Connect with us

ಕೊರೊನಾ ದೇಣಿಗೆ ಸಂಗ್ರಹಿಸಲು ವಿಶ್ವದ ಅತೀ ಎತ್ತರದ ಸರ್ದಾರ್ ಪಟೇಲ್ ಪ್ರತಿಮೆಯನ್ನೇ ಸೇಲ್ ಗಿಟ್ಟ ಭೂಪ.!

Published

on

ಕೊರೊನಾ ದೇಣಿಗೆ ಸಂಗ್ರಹಿಸಲು ವಿಶ್ವದ ಅತೀ ಎತ್ತರದ ಸರ್ದಾರ್ ಪಟೇಲ್ ಪ್ರತಿಮೆಯನ್ನೇ ಸೇಲ್ ಗಿಟ್ಟ ಭೂಪ.!

ಗುಜರಾತ್: ದೇಶ ಒಂದಾಗಿ ಕೊರೊನಾ ವಿರುದ್ದ ಹೋರಾಟ ನಡೆಸುತ್ತಿದ್ದರೆ ಇಲ್ಲೊಬ್ಬ ಭೂಪ ಕೊರೋನಾ ಸೋಂಕು ತಡೆ ಕಾರ್ಯಗಳಿಗೆ ದೇಣಿಗೆ ಸಂಗ್ರಹಿಸಲು,

ವಿಶ್ವದ ಅತೀ ಎತ್ತರದ ಹಾಗೂ ದೇಶದ ಪ್ರತಿಷ್ಟಿತ ಸರ್ದಾರ್ ವಲ್ಲಭಭಾಯ್ ಪಟೇಲ್ ಏಕತಾ ಪ್ರತಿಮೆಯನ್ನೇ ಒ.ಎಲ್.ಎಕ್ಸ್ ಆನ್ ಲೈನ್ ನಲ್ಲಿ ಮಾರಾಟಕ್ಕಿಟ್ಟಿದ್ದಾನೆ.

ಗುಜರಾತ್ ನ ನರ್ಮದಾ ನದಿ ತೀರದಲ್ಲಿರುವ 182 ಮೀಟರ್ ಎತ್ತರದ ಸರ್ದಾರ್ ವಲ್ಲಭಭಾಯಿ ಅವರ ಏಕತಾ ಮೂರ್ತಿ ಇದಾಗಿದೆ.

ಅಪರಿಚಿತ ವ್ಯಕ್ತಿಯೋರ್ವ ಏಕತಾ ಮೂರ್ತಿಯ ಫೋಟೋವನ್ನು ಒಎಲ್ಎಕ್ಸ್ ನಲ್ಲಿ ಹಾಕಿ ಬರೋಬ್ಬರಿ 30,000 ಕೋಟಿ ರೂಪಾಯಿಗೆ ಮಾರಾಟಕ್ಕಿಟ್ಟಿದ್ದಾನೆ.

ಕೊರೊನಾ ಚಿಕಿತ್ಸೆಗಾಗಿ ಆಸ್ಪತ್ರೆಗಳು, ಕೆಲವು ವೈದ್ಯಕೀಯ ಉಪಕರಣಗಳನ್ನು ಖರೀದಿಸಲು ನನಗೆ ಈ ಹಣದ ಅಗತ್ಯವಿದೆ ಎಂದು ಬರೆದಿದ್ದಾನೆ.

ಸ್ಥಳೀಯ ಮಾಧ್ಯಮಗಳ ವರದಿಗಳಿಂದ ಎಚ್ಚೆತ್ತುಕೊಂಡ ಸ್ಮಾರಕ ಪ್ರಾಧಿಕಾರ ಪೊಲೀಸರಿಗೆ ದೂರು ನೀಡಿದೆ.

ಇದೀಗ ಅಪರಿಚಿತ ವ್ಯಕ್ತಿಯ ವಿರುದ್ಧ ಫೋರ್ಜರಿ ಮತ್ತು ವಂಚನೆಯ ಪ್ರಕರಣ ದಾಖಲಿಸಿದೆ.

ಇದು ಸರ್ಕಾರದ ಆಸ್ತಿ. ಅದನ್ನು ಮಾರಾಟ ಮಾಡುವ ಹಕ್ಕು ಜನಸಾಮಾನ್ಯರಿಗೆ ಯಾರಿಗೂ ಇರುವುದಿಲ್ಲ. ಈ ಅಪರಿಚಿತ ವ್ಯಕ್ತಿ ಏಕತಾ ಮೂರ್ತಿಯನ್ನು ಒಎಲ್ಎಕ್ಸ್ ನಲ್ಲಿ ಹಾಕುವ ಮೂಲಕ ಜನರಲ್ಲಿ ಗೊಂದಲ ಮೂಡಿಸಿದ್ದಾನೆ ಎಂದು ಏಕತಾಮೂರ್ತಿ ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಜಗತ್ತಿನಲ್ಲೇ ಅತ್ಯಂತ ಎತ್ತರದ ಸ್ಟಾಚ್ಯು ಎಂದೆನಿಸಿಕೊಂಡಿರುವ ಸರ್ದಾರ್ ವಲ್ಲಭಭಾಯಿ ಅವರ 182 ಮೀಟರ್ ಎತ್ತರದ ಏಕತಾ ಮೂರ್ತಿಯನ್ನು 2018ರಲ್ಲಿ ಪ್ರಧಾನಮಂತ್ರಿ ಮೋದಿ ಲೋಕಾರ್ಪಣೆಗೊಳಿಸಿದ್ದು, ಪ್ರವಾಸಿಗರನ್ನು ಆಕರ್ಷಿಸುವ ದೇಶದ ಪ್ರಮುಖ ಸ್ಥಳಗಳಲ್ಲಿ ಒಂದಾಗಿದೆ.

Click to comment

Leave a Reply

Your email address will not be published. Required fields are marked *

FILM

ಶಿಲ್ಪಾ ಶೆಟ್ಟಿಗೆ ಶಾಕ್ ನೀಡಿದ ED; ಜಪ್ತಿ ಮಾಡಿದ ಆಸ್ತಿ ಎಷ್ಟು ಗೊತ್ತಾ!?

Published

on

ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್‌ ಕುಂದ್ರಾ ದಂಪತಿಗೆ ಜಾರಿ ನಿರ್ದೇಶನಾಲಯ ಅತಿದೊಡ್ಡ ಶಾಕ್‌ ನೀಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಿಲ್ಪಾ ಶೆಟ್ಟಿ ದಂಪತಿಗೆ ಸೇರಿದ ಬರೋಬ್ಬರಿ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹಾಗೂ ಫ್ಲಾಟ್‌ ಅನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಬಿಟ್‌ಕಾಯಿನ್ ಸೇರಿದಂತೆ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್‌ ಕುಂದ್ರಾ ಅವರಿಗೆ ಸಂಬಂಧಪಟ್ಟ ಸ್ಥಿರ ಮತ್ತು ಚರ ಆಸ್ತಿಯ ಜೊತೆಗೆ ಪುಣೆಯಲ್ಲಿರುವ ಬಂಗ್ಲೆ ಮತ್ತು ಷೇರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

2017ರಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಜ್‌ ಕುಂದ್ರಾ ಅವರನ್ನು 6,600 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಬಿಟ್‌ಕಾಯಿನ್‌ ಮೂಲಕ ಹಲವರಿಗೆ ಶೇಕಡಾ 10 ರಷ್ಟು ಹಣ ರಿಟರ್ನ್‌ ಮಾಡುವ ಭರವಸೆ ನೀಡಿ ಮೋಸ ಮಾಡಿದ ಆರೋಪ ಕೂಡ ಕೇಳಿ ಬಂದಿತ್ತು. ಇದೇ ಹಗರಣದಲ್ಲಿ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಇದೀಗ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ. ಒಟ್ಟಾರೆ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್‌ ಕುಂದ್ರಾ ದಂಪತಿಯ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸದ್ಯ ಜಾರಿ ನಿರ್ದೇಶನಾಲಯದ ವಶದಲ್ಲಿದೆ.

Continue Reading

DAKSHINA KANNADA

ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?

Published

on

ಇತ್ತೀಚಿನ ದಿನಗಳಲ್ಲಿ ತುಳುನಾಡಿನ ದೈವಾರಾಧನೆ ವಿಶ್ವ ಪ್ರಸಿದ್ದಿಯನ್ನು ಪಡೆದುಕೊಳ್ಳುತ್ತಿದ್ದು, ಸಾವಿರಾರು ಜನ ತುಳುನಾಡ ದೈವಗಳನ್ನು ನಂಬಲು ಆರಂಭಿಸಿದ್ದಾರೆ. ಆದ್ರೆ ದೈವಗಳನ್ನು ನಂಬುವ ಬಗೆ ಹೇಗೆ ಅನ್ನೋದು ಗೊತ್ತಿಲ್ಲದೆ ಇದ್ರೂ ಭಕ್ತಿಯಿಂದ ಕೈ ಮುಗಿದವರನ್ನು ದೈವಗಳು ಎಂದಿಗೂ ಕೈ ಬಿಟ್ಟಿಲ್ಲ. ಹೀಗಾಗಿ ಸೆಲೆಬ್ರೆಟಿಗಳೂ ಸೇರಿದಂತೆ ಪ್ರತಿನಿತ್ಯ ಹಲವಾರು ಜನ ದೈವ ಸಾನಿಧ್ಯಕ್ಕೆ ಬಂದು ಭಕ್ತಿಯಿಂದ ಕೈ ಮುಗಿಯುತ್ತಿದ್ದಾರೆ. ಅದರಲ್ಲೂ ಕುತ್ತಾರು ಕೊರಗಜ್ಜನ ಕ್ಷೇತ್ರವಂತೂ ನಿತ್ಯ ಹೊರ ಜಿಲ್ಲೆಯ ಭಕ್ತರಿಂದ ತುಂಬಿ ತುಳುಕುತ್ತಿರುತ್ತದೆ.

ದೈವಾರಾಧನೆಯೇ ಪ್ರಮುಖವಾಗಿರುವ ತುಳುನಾಡಿನಲ್ಲಿ ಜನ ದೇವರಿಗಿಂತ ಹೆಚ್ಚು ಭಯ ಪಡೋದು ದೈವಗಳಿಗೆ. ಪ್ರಕೃತಿಯ ಆರಾಧನೆಯ ಮೂಲಕ ಇಲ್ಲಿನ ನೆಲ, ಜಲ, ಹಾಗೂ ಪರಿಸರ ಎಲ್ಲದರಲ್ಲೂ ದೈವಗಳನ್ನು ಕಾಣುವ ಸಂಸ್ಕೃತಿ ತುಳುನಾಡಿನದ್ದು. ಸಾವಿರದ ಎರಡು ದೈವಗಳು ಇಲ್ಲಿ ಆರಾಧಿಸಲ್ಪಡುತ್ತದೆ ಅನ್ನೋದು ಇತ್ತೀಚಿನ ವರೆಗೆ ಸಂಶೋಧಕರು ಕಂಡು ಕೊಂಡಿರೋ ಸತ್ಯ ಕೂಡ.

ಕೊರಗಜ್ಜ ಯಾರು ಏನು ಅನ್ನೋದು ಇಲ್ಲಿ ಮುಖ್ಯವಾಗದೇ ಇದ್ರೂ ಕೊರಗಜ್ಜ ಸಮಸ್ಯೆಗಳಿಗೆ ಪರಿಹಾರ ನೀಡ್ತಾನೆ ಅನ್ನೋದು ನಂಬಿ ಬರುವ ಭಕ್ತರಿಗೆ ಇರುವ ಆಶಾಕಿರಣ. ಯಾವುದೇ ಮದ್ಯವರ್ತಿ ಇಲ್ಲದೆ ತಾವೇ ಕೊರಗಜ್ಜನಿಗೆ ಪೂಜೆ ಸಲ್ಲಿಸಿ ಅವರಿಗೆ ಇಷ್ಟವಾದುದನ್ನು ಕೊಟ್ಟು ಕೈ ಮುಗಿದು ಬೇಡಲು ಇಲ್ಲಿ ಅವಕಾಶ ಇದೆ. ಕೊರಗಜ್ಜನಿಗೆ ಮೇಲು ಕೀಳೆಂಬ ಭೇದ-ಭಾವ ಇಲ್ಲ. ಇನ್ನು ಕೊರಗಜ್ಜ ಶ್ರೀಮಂತನಿಂದಲೂ ಬಡವನಿಂದಲೂ ಕೇಳೋದು ಎಲೆ ಅಡಿಕೆ , ಚಕ್ಕುಲಿ, ಹಾಗೂ ಒಂದು ಸ್ವಲ್ಪ ಮದ್ಯ ಅಷ್ಟೇ…

ಕೇವಲ ಎಲೆ-ಅಡಿಕೆಗೆ ನಮ್ಮ ಕಷ್ಟಕಾರ್ಪಣ್ಯಗಳನ್ನು ಪರಿಹಾರ ಮಾಡೊ ದೈವ ಎಂದರೆ ಸ್ವಾಮಿ ಕೊರಗಜ್ಜ. ಅಜ್ಜನನ್ನು ಆರಾಧಿಸಬೇಕೆಂದರೆ ದೊಡ್ಡ ದೊಡ್ಡ ದೈವ ಸ್ಥಾನಗಳೇ ಬೇಕೆಂದಿಲ್ಲ. ಕೇವಲ ಮನಸಿನಲ್ಲೇ ಸ್ವಾಮಿ ಕೊರಗಜ್ಜ ಅಂತ ಕಷ್ಟದ ಸಮಯದಲ್ಲಿ ನೆನೆಸಿದ್ರೆ ಸಾಕು ಅದ್ಯಾವುದೋ ರೂಪದಲ್ಲಿ ಬಂದು ಕಷ್ಟ ಪರಿಹಾರ ಮಾಡ್ತಾರೆ ಅನ್ನೋ ನಂಬಿಕೆ ತುಳುನಾಡಿನ ಜನರಲ್ಲಿ ಇದೆ. ಇನ್ನು ಕೊರಗಜ್ಜನ ಹಲವು ಕ್ಷೇತ್ರಗಳು ತುಳುನಾಡಿನಲ್ಲಿದ್ದು ಅಲ್ಲಿಗೆ ಎಲೆ ಅಡಿಕೆ, ಚಕ್ಕುಲಿ, ಮದ್ಯದ ಹರಕೆ ಹೇಳಿಕೊಂಡ್ರೆ ಮುಗಿತು.

ಇನ್ನು ಕೊರಗಜ್ಜನಿಗೆ ಅಗೇಲು ನೀಡುವ ಸಂಪ್ರದಾಯವಿದ್ದು ಅಲ್ಲಿ ಕೊರಗಜ್ಜನಿಗೆ ಕೋಡೊದು ಅನ್ನ, ಬಸಳೆಯ ಸಾರು, ಮೀನಿನ ಪದಾರ್ಥ, ಕೋಳಿಯ ಪದಾರ್ಥ, ಬೇಯಿಸಿದ ಮೊಟ್ಟೆ, ನಿಂಬೆ ಹಣ್ಣಿನ ಉಪ್ಪಿನಕಾಯಿ ಹಾಗೂ ಮದ್ಯ ಮಾತ್ರ. ಇದಿಷ್ಟಕ್ಕೆ ತೃಪ್ತಿಪಟ್ಟುಕೊಳ್ಳುವ ಕೊರಗಜ್ಜ “ಅಜ್ಜಾ ಕಾಪುಲೆ ನಮನ್.. ಈರೆಗ್ ಬಾಜೆಲ್ ಕೊರ್ಪೆ” ಅಂತ ಹೇಳಿದರೆ ಸಾಕು ಕ್ಷಣ ಮಾತ್ರದಲ್ಲಿ ಭಕ್ತರ ಇಚ್ಛೆಯನ್ನು ನೆರವೇರಿಸುತ್ತಾನೆ.

ನೀವು ಕೊರಗಜ್ಜನ ಫೋಟೊವನ್ನು ಮನೆಯಲ್ಲಿ ಇಡಬಹುದಾ.. ಎಂದು ನೋಡುವುದಾದರೆ ಅಜ್ಜನ ಫೋಟೋ ಮಾತ್ರವಲ್ಲ ಯಾವ ದೈವಗಳ ಫೋಟೋವನ್ನೂ ಮನೆಯಲ್ಲಿ ಇಟ್ಟು ಆರಾಧನೆ ಮಾಡುವ ಪದ್ಧತಿ ಅಷ್ಟು ಬಳಕೆಯಲ್ಲಿಲ್ಲ. ಫೋಟೋ ಇಟ್ಟು ಆರಾಧನೆ ಮಾಡಬೇಕೆಂದು ಎಲ್ಲೂ ಹೇಳಿಲ್ಲ. ತಿನ್ನುವಂತಹ ಆಹಾರದಲ್ಲಿ, ನಾವು ನೋಡುವಂತಹ ನೋಟದಲ್ಲಿ, ನಾವು ಮಾಡುವ ಒಳ್ಳೆಯ ಕೆಲಸದಲ್ಲಿ, ಅಜ್ಜನ ಪ್ರಸಾದದಲ್ಲಿ ಅಜ್ಜ ಇರುತ್ತಾನೆ. ಹೀಗಾಗಿ ಅಜ್ಜನ ಫೋಟೋ ಇಟ್ಟು ಪೂಜಿಸುವ ಕ್ರಮ ಇಲ್ಲ. ಪವಿತ್ರವಾದ ಹೃದಯದಲ್ಲಿ ನಾವು ಯಾವ ದೈವವನ್ನು ನಂಬುತ್ತೇವೊ ಆ ದೈವಕ್ಕೆ ನೆಲೆ ಕೊಟ್ಟರೆ ನಾವು ಎಲ್ಲಿ ನಿಂತು ಕೈ ಮುಗಿದರೂ ಕೂಡ ಕೊರಗಜ್ಜ ಆಗಲಿ ಅಥವಾ ಇನ್ನು ಯಾವೂದೇ ದೈವವಾಗಲಿ ಅಲ್ಲಿ ಬಂದು ನಮ್ಮನ್ನು ಕಾಪಾಡಿಯೇ ಕಾಪಾಡುತ್ತಾರೆ.

Continue Reading

FILM

ಅಂದು ಸುಮಲತಾ, ಇಂದು ಸ್ಟಾರ್ ಚಂದ್ರುಗೆ ಜೈ ಎಂದ ದರ್ಶನ್; ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ನಿಂತ ಡಿ ಬಾಸ್ ಏನಂದ್ರು?

Published

on

ಮಂಡ್ಯ : ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಎಂದಿನಂತೆ ಮಂಡ್ಯ ಹೈ ವೋಲ್ಟೇಜ್ ಕ್ಷೇತ್ರ. ಹೇಗಾದರೂ ಈ ಕ್ಷೇತ್ರ ತಮ್ಮದಾಗಿಸಿಕೊಳ್ಳಬೇಕು ಎಂದು ಅತ್ತ ಬಿಜೆಪಿ+ ಜೆಡಿಎಸ್ , ಇತ್ತ ಕಾಂಗ್ರೆಸ್ ಶ್ರಮಿಸುತ್ತಿದೆ.

ಕಳೆದ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ನಿಂತಿದ್ದ ಸುಮಲತಾಗೆ ಮಂಡ್ಯ ಜನತೆ ಜೈ ಎಂದಿದ್ದರು. ಸುಮಲತಾ ಗೆಲುವಿಗಾಗಿ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ – ರಾಕಿಂಗ್ ಸ್ಟಾರ್ ಯಶ್ ಜೋಡೆತ್ತುಗಳಾಗಿ ಅಬ್ಬರಿಸಿದ್ದರು. ಆದರೆ, ಈ ಬಾರಿ ಎಲ್ಲವೂ ಉಲ್ಟಾ ಆಗಿದೆ. ಸುಮಲತಾ ‘ಕಮಲ’ ಹಿಡಿದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಅಚ್ಚರಿಯ ಬೆಳವಣಿಗೆ ಎಂಬಂತೆ ದರ್ಶನ್ ಕಾಂಗ್ರೆಸ್ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಸ್ಟಾರ್ ಚಂದ್ರು ಪರ ದರ್ಶನ್ :

ಸುಮಲತಾ ಜೊತೆ ಇರುತ್ತೇನೆ ಎಂದಿದ್ದ ಡಿ ಬಾಸ್ ಈ ಬಾರಿ ಕಾಂಗ್ರೆಸ್ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶತಾಯಗತಾಯ ಸೋಲಿಸಲೇಬೇಕು ಎಂದು ಕಾಂಗ್ರೆಸ್ ಪಣತೊಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಕಣದಲ್ಲಿದ್ದು, ಅವರ ಪರ ದರ್ಶನ್ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ.

ವ್ಯಕ್ತಿ ಪರ ಅಂದ ದರ್ಶನ್ : 

ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗೆ ಇಳಿದಿರುವುದರಿಂದ ಹಲವು ಅನುಮಾನ ಹುಟ್ಟಿಸಿದ್ದವು. ಸುಮಲತಾ ಅವರೊಂದಿಗೆ ಸದಾ ಕಾಣಿಸಿಕೊಳ್ಳುವ ಡಿ ಬಾಸ್ ಬಿಜೆಪಿ ಪರವಾಗಿ ನಿಲ್ಲಲಿದ್ದಾರೆ ಎಂದೇ ಭಾವಿಸಲಾಗಿತ್ತು. ಆದರೆ, ಅವರು ಕಾಂಗ್ರೆಸ್ ಪರ ಬ್ಯಾಟ್ ಬೀಸಿ ಪ್ರಶ್ನೆ ಹುಟ್ಟು ಹಾಕಿದ್ದರು. ಇದಕ್ಕೆ ಇದೀಗ ಅವರೇ ಉತ್ತರ ನೀಡಿದ್ದಾರೆ.

ನಾನು ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ. ಐದು ವರ್ಷದ ಹಿಂದೆ ನರೇಂದ್ರಸ್ವಾಮಿ ಸಹಾಯ ಮರೆಯಲ್ಲ. ಮೊದಲೇ ಶಾಸಕ ಉದಯ್ ಹೇಳಿದ್ರು ಸುಮಮ್ಮನಿಗೆ ಟಿಕೆಟ್ ಆಗಲಿಲ್ಲ. ಆದ್ರೆ ನಮಗೆ ಮಾಡಿ ಅಂದಿದ್ರು. ಮೊದಲು ಅವರು ಕೇಳಿದ ಕಾರಣ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಎಲ್ಲರೂ ಮತ ಹಾಕಿ ಎಂದಿದ್ದಾರೆ.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಎಲ್ಲೆಲ್ಲಿ ಪ್ರಚಾರ :
ಹಲಗೂರಿನಿಂದ ಸ್ಟಾರ್ ಚಂದ್ರು ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಅವರ ಜೊತೆಗೂಡಿ ದರ್ಶನ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ನಂತರ ಹುಸ್ಕೂರು, ಹಾಡ್ಲಿ ಸರ್ಕಲ್, ಮಳವಳ್ಳಿ, ಬೆಳಕವಾಡಿ, ಬೊಪ್ಪೇಗೌಡನಪುರ, ಸರಗೂರು ಹ್ಯಾಂಡ್ ಪೋಸ್ಟ್, ಪೂರಿಗಾಲಿ, ಟಿ. ಕಾಗೇಪುರ (ತಳಗವಾದಿ) ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೆರೆ, ಕಿರುಗಾವಲು ಸಂತೆಮಾಳ, ಚನ್ನಪಿಳ್ಳೆಕೊಪ್ಪಲು ಗ್ರಾಮಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

Continue Reading

LATEST NEWS

Trending