Connect with us

    ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವಕ ಪತ್ತೆ

    Published

    on

    ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವಕ ಪತ್ತೆ

    ಉಡುಪಿ: ಪ್ರಜ್ಞಾಹೀನ ಸ್ಥಿತಿಯಲ್ಲಿ ಅಪರಿಚಿತ ಯುವಕನೊಬ್ಬ ಪತ್ತೆಯಾಗಿರುವ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು (ಮೇ 20) ಮುಂಜಾನೆ ನಡೆದಿದೆ.

    ಸಮಾಜ ಸೇವಕ ನಿತ್ಯಾನಂದ ಒಳಕಾಡು ಯುವಕನನ್ನು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ.

    ಗಾಯಾಳುವಿಗೆ ಸುಮಾರು 28 ವರ್ಷ ಎಂಬುದಾಗಿ ಅಂದಾಜಿಸಲಾಗಿದ್ದು, ತಲೆ ಭಾಗದಲ್ಲಿ ಗಂಭೀರ ಗಾಯವಾಗಿದೆ.

    ಪ್ರಜ್ಞಾಹಿನ ಸ್ಥಿತಿಯಲ್ಲಿ ಗಾಯಾಳು ಇದ್ದರಿಂದ ವಿಳಾಸ ತಿಳಿದು ಬಂದಿಲ್ಲ. ವಾರಸುದಾರರು ತುರ್ತಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

    ಗಾಯಾಳು ರಕ್ಷಣಾ ಕಾರ್ಯಚರಣೆಗೆ ಪಂಚರತ್ನ ಸೇವಾ ಟ್ರಸ್ಟ್ ಉಚಿತ ಆ್ಯಂಬುಲೆನ್ಸ್ ಸೇವೆ ಒದಗಿಸಿ ಸಹಕರಿಸಿದೆ.

    ಮುನ್ನೆಚ್ಚರಿಕೆ ಕ್ರಮವಾಗಿ ಘಟನಾ ಸ್ಥಳವನ್ನು ಕೀಟನಾಶಕ ದ್ರಾವಣದಿಂದ ಶುದ್ಧೀಕರಿಸಲಾಗಿದೆ.

    Click to comment

    Leave a Reply

    Your email address will not be published. Required fields are marked *

    BANTWAL

    VIDEO: ಕೆಸರುಗದ್ದೆಯಲ್ಲಿ ಜಿಲ್ಲಾಧಿಕಾರಿಯ ಪಿಲಿ ನಲಿಕೆ

    Published

    on

    ಬಂಟ್ವಾಳ: ತಾಲೂಕಿನ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಜರಗಿದ 6 ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅನೀಶ್ ಅಶ್ವತ್ತಾಡಿ ವಹಿಸಿದ್ದರು.

    ಕಾರ್ಯಕ್ರಮದ ಧ್ವಜಾರೋಹಣವನ್ನು ಡಾ.ರೂಪಲತಾ ಕೊಂಗಲಾಯಿ ನೆರವೇರಿಸಿ , ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಮಾಣಿ ವಲಯ ಅಧ್ಯಕ್ಷ ರಾಮ್ ಕಿಶಾನ್ ರೈ ನೆರವೇರಿಸಿದರು. ಕ್ರೀಡಾಕೂಟದ ಕೆಸರುಗದ್ದೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೇ ನೆರವೇರಿಸಿದರು.

    ಕೆಸರು ಗದ್ದೆಯಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ವಿವಿಧ ಕ್ರೀಡಾಕೂಟಗಳನ್ನು ನಡೆಸಲಾಯಿತು.  ಈ ಸಂದರ್ಭದಲ್ಲಿ ನಮ್ಮ ತುಳುವ ಸಂಸ್ಕೃತಿಯ ಚಾಪೆ ಹೆಣೆಯುವುದು, ಬುಟ್ಟಿ ಹೆಣೆಯುವುದು, ಮುಟ್ಟಾಲೆ ಕಟ್ಟುವುದು, ತೆಂಗಿನಗರಿ ಹೆಣೆಯುವುದು,  ಅಕ್ಕಿ ಮುಡಿ ಕಟ್ಟುವ ಪ್ರಾತ್ಯಕ್ಷತೆ ನಡೆಸಲಾಯಿತು. 

    ಕತ್ತಲು ಆವರಿಸಿದ ಬ್ರಹ್ಮಗಿರಿಯ ಪ್ರವಾಸಿತಾಣ..! ಮೆಸ್ಕಾಂ ಅಧಿಕಾರಿಗಳಿಂದ ವಿದ್ಯುತ್ ಕಡಿತ

    ವೇದಿಕೆಯಲ್ಲಿ ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ನಿವೃತ್ತ ಶಿಕ್ಷಕ ರಾಮಣ್ಣ ಗೌಡ ಕೋಂಗಲಾಯಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಾರ್ಶ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ, ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ರಾಧಾಕೃಷ್ಣಮೂಲ್ಯ, ಮಲ್ಲರಾಯ ದೈವ ಪರಿಚರಕರುಗಳಾದ ರಾಮಣ್ಣ ಗೌಡ, ಬಾಲಪ್ಪ ಮಡಿವಾಳ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಈಡೆಮುಂಡೆವು ಮೊದಲಾದವರು ಉಪಸ್ಥಿತರಿದ್ದರು.

    ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ
    ಈಗಾಗಲೇ ಶಾಲಾ ಮಕ್ಕಳಿಗೆ ರಜೆ ನೀಡುವ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಫೇವರೆಟ್ ಆಗಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅನಂತಾಡಿಯಲ್ಲಿ ಸಂಘಟನೆಯವರು ಆಯೋಜನೆ ಮಾಡಿದ್ದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ, ಮಕ್ಕಳೊಂದಿಗೆ ಮಕ್ಕಳಾಗಿ ಕೆಸರಿನಲ್ಲಿ ಆಟವಾಡಿದ್ದಾರೆ. ಅಲ್ಲದೇ ಕರಾವಳಿಯ ಪಿಲಿ ನಲಿಕೆಗೆ ಹೆಜ್ಜೆ ಹಾಕಿ ಎಲ್ಲರ ಹುಬ್ಬೆರಗಾಗುವಂತೆ ಮಾಡಿದ್ದಾರೆ. ಮಕ್ಕಳ ಜೊತೆ ತಾನೂ ಮಗುವಾಗಿ ಮೈಮರೆತು ಹಾಡಿನ ನೃತ್ಯ ಮಾಡಿದ ಜಿಲ್ಲಾಧಿಕಾರಿಗಳ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಇದರ ಜೊತೆಗೆ ಯುವಕರ ಜೊತೆ ವಾಲಿಬಾಲ್ ಆಡುವ ಮೂಲಕವೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರವರು ಎಲ್ಲರ ಗಮನ ಸೆಳೆದಿದ್ದಾರೆ.

     

    Continue Reading

    LATEST NEWS

    ಇನ್ಮುಂದೆ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ…!

    Published

    on

    ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡಿನಲ್ಲಿ ನೆಲೆಸಿರುವ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯ ಮಾಡಿದ್ದು, ಭಕ್ತರು ಈ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಅಡಳಿತ ಮಂಡಳಿ ಮನವಿ ಮಾಡಿಕೊಂಡಿದೆ.

    ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಅಂತ ಅಡಳಿತ ಮಂಡಳಿ ತಿಳಿಸಿದೆ.

    Continue Reading

    LATEST NEWS

    ಎಂಟು ಕಾಲುಗಳೊಂದಿಗೆ ಜನಿಸಿದ ಕರು..! ಈ ವಿಚಿತ್ರ ನೋಡಲು ಮುಗಿಬಿದ್ದ ಜನ..!!

    Published

    on

    ಉತ್ತರಪ್ರದೇಶ/ಮಂಗಳೂರು: ಇಲ್ಲಿನ ಗ್ರಾಮದ ರೈತರೊಬ್ಬರ ಮನೆಯಲ್ಲಿ ಎಮ್ಮೆಯೊಂದು ಎಂಟು ಕಾಲುಗಳಿರುವ ಕರುವಿಗೆ ಜನ್ಮ ನೀಡುವ ಮೂಲಕ ವಿಸ್ಮಯವನ್ನುಂಟುಮಾಡಿದೆ. ಅಲ್ಲದೇ ಈ ವಿಚಿತ್ರ ಕರುವನ್ನು ನೋಡಲು ಊರವರೆಲ್ಲಾ ಮನೆಗೆ ದೌಡಾಯಿಸಿದ್ದಾರೆ.

    ಎರಡು ಬೆನ್ನು ಹಾಗೂ ಎಂಟು ಕಾಲು ಹಾಗೂ ಒಂದು ತಲೆಯೊಂದಿಗೆ ಜನಿಸಿದ ಈ ಕರುವನ್ನು ನೋಡಿ ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ.  ಕರುವನ್ನು ಪರೀಕ್ಷಿಸಿದ ವೈದ್ಯರು ಆನುವಂಶಿಕ ದೋಷದಿಂದ ಇಂತಹ ಕರುಗಳು ಜನಿಸುತ್ತವೆ ಎಂದು ಹೇಳಿದ್ದಾರೆ. ಈ ಘಟನೆ ಸ್ಥಳೀಯರು ಹಾಗೂ ನೆಟ್ಟಿಗರ ಗಮನ ಸೆಳೆದಿದೆ.

    ಕರುವಿನ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

    Continue Reading

    LATEST NEWS

    Trending