Connect with us

    LATEST NEWS

    ತನ್ನ ಗುಪ್ತಾಂಗವನ್ನು ಕೊಡಲಿಯಿಂದ ಕತ್ತರಿಸಿಕೊಂಡ ವ್ಯಕ್ತಿ; ಯಾಕೆ ಗೊತ್ತಾ??

    Published

    on

    ಮಂಗಳೂರು/ಆಸ್ಟ್ರೇಲಿಯ: ಖಿನ್ನತೆಗೆ ಒಳಗಾಗಿದ್ದ ಆಸ್ಟ್ರೇಲಿಯಾದ 37 ವರ್ಷದ ವ್ಯಕ್ತಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ನಾಲ್ಕರಿಂದ ಐದು ಒಣಗಿದ ಸೈಲೋಸಿಬಿನ್‌ ಅಣಬೆಗಳನ್ನು ತಿಂದಿದ್ದಾನೆ. ಈ ಅಣಬೆಯನ್ನು ತಿಂದ ಬಳಿಕ ಆತನಿಗೆ ತಲೆ ತಿರುಗಲಾರಂಭಿಸಿತು ಮತ್ತು ಈ ಭ್ರಮೆಯಿಂದಾಗಿ ಮಾನಸಿಕ ಸ್ಥಿರತೆಯನ್ನು ಕಳೆದುಕೊಂಡು ತನ್ನ ಖಾಸಗಿ ಅಂಗವನ್ನು ಕೊಡಲಿಯಿಂದ ಕತ್ತರಿಸಿಕೊಂಡಿದ್ದಾನೆ. ಇದರಿಂದ ವಿಪರೀತ ರಕ್ತಸ್ರಾವವಾಗಿದ್ದು, ಬಟ್ಟೆ ಕಟ್ಟುವ ಮೂಲಕ ರಕ್ತಸ್ರಾವವನ್ನು ನಿಲ್ಲಿಸಲು ಯತ್ನಿಸಿದ್ದಾನೆ ಮತ್ತು ತುಂಡಾದ ಗುಪ್ತಾಂಗದ ಭಾಗವನ್ನು ಐಸ್‌ ತುಂಬಿದ ಬೌಲ್‌ನಲ್ಲಿ ಇರಿಸಿ ಸೀದಾ ಮನೆಯಿಂದ ಹೊರ ಹೋಗಿದ್ದಾನೆ.


    ಈತ ರಕ್ತದ ಮಡುವಿನಲ್ಲಿ ಮುಳುಗಿರುವುದನ್ನು ಕಂಡ ದಾರಿಹೋಕರೊಬ್ಬರು ಆಂಬ್ಯಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿದರು. ಮಣ್ಣು ಮತ್ತು ಕೋಲ್ಡ್‌ ನೀರು ಗುಪ್ತಾಂಗಕ್ಕೆ ತಗುಲಿದ ಪರಿಣಾಮ ಶಸ್ತ್ರ ಚಿಕಿತ್ಸೆ ಮಾಡಲು ಕಷ್ಟಕರವಾಗಿದ್ದರೂ ಕೂಡಾ ವೈದ್ಯರು ತುಂಡರಿಸಿದ ಜನನಾಂಗವನ್ನು ಜೋಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ನಂತರ ಆ ವ್ಯಕ್ತಿಯನ್ನು ಮನೋವೈದ್ಯಕೀಯ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಯಿತು. ಇದೀಗ ಮಾನಸಿಕ ಸ್ಥಿರತೆಯನ್ನು ಕಳೆದುಕೊಂಡ ಆ ವ್ಯಕ್ತಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾನೆ.
    ಸೈಲೋಸಿಬಿನ್‌ ಅಣಬೆಗಳನ್ನು ತಿಂದ ಪರಿಣಾಮ ಭ್ರಮೆ ಆವರಿಸಿ ಆ ವ್ಯಕ್ತಿ ತನ್ನ ಜನನಾಂಗವನ್ನೇ ಕತ್ತರಿಸಿಕೊಂಡಿದ್ದು ಎಂಬ ವಿಚಾರ ತಿಳಿದು ಬಂದಿದ್ದು, ಈ ವಿಚಿತ್ರ ಪ್ರಕರಣ ಮೆಗಾ ಜರ್ನಲ್‌ ಆಫ್‌ ಸರ್ಜರಿ ಎಂಬ ನಿಯತಕಾಲಿಕೆಯಲ್ಲಿ ಪ್ರಕಟವಾಗಿದೆ.
    ಮ್ಯಾಜಿಕ್‌ ಮಶ್ರೂಮ್‌ ಎಂದರೇನು?
    ಮ್ಯಾಜಿಕ್‌ ಮಶ್ರೂಮ್‌ ಒಂದು ರೀತಿಯ ಅಣಬೆಯಾಗಿದ್ದು, ಇದರಲ್ಲಿ ನೈಸರ್ಗಿಕವಾಗಿ ಕಂಡು ಬರುವ ಸೈಲೋಸಿಬಿನ್‌ ಎಂಬ ಸಂಯುಕ್ತವಿದೆ. ಈ ಅಣಬೆಯನ್ನು ಸೇವಿಸಿದರೆ ಇದು ಮೆದುಳಿನ ಮೇಲೆ ಕೆಟ್ಟ ಪರಿಣಾಮವನ್ನು ಬೀರಿ ಮನುಷ್ಯನನ್ನು ಭ್ರಮೆಯ ಸ್ಥಿತಿಗೆ ತಳ್ಳುತ್ತದೆ ಮತ್ತು ವ್ಯಕ್ತಿಯು ಯೋಚಿಸುವ ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ವಿಶೇಷವೆಂದರೆ ಈ ಅಣಬೆಯನ್ನು ಅನೇಕ ರೋಗಗಳಿಗೆ ಔಷಧಿಯಾಗಿಯೂ ಕೂಡಾ ಬಳಸಲಾಗುತ್ತಿದೆ. ಖಿನ್ನತೆ ಮತ್ತು ಇತರೆ ಕಾಯಿಲೆಗಳಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿರುವ ಈ ಮ್ಯಾಜಿಕ್‌ ಮಶ್ರೂಮ್‌ ಅನ್ನು ವೈದ್ಯರ ಸಲಹೆ ಇಲ್ಲದೆ ಸೇವಿಸಬಾರದೂ ಎಂದು ಕೂಡಾ ಹೇಳಲಾಗಿದೆ.

    LATEST NEWS

    ಎಚ್ಚರ!! ಪ್ರೀತಿ ಪಾತ್ರರ ಸಾವೇ ಟಾರ್ಗೆಟ್; ಸೈಬರ್ ಕ್ರೈಂನಲ್ಲಿ ಅಂತ್ಯಸಂಸ್ಕಾರ

    Published

    on

    ಮಂಗಳೂರು/ನವದೆಹಲಿ:  ಭಾವನೆ, ನೋವು, ದುಃಖಗಳನ್ನೇ ಟಾರ್ಗೆಟ್ ಮಾಡಿ ವಂಚಕರು ನಡೆಸುವ ಹೊಸ ಸೈಬರ್ ಕ್ರೈಂ ಈ ಅಂತ್ಯಸಂಸ್ಕಾರ ಸೈಬರ್ ಕ್ರೈಂ ಹೆಚ್ಚಾಗಿ ಪಟ್ಟಣ ಪ್ರದೇಶಗಳಲ್ಲೇ ಈ ಸೈಬರ್ ಕ್ರೈಂ ನಡೆಯುತ್ತದೆ. ನಗರ ಪ್ರದೇಶಗಳಲ್ಲಿನ ಬದುಕಿಗೆ ಸಮಯವಿಲ್ಲ. ಎಲ್ಲವನ್ನೂ ನಿಭಾಯಿಸಲು, ನಿರ್ವಹಿಸಲು ಆಪ್ತರು, ನೆರಮನೆಯವರ ಸಹಾಯವಿರುವುದಿಲ್ಲ. ಹೀಗಾಗಿ ಅನಿವಾರ್ಯವಾಗಿ ಕೆಲ ಹೊಣೆಗಾರಿಕೆಯನ್ನು ಎಜೆನ್ಸಿಗಳ ಕೈಗೆ ವಹಿಸಲಾಗತ್ತವೆ. ಈ ಪೈಕಿ ಅಂತ್ಯಸಂಸ್ಕಾರ ನಡೆಸಲು ನಗರ ಪ್ರದೇಶದಲ್ಲಿ  ಖಾಸಗಿ ಎಜೆನ್ಸಿಗಳಿವೆ. ಈ ಎಜೆನ್ಸಿಗಳು ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನಡೆಸುತ್ತದೆ. ಅಂತಿಮ ವಿಧಿ ವಿಧಾನಗಳು, ಪೂಜಾ ಕೈಂಕರ್ಯ, ಎಲ್ಲವನ್ನೂ ಅಚ್ಚುಕಟ್ಟಾಗಿ ಮಾಡುತ್ತಾರೆ.

    ಈ ಸೈಬರ್ ಕ್ರೈಂ ಹೇಗೆ ನಡೆಯುತ್ತವೆ ?

    ಸೈಬರ್ ಕ್ರೈಂ ಭೂತ  ಯಾವ ರೂಪದಲ್ಲಿ ವಕ್ಕರಿಸಲಿದೆ ಅನ್ನೋದೇ ತಿಳಿಯಲ್ಲ. ಮೋಸ ಹೋದ ಬಳಿಕವಷ್ಟೇ ಇದೊಂದು ಸೈಬರ್ ಕ್ರೈಂ ಆಗಿತ್ತು ಅನ್ನೋದು ಅಂದಾಜಾಗುವುದು. ಪ್ರತಿ ಗಂಟೆಯಲ್ಲಿ ಲಕ್ಷಾಂತರ ಸೈಬರ್ ಕ್ರೈಂ ಪ್ರಕರಣಗಳು ಪತ್ತೆಯಾಗಿ, ದೂರು ದಾಖಲಾಗುತ್ತಿದೆ. ಹೊಸ ಹೊಸ ವಿಧಾನದಲ್ಲಿ ವಂಚಕರು ಮೋಸ ಮಾಡುತ್ತಿದ್ದಾರೆ. ಅಮಾಯಕರು, ಎಚ್ಚರವಹಿಸಿ ಹೆಜ್ಜೆ ಇಟ್ಟರೂ ಹೇಗೋ ಬಲಿಯಾಗುತ್ತಿದ್ದಾರೆ.

    ಅಂತ್ಯಸಂಸ್ಕಾರ ಸೈಬರ್ ಕ್ರೈಂ ಎಂದರೇನು?

    ಅಂತ್ಯಸಂಸ್ಕಾರ ನಡೆಸುವ ಹಲವು ಎಜೆನ್ಸಿಗಳ ಜಾಹೀರಾತು, ನಂಬರ್ ಸುಲಭವಾಗಿ ಸಿಗುತ್ತದೆ. ನಾವು ಆಪ್ತರನ್ನು ಕಳೆದುಕೊಂಡ ನೋವಿನಲ್ಲಿ ಎಜೆನ್ಸಿಗೆ ಕರೆ ಮಾಡಿ ಅಂತ್ಯಸಂಸ್ಕಾರ ನಡೆಸಬೇಕು ಎಂದು ಕೇಳಿಕೊಂಡ ತಕ್ಷಣವೇ ಮಾಹಿತಿ ಪಡೆದು ಲಿಂಕ್ ಕಳುಹಿಸಿದ್ದಾರೆ. ಅದರಲ್ಲಿ ನಾವು ಹೆಸರು, ವಿಳಾಸ, ಮೃತಪಟ್ಟವರ ಹೆಸರು, ಧರ್ಮ, ಗೋತ್ರ, ಅಂತ್ಯಸಂಸ್ಕಾರ ಸಂಪ್ರದಾಯದ ಬಗ್ಗೆ ಮಾಹಿತಿ ನೀಡಿರುತ್ತೇವೆ. ನಂತರ  5,000 ರೂಪಾಯಿ ಅಥವಾ ಅಡ್ವಾನ್ಸ್ ಮೊತ್ತವನ್ನು ಪಾವತಿಸಿದಾಗ ಒಂದು ಮೆಸೇಜ್ ಬರಲಿದೆ. ಅಂತ್ಯಸಂಸ್ಕಾರ ನಡೆಸುವ ಪೂಜಾರಿ ಹೆಸರು, ಘಳಿಗೆ ಸೇರಿದಂತೆ ಎಲ್ಲದರ ಮೆಸೇಜ್ ಬರುತ್ತವೆ. ಇದೇ ವೇಳೆ ಬಂದ ಒಟಿಪಿ ಒಟಿಪಿಯನ್ನು ಎಜೆನ್ಸಿ ಮಂದಿ ಕೇಳುತ್ತಾರೆ. ಇದಕ್ಕೆ ಹಲವು ಕಾರಣಗಳನ್ನು ನೀಡುತ್ತಾರೆ.

    ಅಂತ್ಯಸಂಸ್ಕಾರವನ್ನೇ ಟಾರ್ಗೆಟ್ ಮಾಡಿ ಹಲವು ಸೈಬರ್ ಕ್ರೈಂ ದಾಖಲಾಗಿದೆ. ಈ ಕುರಿತು ಎಚ್ಚರಿಕೆ ಸಂದೇಶ ನೀಡುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪ್ರತಿ ವ್ಯವಹಾರಕ್ಕೂ ಮುನ್ನ ಯೋಚಿಸಿ, ತಾಳ್ಮೆ ವಹಿಸಿ ಮುನ್ನಡೆಯಬೇಕು ಯಾವುದೇ ಕಾರಣಕ್ಕೂ ಅನಾಮಿಕರು ಕಳುಹಿಸುವ ಯಾವುದೇ ಲಿಂಕ್ ಕ್ಲಿಕ್ ಮಾಡಬೇಡಿ. ಒಟಿಪಿ ಎಂದಿಗೂ ಯಾರೊಂದಿಗೂ ಹಂಚಿಕೊಳ್ಳಬಾರದು.

    Continue Reading

    Baindooru

    ಮಾರ್ಚ್​ 14 ರಿಂದ ಐಪಿಎಲ್ ಆರಂಭ

    Published

    on

    ಮುಂಬಯಿ: 18ನೇ ಆವೃತ್ತಿಯ ಐಪಿಎಲ್‌ನ ವೇಳಾಪಟ್ಟಿ ಬಹಿರಂಗವಾಗಿದೆ. ಕ್ರೀಡಾ ವೆಬ್‌ಸೈಟ್ ಒಂದರಲ್ಲಿ ಮುಂದಿನ ಮೂರು ವರ್ಷಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಐಪಿಎಲ್ ಸಹಿತ ಪ್ರಮುಖ ಕ್ರೀಡಾಕೂಟಗಳ ನೇರ ಪ್ರಸಾರ ಮಾಡುವ ಇಎಸ್‌ಪಿಎನ್‌ ಟಿವಿ ವಾಹಿನಿಗೆ ಸೇರಿದ ಇಎಸ್‌ಪಿಎನ್ ಕ್ರಿಕ್‌ಇನ್ಫೋ ಎಂಬ ವೆಬ್‌ಸೈಟ್ ಐಪಿಎಲ್ ವೇಳಾಪಟ್ಟಿಯನ್ನು ಬಹಿರಂಗಗೊಳಿಸಿದೆ. ಆದರೆ ಬಿಸಿಸಿಐ ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

    ಇಎಸ್‌ಪಿಎನ್‌ ಕ್ರಿಕ್‌ಇನ್ಫೋ ಪ್ರಕಾರ ಮುಂದಿನ ಆವೃತ್ತಿಯ ಐಪಿಎಲ್ ಮಾರ್ಚ್ 14ರಿಂದ ಆರಂಭವಾಗಲಿದ್ದು, ಮೇ 25ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಟೂರ್ನಿಗೆ ತೆರೆಬೀಳಲಿದೆ. ಇದರ ಜೊತೆಗೆ ಮುಂದಿನ ಎರಡು ಆವೃತ್ತಿಗಳ ವೇಳಾಪಟ್ಟಿಯ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು, 2026ರಲ್ಲಿ ಐಪಿಎಲ್ ಟೂರ್ನಿ ಮಾರ್ಚ್ 15 ರಿಂದ ಮೇ 31ರವರೆಗೆ ನಡೆದರೆ, 2027ರ ಐಪಿಎಲ್ ಮಾರ್ಚ್ 14ರಿಂದ ಮೇ 30ರವರೆಗೆ ನಡೆಯಲ್ಲಿದೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ಎಲ್ಲ ಫ್ರಾಂಚೈಸಿಗಳಿಗೆ ಬಿಸಿಸಿಐ, ಇ-ಮೇಲ್ ಮುಖಾಂತರ ವೇಳಾಪಟ್ಟಿ ರವಾವಿಸಿದೆ. ಮುಂದಿನ ಮೂರು ಆವೃತ್ತಿಗಳ ಆರಂಭ ಮತ್ತು ಅಂತ್ಯದ ಬಗ್ಗೆ ಮಾತ್ರ ಮಾಹಿತಿ ಹೊರಬಿದ್ದಿದ್ದು, ಸಂಪೂರ್ಣ ವೇಳಾಪಟ್ಟಿ ಇನ್ನಷ್ಟೇ ಹೊರಬೀಳಬೇಕಿದೆ. ಕಳೆದ ಮೂರು ಆವೃತ್ತಿಗಳಂತೆ ಮುಂದಿನ ಆವೃತ್ತಿಯಲ್ಲೂ 74 ಪಂದ್ಯಗಳು ನಡೆಯಲಿವೆ ಎಂದು ಇಎಸ್‌ಪಿಎನ್ ಕ್ರಿಕ್‌ಇನ್ಫೋ ಹೇಳಿಕೊಂಡಿದೆ.

    ಇದಕ್ಕೂ ಮೊದಲು 2025ರ ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಜ್ಜಾಗಿದೆ. ನವೆಂಬರ್ 24 ಮತ್ತು 25ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ 574 ಆಟಗಾರರ ಬಿಡ್ಡಿಂಗ್ ನಡೆಯಲಿದೆ.

    Continue Reading

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    Trending