Connect with us

    DAKSHINA KANNADA

    ಪ್ರೇಯಸಿಯನ್ನು ಹ*ತ್ಯೆಗೈದಿದ್ದವನಿಗೆ ಜೀ*ವಾವಧಿ ಶಿಕ್ಷೆ; ಪೊಲೀಸ್ ಆಗಬೇಕಾಗಿದ್ದವನು ಕೊ*ಲೆಗಾರನಾದ ಕಥೆ

    Published

    on

    ಮಂಗಳೂರು : ಬೇರೊಬ್ಬರನ್ನು ಮದುವೆಯಾಗಲು ಮುಂದಾಗಿದ್ದ ಪ್ರೇಯಸಿಯ ಹ*ತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಜೀ*ವಾವಧಿ ಶಿಕ್ಷೆ ವಿಧಿಸಿ ಮಂಗಳೂರು ನ್ಯಾಯಾಲಯ ತೀರ್ಪು ನೀಡಿದೆ.

    ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೊಟ್ಟಿ ತಾಂಡಾದ ಸಂದೀಪ್ ರಾಥೋಡ್ (23)  ಶಿಕ್ಷೆಗೊಳಗಾದ ಅಪರಾಧಿ. ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು  ಜೀ*ವಾವಧಿ ಶಿಕ್ಷೆ ಮತ್ತು 25 ಸಾವಿರ ರೂ ದಂಡ ವಿಧಿಸಿದೆ. ಪ್ರಕರಣದಲ್ಲಿ ಒಟ್ಟು 45 ಸಾಕ್ಷಿದಾರರನ್ನು ವಿಚಾರಿಸಲಾಗಿತ್ತು. ಒಟ್ಟು 100 ದಾಖಲೆಗಳನ್ನು ಗುರುತಿಸಲಾಗಿದೆ.

    ಏನಿದು ಪ್ರಕರಣ?

    ಆರೋಪಿ ಸಂದೀಪ್ ರಾಥೋಡ್ ಮತ್ತು ಮೃತ ಅಂಜನಾ ವಸಿಷ್ಠ ಅವರು 2018ನೇ ಇಸವಿಯ ಜುಲೈ ತಿಂಗಳಿನಲ್ಲಿ ಫೇಸ್‌ಬುಕ್ ಮೂಲಕ ಪರಿಚಯವಾಗಿ, ನಂತರ ಪರಸ್ಪರ ಪ್ರೀತಿಸುತ್ತಿದ್ದರು. ಉದ್ಯೋಗ ಪಡೆದ ಬಳಿಕ ಮದುವೆಯಾಗುವ ಬಗ್ಗೆ ಅವರು ಯೋಚಿಸಿದ್ದರು.

    ಅದರಂತೆಯೇ ಆರೋಪಿ ಸಂದೀಪ್ ರಾಥೋಡ್ ಪೊಲೀಸ್ ಸಬ್​ ಇನ್ಸ್​ಪೆಕ್ಟರ್​ ಹುದ್ದೆಗೆ ಆಯ್ಕೆಯಾಗಲು ಲಿಖಿತ ಪರೀಕ್ಷೆಯ ಪೂರ್ವ ತಯಾರಿಗಾಗಿ ಮಂಗಳೂರಿನ ಹಂಪನಕಟ್ಟೆಯ ರಾಯಲ್ ಅಕಾಡೆಮಿ ಕೋಚಿಂಗ್ ಸೆಂಟರ್​ಗೆ ಬಂದಿದ್ದನು.  ತರಬೇತಿಗೆ ಹಾಜರಾಗಲು ಮಂಗಳೂರಿನಲ್ಲಿ ಉಳಿದುಕೊಳ್ಳುವ ಸಲುವಾಗಿ ತಾವಿಬ್ಬರು ಗಂಡ ಹೆಂಡತಿ ಎಂದು ಹಾಗೂ ಆರೋಪಿ ತಾನು ಕಾನ್ಸ್​ಟೇಬಲ್​​ ಆಗಿದ್ದು, ಪಿಎಸ್​ಐ ಹುದ್ದೆಯ ತರಬೇತಿಗಾಗಿ ಮಂಗಳೂರಿಗೆ ಬಂದಿರುವುದಾಗಿ ಹೇಳಿ ರೂಂ ಪಡೆದುಕೊಂಡಿದ್ದನು.

    ಅಂಜನಾ ವಸಿಷ್ಠ ತನ್ನ ಊರಿಗೆ ಹೋಗಿದ್ದ ಅವಧಿಯಲ್ಲಿ, ಆಕೆಗೆ ವಿವಾಹ ಮಾಡಲು ಆಕೆಯ ತಂದೆ, ತಾಯಿ ನಿರ್ಧರಿಸಿ ಹುಡುಗನನ್ನು ತೋರಿಸಿ, ಮಾತುಕತೆ ನಡೆಸಿದ್ದರು. ಅಂಜನಾ ವಸಿಷ್ಠ ತಂದೆ ತಾಯಿಯ ಆಸೆಯಂತ ಮದುವೆಗೆ ಒಪ್ಪಿಕೊಂಡು, ಆ ವಿಚಾರವನ್ನು ಆರೋಪಿ ಸಂದೀನ್ ರಾಥೋಡ್​ಗೆ ತಿಳಿಸಿದ್ದಳು. ತನ್ನನ್ನು ಮರೆತುಬಿಡುವಂತೆ ಆಕೆ ವಿನಂತಿಸಿದ್ದಳು.ಇದರಿಂದ ಕೋಪಗೊಂಡ ಸಂದೀಪ್ ಆಕೆಯನ್ನು ಪುಸಲಾಯಿಸಿ, ಆತ ಉಳಿದುಕೊಂಡಿದ್ದ ಮಂಗಳೂರಿಗೆ ಕರೆಸಿಕೊಂಡಿದ್ದ.

    ಅಂಜನಾ ವಸಿಷ್ಠ ತನ್ನನ್ನು ಬಿಟ್ಟು ತನ್ನ ಪ್ರೀತಿಯನ್ನು ಧಿಕ್ಕರಿಸಿ ಬೇರೆಯವರನ್ನು ಮದುವೆಯಾಗಲು ಹೋಗುತ್ತಿದ್ದಾಳೆ ಎಂದು ಕೋಪದಿಂದ ಆಕೆಯ ಜೊತೆ ಜಗಳ ತೆಗೆದು ಕೊಲೆ ಟಿ.ವಿ ಕೇಬಲ್‌ನಿಂದ ಕುತ್ತಿಗೆಗೆ ಸುತ್ತ ಬಿಗಿದು ಕೊ*ಲೆ ಮಾಡಿದ್ದಾನೆ. ಅಲ್ಲದೇ, ಮೃ*ತದೇಹದ ಫೋಟೋ  ಹಾಗೂ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ.  ಆಕೆಯ ಎಟಿಎಂ ಕಾರ್ಡ್ ಹಾಗೂ ಮೊಬೈಲ್ ಫೋನ್​ನನ್ನು ತೆಗೆದುಕೊಂಡು ಪರಾರಿಯಾಗಿದ್ದ. ಆ ಬಳಿಕ ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಬಳಿಯಿರುವ ಕಾರ್ಪೊರೇಷನ್​ ಬ್ಯಾಂಕ್‌ ಎಟಿಎಂ ಬಳಸಿ 15,000/- ರೂಪಾಯಿ ಹಣವನ್ನು ಡ್ರಾ ಮಾಡಿದ್ದ.

    ಇದನ್ನೂ ಓದಿ  : ಐದು ವರ್ಷದ ಬಾಲಕ ರೈಲಿನಿಂದ ಬಿದ್ದು ಪವಾಡ ಸದೃಶ ಪಾರು

    ಕೊ*ಲೆ ಪ್ರಕರಣದ ತನಿಖಾಧಿಕಾರಿ ದೂರುದಾರರು ನೀಡಿದ ದೂರನ್ನು ಸ್ವೀಕರಿಸಿ, ಪ್ರಕರಣ ದಾಖಲಿಸಿ, ಬಳಿಕ ಆರೋಪಿಯನ್ನು ಬಂಧಿಸಿದ್ದರು. ಆತನ ವಶದಿಂದ ಮೃ*ತಳ ಮೊಬೈಲ್ ಮತ್ತು ಎಟಿಎಂ ಕಾರ್ಡ್ ಮತ್ತು ಆತ ತನ್ನ ಮೊಬೈಲ್‌ನಲ್ಲಿ ಮಾಡಿದ ಮೃ*ತದೇಹದ ವಿಡಿಯೋ ಇರುವ ಮೊಬೈಲ್, ಮೃ*ತಳ ಎಟಿಎಂ ಕಾರ್ಡ್ ನಿಂದ ಬ್ಯಾಂಕಿನ ಎಟಿಎಂನಲ್ಲಿ ಹಣ ಡ್ರಾ ಮಾಡಿ ಉಳಿದ 12.300 ರೂಪಾಯಿ ಹಣವನ್ನು ಹಾಗೂ ಇತರೆ ಸೊತ್ತುಗಳನ್ನು ಆರೋಪಿಯಿಂದ ವಶಪಡಿಸಿಕೊಂಡಿದ್ದರು.

    DAKSHINA KANNADA

    ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ; ಓರ್ವ ಸಾ*ವು

    Published

    on

    ಮಂಗಳೂರು/ಆನೇಕಲ್ ದ್ವಿಚಕ್ರ ವಾಹನಕ್ಕೆ ಲಾರಿ ಡಿ*ಕ್ಕಿ ಹೊಡೆದು, ಸವಾರ ಸ್ಥಳದಲ್ಲಿಯೇ ಮೃ*ತಪಟ್ಟಿರುವ ಘಟನೆ ತಮಿಳುನಾಡು ಗಡಿ ಪ್ರದೇಶವಾದ ಹೊಸೂರು ಸಮೀಪದ ಸೂಳಗಿರಿ ಬಳಿ ನಡೆದಿದೆ. ಆನೇಕಲ್ ತಾಲೂಕಿನ ರಾಚಮಾನಹಳ್ಳಿಯ ನಿವಾಸಿ ಅರ್ಚಕ ಶ್ರೀನಿವಾಸ್ ಮೃ*ತ‌ ದುರ್ದೈವಿ.

    ದೇವಾಲಯದ ಅರ್ಚಕರಾಗಿದ್ದ ಶ್ರೀನಿವಾಸ್, ಪೂಜೆಯ ನಿಮಿತ್ತ ಬೈಕ್‌ ಮೂಲಕ ಆನೇಕಲ್‌ನಿಂದ ಹೋಗುತ್ತಿದ್ದರು. ಈ ವೇಳೆ ತಮಿಳುನಾಡಿನ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಹೆದ್ದಾರಿಯಿಂದ ಡಿವೈಡರ್ ದಾಟಿಕೊಂಡು ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಅವರ ವಾಹನಕ್ಕೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಶ್ರೀನಿವಾಸ್ ಸ್ಥಳದಲ್ಲಿಯೇ ಮೃ*ತಪಟ್ಟರೆ, ರಾಘವೇಂದ್ರ ಎಂಬುವವರಿಗೆ ಗಂಭೀರ ಗಾ*ಯವಾಗಿದೆ.

    ಇದನ್ನೂ ಓದಿ : ಖಾಸಗಿ ಬಾಹ್ಯಾಕಾಶ ನಡಿಗೆ ಯಶಸ್ವಿ; ಸುರಕ್ಷಿತವಾಗಿ ಭೂಮಿಗೆ ಮರಳಿದ ಗಗನಯಾತ್ರಿಗಳು

    ಅಪಘಾ*ತದ ರಭಸಕ್ಕೆ ಬೈಕ್‌ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮ*ರಣೋತ್ತರ ಪರೀಕ್ಷೆಗಾಗಿ ಮೃ*ತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

    Continue Reading

    DAKSHINA KANNADA

    ಬಿಜೆಪಿ ಹೈಕಮಾಂಡಿಂದ ಭರ್ಜರಿ ಗಿಫ್ಟ್ ; ನಳೀನ್ ಕುಮಾರ್ ಕಟೀಲ್ ಸುತ್ತಾಟ ಮತ್ತೆ ಆರಂಭ !

    Published

    on

    ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ದ.ಕ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಎಂಪಿ ಚುನಾವಣೆಯಲ್ಲಿ ಟಿಕೆಟ್ ಸಿಗದೆ ವಂಚಿತರಾದ ಬಳಿಕ ಅಷ್ಟಾಗಿ ರಾಜಕೀಯ ವಿಚಾರದಲ್ಲಿ ಪ್ರಚಲಿತದಲ್ಲಿರಲಿಲ್ಲ. ಆದರೆ ಇದಿಗ ಕಟೀಲ್ ಮತ್ತೆ ಸುದ್ದಿಯಲ್ಲಿದ್ದಾರೆ.


    ನಳೀನ್ ಕುಮಾರ್‌ಗೆ ಗುಡ್ ನ್ಯೂಸ್;
    ಬಿಜೆಪಿಯು ನಳೀನ್ ಕುಮಾರ್ ಕಟೀಲ್ ಅವರನ್ನು ಒಡಿಶಾ ರಾಜ್ಯದ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಅಂದಹಾಗೆ ಒಡಿಶಾದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸದಸ್ಯತ್ವದ ಗುರಿಯನ್ನು ನೀಡಿದ್ದು, ಕೇಂದ್ರ ನಾಯಕತ್ವ ನಳಿನ್ ಕುಮಾ‌ರ್ ಕಟೀಲ್‌ಗೆ ಈ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
    ಈ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಸೆ.17ರಂದು ಒಡಿಶಾಗೆ ತೆರಳಲಿದ್ದು, ಅಲ್ಲಿ ಒಂದು ವಾರ ಕಾಲ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

     

    Continue Reading

    DAKSHINA KANNADA

    ಮಂಗಳೂರಿನ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

    Published

    on

    ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್‌ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದು*ಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಭಾನುವಾರ(ಸೆ.15) ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ.

    ಎರಡು ಬೈಕ್‌ ಗಳಲ್ಲಿ ಬಂದ ನಾಲ್ಕು ಮಂದಿ ದು*ಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಕಿಟಕಿಗಳಿಗೆ ಹಾನಿಯಾಗಿದೆ.

    ಸುರತ್ಕಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್‌ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇಂದು(ಸೆ.16) ಈದ್ ಮಿಲಾದ್  ಹಬ್ಬ. ಹಾಗಾಗಿ ಸುರತ್ಕಲ್ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    Continue Reading

    LATEST NEWS

    Trending