೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಅವರ ವಿವಾಹ ಸಮಾರಂಭದ ಖರ್ಚು ಬರೋಬ್ಬರಿ 5000 ಕೋಟಿ ರು. ದಾಟಿತ್ತು.

    Continue Reading

    LATEST NEWS

    Trending