Saturday, November 27, 2021

ಬೆಂಕಿಪೊಟ್ಟಣಕ್ಕೂ ಕಡ್ಡಿ ಗೀರಿದ ಸರಕಾರ: ಡಿ.1ರಿಂದ ಶೇ.100ರಷ್ಟು ಬೆಲೆ ಏರಿಕೆ

ಮುಂಬೈ: ಇದೇ ಡಿಸೆಂಬರ್ 1 ರಿಂದ ಬೆಂಕಿ ಪೊಟ್ಟಣದ ಬೆಲೆ ದುಪ್ಪಟ್ಟು ಆಗಲಿದೆ. ಈವರೆಗೆ ಒಂದು ರೂಪಾಯಿಗೆ ಸಿಗುತ್ತಿದ್ದ ಬೆಂಕಿ ಪೊಟ್ಟಣದ ಬೆಲೆಯನ್ನು 2 ರೂಪಾಯಿಗೆ ಪರಿಷ್ಕರಿಸಲು ಬೆಂಕಿಪೊಟ್ಟಣ ಉದ್ಯಮದ ಐದು ಪ್ರಮುಖ ಸಂಸ್ಥೆಗಳು ಒಮ್ಮತದ ನಿರ್ಧಾರ ಕೈಗೊಂಡಿವೆ.


ಗುರುವಾರ ನಡೆದ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್‌ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಚ್ಚಾ ವಸ್ತುಗಳ ದರ ಹೆಚ್ಚಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣ ಎಂದು ಉದ್ಯಮ ಪ್ರತಿನಿಧಿಗಳು ಹೇಳಿದ್ದಾರೆ.
ಬೆಂಕಿ ಪೊಟ್ಟಣ ತಯಾರಿಸಲು 14 ಕಚ್ಚಾವಸ್ತುಗಳು ಬೇಕಾಗುತ್ತವೆ. ಪ್ರತಿ ಕೆಜಿ ಕೆಂಪು ರಂಜಕದ ದರ 425 ರೂಪಾಯಿಯಿಂದ 810 ರೂಪಾಯಿಗೆ ಹೆಚ್ಚಿದೆ.

ಮೇಣದ ಬೆಲೆ ರೂ. 58ರಿಂದ 80ಕ್ಕೆ, ಹೊರ ಪೊಟ್ಟಣ ಬೋರ್ಡ್ ದರ 36ರಿಂದ 55 ರೂಪಾಯಿಗೆ, ಒಳಪೊಟ್ಟಣ ಬೋಡ ದರ 32ರಿಂದ 58ಕ್ಕೆ ಹೆಚ್ಚಿದೆ. ಕಾಗದ, ಬಿದಿರಿನ ಪಟ್ಟಿ, ಪೊಟ್ಯಾಶಿಯಂ ಕ್ಲೋರೇಟ್ ಮತ್ತು ಗಂಧಕದ ಬೆಲೆ ಕೂಡಾ ಅಕ್ಟೋಬರ್ 10ರಿಂದ ಹೆಚ್ಚಿವೆ.

ಹೆಚ್ಚುತ್ತಿರುವ ಡೀಸೆಲ್ ಬೆಲೆ ಕೂಡಾ ಹೊರೆಯಾಗಿ ಪರಿಣಮಿಸಿದೆ ಎಂದು ಉದ್ಯಮ ಮೂಲಗಳು ಹೇಳಿವೆ. ತಮಿಳುನಾಡಿನಲ್ಲಿ ಸುಮಾರು 4 ಲಕ್ಷ ಮಂದಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಈ ಉದ್ಯಮವನ್ನು ಅವಲಂಬಿಸಿದ್ದು, ಶೇಕಡ 90ರಷ್ಟು ಉದ್ಯೋಗಿಗಳು ಮಹಿಳೆಯರು.
2007ರಲ್ಲಿ ಬೆಂಕಿಪೊಟ್ಟಣ ದರವನ್ನು 50 ಪೈಸೆಯಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...